Sat. Feb 7th, 2026
  • ಜಿ ರಾಮ್ಜಿಗೆ ಅಂಗೀಕಾರ: ಕೆಲಸದ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಳ.
  • ‘ನರೇಗಾ’ ಯೋಜನೆಗೆ ಪರ್ಯಾಯವಾಗಿ ರೂಪಿಸಿರುವ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌ (ಗ್ರಾಮೀಣ) (ವಿಬಿ–ಜಿ ರಾಮ್‌ ಜಿ) ಮಸೂದೆಯನ್ನು ಲೋಕಸಭೆ ಮತ್ತು ರಾಜ್ಯಸಭೆ ಯಲ್ಲಿ ಅಂಗೀಕರಿಸಲಾಯಿತು.
  • ₹10–11 ಲಕ್ಷ ಕೋಟಿಯನ್ನು ಕೇವಲ ವೇತನ ಪಾವತಿಸಲು ಖರ್ಚು ಮಾಡಬಾರದು. ಬದಲಾಗಿ, ಶಾಶ್ವತ ಆಸ್ತಿಗಳನ್ನು ಸೃಷ್ಟಿಸಲು ಬಳಸಬೇಕು ಎಂದು ಭಾವಿಸಿ ಆಳವಾದ ಚರ್ಚೆಯ ಬಳಿಕ ‘ಜಿ ರಾಮ್ ಜಿ’ ಮಸೂದೆಯನ್ನು ತರಲಾಗಿದೆ.
  • ಒಳಮೀಸಲು ರಕ್ಷಣೆ ಮಸೂದೆಗೆ ಒಪ್ಪಿಗೆ: ‘ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ಮಸೂದೆ–2025’

ಸಂದರ್ಭ: ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಮೂರು ಪ್ರವರ್ಗಗಳಾಗಿ ವರ್ಗೀಕರಿಸಿ ಒಳ ಮೀಸಲಾತಿ ನೀಡುವ ಸರ್ಕಾರದ ಆದೇಶಕ್ಕೆ ಕಾನೂನು ಬಲ ನೀಡಲು ರೂಪಿಸಿದ ಮಸೂದೆಗೆ ವಿಧಾನಸಭೆ ಅಂಗೀಕಾರ ನೀಡಿತು.

  • ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ಒಳಮೀಸಲಾತಿ ನೀಡುವ ಸಂಬಂಧ 2024ರ ಆ. 1ರಂದು ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಯಿತು.
  • ಒಳಮೀಸಲಾತಿಗೆ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಲು ನ್ಯಾ. ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ಆಯೋಗ ರಚಿಸಲಾಯಿತು. ಆಯೋಗವು ಐದು ಪ್ರವರ್ಗಗಳ ನಡುವೆ ಮೀಸಲಾತಿ ಹಂಚಿಕೆ ಮಾಡಿ ವರದಿ ನೀಡಿತ್ತು.
  • ‘ವರದಿ ಆಧರಿಸಿ 101 ಉಪಜಾತಿಗಳನ್ನು ಮೂರು ಪ್ರವರ್ಗಗಳನ್ನಾಗಿ ವಿಂಗಡಿಸಿ ‘ಪ್ರವರ್ಗ ಎ’ನಲ್ಲಿ 16 ಜಾತಿಗಳನ್ನು ಸೇರಿಸಿ ಶೇ 6, ‘ಪ್ರವರ್ಗ ಬಿ’ನಲ್ಲಿ 19 ಜಾತಿಗಳನ್ನು ಸೇರಿಸಿ ಶೇ 6 ಹಾಗೂ ‘ಪ್ರವರ್ಗ ಸಿ’ನಲ್ಲಿ 63 ಜಾತಿಗಳನ್ನು ಸೇರಿಸಿ ಶೇ 5 ಮೀಸಲಾತಿ ಹಂಚಿಕೆ ಮಾಡಲಾಗಿದೆ.
  • ದ್ವೇಷ ಭಾಷಣ ತಡೆ ಮಸೂದೆಗೆ ಅಸ್ತು

ಸಂದರ್ಭ: ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ–2025’ಗೆ ಅನುಮೋದನೆ ನೀಡುವಂತೆ ಗೃಹ ಸಚಿವ ಪ್ರಸ್ತಾಪಿಸಿದರು.

  • ಮಸೂದೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ: ‘ಕೇಂದ್ರ ಸರ್ಕಾರ ಜಾರಿಗೆ ತಂದ ಬಿಎನ್‌ಎಸ್‌ ಕಾಯ್ದೆಯು ದ್ವೇಷ ಭಾಷಣ ತಡೆಗೆ ಅವಕಾಶ ಕಲ್ಪಿಸಿದೆ. ಹಾಗಿದ್ದರೂ ಎದುರಾಳಿಗಳನ್ನು ಹತ್ತಿಕ್ಕಲು ಮಸೂದೆ ತರಲಾಗುತ್ತಿದೆ’ ಎಂದರು.
  • ರಾಜ್ಯಕ್ಕಿಲ್ಲ ₹16,863 ಕೋಟಿ

ಸಂದರ್ಭ: ಜಲ ಜೀವನ್‌ ಮಿಷನ್‌ನ (ಜೆಜೆಎಂ) ಮಾರ್ಗಸೂಚಿ ಪ್ರಕಾರ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವ ಸಲ್ಲಿಸಲು ವಿಳಂಬ ಮಾಡಿರುವ ಕಾರಣ ನೀಡಿ ಕರ್ನಾಟಕಕ್ಕೆ ₹16,863 ಕೋಟಿ ಅನುದಾನ ನೀಡಲು ಕೇಂದ್ರ ಜಲಶಕ್ತಿ ಸಚಿವಾಲಯ ನಿರಾಕರಿಸಿದೆ.

  • ಗ್ರಾಮೀಣ ‍ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶ ಹೊಂದಿರುವ ಈ ಯೋಜನೆಗೆ ಜಲಶಕ್ತಿ ಸಚಿವಾಲಯವು ರಾಜ್ಯಕ್ಕೆ 2019ರಿಂದ 2025ರ ಅವಧಿಗೆ ₹28,623 ಕೋಟಿ (ಕೇಂದ್ರದ ಪಾಲು) ಹಂಚಿಕೆ ಮಾಡಿತ್ತು. ಆದರೆ, ಈವರೆಗೆ ₹11,760 ಕೋಟಿ ಬಿಡುಗಡೆ ಮಾಡಿದೆ.
  • ‘ಕೇಂದ್ರದ ನಿಧಿಯನ್ನು ಅನುಮೋದಿತ ಮಿಷನ್ ಅವಧಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಕರ್ನಾಟಕ ಸರ್ಕಾರಕ್ಕೆ ಸ್ಪಷ್ಟಪಡಿಸಲಾಗಿದೆ. ರಾಜ್ಯ ಸರ್ಕಾರವು ಸ್ವಂತ ಸಂಪನ್ಮೂಲಗಳಿಂದ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಲಹೆ ನೀಡಲಾಗಿದೆ.
  • ಕೇಂದ್ರ ಸಚಿವ ಸಂಪುಟವು 2019-20ರಿಂದ 2023-24 ರವರೆಗೆ ಜಲ ಜೀವನ್ ಮಿಷನ್ ಅನುಷ್ಠಾನಕ್ಕೆ ಅನುಮೋದನೆ ನೀಡಿತ್ತು. ಈ ಅವಧಿಯಲ್ಲಿ, ರಾಜ್ಯ ಸರ್ಕಾರಗಳು ಯೋಜನೆ ರೂಪಿಸಿ ಅನುಮೋದನೆ ಪಡೆದು, ಅನುಷ್ಠಾನ ಮಾಡಬೇಕಿತ್ತು. ರಾಜ್ಯಗಳಲ್ಲಿ ಅನಗತ್ಯವಾಗಿ ಹಣ ಪೋಲಾಗುವುದನ್ನು ತಪ್ಪಿಸಲು ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಿಗೆ ‘ಸಮಯಕ್ಕೆ ಸರಿಯಾಗಿ ಹಣ ಪಾವತಿ’ ತತ್ವದ ಅಡಿಯಲ್ಲಿ ಹಣಕಾಸು ಸಚಿವಾಲಯದ ಸುತ್ತೋಲೆಗಳ ಪ್ರಕಾರ ಹಣ ಬಿಡುಗಡೆ ಮಾಡಲಾಗಿತ್ತು.
  • ರಾಜ್ಯಕ್ಕೆ ₹28,623.89 ಕೋಟಿ ಹಂಚಿಕೆ ಮಾಡಲಾಗಿತ್ತು. ಆದರೆ, ಎಂಒಎಫ್ ಮತ್ತು ಜೆಜೆಎಂ ಮಾರ್ಗಸೂಚಿ ಪ್ರಕಾರ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವಗಳನ್ನು ಸಲ್ಲಿಸಲು ವಿಳಂಬ ಮಾಡಿದ ಕಾರಣಕ್ಕೆ ರಾಜ್ಯವು ಮಿಷನ್ ಅವಧಿಯಲ್ಲಿ ₹11,760 ಕೋಟಿ ಮಾತ್ರ ಪಡೆದಿದೆ. ಕೇಂದ್ರ ಸಚಿವ ಸಂಪುಟವು ಅನುಮೋದಿಸಿದ ಕೇಂದ್ರದ ಪಾಲನ್ನು ಈವರೆಗೆ ನೀಡಲಾಗಿದೆ.
  • ದೇಶದಲ್ಲಿ ಯೋಜನೆಯ ಪ್ರಗತಿ ಪರಿಗಣಿಸಿ 2028ರವರೆಗೆ ಮಿಷನ್‌ ವಿಸ್ತರಿಸುವುದಾಗಿ ಕೇಂದ್ರ ಹಣಕಾಸು ಸಚಿವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಯೋಜನೆಯ ವಿಸ್ತರಣೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆದ ನಂತರ ಮತ್ತು ಮಾರ್ಗಸೂಚಿ ಪ‍ರಕಾರ ಕೇಂದ್ರದ ಅನುದಾನವನ್ನು ಅರ್ಹ ರಾಜ್ಯಗಳಿಗೆ ಬಿಡುಗಡೆ ಮಾಡಲು ಅವಕಾಶ ಇದೆ.
  • ಬಹಿಷ್ಕಾರಕ್ಕೆ ಜೈಲು: ಮಸೂದೆಗೆ ಒಪ್ಪಿಗೆ

ಸಂದರ್ಭ: ಯಾವುದೇ ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕ ವಾಗಿ ಬಹಿಷ್ಕರಿಸಿದರೆ ₹1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಹಾಗೂ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲು ಅವಕಾಶವಿರುವ ಮಸೂದೆಗೆ ವಿಧಾನಸಭೆ ಗುರುವಾರ ಪಕ್ಷಾತೀತವಾಗಿ ಅನುಮೋದನೆ ನೀಡಿತು.

  • ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ಮಸೂದೆಯನ್ನು ಮಂಡಿಸಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ‘ಸ್ವಾತಂತ್ರ್ಯ ಬಂದು 75 ವರ್ಷವಾದರೂ ಸಾಮಾಜಿಕವಾಗಿ ಬಹಿಷ್ಕಾರ ಹಾಕುವುದು ನಡೆದಿದೆ. ಇದು ಮಾನವ ಹಕ್ಕುಗಳ, ನಾಗರಿಕ ಹಕ್ಕುಗಳು ಉಲ್ಲಂಘನೆ. ಇದನ್ನು ನಿಷೇಧಿಸುವ ಐತಿಹಾಸಿಕ ಮಸೂದೆಯನ್ನು ರೂಪಿಸಲಾಗಿದೆ.
  • ಪರಿಷತ್ತು: 7 ಮಸೂದೆಗಳಿಗೆ ಅನುಮೋದನೆ
  • ಗ್ರೇಟರ್‌ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ಮಸೂದೆ–2025
  • ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ಮಸೂದೆ–2025
  • ಕರ್ನಾಟಕ ಧನವಿನಿಯೋಗ (ಸಂಖ್ಯೆ:04) ಮಸೂದೆ–2025
  • ಬಾಂಬೆ ಸಾರ್ವಜನಿಕ ನ್ಯಾಸ (ಕರ್ನಾಟಕ ತಿದ್ದುಪಡಿ) ಮಸೂದೆ–2025
  • ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ಮಸೂದೆ–2025
  • ಔಷಧ ಮತ್ತು ಪ್ರಸಾಧನ ಸಾಮಗ್ರಿ (ಕರ್ನಾಟಕ ತಿದ್ದುಪಡಿ) ಮಸೂದೆ–2025
  • ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ತಿದ್ದುಪಡಿ) ಮಸೂದೆ–2025

ಕಾರುಗಳ ಮೇಲೆ ಸೆಸ್

  • ಬೈಕುಗಳು ಮತ್ತು ಕಾರುಗಳ ಮೇಲೆ ವಿಧಿಸಲಾಗುವ ರಸ್ತೆ ಸುರಕ್ಷತಾ ಸೆಸ್‌ ವಾಪಸ್‌ ಪಡೆಯುವ ಸಂಬಂಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಡಿಸಿದ ‘ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ತಿದ್ದುಪಡಿ) ಮಸೂದೆ–2025.
  • ಸಮಸ್ಯೆ ಬಗೆಹರಿಸುವುದೇ ಕಾಯ್ದೆ?
  • ಭಾರತಒಮಾನ್ವ್ಯಾಪಾರ ಒಪ್ಪಂದಕ್ಕೆ ಸಹಿ: ಪ್ರಧಾನಿ ನರೇಂದ್ರ ಮೋದಿಗೆಆರ್ಡರ್ ಆಫ್ ಒಮಾನ್ಪ್ರಶಸ್ತಿ

ಸಂದರ್ಭ: ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ (ಸಿಇಟಿಎ) ಭಾರತ ಮತ್ತು ಒಮಾನ್‌  ಸಹಿ ಹಾಕಿವೆ. ಈ ಒಪ್ಪಂದವು ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಹೊಸ ಭರವಸೆ ಮತ್ತು ಬಲವನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

  • ಭಾರತ–ಒಮಾನ್‌ ವ್ಯಾಪಾರ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಈ ಒಪ್ಪಂದವು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಹೊಸ ದಿಕ್ಕನ್ನು ನೀಡುತ್ತದೆ ಮತ್ತು ಪರಸ್ಪರ ಬೆಳವಣಿಗೆಗೆ ಅವಕಾಶ ಕಲ್ಪಿಸುತ್ತದೆ. ಪ್ರತಿಯೊಂದು ವಲಯದಲ್ಲಿಯೂ ಅವಕಾಶದ ಹೊಸ ಬಾಗಿಲನ್ನು ತೆರೆಯುತ್ತದೆ’ ಎಂದಿದ್ದಾರೆ.
  • ಒಪ್ಪಂದವು ಗಲ್ಫ್ದೇಶದ ಜವಳಿ, ಕೃಷಿ ಮತ್ತು ಚರ್ಮದ ಉತ್ಪನ್ನಗಳು ಸೇರಿದಂತೆ ಭಾರತದಿಂದ ರಫ್ತಾಗುವ ಶೇ 98ರಷ್ಟು ವಸ್ತುಗಳಿಗೆ ತೆರಿಗೆ ಮುಕ್ತ ಪ್ರವೇಶ ಒದಗಿಸುತ್ತದೆ.
  • ‘ಭಾರತವು ಯಾವಾಗಲೂ ಪ್ರಗತಿಪರ ಮತ್ತು ಸ್ವಾವಲಂಬಿ ದೇಶವಾಗಿದೆ. ಭಾರತ ಬೆಳೆದಂತೆಲ್ಲ, ಅದು ತನ್ನ ಸ್ನೇಹಿತರಿಗೂ ಬೆಳೆಯಲು ಸಹಾಯ ಮಾಡುತ್ತದೆ. ಭಾರತವು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆ ರಾಷ್ಟ್ರವಾಗುವತ್ತ ಸಾಗಿದೆ. ಇದು ಇಡೀ ಜಗತ್ತಿಗೆ ಪ್ರಯೋಜನಕಾರಿ. ಅದರಲ್ಲೂ ಒಮಾನ್‌ ಭಾರತದ ಆತ್ಮೀಯ ದೇಶ ವಾಗಿ ರುವುದರಿಂದ ಅದಕ್ಕೆ ಹೆಚ್ಚು ಪ್ರಯೋ ಜನವಾಗಲಿದೆ’ ಎಂದು ಹೇಳಿದ್ದಾರೆ.
  • ‘ಭಾರತ ಮತ್ತು ಒಮಾನ್‌ನ ವ್ಯಾವಹಾರಿಕ ಸಂಬಂಧವು ತಲೆಮಾರು ಗಳಿಂದ ನಂಬಿಕೆಯ ಬುನಾದಿಯ ಮೇಲೆ ನಿಂತಿದೆ. ಉಭಯ ದೇಶಗಳ ನಾವು ಪರಸ್ಪರ ಮಾರುಕಟ್ಟೆಗಳನ್ನು ಅರ್ಥಮಾಡಿಕೊಂಡಿದ್ದೇವೆ’ ಎಂದಿದ್ದಾರೆ.
  • ಅಭಿವೃದ್ಧಿಯಲ್ಲಿ ಪಾಲುದಾರರಾ ಗುವಂತೆ ಒಮಾನ್‌ ಕಂಪನಿಗಳಿಗೆ ಪ್ರಧಾನಿ ಕರೆ ನೀಡಿದ್ದಾರೆ.

ಮೈತ್ರಿ ಪರ್ವದಲ್ಲಿ ಪ್ರಧಾನಿ ಮಾತು

  • 21ನೇ ಶತಮಾನದಲ್ಲಿ ಭಾರತವು ತ್ವರಿತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ದೊಡ್ಡ ಗುರಿಗಳನ್ನು ಇಟ್ಟುಕೊಂಡು, ನಿರ್ದಿಷ್ಟ ಸಮಯದಲ್ಲಿ ಫಲಿತಾಂಶ ಪಡೆಯುವುದು ಇದರ ಉದ್ದೇಶ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
  • ಮಸ್ಕತ್‌ನಲ್ಲಿ ನಡೆದ ‘ಮೈತ್ರಿ ಪರ್ವ’ ಕಾರ್ಯಕ್ರಮದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ದೀಪ ಈಗ ನಮ್ಮ ಮನೆಗಳಲ್ಲಿ ಮಾತ್ರವಲ್ಲದೆ ಇಡೀ ಜಗತ್ತನ್ನೇ ಬೆಳಗುತ್ತಿದೆ’ ಎಂದಿದ್ದಾರೆ.
  • ‘ದೀಪಾವಳಿ ಹಬ್ಬಕ್ಕೆ ದೊರೆತಿರುವ ಜಾಗತಿಕ ಮನ್ನಣೆಯು ಭರವಸೆ, ಸೌಹಾರ್ದ ಮತ್ತು ಮಾನವೀಯತೆಯ ಸಂದೇಶ ಹರಡುವ ನಮ್ಮ ಗುರಿಗೆ ಸಿಕ್ಕ ಗೌರವವಾಗಿದೆ. ಇದು ಎಲ್ಲ ಭಾರತೀಯರು ಹೆಮ್ಮೆಪಡುವ ವಿಷಯವಾಗಿದೆ’ ಎಂದು ಹೇಳಿದ್ದಾರೆ.
  • ಕಾಫಿ ಸಂಶೋಧನಾ ಸಂಸ್ಥೆಗೆ ನೂರರ ಸಂಭ್ರಮ

ಸಂದರ್ಭ: ‘ಬಾಳೆಹೊನ್ನೂರಿನ ಕೇಂದ್ರ ಕಾಫಿ ಸಂಶೋಧನಾ ಕೇಂದ್ರದ (ಸಿಸಿಆರ್) ಶತಮಾನೋತ್ಸವದ ಅಂಗವಾಗಿ ಕಾಫಿ ಮಂಡಳಿ ವತಿಯಿಂದ ಡಿ. 20ರಿಂದ 22ರವರೆಗೆ ಮೂರು ದಿನಗಳ ಸಮಾವೇಶ ಹಮ್ಮಿಕೊಳ್ಳ ಲಾಗಿದೆ ಎಂದು ಕಾಫಿ ಮಂಡಳಿ ಸದಸ್ಯ.

  • ‘ಕಾಫಿ ಉದ್ಯಮದ ಸವಾಲು ಮತ್ತು ಪರಿಹಾರ, ತಾಂತ್ರಿಕ ಮತ್ತು ವೈಜ್ಞಾನಿಕ ಅಂಶಗಳನ್ನು ಒಳಗೊಳ್ಳುವ ಬಗ್ಗೆ,  ಮಾನವ ಪ್ರಾಣಿ ಸಂಘರ್ಷ, ವಿಶೇಷ ಕಾಫಿ ಮತ್ತು ಜಾಗತಿಕ ಮಾರುಕಟ್ಟೆ ವಿಷಯ ಸೇರಿ ಹತ್ತು ಚರ್ಚಾಗೋಷ್ಠಿ ಗಳು ನಡೆಯಲಿವೆ.
  • ಸಮಗ್ರ ಕೃಷಿ ಆರ್ಥಿಕ ನಿರ್ವಹಣೆ, ಮಣ್ಣು ಮತ್ತು ಪರಿಸರಕ್ಕೆ ಧಕ್ಕೆಯಾಗದಂತೆ ಕಾಫಿ ಬೆಳೆಯುವ ವಿಧಾನ, ಕಾಫಿ ತೋಟಗಳ ನಿರ್ವಹಣೆ ಬಗ್ಗೆ ಕಾರ್ಯಾಗಾರಗಳು ನಡೆಯಲಿವೆ. ಇದೇ ವೇಳೆ, ಕಾಫಿಯ 2 ಹೊಸ ತಳಿ ಬಿಡುಗಡೆ ಮಾಡಲಾಗುತ್ತಿದೆ’ ಎಂದರು.
  • ‘1925ರಲ್ಲಿ ಮೈಸೂರು ಮಹಾರಾಜರ ಆಡಳಿತ ಸಂದರ್ಭದಲ್ಲಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯು ಕಾಫಿ ಬೆಳೆಯಲ್ಲಿ ಎರಡು ಜಿ.ಐ. ಟ್ಯಾಗ್‌ಗಳನ್ನು ಹೊಂದಿರುವುದು ಹೆಮ್ಮೆಯ ಸಂಗತಿ. ಭಾರತೀಯ ಕಾಫಿಗೆ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಹೆಚ್ಚಿದ್ದರೂ ಬ್ರ‍್ಯಾಂಡಿಂಗ್ ಸಮಸ್ಯೆ ಇದೆ. ಭಾರತೀಯ ಕಾಫಿ ಬ್ರ‍್ಯಾಂಡಿಂಗ್ ಹೆಚ್ಚಿಸುವ ಬಗ್ಗೆಯೂ ಚರ್ಚಿಸಲಾ ಗುವುದು. ರಾಜ್ಯ, ಹೊರ ರಾಜ್ಯಗಳಿಂದ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸ ಲಿದ್ದಾರೆ’ ಎಂದರು.

7 ಲಕ್ಷ ಟನ್ಗೆ ಹೆಚ್ಚಿಸಲು ನೀಲನಕ್ಷೆ

  • ‘ರಾಜ್ಯದಲ್ಲಿ ಸದ್ಯ 3.5 ಲಕ್ಷ ಟನ್ ಕಾಫಿ ಉತ್ಪಾದಿಸಲಾಗುತ್ತಿದ್ದು, 7 ಲಕ್ಷ ಟನ್ ಉತ್ಪಾದಿಸಲು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಉದ್ಯಮಕ್ಕೆ ಬರುತ್ತಿರುವ ಯುವಜನರನ್ನು ಪ್ರೋತ್ಸಾಹಿಸಲು ಕಾರ್ಯಾಗಾರ ಆಯೋಜಿಸಲಾಗಿದೆ’ ಎಂದು ಹೇಳಿದರು.
  • ‘ಆಧುನಿಕ ತಂತ್ರಜ್ಞಾನ ಬಳಕೆಯ ಬಗ್ಗೆ ಸಂಸ್ಥೆಯಲ್ಲಿ ಅಧ್ಯಯನ ನಡೆದಿದ್ದು, ಕಾಫಿಯನ್ನು ಉತ್ಕೃಷ್ಟ ಗುಣಮಟ್ಟಕ್ಕೆ ಕೊಂಡೊಯ್ಯಲು ಮಾರ್ಗಸೂಚಿ ಮತ್ತು ಸಿದ್ಧತೆಗಳನ್ನು ನಡೆಸಲಾಗಿದೆ’ ಎಂದರು.
  • ‘ಉತ್ಪಾದನೆ ಹೆಚ್ಚಿಸಲು ಕಾಫಿ ಬೆಳೆಯುವ ಜಾಗ ವಿಸ್ತರಿಸಬೇಕೆಂದೇನಿಲ್ಲ. ತಂತ್ರಜ್ಞಾನ ಸಹಿತ ತೋಟಗಳ ನಿರ್ವಹಣೆಯಲ್ಲಿ ಬದಲಾವಣೆ ಮಾಡಿಕೊಂಡರೆ ಇಳುವರಿಯನ್ನು ದುಪ್ಪಟ್ಟು ಮಾಡಿಕೊಳ್ಳಬಹುದು. ಈ ಬಗ್ಗೆಯೂ ಸಮಾವೇಶದಲ್ಲಿ ಚರ್ಚೆಯಾಗಲಿದೆ’ ಎಂದರು.
  • ಸಕ್ಕರೆ ಎಂಎಸ್ಪಿ ಪರಿಷ್ಕರಣೆ: ಸರ್ಕಾರದಿಂದ ಪರಿಗಣನೆ

ಸಂದರ್ಭ: ಸಕ್ಕರೆಗೆ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಪರಿಷ್ಕರಿಸುವ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಹೇಳಿದ್ದಾರೆ.

  • ಸಕ್ಕರೆ ಕಾರ್ಖಾನೆಗಳ ಬಾಕಿ ಪಾವತಿಗಳ ಮೊತ್ತವು ಹೆಚ್ಚಾಗುತ್ತಿದೆ, ಅದು ನವೆಂಬರ್‌ ಅಂತ್ಯಕ್ಕೆ ಮಹಾರಾಷ್ಟ್ರದಲ್ಲೇ ₹2,000 ಕೋಟಿಯಷ್ಟಾಗಿದೆ. ದಾಸ್ತಾನು ಹೆಚ್ಚಿರುವುದು, ಉತ್ಪಾದನಾ ವೆಚ್ಚ ಹೆಚ್ಚಳ, ಎಥೆನಾಲ್‌ ಉತ್ಪಾದನೆಗೆ ಸಕ್ಕರೆ ಬಳಕೆಗೆ ಮಿತಿ, ದೇಶಿ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಇಳಿಕೆಯ ಕಾರಣಗಳಿಂದಾಗಿ ಸಕ್ಕರೆ ಕಾರ್ಖಾನೆಗಳು ನಗದು ಕೊರತೆಯನ್ನು ಎದುರಿಸುತ್ತಿವೆ ಎಂದು ಭಾರತೀಯ ಸಕ್ಕರೆ ಮತ್ತು ಜೈವಿಕ ಇಂಧನ ತಯಾರಕರ ಸಂಘವು (ಐಎಸ್‌ಎಂಎ) ಹೇಳಿದೆ.
  • ಐಎಸ್‌ಎಂಎ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಮಾತನಾಡಿದ ಚೋಪ್ರಾ, ‘ಅವರು (ಐಎಸ್‌ಎಂಎ) ನಮಗೆ ಸಮಸ್ಯೆಗಳನ್ನು ಹೇಳಿದ್ದಾರೆ… ಮುಂದಿನ ಒಂದೆರಡು ತಿಂಗಳಲ್ಲಿ ನಾವು ಕಾರ್ಖಾನೆಗಳಿಗೆ ನೆರವಾಗುವ ರೀತಿಯಲ್ಲಿ ಹಾಗೂ ರೈತರಿಗೆ ಸಕಾಲದಲ್ಲಿ ಪಾವತಿಗಳು ಆಗುವ ರೀತಿಯಲ್ಲಿ ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.
  • ಎಂಎಸ್‌ಪಿ ಪರಿಷ್ಕರಣೆ, ಸಕ್ಕರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಲು ಅವಕಾಶ ನೀಡುವುದು, ಎಥೆನಾಲ್ ಉತ್ಪಾದನೆಗೆ ಹೆಚ್ಚಿನ ಸಕ್ಕರೆ ಬಳಸಲು ಅವಕಾಶ ಕಲ್ಪಿಸುವುದು ಸೇರಿ ಎಲ್ಲ ಆಯ್ಕೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ.
  • ಸಕ್ಕರೆ ಎಂಎಸ್‌ಪಿ ದರ ಕೆ.ಜಿ.ಗೆ ₹31ರ ಮಟ್ಟದಲ್ಲಿ 2019ರ ಫೆಬ್ರುವರಿಯಿಂದ ಇದೆ. ಇದನ್ನು ಕೆ.ಜಿ.ಗೆ ₹41.66ಕ್ಕೆ ಹೆಚ್ಚಿಸಬೇಕು ಎಂಬುದು ಐಎಸ್‌ಎಂಎ ಬೇಡಿಕೆ.
  • ಎನ್ಪಿಎಸ್‌: 25 ಕೋಟಿ ಚಂದಾದಾರರ ಸೇರ್ಪಡೆ ಗುರಿ

ಸಂದರ್ಭ: ಜೊಮಾಟೊ ಕಂಪನಿಯು ತನ್ನ ನೌಕರರಿಗೆ ಎನ್ಪಿಎಸ್ಆರಂಭಿಸಿದೆ. ಸ್ವಿಗ್ಗಿ, ಓಲಾ ಮತ್ತು ಉಬರ್ಕಂಪನಿಗಳು ಎನ್ಪಿಎಸ್ ಕುರಿತು ಮಾತುಕತೆ ನಡೆಸುತ್ತಿದ್ದು, ಸ್ವಿಗ್ಗಿ ಮಾತುಕತೆ ಅಂತಿಮ ಹಂತದಲ್ಲಿದೆ, ಅಧ್ಯಕ್ಷ, ಪಿಎಫ್ಆರ್ಡಿಎ.

  • ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (ಎನ್‌ಪಿಎಸ್‌) ವ್ಯಾಪ್ತಿಗೆ ಖಾಸಗಿ ವಲಯದ 25 ಕೋಟಿ ಹೊಸ ಚಂದಾದಾರರನ್ನು ಸೇರಿಸುವ ಗುರಿ ಹೊಂದಲಾಗಿದೆ‌ ಎಂದು  ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಪಿಎಫ್‌ಆರ್‌ಡಿಎ) ಅಧ್ಯಕ್ಷ ಶಿವಸುಬ್ರಮಣಿಯನ್ ರಾಮನ್ ಹೇಳಿದರು.
  • ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ಭಾರತ ದೃಷ್ಟಿಕೋನಕ್ಕೆ ಅನುಗುಣವಾಗಿ ಎನ್‌ಪಿಎಸ್‌ ವಿಸ್ತರಿಸಲು ಉದ್ದೇಶಿಸ ಲಾಗಿದೆ.  ಎನ್‌ಪಿಎಸ್ ಅಡಿಯಲ್ಲಿ ಸಂಗ್ರಹವಾಗುವ ಹಣವನ್ನು ಪ್ರಮುಖ ಮೂಲಸೌಕರ್ಯ ಮತ್ತು ಕಾರ್ಪೊರೇಟ್ ಯೋಜನೆಗಳಿಗೆ ಬಳಸಲಾಗುವುದು. ಚಂದಾದಾರರ ಉಳಿತಾಯವನ್ನು ಹೂಡಿಕೆಗಳನ್ನಾಗಿ ಪರಿವರ್ತಿಸಲಾಗು ತ್ತಿದ್ದು, ಇದಕ್ಕಾಗಿ ಹೂಡಿಕೆ ಮಾರ್ಗಸೂಚಿ ಗಳನ್ನು ಬದಲಾಯಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.
  • ಪ್ರಸ್ತುತ, ಎನ್‌ಪಿಎಸ್‌ ಮತ್ತು ಅಟಲ್‌ ಪಿಂಚಣಿ ಯೋಜನೆಯ (ಎಪಿವೈ) ಸಂಪತ್ತಿನ ಮೌಲ್ಯವು (ಎಯುಎಂ) ₹16 ಲಕ್ಷ ಕೋಟಿ ದಾಟಿದೆ. ಈ ಪೈಕಿ ಶೇ 50ರಷ್ಟು ಮೊತ್ತ ಸರ್ಕಾರಿ ಸಾಲಪತ್ರ ಗಳಲ್ಲಿ, ಶೇ 23ರಷ್ಟನ್ನು ಕಾರ್ಪೊರೇಟ್ ಸಾಲಪತ್ರಗಳಲ್ಲಿ, ಶೇ 18ರಷ್ಟನ್ನು ಷೇರುಗಳಲ್ಲಿ ಹೂಡಿಕೆ ಮಾಡಲಾಗಿದೆ ಎಂದರು.
  • ಎನ್‌ಪಿಎಸ್‌ ಸುಧಾರಣೆಗಳ ಮೂಲಕ ವ್ಯವಸ್ಥೆಯನ್ನು ಹೆಚ್ಚು ಗ್ರಾಹಕಸ್ನೇಹಿ ಆಗಿಸಲಾಗಿದ್ದು, ಎಲ್ಲ ವರ್ಗದವರು ಎನ್‌ಪಿಎಸ್‌ ಪಡೆಯುವಂತೆ ಮಾಡಲಾಗಿದೆ. ಚಂದಾದಾರರು 15 ವರ್ಷಗಳ ನಂತರ ತಮ್ಮ ಹೂಡಿಕೆಯ ಶೇ 80ರವರೆಗಿನ ಮೊತ್ತವನ್ನು ಹಿಂಪಡೆಯಲು ಅವಕಾಶವಿದೆ ಎಂದು ತಿಳಿಸಿದರು.
  • ರೈತ ಉತ್ಪಾದಕ ಸಂಸ್ಥೆಗಳು, ಎಂಎಸ್‌ಎಂಇ ವಲಯದಲ್ಲಿನ ಕಾರ್ಮಿಕರನ್ನು ಸಹ ಎನ್‌ಪಿಎಸ್‌ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ. ಅಲ್ಲದೆ, ವಿವಿಧ ಫಿನ್‌ಟೆಕ್‌ ವೇದಿಕೆಗಳಲ್ಲಿ ಸಹ ಎನ್‌ಪಿಎಸ್‌ ಲಭ್ಯವಾಗುವಂತೆ ಮಾಡಲು ಫಿನ್‌ಟೆಕ್‌ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments