‘ನರೇಗಾ’ ಯೋಜನೆಗೆ ಪರ್ಯಾಯವಾಗಿ ರೂಪಿಸಿರುವ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ–ಜಿ ರಾಮ್ ಜಿ) ಮಸೂದೆಯನ್ನು ಲೋಕಸಭೆ ಮತ್ತು ರಾಜ್ಯಸಭೆ ಯಲ್ಲಿ ಅಂಗೀಕರಿಸಲಾಯಿತು.
₹10–11 ಲಕ್ಷ ಕೋಟಿಯನ್ನು ಕೇವಲ ವೇತನ ಪಾವತಿಸಲು ಖರ್ಚು ಮಾಡಬಾರದು. ಬದಲಾಗಿ, ಶಾಶ್ವತ ಆಸ್ತಿಗಳನ್ನು ಸೃಷ್ಟಿಸಲು ಬಳಸಬೇಕು ಎಂದು ಭಾವಿಸಿ ಆಳವಾದ ಚರ್ಚೆಯ ಬಳಿಕ ‘ಜಿ ರಾಮ್ ಜಿ’ ಮಸೂದೆಯನ್ನು ತರಲಾಗಿದೆ.
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಒಳಮೀಸಲಾತಿ ನೀಡುವ ಸಂಬಂಧ 2024ರ ಆ. 1ರಂದು ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಯಿತು.
ಒಳಮೀಸಲಾತಿಗೆ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಲು ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಲಾಯಿತು. ಆಯೋಗವು ಐದು ಪ್ರವರ್ಗಗಳ ನಡುವೆ ಮೀಸಲಾತಿ ಹಂಚಿಕೆ ಮಾಡಿ ವರದಿ ನೀಡಿತ್ತು.
‘ವರದಿ ಆಧರಿಸಿ 101 ಉಪಜಾತಿಗಳನ್ನು ಮೂರು ಪ್ರವರ್ಗಗಳನ್ನಾಗಿ ವಿಂಗಡಿಸಿ ‘ಪ್ರವರ್ಗ ಎ’ನಲ್ಲಿ 16 ಜಾತಿಗಳನ್ನು ಸೇರಿಸಿ ಶೇ 6, ‘ಪ್ರವರ್ಗ ಬಿ’ನಲ್ಲಿ 19 ಜಾತಿಗಳನ್ನು ಸೇರಿಸಿ ಶೇ 6 ಹಾಗೂ ‘ಪ್ರವರ್ಗ ಸಿ’ನಲ್ಲಿ 63 ಜಾತಿಗಳನ್ನು ಸೇರಿಸಿ ಶೇ 5 ಮೀಸಲಾತಿ ಹಂಚಿಕೆ ಮಾಡಲಾಗಿದೆ.
ದ್ವೇಷಭಾಷಣತಡೆಮಸೂದೆಗೆಅಸ್ತು
ಸಂದರ್ಭ: ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ–2025’ಗೆ ಅನುಮೋದನೆ ನೀಡುವಂತೆ ಗೃಹ ಸಚಿವ ಪ್ರಸ್ತಾಪಿಸಿದರು.
ಮಸೂದೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ: ‘ಕೇಂದ್ರ ಸರ್ಕಾರ ಜಾರಿಗೆ ತಂದ ಬಿಎನ್‌ಎಸ್ ಕಾಯ್ದೆಯು ದ್ವೇಷ ಭಾಷಣ ತಡೆಗೆ ಅವಕಾಶ ಕಲ್ಪಿಸಿದೆ. ಹಾಗಿದ್ದರೂ ಎದುರಾಳಿಗಳನ್ನು ಹತ್ತಿಕ್ಕಲು ಮಸೂದೆ ತರಲಾಗುತ್ತಿದೆ’ ಎಂದರು.
ರಾಜ್ಯಕ್ಕಿಲ್ಲ ₹16,863 ಕೋಟಿ
ಸಂದರ್ಭ: ಜಲ ಜೀವನ್ ಮಿಷನ್‌ನ (ಜೆಜೆಎಂ) ಮಾರ್ಗಸೂಚಿ ಪ್ರಕಾರ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವ ಸಲ್ಲಿಸಲು ವಿಳಂಬ ಮಾಡಿರುವ ಕಾರಣ ನೀಡಿ ಕರ್ನಾಟಕಕ್ಕೆ ₹16,863 ಕೋಟಿ ಅನುದಾನ ನೀಡಲು ಕೇಂದ್ರ ಜಲಶಕ್ತಿ ಸಚಿವಾಲಯ ನಿರಾಕರಿಸಿದೆ.
ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶ ಹೊಂದಿರುವ ಈ ಯೋಜನೆಗೆ ಜಲಶಕ್ತಿ ಸಚಿವಾಲಯವು ರಾಜ್ಯಕ್ಕೆ 2019ರಿಂದ 2025ರ ಅವಧಿಗೆ ₹28,623 ಕೋಟಿ (ಕೇಂದ್ರದ ಪಾಲು) ಹಂಚಿಕೆ ಮಾಡಿತ್ತು. ಆದರೆ, ಈವರೆಗೆ ₹11,760 ಕೋಟಿ ಬಿಡುಗಡೆ ಮಾಡಿದೆ.
‘ಕೇಂದ್ರದ ನಿಧಿಯನ್ನು ಅನುಮೋದಿತ ಮಿಷನ್ ಅವಧಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಕರ್ನಾಟಕ ಸರ್ಕಾರಕ್ಕೆ ಸ್ಪಷ್ಟಪಡಿಸಲಾಗಿದೆ. ರಾಜ್ಯ ಸರ್ಕಾರವು ಸ್ವಂತ ಸಂಪನ್ಮೂಲಗಳಿಂದ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಲಹೆ ನೀಡಲಾಗಿದೆ.
ಕೇಂದ್ರ ಸಚಿವ ಸಂಪುಟವು 2019-20ರಿಂದ 2023-24 ರವರೆಗೆ ಜಲ ಜೀವನ್ ಮಿಷನ್ ಅನುಷ್ಠಾನಕ್ಕೆ ಅನುಮೋದನೆ ನೀಡಿತ್ತು. ಈ ಅವಧಿಯಲ್ಲಿ, ರಾಜ್ಯ ಸರ್ಕಾರಗಳು ಯೋಜನೆ ರೂಪಿಸಿ ಅನುಮೋದನೆ ಪಡೆದು, ಅನುಷ್ಠಾನ ಮಾಡಬೇಕಿತ್ತು. ರಾಜ್ಯಗಳಲ್ಲಿ ಅನಗತ್ಯವಾಗಿ ಹಣ ಪೋಲಾಗುವುದನ್ನು ತಪ್ಪಿಸಲು ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಿಗೆ ‘ಸಮಯಕ್ಕೆ ಸರಿಯಾಗಿ ಹಣ ಪಾವತಿ’ ತತ್ವದ ಅಡಿಯಲ್ಲಿ ಹಣಕಾಸು ಸಚಿವಾಲಯದ ಸುತ್ತೋಲೆಗಳ ಪ್ರಕಾರ ಹಣ ಬಿಡುಗಡೆ ಮಾಡಲಾಗಿತ್ತು.
ರಾಜ್ಯಕ್ಕೆ ₹28,623.89 ಕೋಟಿ ಹಂಚಿಕೆ ಮಾಡಲಾಗಿತ್ತು. ಆದರೆ, ಎಂಒಎಫ್ ಮತ್ತು ಜೆಜೆಎಂ ಮಾರ್ಗಸೂಚಿ ಪ್ರಕಾರ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವಗಳನ್ನು ಸಲ್ಲಿಸಲು ವಿಳಂಬ ಮಾಡಿದ ಕಾರಣಕ್ಕೆ ರಾಜ್ಯವು ಮಿಷನ್ ಅವಧಿಯಲ್ಲಿ ₹11,760 ಕೋಟಿ ಮಾತ್ರ ಪಡೆದಿದೆ. ಕೇಂದ್ರ ಸಚಿವ ಸಂಪುಟವು ಅನುಮೋದಿಸಿದ ಕೇಂದ್ರದ ಪಾಲನ್ನು ಈವರೆಗೆ ನೀಡಲಾಗಿದೆ.
ದೇಶದಲ್ಲಿ ಯೋಜನೆಯ ಪ್ರಗತಿ ಪರಿಗಣಿಸಿ 2028ರವರೆಗೆ ಮಿಷನ್ ವಿಸ್ತರಿಸುವುದಾಗಿ ಕೇಂದ್ರ ಹಣಕಾಸು ಸಚಿವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಯೋಜನೆಯ ವಿಸ್ತರಣೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆದ ನಂತರ ಮತ್ತು ಮಾರ್ಗಸೂಚಿ ಪರಕಾರ ಕೇಂದ್ರದ ಅನುದಾನವನ್ನು ಅರ್ಹ ರಾಜ್ಯಗಳಿಗೆ ಬಿಡುಗಡೆ ಮಾಡಲು ಅವಕಾಶ ಇದೆ.
‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ಮಸೂದೆಯನ್ನು ಮಂಡಿಸಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ‘ಸ್ವಾತಂತ್ರ್ಯ ಬಂದು 75 ವರ್ಷವಾದರೂ ಸಾಮಾಜಿಕವಾಗಿ ಬಹಿಷ್ಕಾರ ಹಾಕುವುದು ನಡೆದಿದೆ. ಇದು ಮಾನವ ಹಕ್ಕುಗಳ, ನಾಗರಿಕ ಹಕ್ಕುಗಳು ಉಲ್ಲಂಘನೆ. ಇದನ್ನು ನಿಷೇಧಿಸುವ ಐತಿಹಾಸಿಕ ಮಸೂದೆಯನ್ನು ರೂಪಿಸಲಾಗಿದೆ.
ಪರಿಷತ್ತು: 7 ಮಸೂದೆಗಳಿಗೆಅನುಮೋದನೆ
ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ಮಸೂದೆ–2025
ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ಮಸೂದೆ–2025
ಕರ್ನಾಟಕ ಧನವಿನಿಯೋಗ (ಸಂಖ್ಯೆ:04) ಮಸೂದೆ–2025
ಬಾಂಬೆ ಸಾರ್ವಜನಿಕ ನ್ಯಾಸ (ಕರ್ನಾಟಕ ತಿದ್ದುಪಡಿ) ಮಸೂದೆ–2025
ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ಮಸೂದೆ–2025
ಔಷಧ ಮತ್ತು ಪ್ರಸಾಧನ ಸಾಮಗ್ರಿ (ಕರ್ನಾಟಕ ತಿದ್ದುಪಡಿ) ಮಸೂದೆ–2025
ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ತಿದ್ದುಪಡಿ) ಮಸೂದೆ–2025
ಕಾರುಗಳಮೇಲೆಸೆಸ್
ಬೈಕುಗಳು ಮತ್ತು ಕಾರುಗಳ ಮೇಲೆ ವಿಧಿಸಲಾಗುವ ರಸ್ತೆ ಸುರಕ್ಷತಾ ಸೆಸ್ ವಾಪಸ್ ಪಡೆಯುವ ಸಂಬಂಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಡಿಸಿದ ‘ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ತಿದ್ದುಪಡಿ) ಮಸೂದೆ–2025.
ಸಮಸ್ಯೆಬಗೆಹರಿಸುವುದೇಕಾಯ್ದೆ?
ಭಾರತ–ಒಮಾನ್ ವ್ಯಾಪಾರಒಪ್ಪಂದಕ್ಕೆಸಹಿ: ಪ್ರಧಾನಿನರೇಂದ್ರಮೋದಿಗೆ ‘ಆರ್ಡರ್ಆಫ್ಒಮಾನ್’ ಪ್ರಶಸ್ತಿ
ಸಂದರ್ಭ: ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ (ಸಿಇಟಿಎ) ಭಾರತ ಮತ್ತು ಒಮಾನ್ ಸಹಿ ಹಾಕಿವೆ. ಈ ಒಪ್ಪಂದವು ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಹೊಸ ಭರವಸೆ ಮತ್ತು ಬಲವನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಭಾರತ–ಒಮಾನ್ ವ್ಯಾಪಾರ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಈ ಒಪ್ಪಂದವು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಹೊಸ ದಿಕ್ಕನ್ನು ನೀಡುತ್ತದೆ ಮತ್ತು ಪರಸ್ಪರ ಬೆಳವಣಿಗೆಗೆ ಅವಕಾಶ ಕಲ್ಪಿಸುತ್ತದೆ. ಪ್ರತಿಯೊಂದು ವಲಯದಲ್ಲಿಯೂ ಅವಕಾಶದ ಹೊಸ ಬಾಗಿಲನ್ನು ತೆರೆಯುತ್ತದೆ’ ಎಂದಿದ್ದಾರೆ.
‘ಭಾರತವು ಯಾವಾಗಲೂ ಪ್ರಗತಿಪರ ಮತ್ತು ಸ್ವಾವಲಂಬಿ ದೇಶವಾಗಿದೆ. ಭಾರತ ಬೆಳೆದಂತೆಲ್ಲ, ಅದು ತನ್ನ ಸ್ನೇಹಿತರಿಗೂ ಬೆಳೆಯಲು ಸಹಾಯ ಮಾಡುತ್ತದೆ. ಭಾರತವು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆ ರಾಷ್ಟ್ರವಾಗುವತ್ತ ಸಾಗಿದೆ. ಇದು ಇಡೀ ಜಗತ್ತಿಗೆ ಪ್ರಯೋಜನಕಾರಿ. ಅದರಲ್ಲೂ ಒಮಾನ್ ಭಾರತದ ಆತ್ಮೀಯ ದೇಶ ವಾಗಿ ರುವುದರಿಂದ ಅದಕ್ಕೆ ಹೆಚ್ಚು ಪ್ರಯೋ ಜನವಾಗಲಿದೆ’ ಎಂದು ಹೇಳಿದ್ದಾರೆ.
‘ಭಾರತ ಮತ್ತು ಒಮಾನ್‌ನ ವ್ಯಾವಹಾರಿಕ ಸಂಬಂಧವು ತಲೆಮಾರು ಗಳಿಂದ ನಂಬಿಕೆಯ ಬುನಾದಿಯ ಮೇಲೆ ನಿಂತಿದೆ. ಉಭಯ ದೇಶಗಳ ನಾವು ಪರಸ್ಪರ ಮಾರುಕಟ್ಟೆಗಳನ್ನು ಅರ್ಥಮಾಡಿಕೊಂಡಿದ್ದೇವೆ’ ಎಂದಿದ್ದಾರೆ.
ಅಭಿವೃದ್ಧಿಯಲ್ಲಿ ಪಾಲುದಾರರಾ ಗುವಂತೆ ಒಮಾನ್ ಕಂಪನಿಗಳಿಗೆ ಪ್ರಧಾನಿ ಕರೆ ನೀಡಿದ್ದಾರೆ.
‘ಮೈತ್ರಿಪರ್ವ’ದಲ್ಲಿಪ್ರಧಾನಿಮಾತು
21ನೇ ಶತಮಾನದಲ್ಲಿ ಭಾರತವು ತ್ವರಿತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ದೊಡ್ಡ ಗುರಿಗಳನ್ನು ಇಟ್ಟುಕೊಂಡು, ನಿರ್ದಿಷ್ಟ ಸಮಯದಲ್ಲಿ ಫಲಿತಾಂಶ ಪಡೆಯುವುದು ಇದರ ಉದ್ದೇಶ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಮಸ್ಕತ್‌ನಲ್ಲಿ ನಡೆದ ‘ಮೈತ್ರಿ ಪರ್ವ’ ಕಾರ್ಯಕ್ರಮದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ದೀಪ ಈಗ ನಮ್ಮ ಮನೆಗಳಲ್ಲಿ ಮಾತ್ರವಲ್ಲದೆ ಇಡೀ ಜಗತ್ತನ್ನೇ ಬೆಳಗುತ್ತಿದೆ’ ಎಂದಿದ್ದಾರೆ.
‘ದೀಪಾವಳಿ ಹಬ್ಬಕ್ಕೆ ದೊರೆತಿರುವ ಜಾಗತಿಕ ಮನ್ನಣೆಯು ಭರವಸೆ, ಸೌಹಾರ್ದ ಮತ್ತು ಮಾನವೀಯತೆಯ ಸಂದೇಶ ಹರಡುವ ನಮ್ಮ ಗುರಿಗೆ ಸಿಕ್ಕ ಗೌರವವಾಗಿದೆ. ಇದು ಎಲ್ಲ ಭಾರತೀಯರು ಹೆಮ್ಮೆಪಡುವ ವಿಷಯವಾಗಿದೆ’ ಎಂದು ಹೇಳಿದ್ದಾರೆ.
‘ಕಾಫಿ ಉದ್ಯಮದ ಸವಾಲು ಮತ್ತು ಪರಿಹಾರ, ತಾಂತ್ರಿಕ ಮತ್ತು ವೈಜ್ಞಾನಿಕ ಅಂಶಗಳನ್ನು ಒಳಗೊಳ್ಳುವ ಬಗ್ಗೆ, ಮಾನವ ಪ್ರಾಣಿ ಸಂಘರ್ಷ, ವಿಶೇಷ ಕಾಫಿ ಮತ್ತು ಜಾಗತಿಕ ಮಾರುಕಟ್ಟೆ ವಿಷಯ ಸೇರಿ ಹತ್ತು ಚರ್ಚಾಗೋಷ್ಠಿ ಗಳು ನಡೆಯಲಿವೆ.
ಸಮಗ್ರ ಕೃಷಿ ಆರ್ಥಿಕ ನಿರ್ವಹಣೆ, ಮಣ್ಣು ಮತ್ತು ಪರಿಸರಕ್ಕೆ ಧಕ್ಕೆಯಾಗದಂತೆ ಕಾಫಿ ಬೆಳೆಯುವ ವಿಧಾನ, ಕಾಫಿ ತೋಟಗಳ ನಿರ್ವಹಣೆ ಬಗ್ಗೆ ಕಾರ್ಯಾಗಾರಗಳು ನಡೆಯಲಿವೆ. ಇದೇ ವೇಳೆ, ಕಾಫಿಯ 2 ಹೊಸ ತಳಿ ಬಿಡುಗಡೆ ಮಾಡಲಾಗುತ್ತಿದೆ’ ಎಂದರು.
‘1925ರಲ್ಲಿ ಮೈಸೂರು ಮಹಾರಾಜರ ಆಡಳಿತ ಸಂದರ್ಭದಲ್ಲಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯು ಕಾಫಿ ಬೆಳೆಯಲ್ಲಿ ಎರಡು ಜಿ.ಐ. ಟ್ಯಾಗ್‌ಗಳನ್ನು ಹೊಂದಿರುವುದು ಹೆಮ್ಮೆಯ ಸಂಗತಿ. ಭಾರತೀಯ ಕಾಫಿಗೆ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಹೆಚ್ಚಿದ್ದರೂ ಬ್ರ‍್ಯಾಂಡಿಂಗ್ ಸಮಸ್ಯೆ ಇದೆ. ಭಾರತೀಯ ಕಾಫಿ ಬ್ರ‍್ಯಾಂಡಿಂಗ್ ಹೆಚ್ಚಿಸುವ ಬಗ್ಗೆಯೂ ಚರ್ಚಿಸಲಾ ಗುವುದು. ರಾಜ್ಯ, ಹೊರ ರಾಜ್ಯಗಳಿಂದ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸ ಲಿದ್ದಾರೆ’ ಎಂದರು.
7 ಲಕ್ಷಟನ್ಗೆಹೆಚ್ಚಿಸಲುನೀಲನಕ್ಷೆ
‘ರಾಜ್ಯದಲ್ಲಿ ಸದ್ಯ 3.5 ಲಕ್ಷ ಟನ್ ಕಾಫಿ ಉತ್ಪಾದಿಸಲಾಗುತ್ತಿದ್ದು, 7 ಲಕ್ಷ ಟನ್ ಉತ್ಪಾದಿಸಲು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಉದ್ಯಮಕ್ಕೆ ಬರುತ್ತಿರುವ ಯುವಜನರನ್ನು ಪ್ರೋತ್ಸಾಹಿಸಲು ಕಾರ್ಯಾಗಾರ ಆಯೋಜಿಸಲಾಗಿದೆ’ ಎಂದು ಹೇಳಿದರು.
‘ಆಧುನಿಕ ತಂತ್ರಜ್ಞಾನ ಬಳಕೆಯ ಬಗ್ಗೆ ಸಂಸ್ಥೆಯಲ್ಲಿ ಅಧ್ಯಯನ ನಡೆದಿದ್ದು, ಕಾಫಿಯನ್ನು ಉತ್ಕೃಷ್ಟ ಗುಣಮಟ್ಟಕ್ಕೆ ಕೊಂಡೊಯ್ಯಲು ಮಾರ್ಗಸೂಚಿ ಮತ್ತು ಸಿದ್ಧತೆಗಳನ್ನು ನಡೆಸಲಾಗಿದೆ’ ಎಂದರು.
‘ಉತ್ಪಾದನೆ ಹೆಚ್ಚಿಸಲು ಕಾಫಿ ಬೆಳೆಯುವ ಜಾಗ ವಿಸ್ತರಿಸಬೇಕೆಂದೇನಿಲ್ಲ. ತಂತ್ರಜ್ಞಾನ ಸಹಿತ ತೋಟಗಳ ನಿರ್ವಹಣೆಯಲ್ಲಿ ಬದಲಾವಣೆ ಮಾಡಿಕೊಂಡರೆ ಇಳುವರಿಯನ್ನು ದುಪ್ಪಟ್ಟು ಮಾಡಿಕೊಳ್ಳಬಹುದು. ಈ ಬಗ್ಗೆಯೂ ಸಮಾವೇಶದಲ್ಲಿ ಚರ್ಚೆಯಾಗಲಿದೆ’ ಎಂದರು.
ಸಕ್ಕರೆ ಕಾರ್ಖಾನೆಗಳ ಬಾಕಿ ಪಾವತಿಗಳ ಮೊತ್ತವು ಹೆಚ್ಚಾಗುತ್ತಿದೆ, ಅದು ನವೆಂಬರ್ ಅಂತ್ಯಕ್ಕೆ ಮಹಾರಾಷ್ಟ್ರದಲ್ಲೇ ₹2,000 ಕೋಟಿಯಷ್ಟಾಗಿದೆ. ದಾಸ್ತಾನು ಹೆಚ್ಚಿರುವುದು, ಉತ್ಪಾದನಾ ವೆಚ್ಚ ಹೆಚ್ಚಳ, ಎಥೆನಾಲ್ ಉತ್ಪಾದನೆಗೆ ಸಕ್ಕರೆ ಬಳಕೆಗೆ ಮಿತಿ, ದೇಶಿ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಇಳಿಕೆಯ ಕಾರಣಗಳಿಂದಾಗಿ ಸಕ್ಕರೆ ಕಾರ್ಖಾನೆಗಳು ನಗದು ಕೊರತೆಯನ್ನು ಎದುರಿಸುತ್ತಿವೆ ಎಂದು ಭಾರತೀಯ ಸಕ್ಕರೆ ಮತ್ತು ಜೈವಿಕ ಇಂಧನ ತಯಾರಕರ ಸಂಘವು (ಐಎಸ್‌ಎಂಎ) ಹೇಳಿದೆ.
ಐಎಸ್‌ಎಂಎ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಮಾತನಾಡಿದ ಚೋಪ್ರಾ, ‘ಅವರು (ಐಎಸ್‌ಎಂಎ) ನಮಗೆ ಸಮಸ್ಯೆಗಳನ್ನು ಹೇಳಿದ್ದಾರೆ… ಮುಂದಿನ ಒಂದೆರಡು ತಿಂಗಳಲ್ಲಿ ನಾವು ಕಾರ್ಖಾನೆಗಳಿಗೆ ನೆರವಾಗುವ ರೀತಿಯಲ್ಲಿ ಹಾಗೂ ರೈತರಿಗೆ ಸಕಾಲದಲ್ಲಿ ಪಾವತಿಗಳು ಆಗುವ ರೀತಿಯಲ್ಲಿ ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.
ಎಂಎಸ್‌ಪಿ ಪರಿಷ್ಕರಣೆ, ಸಕ್ಕರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಲು ಅವಕಾಶ ನೀಡುವುದು, ಎಥೆನಾಲ್ ಉತ್ಪಾದನೆಗೆ ಹೆಚ್ಚಿನ ಸಕ್ಕರೆ ಬಳಸಲು ಅವಕಾಶ ಕಲ್ಪಿಸುವುದು ಸೇರಿ ಎಲ್ಲ ಆಯ್ಕೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ.
ಸಕ್ಕರೆ ಎಂಎಸ್‌ಪಿ ದರ ಕೆ.ಜಿ.ಗೆ ₹31ರ ಮಟ್ಟದಲ್ಲಿ 2019ರ ಫೆಬ್ರುವರಿಯಿಂದ ಇದೆ. ಇದನ್ನು ಕೆ.ಜಿ.ಗೆ ₹41.66ಕ್ಕೆ ಹೆಚ್ಚಿಸಬೇಕು ಎಂಬುದು ಐಎಸ್‌ಎಂಎ ಬೇಡಿಕೆ.
ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (ಎನ್‌ಪಿಎಸ್) ವ್ಯಾಪ್ತಿಗೆ ಖಾಸಗಿ ವಲಯದ 25 ಕೋಟಿ ಹೊಸ ಚಂದಾದಾರರನ್ನು ಸೇರಿಸುವ ಗುರಿ ಹೊಂದಲಾಗಿದೆ ಎಂದು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಪಿಎಫ್‌ಆರ್‌ಡಿಎ) ಅಧ್ಯಕ್ಷ ಶಿವಸುಬ್ರಮಣಿಯನ್ ರಾಮನ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ಭಾರತ ದೃಷ್ಟಿಕೋನಕ್ಕೆ ಅನುಗುಣವಾಗಿ ಎನ್‌ಪಿಎಸ್ ವಿಸ್ತರಿಸಲು ಉದ್ದೇಶಿಸ ಲಾಗಿದೆ. ಎನ್‌ಪಿಎಸ್ ಅಡಿಯಲ್ಲಿ ಸಂಗ್ರಹವಾಗುವ ಹಣವನ್ನು ಪ್ರಮುಖ ಮೂಲಸೌಕರ್ಯ ಮತ್ತು ಕಾರ್ಪೊರೇಟ್ ಯೋಜನೆಗಳಿಗೆ ಬಳಸಲಾಗುವುದು. ಚಂದಾದಾರರ ಉಳಿತಾಯವನ್ನು ಹೂಡಿಕೆಗಳನ್ನಾಗಿ ಪರಿವರ್ತಿಸಲಾಗು ತ್ತಿದ್ದು, ಇದಕ್ಕಾಗಿ ಹೂಡಿಕೆ ಮಾರ್ಗಸೂಚಿ ಗಳನ್ನು ಬದಲಾಯಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.
ಪ್ರಸ್ತುತ, ಎನ್‌ಪಿಎಸ್ ಮತ್ತು ಅಟಲ್ ಪಿಂಚಣಿ ಯೋಜನೆಯ (ಎಪಿವೈ) ಸಂಪತ್ತಿನ ಮೌಲ್ಯವು (ಎಯುಎಂ) ₹16 ಲಕ್ಷ ಕೋಟಿ ದಾಟಿದೆ. ಈ ಪೈಕಿ ಶೇ 50ರಷ್ಟು ಮೊತ್ತ ಸರ್ಕಾರಿ ಸಾಲಪತ್ರ ಗಳಲ್ಲಿ, ಶೇ 23ರಷ್ಟನ್ನು ಕಾರ್ಪೊರೇಟ್ ಸಾಲಪತ್ರಗಳಲ್ಲಿ, ಶೇ 18ರಷ್ಟನ್ನು ಷೇರುಗಳಲ್ಲಿ ಹೂಡಿಕೆ ಮಾಡಲಾಗಿದೆ ಎಂದರು.
ಎನ್‌ಪಿಎಸ್ ಸುಧಾರಣೆಗಳ ಮೂಲಕ ವ್ಯವಸ್ಥೆಯನ್ನು ಹೆಚ್ಚು ಗ್ರಾಹಕಸ್ನೇಹಿ ಆಗಿಸಲಾಗಿದ್ದು, ಎಲ್ಲ ವರ್ಗದವರು ಎನ್‌ಪಿಎಸ್ ಪಡೆಯುವಂತೆ ಮಾಡಲಾಗಿದೆ. ಚಂದಾದಾರರು 15 ವರ್ಷಗಳ ನಂತರ ತಮ್ಮ ಹೂಡಿಕೆಯ ಶೇ 80ರವರೆಗಿನ ಮೊತ್ತವನ್ನು ಹಿಂಪಡೆಯಲು ಅವಕಾಶವಿದೆ ಎಂದು ತಿಳಿಸಿದರು.
ರೈತ ಉತ್ಪಾದಕ ಸಂಸ್ಥೆಗಳು, ಎಂಎಸ್‌ಎಂಇ ವಲಯದಲ್ಲಿನ ಕಾರ್ಮಿಕರನ್ನು ಸಹ ಎನ್‌ಪಿಎಸ್ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ. ಅಲ್ಲದೆ, ವಿವಿಧ ಫಿನ್‌ಟೆಕ್ ವೇದಿಕೆಗಳಲ್ಲಿ ಸಹ ಎನ್‌ಪಿಎಸ್ ಲಭ್ಯವಾಗುವಂತೆ ಮಾಡಲು ಫಿನ್‌ಟೆಕ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.
ಸಂದರ್ಭ: ಪರಿಶಿಷ್ಟಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಸರ್ಕಾರಿ ಆದೇಶಗಳು ಮತ್ತು ಸುತ್ತೋಲೆಗಳಿಗೆ ಕಾನೂನಾತ್ಮಕ ರಕ್ಷಣೆ ನೀಡುವ ಉದ್ದೇಶದ ‘ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀ ಕರಣ) ಮಸೂದೆ’ಗೆ ವಿಧಾನಸಭೆ ಅಂಗೀಕಾರ ನೀಡಿದೆ.
ನ್ಯಾ. ನಾಗಮೋಹನ್ ದಾಸ್ ಆಯೋಗದ ಶಿಫಾರಸುಗಳನ್ನು ಕೆಲ ಮಾರ್ಪಾಡಿನೊಂದಿಗೆ ಅನುಮೋದಿಸಿದ್ದ ಸರ್ಕಾರ ಈ ಮಸೂದೆಯನ್ನು ರೂಪಿಸಿತ್ತು.
ಪರಿಶಿಷ್ಟ ಜಾತಿಗೆ ಲಭ್ಯ ಇರುವ ಶೇ 17 ರಷ್ಟು ಮೀಸಲಾತಿಯಲ್ಲಿ ಪ್ರವರ್ಗ–ಎ(16 ಜಾತಿಗಳು) ಶೇ 6, ಪ್ರವರ್ಗ–ಬಿ (19 ಜಾತಿಗಳು) ಶೇ 6, ಪ್ರವರ್ಗ–ಸಿ(63 ಜಾತಿಗಳು) ಶೇ 5, ಒಟ್ಟು 98 ಜಾತಿಗಳಿಗೆ ಒಳ ಮೀಸಲು ಹಂಚಿಕೆಯಾಗಲಿದೆ. ಈ ಮಸೂದೆಗೆ ಹಸಿರು ನಿಶಾನೆ ಸಿಗುತ್ತದೆ ಎಂದು ಕಾದಿದ್ದ ಬಹುದೊಡ್ಡ ಸಮುದಾಯ ನಿರೀಕ್ಷೆ ಈಗ ಫಲ ಕಂಡಿದೆ.
ಒಳಮೀಸಲಾತಿ ಕಾಯ್ದೆ 2025ರ ಆ.25 ರಿಂದ ಅನ್ವಯವಾಗಲಿದೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಮಸೂದೆ ಮಂಡಿಸಿದರು. ಚರ್ಚೆ ಇಲ್ಲದೇ ಮಸೂದೆ ಅಂಗೀಕಾರ ಪಡೆಯಿತು.
ವಿಧಾನಪರಿಷತ್‌ನ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು, ‘ಕರ್ನಾಟಕ ಬಂಗಾರ ಅಡವಿಟ್ಟ ಸಾಲಗಾರರ ರಕ್ಷಣಾ ಮಸೂದೆ– 2025’ ಹೆಸರಿನಲ್ಲಿ ಖಾಸಗಿ ಮಸೂದೆ ಸಿದ್ಧಪಡಿಸಿದ್ದಾರೆ. ವಿಧಾನ ಪರಿಷತ್‌ನ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಅಧ್ಯಕ್ಷತೆಯ ಸಮಿತಿ ಮಸೂದೆ ಮಂಡನೆಗೆ ಸಮ್ಮತಿ ನೀಡಿದೆ.
ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕೇತರ ಹಣಕಾಸು ಕಂಪನಿಗಳು, ಖಾಸಗಿ ಹಣಕಾಸು ಸಂಸ್ಥೆಗಳು, ಲೇವಾದೇವಿಗಾರರು ಚಿನ್ನದ ಆಭರಣಗಳನ್ನು ಅಡವಿಟ್ಟುಕೊಂಡು ಸಾಲ ನೀಡುತ್ತವೆ. ನಿಗದಿತ ಅವಧಿಯ ಒಳಗೆ ಸಾಲದ ಅಸಲು ಹಾಗೂ ಬಡ್ಡಿ ಮರುಪಾವತಿ ಮಾಡದಿದ್ದರೆ, ಅವಧಿ ಪೂರ್ಣಗೊಳ್ಳುತ್ತಿದ್ದಂತೆ ಅಡವಿಟ್ಟ ಆಭರಣಗಳನ್ನು ಹರಾಜು ಹಾಕುತ್ತವೆ.
ಅಡವಿಟ್ಟುಕೊಳ್ಳುವಾಗ ನೀಡುವ ಸಾಲದ ಪ್ರಮಾಣ ಚಿನ್ನದ ಮೌಲ್ಯದ ಶೇ 50ಕ್ಕಿಂತ ಕಡಿಮೆ ಇರುತ್ತದೆ. ಅಸಲು–ಬಡ್ಡಿ ಸೇರಿದರೂ ಚಿನ್ನದ ವರ್ತಮಾನದ ಮೌಲ್ಯಕ್ಕಿಂತ ಕಡಿಮೆ ಇರುತ್ತದೆ. ಇಂತಹ ಹಲವು ಪ್ರಕರಣಗಳಲ್ಲಿ ಉಳಿಕೆ ಮೊತ್ತವನ್ನು ಸಾಲಗಾರರಿಗೆ ವರ್ಗಾಯಿಸುವುದೇ ಇಲ್ಲ.
ಬದಲಿಗೆ ಹರಾಜಿನ ನಂತರವೂ ಉಳಿಕೆ ಸಾಲದ ಬಾಕಿ ಪಾವತಿಸುವಂತೆ ನೋಟಿಸ್ ನೀಡಲಾಗುತ್ತದೆ. ಅಂತಹ ಸಾಲಗಾರರ ರಕ್ಷಣೆ ಹಾಗೂ ಅಡವಿಟ್ಟ ಚಿನ್ನದ ಹರಾಜು ಪ್ರಕ್ರಿಯೆಯನ್ನು ನಿಯಂತ್ರಿಸಲು ಹಾಗೂ ಅನುಸಂಧಾನ ವ್ಯವಸ್ಥೆ ಬಲಪಡಿಸಲು ಕಾಯ್ದೆಯ ಅಗತ್ಯವಿದೆ ಎಂದು ಮಸೂದೆ ರಚನೆಯ ಕಾರಣಗಳನ್ನು ವಿವರಿಸಲಾಗಿದೆ.
ಚಿನ್ನದ ಅಡಮಾನ ಸಾಲ ನೀಡುವ ಯಾವುದೇ ವಾಣಿಜ್ಯ ಬ್ಯಾಂಕ್, ಖಾಸಗಿ ಕಂಪನಿ, ಖಾಸಗಿ ಸಂಸ್ಥೆ, ಬ್ಯಾಂಕೇತರ ಹಣಕಾಸು ಕಂಪನಿಗಳು, ಖಾಸಗಿ ಬ್ಯಾಂಕ್, ಖಾಸಗಿ ಪ್ರತಿಷ್ಠಾನ, ಲೇವಾದೇವಿಗಾರರು ಕಾಯ್ದೆಯ ವ್ಯಾಪ್ತಿಗೆ ಒಳಪಡಲಿದ್ದು, ಅಡಮಾನ ಸಾಲ ಪಡೆದ ಚಿನ್ನವನ್ನು ಹರಾಜು ಹಾಕುವ ಮೊದಲು ಹಲವು ಪ್ರಕ್ರಿಯೆಗಳನ್ನು ನಡೆಸಬೇಕು ಎಂದು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.
ಅವಧಿ ಮುಗಿದ ದಿನಾಂಕದಿಂದ 180 ದಿನಗಳನ್ನು ನಿಗದಿ ಮಾಡಿ, ನೋಟಿಸ್ ನೀಡುವುದು. ಪಡೆದ ಸಾಲ, ವಿಧಿಸಿದ ಬಡ್ಡಿ, ಅಡವಿಟ್ಟ ಸಮಯದ ಚಿನ್ನದ ಮೌಲ್ಯ, ಪ್ರಸ್ತುತ ಮಾರುಕಟ್ಟೆ ಮೌಲ್ಯ, ಮರುಪಾವತಿ ವಿವರಗಳನ್ನು ಒದಗಿಸುವುದು ಕಡ್ಡಾಯ. ಒಟ್ಟು ಮೌಲ್ಯ ಹಾಗೂ ನೋಟಿಸ್ ಅವಧಿಯ ಒಳಗೆ ಬಾಕಿ ಮೊತ್ತ ಮತ್ತು ಅನ್ವಯವಾಗುವ ಬಡ್ಡಿಯನ್ನು ಪಾವತಿಸುವ ಸಾಲಗಾರರಿಗೆ ತಮ್ಮ ಚಿನ್ನವನ್ನು ಮರಳಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ. 180 ದಿನಗಳ ನೋಟಿಸ್ ನೀಡಿದ ನಂತರವೂ ಹರಾಜು ಪ್ರಕ್ರಿಯೆ ಪೂರ್ಣಗೊಳಿಸಲು ಹೆಚ್ಚುವರಿ 90 ದಿನಗಳ ಗಡುವು ವಿಧಿಸಬೇಕೆಂದು ಪ್ರಸ್ತಾವವಿದೆ.
ಉಲ್ಲಂಘನೆಗೆ ₹10 ಲಕ್ಷದಂಡ
ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸುವ ಹಣಕಾಸು ವಹಿವಾಟು ಸಂಸ್ಥೆಗಳಿಗೆ 6 ತಿಂಗಳು ಕಾರಾಗೃಹ ಶಿಕ್ಷೆ, ₹10 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಬೇಕೆಂದು ಪ್ರಸ್ತಾಪಿಸಲಾಗಿದೆ.
ಅಪರಾಧ ಪುನರಾವರ್ತನೆಯಾದರೆ ಸಂಸ್ಥೆಯ ನೋಂದಣಿ, ಪರವಾನಗಿ ರದ್ದು ಮಾಡುವುದು, ಅಗತ್ಯ ಕ್ರಮ ಕೈಗೊಳ್ಳಲು, ಭಾರತೀಯ ರಿಸರ್ವ್ ಬ್ಯಾಂಕ್‌ಗೆ ವರದಿ ನೀಡಲು ಅಧಿಕಾರ ನೀಡಲಾಗಿದೆ. ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ವಿಪಲವಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವ ಅವಕಾಶವನ್ನು ಒದಗಿಸಬೇಕೆಂದು ಉಲ್ಲೇಖಿಸಲಾಗಿದೆ.
ಹರಾಜಿಗೆಅಧಿಕಾರಿಗಳಕಣ್ಗಾವಲು
ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದ ಪರವಾನಗಿ ಹೊಂದಿದ ಹರಾಜುಗಾರರ ಮೂಲಕ ಮಾತ್ರ ಚಿನ್ನದ ಹರಾಜು ಪ್ರಕ್ರಿಯೆ ನಡೆಸಬೇಕು. ಸ್ಥಳೀಯ ತಹಶೀಲ್ದಾರ್ ಅಥವಾ ಸರ್ಕಾರ ನಿಯೋಜಿಸಿದ ಸರ್ಕಾರಿ ಪ್ರತಿನಿಧಿಯ ಸಮ್ಮುಖದಲ್ಲಿ ನಡೆಸುವುದುನ್ನು ಕಡ್ಡಾಯಗೊಳಿಸಬೇಕೆಂದು ಹೇಳಲಾಗಿದೆ.
ಹರಾಜಿನ ನಂತರ ಸಾಲದ ಬಾಕಿ ಮೊತ್ತ ಹಾಗೂ ಹರಾಜು ವೆಚ್ಚಗಳನ್ನು ಕಡಿತಗೊಳಿಸಿ, ಉಳಿಯುವ ಹೆಚ್ಚುವರಿ ಮೊತ್ತವನ್ನು 15 ದಿನಗಳ ಒಳಗೆ ಸಾಲಗಾರರಿಗೆ ಮರುಪಾವತಿಸಬೇಕು ಎಂಬ ವಿವರಗಳನ್ನು ಮಸೂದೆ ಒಳಗೊಂಡಿದೆ.
ಚಿನ್ನದ ಅಡಮಾನ ಸಾಲದ ಮೇಲ್ವಿಚಾರಣೆ ಬಿಗಿಗೊಳಿಸುವುದು, ಅಡವಿಟ್ಟ ಚಿನ್ನವನ್ನು ಮರಳಿ ಪಡೆಯುವ ಅವಕಾಶವನ್ನು ವಿಸ್ತರಿಸುವುದು, ಸಾಲಗಾರರ ರಕ್ಷಣಾ ಮಾನದಂಡಗಳನ್ನು ಖಚಿತಪಡಿಸುವುದು, ನ್ಯಾಯಸಮ್ಮತ ವ್ಯಾಪಾರ ಕ್ರಮಗಳನ್ನು ಜಾರಿಗೊಳಿಸುವ ನಿಯಮಗಳನ್ನು ರೂಪಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡಲಾಗಿದೆ.
ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ, ಶ್ರೀ ಚಾwಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕೆಲ ಕಾನೂನುಗಳ ತಿದ್ದುಪಡಿ ಮಸೂದೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮರಾಯ ದತ್ತಿ ತಿದ್ದುಪಡಿ ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಮಸೂದೆ, ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ಮಸೂದೆ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಸೂದೆ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ತಿದ್ದುಪಡಿ ಮಸೂದೆ, ಕರ್ನಾಟಕ ಮನೆ ಬಾಡಿಗೆ ಮಸೂದೆ, ಶ್ರೀ ಮಲೆ ಮಾದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ಮಸೂದೆ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಎರಡನೇ ತಿದ್ದುಪಡಿ ಮಸೂದೆಗಳನ್ನು ಪರಿಷತ್ ಅಂಗೀಕರಿಸಿತು.
ಭೇದವಿಲ್ಲ, ಸರ್ವರೂಸಮಾನ
ದೇಶದ ಸಮಸ್ತ ನಾಗರಿಕರು ಸಮಾನರು ಎಂದು ಸಾರಿ ಹೇಳುವ ನಮ್ಮ ಹೆಮ್ಮೆಯ ಸಂವಿಧಾನವು, ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕು ಗಳನ್ನು ನೀಡಿದೆ. ಧರ್ಮ, ಜಾತಿ, ಲಿಂಗ, ಜನ್ಮಸ್ಥಳ, ಆರ್ಥಿಕ ಸ್ಥಿತಿ ಯಾವುದನ್ನೂ ಪರಿಗಣಿಸದೆ ಮೂಲಭೂತ ಹಕ್ಕುಗಳು ಎಲ್ಲರಿಗೂ ಅನ್ವಯ ವಾಗುತ್ತವೆ. ಪ್ರತಿ ನಾಗರಿಕರೂ ಸಂವಿಧಾನದ ಮುಂದೆ ಒಂದೇ ಎಂದು ಮೂಲಭೂತ ಹಕ್ಕುಗಳು ಪ್ರತಿಪಾದಿಸುತ್ತವೆ.
ಸಮಾನತೆ ಹಕ್ಕು: ಸಮಾನತೆಯ ವಿವಿಧ ಸ್ವರೂಪ ಮತ್ತು ಅವುಗಳನ್ನು ಕಾಯ್ದುಕೊಳ್ಳಬೇಕಾದ ಬಗೆಯನ್ನು ಸಂವಿಧಾನದ 14ರಿಂದ 18ನೇ ವಿಧಿಯವರೆಗೆ ವಿವರಿಸಲಾಗಿದೆ.
ಕಾನೂನಿನ ಮುಂದೆ ಸಮಾನತೆ: ದೇಶದ ಕಾನೂನಿನ ಮುಂದೆ ಪ್ರತಿಯೊಬ್ಬರೂ ಸಮಾನರು ಮತ್ತು ಕಾನೂನಿನ ರಕ್ಷಣೆ ಎಲ್ಲರಿಗೂ ಸಮಾನವಾಗಿ ದೊರೆಯಬೇಕು ಎಂದು ಈ ಹಕ್ಕು ಪ್ರತಿಪಾದಿಸುತ್ತದೆ.
ತಾರತಮ್ಯ ನಿಷೇಧ: ಧರ್ಮ, ಮೂಲವಂಶ, ಜಾತಿ, ಲಿಂಗ, ಭಾಷೆ, ಜನ್ಮಸ್ಥಳದ ಆಧಾರದಲ್ಲಿ ವ್ಯಕ್ತಿಯನ್ನು ತಾರತಮ್ಯಕ್ಕೆ ಗುರಿ ಮಾಡುವಂತಿಲ್ಲ ಎಂದು ಈ ಹಕ್ಕು ಪ್ರತಿಪಾದಿಸುತ್ತದೆ. ಇವುಗಳ ಆಧಾರದಲ್ಲಿ ಯಾವುದೇ ವ್ಯಕ್ತಿಗೆ ಹೋಟೆಲು, ಅಂಗಡಿ, ದೇವಾಲಯ, ಸಾರ್ವಜನಿಕ ಮನೋರಂಜನ ಸ್ಥಳಕ್ಕೆ ಪ್ರವೇಶ ನಿರಾಕರಿಸುವಂತಿಲ್ಲ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಹಿಂದುಳಿದ ವರ್ಗಗಳು, ಆರ್ಥಿಕವಾಗಿ ದುರ್ಬಲ ವರ್ಗಗಳ ಜನರಿಗೆ ಶೈಕ್ಷಣಿಕ ಸಂಸ್ಥೆಗಳ ಪ್ರವೇಶಾತಿಯಲ್ಲಿ ವಿಶೇಷ ಸವಲತ್ತು ಕಲ್ಪಿಸಬಹುದು ಎಂದು 15 (2ಬಿ, 3, 4, 5, 6)ನೇ ಉಪವಿಧಿಗಳಲ್ಲಿ ವಿವರಿಸಲಾಗಿದೆ.
ಸರ್ಕಾರಿ ನೇಮಕಾತಿಯಲ್ಲಿ ಸಮಾನ ಅವಕಾಶ: ಸರ್ಕಾರದ ಯಾವುದೇ ನೇಮಕಾತಿಯಲ್ಲಿ ದೇಶದ ಎಲ್ಲ ನಾಗರಿಕರಿಗೂ ಸಮಾನ ಅವಕಾಶ ಇರಬೇಕು. ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗ ಗಳು, ಆರ್ಥಿಕವಾಗಿ ದುರ್ಬಲ ವರ್ಗಗಳ ಜನರಿಗೆ, ಸರ್ಕಾರಿ ನೇಮಕಾತಿಯಲ್ಲಿ ವಿಶೇಷ ಸವಲತ್ತು ಕಲ್ಪಿಸಲು 16ನೇ ವಿಧಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಅಸ್ಪೃಶ್ಯತೆಯ ನಿರ್ಮೂಲನೆಯನ್ನು 18ನೇ ವಿಧಿ ಯಲ್ಲಿ ವಿವರಿಸಲಾಗಿದೆ. ಯಾವುದೇ ರೂಪದ ಅಸ್ಪೃಶ್ಯತೆ ಆಚರಣೆಯನ್ನು ಈ ವಿಧಿಯು ನಿಷೇಧಿಸುತ್ತದೆ. ಜತೆಗೆ ಅಸ್ಪೃಶ್ಯತೆಯ ಆಚರಣೆಯು ದಂಡನೀಯ ಅಪರಾಧ ಎಂಬುದನ್ನೂ ಈ ವಿಧಿ ವಿವರಿಸುತ್ತದೆ.
ಸ್ವಾತಂತ್ರ್ಯದ ಹಕ್ಕು: ಸಂವಿಧಾನ 19ನೇ ವಿಧಿಯಲ್ಲಿ ಸ್ವಾತಂತ್ರ್ಯದ ಹಕ್ಕುಗಳನ್ನು ವಿವರಿಸಲಾಗಿದೆ. ಯಾವುದೇ ವ್ಯಕ್ತಿಯು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ, ಶಾಂತಿಯುತವಾಗಿ, ನಿರಾಯುಧರಾಗಿ ಸಭೆ ಸೇರುವ, ಸಂಘ–ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ಅವುಗಳ ಮೂಲಕ ಕಾರ್ಯನಿರ್ವಹಿಸುವ ಸ್ವಾತಂತ್ರ್ಯ, ದೇಶದ ಯಾವುದೇ ಭಾಗದಲ್ಲಿ ತನ್ನ ಇಚ್ಛೆಯ ಕುಲಕಸುಬು/ಕಸುಬು/ಉದ್ಯೋಗ/ವ್ಯವಹಾರ/ ವ್ಯಾಪಾರ ನಡೆಸುವ ಸ್ವಾತಂತ್ರ್ಯವನ್ನು ಈ ಹಕ್ಕು ನೀಡುತ್ತದೆ.
lಜೀವಿಸುವ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು 21ನೇ ವಿಧಿಯು ನೀಡುತ್ತದೆ. ಈ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೂ ಜೀವಿಸುವ ಹಕ್ಕಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಸರ್ಕಾರವು ದೇಶದ ನಾಗರಿಕರ ಜೀವಿಸುವ ಹಕ್ಕಿಗೆ ಧಕ್ಕೆ ತರುವಂತಿಲ್ಲ.
lಉಚಿತ ಮತ್ತು ಕಡ್ಡಾಯ ಶಿಕ್ಷಣ: ದೇಶದ ಪ್ರತಿಯೊಂದು ಮಗುವಿಗೂ ಅದರ 6ನೇ ವಯಸ್ಸಿನಿಂದ 14ನೇ ವಯಸ್ಸಿನವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಒದಗಿಸಬೇಕು ಎಂದು 21(ಎ) ವಿಧಿ ಹೇಳುತ್ತದೆ.
lಕಾನೂನು ಬಾಹಿರ ಬಂಧನದಿಂದ ರಕ್ಷಣೆ: ಕಾರಣವನ್ನು ತಿಳಿಸದೆ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸದೆ ಯಾವುದೇ ವ್ಯಕ್ತಿಯನ್ನು 24 ಗಂಟೆಗಳಿಗಿಂತ ಹೆಚ್ಚು ಅವಧಿಗೆ ಬಂಧನದಲ್ಲಿ ಇರಿಸುವಂತಿಲ್ಲ.
4. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು
ಪ್ರತಿ ನಾಗರಿಕರು ತಮ್ಮ ಇಷ್ಟದ ಧರ್ಮವನ್ನು ಅನುಸರಿಸುವ, ಅದರ ಆಚರಣೆಗಳಲ್ಲಿ ಭಾಗಿಯಾಗುವ, ಆ ಧರ್ಮವನ್ನು ಪ್ರಚಾರ ಮಾಡುವ ಹಕ್ಕನ್ನು ಸಂವಿಧಾನದ 25ನೇ ವಿಧಿ ನೀಡುತ್ತದೆ. ವ್ಯಕ್ತಿಯು ತಾನು ಅನುಸರಿಸುತ್ತಿರುವ ಧರ್ಮಕ್ಕೆ ಸಂಬಂಧಿಸಿದ ಧರ್ಮಾರ್ಥ ಉದ್ದೇಶಗಳಿಗಾಗಿ ಸಂಸ್ಥೆಗಳನ್ನು ಸ್ಥಾಪಿ ಸುವ, ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ, ಆ ಸಂಸ್ಥೆ ಮೂಲಕ ಚರ, ಸ್ಥಿರಾಸ್ತಿ ಹೊಂದುವ, ನಿರ್ವಹಣೆ ಮಾಡುವ ಹಕ್ಕನ್ನು 26ನೇ ವಿಧಿಯು ನೀಡುತ್ತದೆ.
ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕುಗಳು
ಅಲ್ಪಸಂಖ್ಯಾತರ ಹಕ್ಕುಗಳು: ದೇಶದ ಅಲ್ಪಸಂಖ್ಯಾತ ಸಮುದಾಯದ ನಾಗರಿಕರು ತಮ್ಮದೇ ವಿಭಿನ್ನ ಭಾಷೆ, ಲಿಪಿ ಅಥವಾ ಸಂಸ್ಕೃತಿಯನ್ನು ಹೊಂದಿದ್ದರೆ, ಅದನ್ನು ಅವರು ರಕ್ಷಿಸಿಕೊಳ್ಳಬಹುದಾಗಿದೆ. ಅದು ಸರ್ಕಾರದ ಹೊಣೆಗಾರಿಕೆಯೂ ಹೌದು. ಅಲ್ಪಸಂಖ್ಯಾತ ಸಮುದಾಯವು ತನ್ನದೇ ಶೈಕ್ಷಣಿಕ ಸಂಸ್ಥೆಯನ್ನು ಸ್ಥಾಪಿಸುವ, ಅದನ್ನು ನಡೆಸುವ ಹಕ್ಕನ್ನು 30ನೇ ವಿಧಿಯು ನೀಡುತ್ತದೆ.
ಸಾಂವಿಧಾನಿಕ ಪರಿಹಾರದ ಹಕ್ಕು: ದೇಶದ ಯಾವುದೇ ನಾಗರಿಕರೂ ಯಾವುದೇ ವಿಚಾರದಲ್ಲಿ ಸಂವಿಧಾನಬದ್ಧ ಪರಿಹಾರ ಕೋರಿ ಅಧೀನ ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಮೊರೆ ಹೋಗುವ ಹಕ್ಕನ್ನು 32ನೇ ವಿಧಿಯು ನೀಡುತ್ತದೆ.
ಕರ್ತವ್ಯಗಳು
ದೇಶದ ಪ್ರತಿಯೊಬ್ಬ ನಾಗರಿಕರೂ ನಿರ್ವಹಿಸಲೇಬೇಕಾದ ಮೂಲಭೂತ ಕರ್ತವ್ಯಗಳನ್ನು ಸಂವಿಧಾನವು ವಿವರಿಸಿದೆ. ಇವುಗಳನ್ನು ನಿರ್ವಹಿಸದೇ ಇರುವುದು ಶಿಕ್ಷಾರ್ಹ ಅಪರಾಧವಾಗುತ್ತದೆ.
ಸಂವಿಧಾನಕ್ಕೆ ಬದ್ಧವಾಗಿರಬೇಕು. ಅದರ ಆದರ್ಶ ಮತ್ತು ಸಂಸ್ಥೆಗಳನ್ನು ಗೌರವಿಸುವುದು
ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸಬೇಕು
ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯಬೇಕು ಹಾಗೂ ಸಂರಕ್ಷಿಸಬೇಕು
ದೇಶವನ್ನು ರಕ್ಷಿಸುವುದು ಮತ್ತು ಕರೆಬಂದಾಗ ದೇಶದ ಸೇವೆಗೆ ಧಾವಿಸಬೇಕು
ಧರ್ಮ, ಭಾಷೆ, ಪ್ರದೇಶ, ಜಾತಿ-ಪಂಗಡಗಳ ಭೇದಭಾವಗಳನ್ನು ಬಿಟ್ಟು, ದೇಶದ ಎಲ್ಲ ನಾಗರಿಕರಲ್ಲೂ ಸಾಮರಸ್ಯ ಮತ್ತು ಭ್ರಾತೃತ್ವ ಭಾವನೆಯನ್ನು ಬೆಳೆಸುವುದು. ಮಹಿಳೆಯರ ಗೌರವಕ್ಕೆ ಧಕ್ಕೆತರುವಂತಹ ಆಚರಣೆಗಳನ್ನು ಬಿಟ್ಟುಬಿಡಬೇಕು
ನಮ್ಮ ಸಮ್ಮಿಶ್ರ ಮತ್ತು ವೈವಿಧ್ಯ ಸಂಸ್ಕೃತಿಯ ಭವ್ಯ ಪರಂಪರೆಯನ್ನು ಗೌರವಿಸಬೇಕು ಹಾಗೂ ಕಾಪಾಡಬೇಕು
ದೇಶದ ನೈಸರ್ಗಿಕ ಸಂಪತ್ತಿನ ರಕ್ಷಣೆ ಮತ್ತು ಅಭಿವೃದ್ಧಿ. ವನ್ಯಜೀವಿಗಳಿಗೆ ಅನುಕಂಪ ತೋರಬೇಕು
ವೈಜ್ಞಾನಿಕ, ಮಾನವೀಯತೆ, ಪ್ರಶ್ನಿಸುವ ಮತ್ತು ಸುಧಾರಣೆಯ ಮನೋಭಾವನೆಗಳನ್ನು ಬೆಳೆಸಿಕೊಳ್ಳಬೇಕು
ಹಿಂಸೆಯನ್ನು ತ್ಯಜಿಸಬೇಕು ಮತ್ತು ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸಬೇಕು
ದೇಶವು ನಿರಂತರ ಸಾಧನೆಯ ಹಾದಿಯಲ್ಲಿರಲು ಮತ್ತು ಉನ್ನತ ಸಾಧನೆಗಳನ್ನು ಸಿದ್ಧಿಸಲು ವೈಯಕ್ತಿಕ ಹಾಗೂ ಸಾಮೂಹಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು
ಪ್ರಧಾನಿ ನರೇಂದ್ರ ಮೋದಿ ಸಮ್ಮುಖ ದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಕಾರ್ಯಕ್ರಮ ದಲ್ಲಿ ಭಾಗಿಯಾಗಲಿದ್ದಾರೆ.
‘ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ’ ಎಂಬುದು ಈ ಮುಕ್ತ ವ್ಯಾಪಾರ ಒಪ್ಪಂದದ ಅಧಿಕೃತ ಹೆಸರು. ಇದಕ್ಕೆ ಸಂಬಂಧಿಸಿದ ಮಾತುಕತೆಗಳು 2023ರ ನವೆಂಬರ್‌ನಲ್ಲಿ ಶುರುವಾದವು. ಈ ವರ್ಷ ದಲ್ಲಿ ಮಾತುಕತೆ ಪೂರ್ಣಗೊಂಡಿತು.
ಗಲ್ಫ್ ಸಹಕಾರ ಮಂಡಳಿಯ ಸದಸ್ಯ ರಾಷ್ಟ್ರಗಳ ಪೈಕಿ ಭಾರತದ ಸರಕುಗಳನ್ನು ಅತಿಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುವ ದೇಶಗಳ ಸಾಲಿನಲ್ಲಿ ಒಮಾನ್ ಮೂರನೆಯ ಸ್ಥಾನದಲ್ಲಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಹಣಕಾಸು ನಿಧಿ ಭಾರತದ ಜಿಡಿಪಿ ಬೆಳವಣಿಗೆಯು ಶೇ 6.4ರಷ್ಟು ಆಗಲಿದೆ ಎಂದು ಈ ಮೊದಲು ಅಂದಾಜಿಸಿತ್ತು. ಅಕ್ಟೋಬರ್‌ನಲ್ಲಿ ಈ ದರವನ್ನು ಪರಿಷ್ಕರಿಸಿ ಶೇ 6.6ಕ್ಕೆ ಹೆಚ್ಚಿಸಿದೆ’ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಮುಂದಿನ ಆರ್ಥಿಕ ವರ್ಷದಿಂದ ವಿತ್ತೀಯ ಕೊರತೆ ಸೇರಿದಂತೆ ಸಾಲದ ಮಟ್ಟವನ್ನು ಕಡಿಮೆ ಮಾಡುವುದರತ್ತ ಹೆಚ್ಚಿನ ಗಮನ ನೀಡಲಾಗುತ್ತದೆ. 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯನ್ನು ಸಾಧಿಸಲು ರಾಜ್ಯಗಳು ತಮ್ಮ ಸಾಲದ ಮಟ್ಟವನ್ನು ಕಡಿಮೆ ಮಾಡಬೇಕು’ ಎಂದು ರಾಜ್ಯಗಳಿಗೆ ಹೇಳಿದ್ದಾರೆ.
ಕೇಂದ್ರ ಸರ್ಕಾರವು ಬಜೆಟ್ ರೂಪಿಸುವಿಕೆಯಲ್ಲಿ ಪಾರದರ್ಶಕತೆಗಾಗಿ ಸ್ಪಷ್ಟವಾದ ಗುರಿಗಳನ್ನು ನಿಗದಿಪಡಿಸಿದೆ. ಕೋವಿಡ್ ನಂತರದ ಅವಧಿಯಲ್ಲಿ ಸಾಲ–ಜಿಡಿಪಿ ಅನುಪಾತ ಶೇ 60ರಷ್ಟಿತ್ತು. ಇದು ಈಗ ಇಳಿಕೆಯ ಹಾದಿ ಹಿಡಿದಿದೆ ಎಂದಿದ್ದಾರೆ.
ಕೋವಿಡ್ ನಂತರದ ಅವಧಿಯಲ್ಲಿ ದೇಶದ ಸಾಲ–ಜಿಡಿಪಿಯು ಶೇ 61.4ರಷ್ಟಿತ್ತು. ಆದರೆ, ಕೇಂದ್ರ ಸರ್ಕಾರ ಅಳವಡಿಸಿಕೊಂಡ ನಿಯಮಗಳಿಂದಾಗಿ 2023–24ರಲ್ಲಿ ಈ ಪ್ರಮಾಣ ಶೇ 57.1ಕ್ಕೆ ಇಳಿಯಿತು. ಪ್ರಸಕ್ತ ವರ್ಷದಲ್ಲಿ ಇದು ಶೇ 56.1ಕ್ಕೆ ಬರುವ ನಿರೀಕ್ಷೆ ಇದೆ.
ಪ್ರತಿ ವರ್ಷ ಸಾಲದ ಮಟ್ಟವನ್ನು ಕಡಿಮೆ ಮಾಡುತ್ತಿರುವ ಕೇಂದ್ರ ಸರ್ಕಾರದಂತೆ, ರಾಜ್ಯಗಳು ಹಣಕಾಸು ನಿರ್ವಹಣೆಯಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಆದ್ಯತೆಯಾಗಿ ತೆಗೆದುಕೊಳ್ಳಬೇಕೆಂದು ಸಚಿವರು ಕರೆ ನೀಡಿದ್ದಾರೆ.
ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.
ಕೂಲಂಕಷ ಪರಾಮರ್ಶೆಗಾಗಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಒಪ್ಪಿಸಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಲಿಲ್ಲ. ನಂತರ, ವಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.
ಇದರ ನಡುವೆಯೇ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆ’ಯನ್ನು ಧ್ವನಿಮತ ಮೂಲಕ ಸದನ ಅಂಗೀಕರಿಸಿತು.
ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ‘2047ರ ವೇಳೆಗೆ 100 ಗಿಗಾವಾಟ್ ಅಣು ವಿದ್ಯುತ್ ಉತ್ಪಾದನೆ ಗುರಿ ಸಾಧಿಸಲು ಈ ಮಸೂದೆ ನೆರವಾಗಲಿದೆ’ ಎಂದು ಹೇಳಿದರು.
ಪರ–ವಿರೋಧ ಮಾತು: ಇದಕ್ಕೂ ಮುನ್ನ ನಡೆದ ಚರ್ಚೆ ವೇಳೆ, ಆಡಳಿತಾ ರೂಢ ಎನ್‌ಡಿಎ ಮೈತ್ರಿಕೂಟದ ಸಂಸದರು ಈ ಮಸೂದೆಯನ್ನು ಬೆಂಬಲಿಸಿದರೆ, ವ್ಯಾಪಕ ಸಮಾಲೋಚನೆಗಳಿಗಾಗಿ ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ(ಜೆಪಿಸಿ) ಒಪ್ಪಿಸಬೇಕು ಎಂದು ವಿರೋಧ ಪಕ್ಷಗಳ ಸಂಸದರು ಪಟ್ಟು ಹಿಡಿದರು.
ವಿದ್ಯುತ್ ಉತ್ಪಾದನೆಯಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ಈ ಮಸೂದೆ ನೆರವಾಗಲಿದೆ ಎಂಬುದು ಎನ್‌ಡಿಎ ಪಾಳಯದ ಸಂಸದರ ಪ್ರತಿಪಾದನೆಯಾದರೆ, ಈ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸುವುದು ಅಪಾಯಕಾರಿ ಎಂದು ಹೇಳುವ ಮೂಲಕ ವಿಪಕ್ಷಗಳ ಸಂಸದರು ಮಸೂದೆಗೆ ಬಲವಾದ ಪ್ರತಿರೋಧ ವ್ಯಕ್ತಪಡಿಸಿದರು.
ಬಿಜೆಪಿಯ ಶಶಾಂಕ ಮಣಿ ಮಾತನಾಡಿ, ‘ನಾಗರಿಕ ಅಣು ವಿದ್ಯುತ್ ಕ್ಷೇತ್ರ ಪ್ರವೇಶಿಸುವುದಕ್ಕೆ ಖಾಸಗಿ ಯವರಿಗೂ ಅವಕಾಶ ಕಲ್ಪಿಸುವುದರಿಂದ ಪ್ರತಿಯೊಬ್ಬ ಭಾರತೀಯನಿಗೂ ಪ್ರಯೋಜನವಾಗಲಿದೆ’ ಎಂದು ಹೇಳಿದರು. ಅಣು ಶಕ್ತಿ ಕಾಯ್ದೆ–1962 ಹಾಗೂ ನಾಗರಿಕ ಹೊಣೆಗಾರಿಕೆ (ಪರಮಾಣು ಹಾನಿ) ಕಾಯ್ದೆ–2010ರಲ್ಲಿದ್ದ ಅಂಶಗಳನ್ನು ನೂತನ ಮಸೂದೆಯಲ್ಲಿ ತೆಗೆದು ಹಾಕಿರುವುದಕ್ಕೂ ತಿವಾರಿ ವಿರೋಧ ವ್ಯಕ್ತಪಡಿಸಿದರು.
‘ಈ ಮಸೂದೆ ಕುರಿತು ಕೂಲಂಕಷ ಪರಿಶೀಲನೆ ಅಗತ್ಯ ಇದೆ. ಹೀಗಾಗಿ ಇದನ್ನು ಜಂಟಿ ಸದನ ಸಮಿತಿಗೆ ಒಪ್ಪಿಸಬೇಕು’ ಎಂದು ತಿವಾರಿ ಆಗ್ರಹಿಸಿದರು.
ಈ ವಿಷಯವಾಗಿ ಮಾತನಾಡಿದ ಡಿಎಂಕೆಯ ಅರುಣ್ ನೆಹರು, ಟಿಎಂಸಿಯ ಸೌಗತ ರಾಯ್, ಶಿವಸೇನಾದ(ಯುಬಿಟಿ) ಅರವಿಂದ ಸಾವಂತ್ ಕೂಡ, ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಯೋಜನೆ ಮತ್ತು ತಂತ್ರಜ್ಞಾನದ ಅನುಷ್ಠಾನದ ನಂತರ ಟೋಲ್ ಪ್ಲಾಜಾಗಳಲ್ಲಿ ಪ್ರಯಾಣಿಕರು ಕಾಯುವುದು ತಪ್ಪಲಿದೆ ಎಂದು ರಾಜ್ಯಸಭೆಯಲ್ಲಿ ತಿಳಿಸಿದರು.
ಪ್ರಶ್ನೋತ್ತರ ಅವಧಿ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ನೂತನ ತಂತ್ರಜ್ಞಾನವು ಕೃತಕ ಬುದ್ಧಿಮತ್ತೆ ಆಧಾರಿತವಾಗಿರಲಿದೆ. ಇದರಿಂದ ಪ್ರಯಾಣಿಕರ ಸಮಯ ಮತ್ತು ₹1,500 ಕೋಟಿ ಮೌಲ್ಯದ ಇಂಧನವು ಉಳಿತಾಯವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ₹6,000 ಕೋಟಿ ಹೆಚ್ಚುವರಿ ವರಮಾನ ಬರಲಿದೆ’ ಎಂದು ತಿಳಿಸಿದರು.
2026ರ ಅಂತ್ಯದೊಳಗೆ ಈ ಯೋಜನೆಯನ್ನು ಅನುಷ್ಠಾನಕ್ಕೆ ತರುವುದು ನಿಶ್ಚಿತ. ಆ ಬಳಿಕ ಪ್ರಯಾಣಿಕರು ಟೋಲ್ ಪ್ಲಾಜಾಗಳಲ್ಲಿ ಕಾದು ನಿಲ್ಲಬೇಕಾದ ಅಗತ್ಯವೇ ಇರುವುದಿಲ್ಲ ಎಂದರು.
ಮಂಗನಕಾಯಿಲೆಮಲೆನಾಡಿನಲ್ಲಿಆತಂಕದಛಾಯೆ
ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಎಫ್‌ಡಿಕೆಎಫ್‌ಡಿ ನಿಯಂತ್ರಣಕ್ಕೆ ಮಲೆನಾಡಿನಲ್ಲಿ ಅಕ್ಟೋಬರ್ ತಿಂಗಳಿಂದಲೇ ಜಾಗೃತಿ ಕಾರ್ಯಕ್ರಮ ನಡೆಸಿದ್ದೇವೆ. ಮನೆ ಮನೆಗೆ ತೆರಳಿ ಕಾಯಿಲೆ ಬಗ್ಗೆ ತಿಳಿವಳಿಕೆ ನೀಡುತ್ತಿದ್ದೇವೆ. ಪ್ರತಿ ಮನೆಗೆ ಎರಡು ಬಾಟಲಿ ಡೆಪಾ ಎಣ್ಣೆ ವಿತರಣೆ ಮಾಡಲಾಗುತ್ತಿದೆಡಾ.ಎಲ್.ನಾಗರಾಜ ನಾಯ್ಕ, ಸರ್ವೇಕ್ಷಣಾ ಅಧಿಕಾರಿ,ಆರೋಗ್ಯ ಇಲಾಖೆ, ಶಿವಮೊಗ್ಗ
ಮಲೆನಾಡಿನಲ್ಲಿ ಈ ಬಾರಿ ಬೇಸಿಗೆ ಆರಂಭವಾಗುವ ಮುನ್ನವೇ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಮಂಗನ ಕಾಯಿಲೆ) ಕಾಣಿಸಿಕೊಂಡಿದೆ. ಡಿ.1ರಿಂದ 17ರವರೆಗೆ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ 10 ಮಂದಿಗೆ ಕೆಎಫ್‌ಡಿ ಬಾಧಿಸಿದೆ. 36 ಮಂಗಗಳು ಸತ್ತಿವೆ. ಚಳಿ ಕರಗಿ ಬಿಸಿಲು ಹೆಚ್ಚುತ್ತಿದ್ದಂತೆಯೇ ಕಾಯಿಲೆ ವ್ಯಾಪಕಗೊಳ್ಳುತ್ತದೆ. ಹೀಗಾಗಿ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅರಣ್ಯದಂಚಿನ ಗ್ರಾಮಗಳಲ್ಲಿ ಆತಂಕದ ಛಾಯೆ ಆವರಿಸಿದೆ.
ಆರೋಗ್ಯ ಇಲಾಖೆಯೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಜನಜಾಗೃತಿ ಆರಂಭಿಸಿದ್ದು, ಡೆಪಾ (DEPA) ತೈಲ ವಿತರಣೆ ಮಾಡುತ್ತಿದೆ. ರೋಗ ಬಾಧಿತರಿಗೆ ವೈದ್ಯಕೀಯ ನೆರವಿಗೆ ಸಿದ್ಧತೆ ಆರಂಭಿಸಿದೆ.
ಏನಿದು ಕೆಎಫ್‌ಡಿ?: ಕೆಎಫ್‌ಡಿ ಮೊದಲ ಬಾರಿಗೆ 1957ರಲ್ಲಿ ಸೊರಬ ತಾಲ್ಲೂಕಿನ ಕ್ಯಾಸನೂರಿನಲ್ಲಿ ಪತ್ತೆಯಾಗಿತ್ತು. ಹೀಗಾಗಿ ವೈದ್ಯಕೀಯ ಪರಿಭಾಷೆಯಲ್ಲಿ ಇದು ಕ್ಯಾಸನೂರು ಕಾಡಿನ ಕಾಯಿಲೆ. ಆದರೆ ಆಡುಭಾಷೆಯಲ್ಲಿ ಇದು ಮಂಗನ ಕಾಯಿಲೆ. ‘ರಷ್ಯನ್ ಎನ್‌ಸಫಲೈಟಿಸ್’ ಹೆಸರಿನ ವೈರಸ್‌ನಿಂದ ಈ ಕಾಯಿಲೆ ಬರುತ್ತದೆ. ಮಲೆನಾಡಿನ ಕಾಡಿಗೆ ಸೈಬೀರಿಯಾ ಭಾಗದಿಂದ ಬಂದ ಯಾವುದೋ ವಲಸೆ ಹಕ್ಕಿಯ ಮೈಯಲ್ಲಿ ಈ ವೈರಸ್ ಹೊತ್ತ ಉಣ್ಣಿ (ಉಣುಗು) ಮಲೆನಾಡಿಗೆ ಬಂದಿರಬಹುದು ಎಂಬುದು ವಿಜ್ಞಾನಿಗಳ ಊಹೆ.
ರೋಗದ ಲಕ್ಷಣಗಳೇನು?: ಮೊದಲ ಹಂತದಲ್ಲಿ ಮೂರರಿಂದ ಎಂಟು ದಿನ ಜ್ವರ, ಕತ್ತಿನ ಹಿಂಭಾಗ, ಸ್ನಾಯುಗಳಲ್ಲಿ ನೋವು ಜೊತೆಗೆ ತಲೆನೋವು ಕಾಣಿಸಿಕೊಳ್ಳುತ್ತದೆ. ರೋಗಲಕ್ಷಣ ಆಧರಿಸಿ ವೈದ್ಯರು ಔಷಧಿ ಕೊಟ್ಟು ರೋಗಿ ಗುಣಮುಖರಾದರೂ ವಾರದ ಅಂತರದಲ್ಲಿಯೇ ಎರಡನೇ ಹಂತದ ಲಕ್ಷಣಗಳು ಬಾಧಿಸುತ್ತವೆ. ಎರಡನೇ ಹಂತದಲ್ಲಿ ವಿಪರೀತ ಜ್ವರ, ತಲೆನೋವು, ಕಣ್ಣು ಕೆಂಪಾಗುವುದು, ನಿಶ್ಶಕ್ತಿ, ಕ್ಷೋಭೆ, ರಕ್ತಸ್ರಾವ, ಪ್ರಜ್ಞಾಹೀನತೆ ಉಂಟಾಗುತ್ತದೆ. ಈ ಹಂತದಲ್ಲಿ ಸೂಕ್ತ ಚಿಕಿತ್ಸೆ ದೊರೆಯದಿದ್ದಲ್ಲಿ ಸಾವು ಬರಬಹುದು.
ಕೆಎಫ್‌ಡಿಗೆ ಕಾಡಂಚಿನ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರೇ ಶೇ 50ರಿಂದ 60ರಷ್ಟು ತುತ್ತಾಗುತ್ತಿದ್ದಾರೆ. ಇವರಲ್ಲಿ ಅತಿಯಾಗಿ ಮದ್ಯಪಾನ–ತಂಬಾಕು ಸೇವನೆ ಚಟ, ಪೌಷ್ಟಿಕಾಂಶದ ಕೊರತೆ ಇದ್ದವರಲ್ಲಿ ರೋಗ ನಿರೋಧಕ ಶಕ್ತಿ ಕುಂಠಿತವಾಗಿ ಸಾವಿಗೀಡಾಗುತ್ತಿದ್ದಾರೆ. ಅವರಲ್ಲಿ ಮಹಿಳೆಯರ ಸಾವಿನ ಪ್ರಮಾಣ ಹೆಚ್ಚಿದೆ. ಮುಟ್ಟಿನ ದಿನಗಳಲ್ಲಿ ಕಾಯಿಲೆ ಬಾಧಿಸಿದರೆ ಅತಿಹೆಚ್ಚು ರಕ್ತಸ್ರಾವ ಆಗುತ್ತದೆ. ಋತುಚಕ್ರದ ಸ್ರಾವ ನಿಲ್ಲಿಸುವುದು ಕಷ್ಟ. ಕೊನೆಗೆ ರಕ್ತಹೀನತೆಯಿಂದ ಸಾವಿಗೀಡಾಗುತ್ತಾರೆ.
ಮಂಗನಿಂದ ಬರುವ ಕಾಯಿಲೆ ಅಲ್ಲ : ಮಂಗನಿಗೂ ಕೆಎಫ್‌ಡಿಗೂ ಸಂಬಂಧವಿಲ್ಲ. ಆದರೆ ಜನರ ಬಾಯಲ್ಲಿ ಮಂಗನ ಕಾಯಿಲೆ ಆಗಿದೆ. ವಾಸ್ತವವಾಗಿ ಮಂಗ ಕೂಡ ಮನುಷ್ಯನಿಗಿಂತ ಹೆಚ್ಚು ಸಂತ್ರಸ್ತ. ಉಣುಗು ಕಡಿತದಿಂದ ರಷ್ಯನ್ ಎನ್‌ಸಫಲೈಟಿಸ್ ವೈರಸ್ ಮನುಷ್ಯನ ರೀತಿಯಲ್ಲೇ ಮಂಗನ ದೇಹಕ್ಕೂ ಸೇರುತ್ತದೆ. ಕೆಎಫ್‌ಡಿ ಬಾಧಿತರು ಬಹುತೇಕ ಸಂದರ್ಭಗಳಲ್ಲಿ ಚಿಕಿತ್ಸೆ ಪಡೆದು ಬದುಕುತ್ತಾರೆ. ಆದರೆ ಸೋಂಕು ಬಾಧಿತ ಮಂಗಗಳು ಸಾಯುತ್ತವೆ.
ಕಾಡಿನಲ್ಲಿ ಮಂಗಗಳ ಕಳೇಬರ ದೊರೆತರೆ ಅಲ್ಲಿ ವೈರಸ್‌ನ ಸುಳಿವು ಇರುತ್ತದೆ. ಮಂಗನ ಹೆಸರಲ್ಲಿ ಕಾಯಿಲೆಯ ಗುರುತಿಸುವುದರಿಂದ ಬಾಧಿತರಲ್ಲಿ ಒಂದು ಬಗೆಯ ಸಾಮಾಜಿಕ ಕಳಂಕದ ಭಾವನೆ ಮೂಡುತ್ತಿದ್ದು, ಅವರು ತಕ್ಷಣ ವೈದ್ಯರ ಬಳಿಗೆ ತೆರಳದೇ ಮನೆ ಮದ್ದಿಗೆ ಸೀಮಿತರಾಗುತ್ತಾರೆ. ರೋಗ ಉಲ್ಬಣಿಸಿದಾಗ ವೈದ್ಯರ ಬಳಿ ತೆರಳುತ್ತಿದ್ದು, ಇದು ಜೀವ ಹಾನಿಗೂ ಕಾರಣವಾಗುತ್ತಿದೆ.
ಲಸಿಕೆ ಅಭಿವೃದ್ಧಿ ಟ್ರಯಲ್ಸ್ ಹಂತದಲ್ಲಿ: ಕೆಎಫ್‌ಡಿಗೆ ಈಗ ನಿರ್ದಿಷ್ಟ ಔಷಧಿ ಇಲ್ಲ. ಆರೋಗ್ಯ ಇಲಾಖೆ ಸದ್ಯ ರೋಗದ ಲಕ್ಷಣ ಆಧರಿಸಿ ಚಿಕಿತ್ಸೆ ನೀಡುತ್ತಿದೆ. 1992ರಲ್ಲಿ ಮಹಾರಾಷ್ಟ್ರದ ವಿಜ್ಞಾನಿ ಡಾ.ದಂಡಾವತೆ ಅಭಿವೃದ್ಧಿಪಡಿಸಿದ್ದ ಲಸಿಕೆ ಇಲ್ಲಿಯವರೆಗೂ ಬಳಕೆಯಲ್ಲಿತ್ತು. ಆದರೆ ಅದು ವೈರಸ್‌ನ ರೂಪಾಂತರದಿಂದ (ಮ್ಯುಟೇಶನ್) ತನ್ನ ಪರಿಣಾಮ ಕಳೆದುಕೊಂಡಿದೆ. ಹೀಗಾಗಿ ಆ ಲಸಿಕೆ ಬಳಕೆಯನ್ನು ಆರೋಗ್ಯ ಇಲಾಖೆ ಮೂರು ವರ್ಷಗಳಿಂದ ನಿಲ್ಲಿಸಿದೆ.
‘ಹೊಸದಾಗಿ ಲಸಿಕೆ ಅಭಿವೃದ್ಧಿಗೆ ಈಗಾಗಲೇ ಪ್ರಕ್ರಿಯೆ ಆರಂಭವಾಗಿದ್ದು, ಈಗ
ಅದು ಕ್ಲಿನಿಕಲ್ ಟ್ರಯಲ್ಸ್ ಹಂತದಲ್ಲಿದೆ. ಮುಂದಿನ ವರ್ಷದ ವೇಳೆಗೆ ಲಸಿಕೆ ಸಿದ್ಧವಾಗಬಹುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಇಲಾಖೆ ಶಿವಮೊಗ್ಗ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಲ್.ನಾಗರಾಜ ನಾಯ್ಕ ಹೇಳುತ್ತಾರೆ.
ಲಸಿಕೆ ಅಭಿವೃದ್ಧಿ ಟ್ರಯಲ್ಸ್ ಹಂತದಲ್ಲಿ
ಕೆಎಫ್‌ಡಿಗೆ ಈಗ ನಿರ್ದಿಷ್ಟ ಔಷಧಿ ಇಲ್ಲ. ಆರೋಗ್ಯ ಇಲಾಖೆ ಸದ್ಯ ರೋಗದ ಲಕ್ಷಣಗಳ ಆಧರಿಸಿ ಚಿಕಿತ್ಸೆ ನೀಡುತ್ತಿದೆ. 1992ರಲ್ಲಿ ಮಹಾರಾಷ್ಟ್ರದ ವಿಜ್ಞಾನಿ ಡಾ.ದಂಡಾವತೆ ಅಭಿವೃದ್ಧಿಪಡಿಸಿದ್ದ ಲಸಿಕೆ ಇಲ್ಲಿಯವರೆಗೂ ಬಳಕೆಯಲ್ಲಿತ್ತು. ಆದರೆ ಅದು ವೈರಸ್‌ನ ರೂಪಾಂತರದಿಂದ (ಮ್ಯುಟೇಶನ್) ತನ್ನ ಪರಿಣಾಮ ಕಳೆದುಕೊಂಡಿದೆ. ಹೀಗಾಗಿ ಆ ಲಸಿಕೆ ಬಳಕೆಯನ್ನು ಆರೋಗ್ಯ ಇಲಾಖೆ ಮೂರು ವರ್ಷಗಳಿಂದ ನಿಲ್ಲಿಸಿದೆ.
‘ಹೊಸದಾಗಿ ಲಸಿಕೆ ಅಭಿವೃದ್ಧಿಗೆ ಈಗಾಗಲೇ ಪ್ರಕ್ರಿಯೆ ಆರಂಭವಾಗಿದ್ದು, ಈಗ ಅದು ಕ್ಲಿನಿಕಲ್ ಟ್ರಯಲ್ಸ್ ಹಂತದಲ್ಲಿದೆ. ಮುಂದಿನ ವರ್ಷದ ವೇಳೆಗೆ ಲಸಿಕೆ ಸಿದ್ಧವಾಗಬಹುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಲ್.ನಾಗರಾಜ ನಾಯ್ಕ ಹೇಳುತ್ತಾರೆ.
‘ತಕ್ಷಣ ಪರೀಕ್ಷೆ ಮಾಡಿಸಿ’
ಕೆಎಫ್‌ಡಿ ಬಾಧಿತರಿಗೆ ಚಿಕಿತ್ಸೆ ನೀಡಲು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಮಲೆನಾಡು ಭಾಗದ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ 10 ಹಾಸಿಗೆಯ ಪ್ರತ್ಯೇಕ ವೈರಲ್ ವಾರ್ಡ್ ರೂಪಿಸಲಾಗಿದೆ. ತೀವ್ರ ರೋಗ ಬಾಧಿತರ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್, ಸುಬ್ಬಯ್ಯ ಹಾಗೂ ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಗಳನ್ನು ಗುರುತಿಸಿದ್ದು, ಅಲ್ಲಿ ಎಲ್ಲ ರೋಗಿಗಳಿಗೂ ಸಂಪೂರ್ಣ ಉಚಿತ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ.
‘ಕೆಎಫ್‌ಡಿ ಮೊದಲ ಹಂತದಲ್ಲಿಯೇ ಚಿಕಿತ್ಸೆ ಪಡೆಯುವುದು ಸೂಕ್ತ. ಮಲೆನಾಡಿನಲ್ಲಿ ಜ್ವರ ಬಾಧಿತರು ಆರ್‌ಎಂಪಿ, ನಾಟಿ ವೈದ್ಯರ ಬಳಿ ತೆರಳದೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಬೇಕು. ಅಲ್ಲಿ ರಕ್ತ ಪರೀಕ್ಷೆ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಕಾಯಿಲೆಯನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಮಾಡಬಹುದು’ ಎಂದು ಡಾ.ನಾಗರಾಜ ನಾಯ್ಕ ಮನವಿ ಮಾಡುತ್ತಾರೆ.
ಉಣುಗು ಕಡಿತದಿಂದ ರಕ್ಷಣೆಗೆ ಸಲಹೆ
ಕೆಎಫ್‌ಡಿ ಹರಡುವ ಉಣುಗುಗಳು ಕಾಡಿನಲ್ಲಿರುತ್ತವೆ. ಇವು ಜೀವಿತಾವಧಿಯಲ್ಲಿ ತಾವಾಗಿಯೇ 100 ಮೀ. ಮಾತ್ರ ಕ್ರಮಿಸಬಹುದು. ಆದರೆ ಇಲಿ, ಹೆಗ್ಗಣ, ಬೆಕ್ಕು, ನಾಯಿ, ಮಂಗ, ಕಾಡಿಗೆ ಮೇಯಲು ಹೋಗುವ ದನಗಳ ಮೂಲಕ ಮನುಷ್ಯರ ಸಂಪರ್ಕಕ್ಕೆ ಬರುತ್ತವೆ. ಕಾಡಿಗೆ ಹೋದವರಿಗೆ ಉಣುಗು ಕಚ್ಚಿದರೂ ರೋಗ ಹರಡುತ್ತದೆ. ಕಾಡಿಗೆ ಹೋಗುವಾಗ ಡೆಪಾ ಎಣ್ಣೆ ಕೈ ಕಾಲಿಗೆ ಹಚ್ಚಿಕೊಳ್ಳಬೇಕು, ಪೂರ್ಣ ತೋಳಿನ ಶರ್ಟು, ಪ್ಯಾಂಟ್, ಶೂ ಧರಿಸಬೇಕು. ವಾಪಸ್ ಮರಳಿದಾಗ ಬಿಸಿ ನೀರಿನಲ್ಲಿ ಸ್ನಾನ ಮಾಡಿ, ಬಟ್ಟೆಗಳನ್ನೂ ಬಿಸಿ ನೀರಿನಲ್ಲಿ ಒಗೆದು ಹಾಕಬೇಕು. ದನ–ಕರುಗಳ ಮೈ ತೊಳೆಯಬೇಕು ಎಂದು ಎಂಬುದು ವೈದ್ಯರ ಸಲಹೆ.
ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾ ಚರಣೆ ತರಬೇತಿ, ಇಥಿಯೋಪಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ದತ್ತಾಂಶ ಕೇಂದ್ರ ಸ್ಥಾಪನೆ ಕುರಿತ ಒಪ್ಪಂದಕ್ಕೆ ಈ ವೇಳೆ ಸಹಿ ಮಾಡಲಾಯಿತು.
ಇದಕ್ಕೂ ಮುನ್ನ ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಅವರ ಜತೆಗೆ ಮೋದಿ ಅವರು ವ್ಯಾಪಕ ಮಾತುಕತೆ ನಡೆಸಿದರು.
‘ಈ ಒಪ್ಪಂದಗಳು ಜನ ಕೇಂದ್ರಿತ ಅಭಿವೃದ್ದಿ ಮೇಲೆ ಕೇಂದ್ರೀಕರಿಸಿದ ದ್ವಿಪಕ್ಷೀಯ ಪಾಲುದಾರಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ’ ಎಂದು ನರೇಂದ್ರ ಮೋದಿ ಬಣ್ಣಿಸಿದರು.
ಉಭಯ ದೇಶಗಳ ನಡುವೆ ಕಾರ್ಯ ತಂತ್ರದ ಪಾಲುದಾರಿಕೆ ನವೀಕರಣ, ಜಿ–20 ಅಡಿಯಲ್ಲಿ ಸಾಲ ಪುನರ್‌ರಚನೆ, ಶಿಕ್ಷಣ, ಆರೋಗ್ಯ, ಸಂಸ್ಕತಿ ಕ್ಷೇತ್ರಗಳಲ್ಲಿ ಸಹಕಾರ ಮತ್ತು ಸಂಬಂಧ ವೃದ್ಧಿಸಲು ಉಭಯ ನಾಯಕರು ಸಮ್ಮತಿಸಿದರು.
‘ಎರಡೂ ದೇಶಗಳ ನಡುವೆ ದೀರ್ಘ ಕಾಲೀನ ಮತ್ತು ವಿಶ್ವಾಸಾರ್ಹ ಪಾಲುದಾರಿಕೆ ಯಲ್ಲಿ ಇವು ಪ್ರಮುಖ ನಿರ್ಧಾರಗಳಾಗಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಭಯೋತ್ಪಾದನೆ ವಿರೋಧಿ ಹೋರಾಟಕ್ಕೆ ಇಥಿಯೋಪಿಯಾ ಬಲವಾದ ಬೆಂಬಲ ವ್ಯಕ್ತಪಡಿಸಿದೆ. ಇದಕ್ಕಾಗಿ ಪ್ರಧಾನಿ ಮೋದಿ ಅವರು ಅಲ್ಲಿನ ಪ್ರಧಾನಿಗೆ ಧನ್ಯವಾದ ಅರ್ಪಿಸಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ (ಆರ್ಥಿಕ ಸಂಬಂಧ) ಸುಧಾಕರ್ ದಲೇಲಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೋದಿ ಅವರು ಇಥಿಯೋಪಿಯಾದಿಂದ ಒಮಾನ್‌ಗೆ ತೆರಳಿದರು.
‘ಜಂಟಿಅಧಿವೇಶನದಲ್ಲಿಮೋದಿಭಾಷಣ’
ಭಾರತ ಮತ್ತು ಇಥಿಯೋಪಿಯಾ ದೇಶಗಳು ಪ್ರಾದೇಶಿಕ ಶಾಂತಿ, ಭದ್ರತೆ ಕ್ಷೇತ್ರದಲ್ಲಿ ಪಾಲುದಾರರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಥಿಯೋಪಿಯಾದ ಸಂಸತ್ತಿನಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ‘ಎರಡೂ ದೇಶಗಳ ಪೂರ್ವಿಕರು ಕೇವಲ ಪದಾರ್ಥಗಳನ್ನಷ್ಟೇ ಅಲ್ಲದೆ ವಿಚಾರ ಮತ್ತು ಜೀವನ ವಿಧಾನವನ್ನು ವಿನಿಮಯ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದರು.
‘ಪ್ರಜಾಪ್ರಭುತ್ವವು ಒಂದು ಜೀವನ ವಿಧಾನ ಮತ್ತು ಪ್ರಯಾಣ ಎಂಬುದನ್ನು ಎರಡೂ ದೇಶಗಳು ಅರ್ಥಮಾಡಿ ಕೊಂಡಿವೆ’ ಎಂದು ಅವರು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದ ವಿಶ್ವದ 18ನೇ ಸಂಸತ್ತು ಇದಾಗಿದೆ.
ಪಿಎಫ್ಆರ್ಡಿಎ ನಿಗದಿಪಡಿಸಿದ ಮಿತಿಯ ಒಳಗೆ, ನಿಯಂತ್ರಣಕ್ಕೆ ಒಳಪಟ್ಟ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದು ಎಂದು ಡಿಸೆಂಬರ್ 12ರ ‘ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ನಿಯಮಗಳು – 2025’ರಲ್ಲಿ ಹೇಳಲಾಗಿದೆ.
ಸರ್ಕಾರೇತರ ಚಂದಾದಾರರು ಎನ್‌ಪಿಎಸ್ ವ್ಯವಸ್ಥೆಯಿಂದ ಹೊರನಡೆಯುವ ಸಂದರ್ಭದಲ್ಲಿ ಖಾತೆಯಲ್ಲಿನ ಶೇಕಡ 80ರವರೆಗಿನ ಮೊತ್ತವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದುವರೆಗೆ ಶೇ 60ರವರೆಗಿನ ಮೊತ್ತವನ್ನು ಮಾತ್ರ ಹಿಂಪಡೆಯಲು ಅವಕಾಶ ಇತ್ತು. ಇನ್ನುಳಿದ ಶೇ 40ರಷ್ಟು ಮೊತ್ತವನ್ನು ಆ್ಯನ್ಯುಟಿ ಯೋಜನೆ ಖರೀದಿಸಲು ಬಳಸಬೇಕಿತ್ತು.
ಹೊಸ ನಿಯಮಗಳು ಅವು ಅಧಿಸೂಚನೆ ಯಲ್ಲಿ ಪ್ರಕಟವಾದ ದಿನದಿಂದ ಜಾರಿಗೆ ಬರಲಿವೆ.
ಪಿಂಚಣಿ ನಿಧಿಯಲ್ಲಿ ಒಗ್ಗೂಡಿರುವ ಮೊತ್ತವು ₹8 ಲಕ್ಷಕ್ಕಿಂತ ಕಡಿಮೆ ಇದ್ದರೆ, ಅಷ್ಟೂ ಮೊತ್ತವನ್ನು ಒಂದೇ ಬಾರಿಗೆ ಹಿಂಪಡೆಯುವ ಅವಕಾಶ ಇರುತ್ತದೆ. ಅಥವಾ, ಆ ಮೊತ್ತವನ್ನು ಕಾಲಕಾಲಕ್ಕೆ ವ್ಯವಸ್ಥಿತ ಹಿಂತೆಗೆತದ ಮೂಲಕ ಪಡೆಯಲು ಕೂಡ ಅವಕಾಶ ಇರಲಿದೆ.
ಎನ್‌ಪಿಎಸ್ ಮೊತ್ತವನ್ನು ಇನ್ನು ಮುಂದೆ ಒಟ್ಟು ನಾಲ್ಕು ಬಾರಿ ಭಾಗಶಃ ಹಿಂಪಡೆಯಲು ಅವಕಾಶ ಇರಲಿದೆ. ಆದರೆ ಒಂದು ಬಾರಿ ಹಿಂಪಡೆದ ನಂತರ ನಾಲ್ಕು ವರ್ಷ ಮತ್ತೆ ಹಿಂಪಡೆಯಲು ಅವಕಾಶ ಸಿಗುವುದಿಲ್ಲ.
ಸರ್ಕಾರಿ ವಲಯದ ಎನ್‌ಪಿಎಸ್ ಚಂದಾದಾರರಿಗೆ 85 ವರ್ಷ ವಯಸ್ಸಾಗುವವರೆಗೂ ಎನ್‌ಪಿಎಸ್‌ನಲ್ಲಿ ಮುಂದುವರಿಯಲು ಅವಕಾಶ ನೀಡಲಾಗಿದೆ. ಈ ಮೊದಲು ಇದಕ್ಕೆ 75 ವರ್ಷ ವಯಸ್ಸಿನ ಮಿತಿ ಇತ್ತು.
ರಾಜೀನಾಮೆ, ಕೆಲಸದಿಂದ ವಜಾ ಕಾರಣದಿಂದಾಗಿ ಎನ್‌ಪಿಎಸ್‌ನಿಂದ ಹೊರನಡೆಯುವ ಸರ್ಕಾರಿ ನೌಕರರು ಎನ್‌ಪಿಎಸ್‌ನಲ್ಲಿ ಶೇ 80ರಷ್ಟು ಮೊತ್ತವನ್ನು ಆ್ಯನ್ಯುಟಿ ಖರೀದಿಗೆ ಬಳಸಬೇಕು. ಇನ್ನುಳಿದ ಮೊತ್ತವನ್ನು ಅವರು ಹಿಂಪಡೆಯಬಹುದು.
ಸರ್ಕಾರೇತರ ವಿಭಾಗ ಹಾಗೂ ಎನ್‌ಪಿಎಸ್–ಲೈಟ್ ವಿಭಾಗದವರು ಕೂಡ ತಮಗೆ 85 ವರ್ಷ ವಯಸ್ಸಾಗುವವರೆಗೂ ಹೂಡಿಕೆಯನ್ನು ಮುಂದುವರಿಸಲು ಹೊಸ ನಿಯಮಗಳಲ್ಲಿ ಅವಕಾಶ ನೀಡಲಾಗಿದೆ.
ಕರ್ನಾಟಕ ಸರ್ಕಾರವು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಸಕಾಲಕ್ಕೆ ನಡೆಸದ ಕಾರಣ ರಾಜ್ಯಕ್ಕೆ ಬರಬೇಕಿದ್ದ 15ನೇ ಹಣಕಾಸು ಆಯೋಗದ ₹1,279 ಕೋಟಿ ಅನುದಾನಕ್ಕೆ ಕತ್ತರಿ ಬಿದ್ದಿದೆ.
ಲೋಕಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಕೇಳಿರುವ ಪ್ರಶ್ನೆಗೆ ಕೇಂದ್ರ ಪಂಚಾಯತ್‌ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ.
‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ– 1993’ಕ್ಕೆ ಇತ್ತೀಚೆಗೆ ಮಾಡಿರುವ ತಿದ್ದುಪಡಿಗಳಿಂದಾಗಿ ರಾಜ್ಯ ಚುನಾವಣಾ ಆಯೋಗದ ಸಾಂವಿಧಾನಿಕ ಅಧಿಕಾರಗಳು ಮತ್ತು ಸ್ವಾಯತ್ತೆಗೆ ಧಕ್ಕೆ ಆಗಿಲ್ಲ ಎಂದು ರಾಜೀವ್ ರಂಜನ್ ಸಿಂಗ್ ತಿಳಿಸಿದ್ದಾರೆ.
ಐದುವರ್ಷಗಳಿಂದಜನಪ್ರತಿನಿಧಿಗಳಿಲ್ಲ
ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ 2016ರ ಏಪ್ರಿಲ್‌ನಲ್ಲಿ ಚುನಾವಣೆ ನಡೆದಿತ್ತು. ಚುನಾಯಿತ ಸದಸ್ಯರ ಅವಧಿ 2021ರ ಏಪ್ರಿಲ್ 27ರಂದು ಮುಕ್ತಾಯವಾಗಿತ್ತು. ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ಚುನಾವಣಾ ಆಯೋಗವು ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಹಾಗೂ ಮೀಸಲಾತಿ ಕರಡನ್ನು ಪ್ರಕಟಿಸಿತ್ತು. ಆದರೆ, ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಆಯೋಗದಿಂದ ಹಿಂಪಡೆದಿತ್ತು.
ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದು ‘ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ’ಕ್ಕೆ ಆ ಅಧಿಕಾರವನ್ನು ನೀಡಿತ್ತು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ವಿಳಂಬದ ವಿರುದ್ಧ ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್ ಮೊರೆ ಹೋಗಿತ್ತು. ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ 2023ರ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿತ್ತು.
ನಂತರ ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಲು ಸರ್ಕಾರ ರಚಿಸಿದ್ದ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಧಿಸೂಚನೆ ಹೊರಡಿಸಿತ್ತು. ಆದರೆ, ಮೀಸಲಾತಿ ನಿಗದಿ ಅಂತಿಮಗೊಳಿಸಿರಲಿಲ್ಲ.
ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಮಸೂದೆಯನ್ನು ಮಂಡಿಸಿದರು. ನರೇಗಾ ಕಾಯ್ದೆಯ ಹೆಸರನ್ನು ಬದಲಿಸಿ ‘ಪೂಜ್ಯ ಬಾಪು ಗ್ರಾಮೀಣ ರೋಜಗಾರ್ ಯೋಜನೆ’ ಎಂಬ ಹೆಸರಿಡಲು ಈ ಮೊದಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ, ಅಂತಿಮವಾಗಿ ಕೇಂದ್ರವು ನರೇಗಾ ಕಾಯ್ದೆಯನ್ನೇ ಹಿಂಪಡೆಯಲು ಹೊಸ ಮಸೂದೆ ಮಂಡಿಸಿದೆ.
ಕೇಂದ್ರ ಸರ್ಕಾರವು ನರೇಗಾ ಯೋಜನೆಯನ್ನು ದುರ್ಬಲಗೊಳಿಸಿಲ್ಲ. ಯಾಕೆಂದರೆ, 100 ಕೆಲಸದ ದಿನಗಳನ್ನು 125 ಕೆಲಸದ ದಿನಗಳಿಗೆ ಏರಿಸಿದ್ದೇವೆ’ ಎಂದು ಸಚಿವ ಚೌಹಾಣ್ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
‘ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರೇ ವಿಶ್ವವಿದ್ಯಾಲಯಗಳಿಗೆ ಕುಲಾಧಿಪತಿಯಾಗಿ ಮುಂದುವರಿಯಲಿದ್ದಾರೆ’ ಎಂದು ಪಶ್ಚಿಮ ಬಂಗಾಳ ಲೋಕ ಭವನ ತಿಳಿಸಿದೆ. ವಿಶ್ವವಿದ್ಯಾಲಯಗಳ ಆಡಳಿತದ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ಮಧ್ಯೆ ತೀವ್ರ ಜಗಳ ಉಂಟಾದ ಕಾರಣ ಈ ಮಸೂದೆಗಳನ್ನು ಮಂಡಿಸಲಾಗಿತ್ತು.
ಪಿಯುಸಿ ಮಾನದಂಡಗಳನ್ನು ಪಾಲಿಸಲು ವಾಹನ ಮಾಲೀಕರಿಗೆ ಒಂದು ದಿನದ ಕಾಲಾವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪೆಟ್ರೋಲ್ ಪಂಪ್‌ಗಳಲ್ಲಿ ಅಳವಡಿಸಲಾದ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಪಿಯುಸಿ ಪ್ರಮಾಣಪತ್ರ ಇಲ್ಲದ ವಾಹನಗಳ್ನು ಪತ್ತೆ ಹಚ್ಚಲಿವೆ. ಗುರುವಾರದಿಂದ ಅಂತಹ ವಾಹನಗಳಿಗೆ ಯಾವುದೇ ಗೊಂದಲವಿಲ್ಲದೆ ಇಂಧನ ನಿರಾಕರಿಸಲಾಗುತ್ತದೆ ಎಂದು ಸಿರ್ಸಾ ಹೇಳಿದ್ದಾರೆ.
‘ಪಿಯುಸಿ ಪ್ರಮಾಣಪತ್ರಗಳನ್ನು ಹೊಂದಿರದ 8 ಲಕ್ಷಕ್ಕೂ ಹೆಚ್ಚು ವಾಹನ ಮಾಲೀಕರಿಗೆ ಈಗಾಗಲೆ ದಂಡ ವಿಧಿಸಲಾಗಿದೆ. ಗುರುವಾರದಿಂದ ಮತ್ತು ಮುಂದಿನ ಆದೇಶದವರೆಗೆ ದೆಹಲಿಯ ಹೊರಗಿನಿಂದ ಬರುವ ಬಿಎಸ್–6 ಮಾನದಂಡಗಳಿಗೆ ಅನುಗುಣವಾಗಿ ಸಿದ್ಧಪಡಿಸಲಾದ ವಾಹನಗಳಿಗೆ ಮಾತ್ರ ನಗರವನ್ನು ಪ್ರವೇಶಿಸಲು ಅವಕಾಶ ನೀಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ಈ ಕುಸಿತಕ್ಕೆ ಪ್ರಮುಖ ಕಾರಣಗಳು ಮತ್ತು ಸರ್ಕಾರದ ವಿವರಣೆ ಇಲ್ಲಿದೆ:
ಮುಖ್ಯಅಂಶಗಳು:
ವ್ಯಾಪಾರಕೊರತೆ (Trade Deficit): ವಿದೇಶಗಳಿಂದ ನಾವು ಮಾಡುವ ಆಮದು (Imports) ಹೆಚ್ಚಾಗಿದ್ದು, ರಫ್ತು (Exports) ಕಡಿಮೆಯಾದ ಕಾರಣ ವ್ಯಾಪಾರ ಕೊರತೆ ಉಂಟಾಗಿದೆ. ಇದು ರೂಪಾಯಿ ಮೌಲ್ಯದ ಮೇಲೆ ನೇರ ಪರಿಣಾಮ ಬೀರಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ವಿದೇಶಿಬಂಡವಾಳಹಿಂತೆಗೆತ: ವಿದೇಶಿ ಹೂಡಿಕೆದಾರರು ಭಾರತೀಯ ಷೇರು ಮಾರುಕಟ್ಟೆಯಿಂದ ತಮ್ಮ ಹಣವನ್ನು ದೊಡ್ಡ ಮಟ್ಟದಲ್ಲಿ ಹಿಂತೆಗೆದುಕೊಳ್ಳುತ್ತಿರುವುದು (Outflow of funds) ರೂಪಾಯಿಯ ಕುಸಿತಕ್ಕೆ ಮತ್ತೊಂದು ಕಾರಣ.
ಡಾಲರ್ಬೇಡಿಕೆ: ಕಚ್ಚಾ ತೈಲ ಆಮದಿನ ಪಾವತಿಗಾಗಿ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್‌ಗೆ ಬೇಡಿಕೆ ಹೆಚ್ಚಾಗಿದ್ದು, ಇದು ರೂಪಾಯಿಯ ಬೆಲೆಯನ್ನು ಕೆಳಕ್ಕೆ ತಳ್ಳಿದೆ.
ಸರ್ಕಾರದಸಮರ್ಥನೆ:
ಕೇಂದ್ರ ವಾಣಿಜ್ಯ ಸಚಿವಾಲಯದ ಪ್ರಕಾರ, ಜಾಗತಿಕ ಆರ್ಥಿಕ ಬದಲಾವಣೆಗಳು ಮತ್ತು ಡಾಲರ್ ಮೌಲ್ಯದ ಬಲವರ್ಧನೆಯು ರೂಪಾಯಿ ಮೇಲೆ ಒತ್ತಡ ಹೇರುತ್ತಿದೆ. ಆದಾಗ್ಯೂ, ಭಾರತದ ವಿದೇಶಿ ವಿನಿಮಯ ಸಂಗ್ರಹವು (Foreign Exchange Reserves) ಭದ್ರವಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸರ್ಕಾರ ಭರವಸೆ ನೀಡಿದೆ.
ಪರಿಣಾಮಗಳು:
ವಿದೇಶದಿಂದ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳು, ಕಚ್ಚಾ ತೈಲ ಮತ್ತು ಯಂತ್ರೋಪಕರಣಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ವಿದೇಶಿ ಶಿಕ್ಷಣ ಮತ್ತು ಪ್ರವಾಸದ ವೆಚ್ಚಗಳು ದುಬಾರಿಯಾಗಲಿವೆ.
ಗ್ರಾಮೀಣಮತ್ತುನಗರಪ್ರದೇಶ: ನಗರ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಿವೆ. ವಿಶೇಷವಾಗಿ ಉತ್ಪಾದನಾ ವಲಯ (Manufacturing) ಮತ್ತು ಸೇವಾ ವಲಯದಲ್ಲಿ (Service Sector) ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ.
ಮಹಿಳಾಕಾರ್ಮಿಕರಭಾಗವಹಿಸುವಿಕೆ: ಈ ಬಾರಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆಯ ದರದಲ್ಲಿಯೂ ಏರಿಕೆ ಕಂಡುಬಂದಿದೆ. ಸ್ವಯಂ ಉದ್ಯೋಗ ಮತ್ತು ಸಣ್ಣ ಕೈಗಾರಿಕೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.
ಕೌಶಲಾಧಾರಿತಉದ್ಯೋಗ: ಸರ್ಕಾರದ ವಿವಿಧ ಕೌಶಲ ಅಭಿವೃದ್ಧಿ ಯೋಜನೆಗಳಿಂದಾಗಿ ಯುವಜನರಿಗೆ ತಾಂತ್ರಿಕ ಮತ್ತು ಕೌಶಲಾಧಾರಿತ ಕೆಲಸಗಳು ಸುಲಭವಾಗಿ ದೊರೆಯುತ್ತಿವೆ ಎಂದು ವರದಿ ಹೇಳಿದೆ.
ಸಾಂಪ್ರದಾಯಿಕವಲಯ: ಕೃಷಿ ಮತ್ತು ಅದಕ್ಕೆ ಸಂಬಂಧಿತ ಚಟುವಟಿಕೆಗಳಲ್ಲಿಯೂ ಉದ್ಯೋಗದ ಸ್ಥಿರತೆ ಕಂಡುಬಂದಿದೆ.
ಸರ್ಕಾರದಪ್ರತಿಕ್ರಿಯೆ: ಆರ್ಥಿಕತೆಯ ವೇಗವರ್ಧನೆ ಮತ್ತು ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು ಉದ್ಯೋಗ ಸೃಷ್ಟಿಗೆ ಪೂರಕವಾಗಿವೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ತಿಳಿಸಿದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣ ಇನ್ನೂ ತಗ್ಗುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.
ಹೊಸ ಬ್ರ್ಯಾಂಡ್‌ಗಳ ಬಿಡುಗಡೆ: ರಿಲಯನ್ಸ್ ತನ್ನದೇ ಆದ ಸ್ವಂತ ಬ್ರ್ಯಾಂಡ್ ಅಡಿಯಲ್ಲಿ ಅಕ್ಕಿ, ಬೇಳೆಕಾಳುಗಳು, ಖಾದ್ಯ ತೈಲ (Edible Oil), ಹಿಟ್ಟು ಮತ್ತು ಮಸಾಲೆ ಪದಾರ್ಥಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ.
ನೇರಖರೀದಿ: ರೈತರಿಂದ ನೇರವಾಗಿ ಉತ್ಪನ್ನಗಳನ್ನು ಖರೀದಿಸಿ, ಸಂಸ್ಕರಿಸಿ, ಪ್ಯಾಕ್ ಮಾಡಿ ಗ್ರಾಹಕರಿಗೆ ತಲುಪಿಸುವ ಬೃಹತ್ ಜಾಲವನ್ನು ಕಂಪನಿಯು ಸಿದ್ಧಪಡಿಸಿದೆ. ಇದು ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ವಸ್ತುಗಳನ್ನು ನೀಡಲು ಸಹಕಾರಿಯಾಗಲಿದೆ.
ವಿತರಣಾಜಾಲ: ರಿಲಯನ್ಸ್ ರಿಟೇಲ್ (Reliance Retail) ಮಳಿಗೆಗಳ ಮೂಲಕ ಮಾತ್ರವಲ್ಲದೆ, ದೇಶಾದ್ಯಂತ ಇರುವ ಸಣ್ಣ ಕಿರಣಿ ಅಂಗಡಿಗಳ ಮೂಲಕವೂ ತನ್ನ ಆಹಾರ ಉತ್ಪನ್ನಗಳನ್ನು ತಲುಪಿಸಲು ಕಂಪನಿ ಯೋಜಿಸಿದೆ. ಜಿಯೋ ಮಾರ್ಟ್ (JioMart) ಮೂಲಕ ಆನ್‌ಲೈನ್ ವಿತರಣೆಗೂ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಸ್ಪರ್ಧೆ: ರಿಲಯನ್ಸ್‌ನ ಈ ಪ್ರವೇಶದಿಂದಾಗಿ ಈಗಾಗಲೇ ಈ ಕ್ಷೇತ್ರದಲ್ಲಿ ಭದ್ರವಾಗಿ ನೆಲೆಯೂರಿರುವ ಟಾಟಾ ಕನ್ಸ್ಯೂಮರ್ ಪ್ರೊಡಕ್ಟ್ಸ್, ಅದಾನಿ ವಿಲ್ಮರ್ ಮತ್ತು ಐಟಿಸಿ (ITC) ಅಂತಹ ಕಂಪನಿಗಳಿಗೆ ದೊಡ್ಡ ಸ್ಪರ್ಧೆ ಎದುರಾಗುವ ನಿರೀಕ್ಷೆಯಿದೆ.
ಮುಂದಿನಗುರಿ: ದೇಶದ ಪ್ರತಿಯೊಂದು ಮನೆಯ ಅಡುಗೆ ಕೋಣೆಯನ್ನು ತಲುಪುವ ಗುರಿಯನ್ನು ಹೊಂದಿರುವ ರಿಲಯನ್ಸ್, ಈ ಮೂಲಕ ಭಾರತದ ಆಹಾರ ಮಾರುಕಟ್ಟೆಯಲ್ಲಿ ದೊಡ್ಡ ಪಾಲನ್ನು ಪಡೆಯಲು ತಂತ್ರ ರೂಪಿಸಿದೆ.
ಗೊಬ್ಬರಮತ್ತುರಾಸಾಯನಿಕಆಮದು: ಭಾರತವು ತನ್ನ ಕೃಷಿ ವಲಯಕ್ಕೆ ಅಗತ್ಯವಿರುವ ಫಾಸ್ಫೇಟ್ ಮತ್ತು ಪೊಟ್ಯಾಶ್ ಗೊಬ್ಬರಗಳಿಗಾಗಿ ಜೋರ್ಡಾನ್ ಮೇಲೆ ಹೆಚ್ಚಿನ ಅವಲಂಬನೆ ಹೊಂದಿದೆ. ಈ ಪ್ರವಾಸದ ವೇಳೆ, ದೀರ್ಘಕಾಲದವರೆಗೆ ಗೊಬ್ಬರ ಪೂರೈಕೆ ಮಾಡುವ ಕುರಿತು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ಆರ್ಥಿಕಸಹಕಾರ: ವ್ಯಾಪಾರ ಮತ್ತು ಹೂಡಿಕೆಗೆ ಸಂಬಂಧಿಸಿದಂತೆ ಹೊಸ ಮಾರ್ಗಗಳನ್ನು ಕಂಡುಕೊಳ್ಳಲು ಉಭಯ ದೇಶಗಳ ಪ್ರತಿನಿಧಿಗಳು ಸಮ್ಮತಿಸಿದ್ದಾರೆ. ವಿಶೇಷವಾಗಿ ತಂತ್ರಜ್ಞಾನ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಜಂಟಿ ಹೂಡಿಕೆಗೆ ಒತ್ತು ನೀಡಲಾಗಿದೆ.
ಸಂರಕ್ಷಣಾವಲಯ: ಭಯೋತ್ಪಾದನೆ ನಿಗ್ರಹ ಮತ್ತು ಪ್ರಾದೇಶಿಕ ಭದ್ರತೆಯ ವಿಷಯದಲ್ಲಿ ಪರಸ್ಪರ ಸಹಕರಿಸಲು ಮತ್ತು ಗುಪ್ತಚರ ಮಾಹಿತಿ ಹಂಚಿಕೊಳ್ಳಲು ಎರಡೂ ದೇಶಗಳು ನಿರ್ಧರಿಸಿವೆ.
ಸಾಂಸ್ಕೃತಿಕಮತ್ತುಪ್ರವಾಸೋದ್ಯಮ: ಭಾರತೀಯ ಪ್ರವಾಸಿಗರನ್ನು ಜೋರ್ಡಾನ್‌ಗೆ ಆಕರ್ಷಿಸಲು ಮತ್ತು ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳನ್ನು ಉತ್ತೇಜಿಸಲು ಚರ್ಚೆ ನಡೆಸಲಾಗಿದೆ. ಜೋರ್ಡಾನ್‌ನ ಐತಿಹಾಸಿಕ ತಾಣವಾದ ‘ಪೆಟ್ರಾ’ ಪ್ರವಾಸೋದ್ಯಮ ಪ್ರಚಾರದ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.
ರಾಜತಾಂತ್ರಿಕಮಹತ್ವ: ಪಶ್ಚಿಮ ಏಷ್ಯಾದಲ್ಲಿ ಜೋರ್ಡಾನ್ ಭಾರತದ ಅತ್ಯಂತ ವಿಶ್ವಾಸಾರ್ಹ ಮಿತ್ರ ರಾಷ್ಟ್ರಗಳಲ್ಲಿ ಒಂದಾಗಿದೆ. ಈ ಭೇಟಿಯು ಮುಂಬರುವ ದಿನಗಳಲ್ಲಿ ಭಾರತದ ಆಹಾರ ಭದ್ರತೆ ಮತ್ತು ಇಂಧನ ಭದ್ರತೆಗೆ ಹೆಚ್ಚಿನ ಶಕ್ತಿ ನೀಡಲಿದೆ ಎಂದು ರಾಜತಾಂತ್ರಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಮಧ್ಯಸ್ಥಿಕೆವಹಿಸಿದದೇಶಗಳು: ಹಲವಾರು ಪ್ರಮುಖ ರಾಷ್ಟ್ರಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಸತತ ಪ್ರಯತ್ನದ ಫಲವಾಗಿ, ಸಂಘರ್ಷದ ಹಾದಿ ಬಿಟ್ಟು ಸಂಧಾನದ ಹಾದಿಗೆ ಬರಲು ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ ಎಂದು ವರದಿಯಾಗಿದೆ.
ಒಪ್ಪಂದದವಿಷಯಗಳು: ಕದನ ವಿರಾಮ ಘೋಷಿಸುವುದು, ಗಡಿ ಭಾಗಗಳಲ್ಲಿ ಸೇನೆಯನ್ನು ಹಿಂಪಡೆಯುವುದು ಮತ್ತು ಆರ್ಥಿಕ ನಿರ್ಬಂಧಗಳನ್ನು ಸಡಿಲಗೊಳಿಸುವ ಕುರಿತು ಪ್ರಾಥಮಿಕ ಚರ್ಚೆಗಳು ನಡೆದಿವೆ.
ಭಾರತದಪಾತ್ರ: ಭಾರತವು ಮೊದಲಿನಿಂದಲೂ ‘ಯುದ್ಧದ ಬದಲು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ’ ಎಂಬ ನಿಲುವನ್ನು ಹೊಂದಿತ್ತು. ಈ ಶಾಂತಿ ಪ್ರಕ್ರಿಯೆಯಲ್ಲಿ ಭಾರತದ ರಾಜತಾಂತ್ರಿಕ ಪ್ರಯತ್ನಗಳೂ ಪ್ರಮುಖ ಪಾತ್ರ ವಹಿಸಿವೆ ಎಂದು ಹೇಳಲಾಗುತ್ತಿದೆ.
ಜಾಗತಿಕಮಾರುಕಟ್ಟೆಯಮೇಲೆಪರಿಣಾಮ: ಈ ಶಾಂತಿ ಒಪ್ಪಂದದ ಸುಳಿವು ಸಿಗುತ್ತಿದ್ದಂತೆಯೇ ಜಾಗತಿಕವಾಗಿ ಕಚ್ಚಾ ತೈಲದ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿದೆ ಮತ್ತು ಷೇರು ಮಾರುಕಟ್ಟೆಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿವೆ.
ನಿರೀಕ್ಷೆ: ಮುಂಬರುವ ಉನ್ನತ ಮಟ್ಟದ ಸಭೆಯಲ್ಲಿ ಅಧಿಕೃತವಾಗಿ ಈ ಒಪ್ಪಂದಕ್ಕೆ ಸಹಿ ಬೀಳುವ ಸಾಧ್ಯತೆಯಿದೆ. ಇದು ಯೂರೋಪ್ ಮತ್ತು ಏಷ್ಯಾದ ದೇಶಗಳ ನಡುವಿನ ವ್ಯಾಪಾರ ವ್ಯವಹಾರಗಳು ಪುನರಾರಂಭಗೊಳ್ಳಲು ಹಾದಿ ಮಾಡಿಕೊಡಲಿದೆ.
ಏಳು ಕಾರ್ಯಾಚರಣೆಗಳ ಪೈಕಿ ಮೊದಲನೆಯ ಉಡಾವಣೆ ಮುಂದಿನ ವಾರ ನಡೆಯುವ ನಿರೀಕ್ಷೆಯಿದೆ.
‘ಇಸ್ರೊದ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್‌ಎಸ್‌ಐಎಲ್) ಹಾಗೂ ಅಮೆರಿಕದ ಎಎಸ್‌ಟಿ ಸ್ಪೇಸ್ ಮೊಬೈಲ್ ನಡುವಿನ ವಾಣಿಜ್ಯ ಒಪ್ಪಂದ ದಂತೆ ‘ಬ್ಲೂಬರ್ಡ್–6’ ಸಂವಹನ ಉಪಗ್ರಹವನ್ನು ಭಾರತದ ‘ಬಾಹುಬಲಿ’ ರಾಕೆಟ್ ಎಲ್‌ವಿಎಂ–3 ಮೂಲಕ ಕಕ್ಷೆಗೆ ಸೇರಿಸಲಿದೆ’ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇತ್ತೀಚೆಗೆ ಸಂಸತ್‌ಗೆ ತಿಳಿಸಿದ್ದರು.
ಮಾನವಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ಮಾನವರಹಿತ ಕಾರ್ಯಾಚರಣೆಗೆ ವಿನ್ಯಾಸ ಗೊಳಿಸಲಾಗಿರುವ ‘ವ್ಯೋಮಮಿತ್ರ’ ರೋಬೊಟ್ ಅನ್ನು ಮುಂದಿನ ವರ್ಷದ ಆರಂಭದಲ್ಲಿ ಎಲ್‌ವಿಎಂ–3 ರಾಕೆಟ್ ಮೂಲಕ ಉಡ್ಡಯನ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಕಾರ್ಯಗಳು ಭರದಿಂದ ಸಾಗಿವೆ.
‘2027ರಲ್ಲಿ ಇಸ್ರೊ ಭಾರತೀಯ ಗಗನ ಯಾತ್ರಿಗಳನ್ನು ಭೂಮಿಯ ಕೆಳ ಕಕ್ಷೆಗೆ ಕಳುಹಿಸುವ ಮೊದಲು, ಮುಂದಿನ ವರ್ಷದ ಕೊನೆಯಲ್ಲಿ ಮತ್ತೊಂದು ಮಾನವರಹಿತ ಕಾರ್ಯಾಚರಣೆ ಕೈಗೊಳ್ಳಲು ಯೋಜಿಸಲಾಗಿದೆ.
ಮುಂದಿನ ವರ್ಷ ಎಚ್‌ಎಎಲ್ ಹಾಗೂ ಎಲ್ ಆ್ಯಂಡ್ ಟಿ ಕಂಪನಿಗಳು ನಿರ್ಮಿಸಿದ ಮೊದಲ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಉಡ್ಡಯನವಾಗಲಿದ್ದು, ಇದು ಓಷನ್‌ಸ್ಯಾಟ್ ಉಪಗ್ರಹವನ್ನು ಕಕ್ಷೆಗೆ ಸೇರಿಸಲಿದೆ. ಪಿಎಸ್‌ಎಲ್‌ವಿ ಇನ್ನೂ ಎರಡು ಉಪಗ್ರಹಗಳಾದ ಭಾರತ ಮತ್ತು ಮಾರಿಷಸ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದ ಉಪಗ್ರಹ ಹಾಗೂ ಭಾರತದ ಖಾಸಗಿ ಬಾಹ್ಯಾಕಾಶ ಕಂಪನಿ ‘ಧ್ರುವ ಸ್ಪೇಸ್’ನ ಎಲ್‌ಇಎಪಿ–2 ಉಪಗ್ರಹವನ್ನು ಹೊತ್ತೊಯ್ಯಲಿದೆ.
ಐದು ಪಿಎಸ್‌ಎಲ್‌ವಿ ರಾಕೆಟ್‌ಗಳನ್ನು ತಯಾರಿಸಲು ಎಚ್‌ಎಎಲ್ ಹಾಗೂ ಎಲ್ ಆ್ಯಂಡ್ ಟಿ ಒಕ್ಕೂಟದೊಂದಿಗೆ ಎನ್‌ಎಸ್‌ಐಎಲ್ ಒಪ್ಪಂದ ಮಾಡಿಕೊಂಡಿತ್ತು.
ಇಸ್ರೊ ನಿರ್ಮಿತ ಪಿಎಸ್‌ಎಲ್‌ವಿ, ಭೂ ವೀಕ್ಷಣಾ ಉಪಗ್ರಹ (ಇಒಎಸ್–ಎನ್1), ಭಾರತ ಮತ್ತು ವಿದೇಶಗಳ 18 ಸಣ್ಣ ಉಪಗ್ರಹಗಳನ್ನು ಕಕ್ಷೆಗೆ ಸೇರಿಸ ಲಾಗುತ್ತದೆ.
ಪಂಚಾಯಿತಿಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ‘ಪರೋಕ್ಷ ಆಡಳಿತ’ ಇದೆ ಎಂದು ಹರಿಯಾಣದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯ ಸುಶೀಲ್ ವರ್ಮಾ ದೂರು ನೀಡಿದ್ದರು. ಎನ್‌ಎಚ್‌ಆರ್‌ಸಿ ಸದಸ್ಯ ಪ್ರಿಯಾಂಕ್ ಕನೂಂಗೊ ನೇತೃತ್ವದ ಪೀಠವು ಈ ದೂರನ್ನು ಡಿ. 12ರಂದು ವಿಚಾರಣೆಗೆ ಕೈಗೆತ್ತಿ ಕೊಂಡು, ಈ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಚಾಯಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಮಹಿಳೆಯರ ಪರವಾಗಿ ಅವರ ಪತಿ ಅಥವಾ ಮಹಿಳೆಯ ಸಂಬಂಧಿಕ ಪುರುಷರೇ ಅಧಿಕಾರ ಚಲಾಯಿಸುತ್ತಿದ್ದಾರೆ ಎಂಬ ಆರೋಪಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಇದನ್ನು ‘ಸರಪಂಚ ಪತಿ’ ಎಂದು ಕರೆಯಲಾಗುತ್ತದೆ.
ಆಡಳಿತ ನಡೆಸುವ ಮತ್ತು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಚುನಾಯಿತ ಮಹಿಳೆಯಿಂದ ಕಸಿದುಕೊಳ್ಳಲಾಗಿದೆ. ಅವರನ್ನು ಹೆಸರಿಗೆ ಮಾತ್ರ ಪಂಚಾಯಿತಿ/ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದೂ ಆರೋಪಿಸಲಾಗಿದೆ.
ಇಂತಹ ನಡೆಗಳು ಅಸಾಂವಿಧಾನಿಕ ಹಾಗೂ ಕಾನೂನುಬಾಹಿರ ಎಂಬುದಾಗಿ ಸುಪ್ರೀಂ ಕೋರ್ಟ್ ತನ್ನ ಹಲವಾರು ತೀರ್ಪುಗಳಲ್ಲಿ ಹೇಳಿದೆ. ‘ಸರಪಂಚ ಪತಿ’ ವ್ಯವಸ್ಥೆಯು ಸಂವಿಧಾನದ 73 ಹಾಗೂ 74ನೇ ತಿದ್ದುಪಡಿಗಳ ಉಲ್ಲಂಘನೆಯೂ ಆಗಿದೆ ಎಂದು ಆಯೋಗ ತಿಳಿಸಿದೆ.
ದೇಶವು, ಎಸ್‌ಎಎಫ್ ರಫ್ತು ಕೇಂದ್ರವಾಗಿ ತನ್ನನ್ನು ತಾನು ಗುರುತಿಸಿಕೊಳ್ಳುತ್ತಿದೆ. ಬ್ರೆಜಿಲ್‌ನಂತಹ ಪ್ರತಿಸ್ಪರ್ಧಿ ದೇಶಗಳಿಗೆ ಹೋಲಿಸಿದರೆ ಭಾರತವು ಹೆಚ್ಚುವರಿ ಎಥೆನಾಲ್ ಸಾಮರ್ಥ್ಯ ಹೊಂದಿದೆ ಎಂದು ಹೇಳಿದ್ದಾರೆ.
2029ರ ವೇಳೆಗೆ ಸುಸ್ಥಿರ ವಿಮಾನ ಇಂಧನ ಘಟಕ ಕಾರ್ಯಾರಂಭ ಮಾಡಬಹುದು ಎಂದು ತಿಳಿಸಿದ್ದಾರೆ.
ಸುಸ್ಥಿರ ವಿಮಾನ ಇಂಧನದ ರಫ್ತು ಕೇಂದ್ರವಾಗಿ ಹೊರಹೊಮ್ಮಲು ಭಾರತವು ಹೆಚ್ಚಿನ ಸಾಮರ್ಥ್ಯ ಹೊಂದಿದೆ. ಭಾರತದಲ್ಲಿ ಬೆಳೆದ ಕಬ್ಬಿನಿಂದ ಪಡೆದ ಎಥೆನಾಲ್, ಬ್ರೆಜಿಲ್ ದೇಶದ ಎಥೆನಾಲ್‌ಗಿಂತ ಕಡಿಮೆ ಇಂಗಾಲದ ತೀವ್ರತೆಯನ್ನು ಹೊಂದಿದೆ. ಬ್ರೆಜಿಲ್‌ನ ಎಥೆನಾಲ್‌ಗಿಂತ ಭಾರತದ ಎಥೆನಾಲ್ ಅನ್ನು ಬಳಸಿದರೆ ವಾಯುಮಾಲಿನ್ಯ ಇಳಿಕೆಯು ಹೆಚ್ಚಿನ ಪ್ರಮಾಣದಲ್ಲಿ ರುತ್ತದೆ ಎಂದು ಹೇಳಿದ್ದಾರೆ.
ಸರ್ಕಾರಿ ಉದ್ದಿಮೆಗಳ ಸಮಿತಿಯ ವರದಿಯನ್ನು ಸಂಸತ್ತಿನಲ್ಲಿ ಕಳೆದ ವಾರ ಮಂಡಿಸಲಾಗಿದೆ. ಭಾರತವು ತನಗೆ ಅಗತ್ಯವಿರುವ ಕಚ್ಚಾ ತೈಲದಲ್ಲಿ ಶೇಕಡ 89ರಷ್ಟನ್ನು ಆಮದು ಮಾಡಿಕೊಳ್ಳುತ್ತಿದೆ. ಇದರಿಂದಾಗಿ, ಸಂಘರ್ಷ, ನಿರ್ಬಂಧ, ಕಚ್ಚಾ ತೈಲ ಉತ್ಪಾದಿಸುವ ದೇಶಗಳಲ್ಲಿ ನಾಗರಿಕ ಅಶಾಂತಿ, ಹಡಗುಗಳ ಮಾರ್ಗದಲ್ಲಿ ಸಮಸ್ಯೆ ಉಂಟಾದಲ್ಲಿ ಭಾರತವು ಕೂಡ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ವರದಿಯು ಹೇಳಿದೆ.
ರಷ್ಯಾ–ಉಕ್ರೇನ್ ಯುದ್ಧ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವು ಭಾರತ ನೆಚ್ಚಿಕೊಂಡಿರುವ ಇಂಧನ ಪೂರೈಕೆ ವ್ಯವಸ್ಥೆಯು ಎಷ್ಟು ದುರ್ಬಲವಾಗಿದೆ ಎಂಬುದನ್ನು ತೋರಿಸಿವೆ ಎಂದು ಹೇಳಿದೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹಾಗೂ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಚ್ಚಾ ತೈಲ ಆಮದು ಮೂಲಗಳನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ಚುರುಕುಗೊಳಿಸಬೇಕು. ಪರ್ಯಾಯ ಆಮದು ಮಾರ್ಗಗಳನ್ನು ರೂಪಿಸಿಕೊಳ್ಳಬೇಕು, ಪೆಟ್ರೋಲಿಯಂ ಸಂಗ್ರಹಾಗಾರಗಳ ಸಾಮರ್ಥ್ಯ ಹೆಚ್ಚು ಮಾಡಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ.
‘ಸಂಘರ್ಷಗಳು, ನಿರ್ಬಂಧಗಳು, ಅಶಾಂತಿಯ ಪರಿಣಾಮವಾಗಿ ಭಾರತವು ಕಚ್ಚಾ ತೈಲ ಪೂರೈಕೆಯಲ್ಲಿ ಅನಿಶ್ಚಿತತೆ ಎದುರಿಸಬಹುದು. ಪೂರೈಕೆಯಲ್ಲಿ ವ್ಯತ್ಯಾಸ ಆದರೆ ಬೆಲೆಯ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ’ ಎಂದು ಸಮಿತಿಯ ವರದಿ ಹೇಳಿದೆ.
ಕಚ್ಚಾ ತೈಲ ಉತ್ಪಾದನೆ ಮಾಡುವ ದೇಶಗಳ ಜೊತೆಗಿನ ರಾಜತಾಂತ್ರಿಕ ಒಡನಾಟವನ್ನು ಬಲಪಡಿಸಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ವಿದೇಶಾಂಗ ವ್ಯವ ಹಾರಗಳ ಸಚಿವಾಲಯದ ಜೊತೆಗೂಡಿ ಕೆಲಸ ಮಾಡಬೇಕು ಎಂದು ಹೇಳಿದೆ.
ಭಾರತದಮುಡಿಗೆಸ್ಕ್ವಾಷ್ ವಿಶ್ವಕಪ್
ಸಂದರ್ಭ: ಭಾರತ ಸ್ಕ್ವಾಷ್ ತಂಡವು ಇದೇ ಮೊದಲ ಬಾರಿ ವಿಶ್ವಕಪ್ ಜಯಿಸಿ ಚಾರಿತ್ರಿಕ ಸಾಧನೆ ಮಾಡಿತು.
India Wins First Squash World Cup
ಎರಡನೇ ಶ್ರೇಯಾಂಕದ ಭಾರತ ತಂಡವು, ಇಲ್ಲಿನ ಎಕ್ಸ್‌ಪ್ರೆಸ್ ಅವೆನ್ಯೂ ಮಾಲ್‌ನಲ್ಲಿ ಭಾನುವಾರ ನಡೆದ ಫೈನಲ್‌ನಲ್ಲಿ 3–0ಯಿಂದ ಹಾಂಗ್‌ಕಾಂಗ್ ತಂಡದ ವಿರುದ್ಧ ಗೆಲುವು ಸಾಧಿಸಿತು.
2023ರ ಆವೃತ್ತಿಯ ವಿಶ್ವಕಪ್ ಟೂರ್ನಿಯಲ್ಲಿ ಕಂಚಿನ ಪದಕ ಜಯಿಸಿದ್ದು ಭಾರತ ತಂಡದ ಈವರೆಗಿನ ಉತ್ತಮ ಸಾಧನೆಯಾಗಿತ್ತು.
2028ರಲ್ಲಿ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕೂಟದಲ್ಲಿ ಮೊದಲ ಬಾರಿಗೆ ಸ್ಕ್ವಾಷ್ ಕ್ರೀಡೆಯನ್ನು ಸೇರ್ಪಡೆಗೊಳಿಸಲಾಗಿದೆ.
ನರೇಗಾಸ್ವರೂಪಬದಲಿಗೆಮಸೂದೆ: ವಿಕಸಿತಭಾರತಕ್ಕೆ ‘ಜಿರಾಮ್ ಜಿಯೋಜನೆ l ರಾಜ್ಯಗಳಿಗೂಹೊರೆ
ಕೇಂದ್ರ ಸರ್ಕಾರವು ಮೊದಲೇ ನಿಗದಿಪಡಿಸಿದ ನಿಯಮಾನುಸಾರ ಗರಿಷ್ಠ ಮಿತಿಗೆ ಒಳಪಟ್ಟು ರಾಜ್ಯ ಸರ್ಕಾರಗಳಿಗೆ ಹಣ ಮಂಜೂರು ಮಾಡುತ್ತದೆ. ಹಂಚಿಕೆ ಮಾಡಿದ ಅನುದಾನಕ್ಕಿಂತ ಹೆಚ್ಚುವರಿ ಕೆಲಸ ದಿನಗಳನ್ನು ಮಾಡಿಸಿದರೆ ರಾಜ್ಯ ಸರ್ಕಾರವೇ ಹೆಚ್ಚುವರಿ ಹಣವನ್ನು ಭರಿಸಬೇಕಾಗುತ್ತದೆ.
ಅನುದಾನ: ರಾಜ್ಯಗಳಿಗೆಶೇ 40ರಷ್ಟುಹೊರೆ
ನರೇಗಾ ಯೋಜನೆಗೆ ಬೇಕಾದ ಸಂಪೂರ್ಣ ಅನುದಾನವನ್ನು ಕೇಂದ್ರ ಸರ್ಕಾರವೇ ಭರಿಸುತ್ತಿತ್ತು. ಆದರೆ, ಈಗ ರಾಜ್ಯ ಸರ್ಕಾರಗಳೂ ಹಣ ಭರಿಸಬೇಕಾಗುತ್ತದೆ. ಕೇಂದ್ರ ಸರ್ಕಾರವು ಶೇ 60ರಷ್ಟು ಹಣವನ್ನು, ರಾಜ್ಯ ಸರ್ಕಾರವು ಶೇ 40ರಷ್ಟು ಹಣವನ್ನು ಭರಿಸ ಬೇಕಾಗುತ್ತದೆ (ಎಲ್ಲ ರಾಜ್ಯ ಸರ್ಕಾರಗಳು ಮತ್ತು ವಿಧಾನಸಭೆ ಇರುವ ಕೇಂದ್ರಾಡಳಿತ ಪ್ರದೇಶಗಳು).
ಈಶಾನ್ಯ ರಾಜ್ಯಗಳು, ಹಿಮಾಲಯದ ತಪ್ಪಲಿನ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ) ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನುದಾನ ಹಂಚಿಕೆ ಅನುಪಾತವು ಶೇ 90:10ರಷ್ಟಿರುತ್ತದೆ. ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶ ಗಳಲ್ಲಿ ಕೇಂದ್ರ ಸರ್ಕಾರವೇ ಪೂರ್ತಿ ಹಣ ಭರಿಸುತ್ತದೆ.
ನಿರುದ್ಯೋಗ ಭತ್ಯೆ: ಹೊಸ ಕಾಯ್ದೆಯ ಅನ್ವಯ, ಉದ್ಯೋಗ ಖಾತರಿ ಪಡೆಯದ ವ್ಯಕ್ತಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಈ ಭತ್ಯೆಯನ್ನು ರಾಜ್ಯ ಸರ್ಕಾರವೇ ನೀಡಬೇಕು ಎನ್ನುತ್ತದೆ ಮಸೂದೆ.
ಸಮಿತಿಗಳ ರಚನೆ: ರಾಜ್ಯ ಸರ್ಕಾರಗಳಿಗೆ ಹಣ ಹಂಚಿಕೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರವು ‘ರಾಷ್ಟ್ರೀಯ ಮಟ್ಟದ ಸಂಚಾಲನಾ ಸಮಿತಿ’ಯನ್ನು ರಚಿಸಬೇಕು. ಜೊತೆಗೆ, ಈ ಕಾಯ್ದೆಯ ಎಲ್ಲ ಕೆಲಸ ಕಾರ್ಯಗಳ ಮೇಲ್ವಿಚಾರಣೆಯನ್ನೂ ನೋಡಿಕೊಳ್ಳಬೇಕು. ಅಂತೆಯೇ, ಕಾಯ್ದೆಯ ಕುರಿತು ಮಾರ್ಗದರ್ಶನ ನೀಡಲು ರಾಜ್ಯ ಸರ್ಕಾರಗಳೂ ‘ರಾಜ್ಯ ಮಟ್ಟದ ಸಂಚಾಲನಾ ಸಮಿತಿ’ಯನ್ನು ರಚಿಸಿಕೊಳ್ಳಬೇಕು ಎನ್ನುತ್ತದೆ ಮಸೂದೆ.
ಕೇಂದ್ರ, ರಾಜ್ಯಗಳಲ್ಲಿಮಂಡಳಿರಚನೆ
ಕಾಯ್ದೆ ಜಾರಿ ಸಂಬಂಧ ನಿಗಾ ಇರಿಸಲು ಕೇಂದ್ರ ಮಟ್ಟದಲ್ಲಿ ‘ಕೇಂದ್ರೀಯ ಗ್ರಾಮೀಣ ಉದ್ಯೋಗ ಖಾತರಿ ಮಂಡಳಿ’ ಮತ್ತು ರಾಜ್ಯ ಮಟ್ಟದಲ್ಲಿ ‘ರಾಜ್ಯ ಗ್ರಾಮೀಣ ಉದ್ಯೋಗ ಖಾತರಿ ಮಂಡಳಿ’ಯನ್ನು ರಚಿಸಲಾಗುತ್ತದೆ.
ನಾಲ್ಕುವಿಭಾಗಗಳಲ್ಲಿಕೆಲಸ
ಉದ್ಯೋಗ ಖಾತರಿ ಮೂಲಕ ಯಾವೆಲ್ಲ ಕೆಲಸಗಳನ್ನು ಕೈಗೊಳ್ಳಬಹುದು ಎನ್ನುವ ಬಗ್ಗೆ ಮಸೂದೆಯಲ್ಲಿ ಹೇಳಲಾಗಿದೆ. ಇದನ್ನು ಒಟ್ಟು ನಾಲ್ಕು ವಿಭಾಗಗಳಲ್ಲಿ ವಿಂಗಡಿಸಲಾಗಿದೆ.
1. ಜಲ ಸಂಬಂಧಿತ ಕಾರ್ಯಗಳು
2. ಗ್ರಾಮೀಣ ಭಾಗದ ಮೂಲಸೌಕರ್ಯ ನಿರ್ಮಾಣ
3. ಜೀವನೋಪಾಯಕ್ಕೆ ಸಂಬಂಧಿತ ಮೂಲಸೌಕರ್ಯ ನಿರ್ಮಾಣ (ತರಬೇತಿ ಕೇಂದ್ರಗಳು, ಸಂತೆ ಮಾರುಕಟ್ಟೆ ನಿರ್ಮಾಣ, ಆಹಾರ ಸಂಗ್ರಹಿಸಲು ಸಲುವಾಗಿ ಕಟ್ಟಡ ನಿರ್ಮಾಣ, ಹೈನುಕಾರಿಕೆಗೆ ಸಂಬಂಧಿಸಿದ ಕಟ್ಟಡಗಳ ನಿರ್ಮಾಣ)
4. ವಿಪತ್ತು ತಡೆ ಸಂಬಂಧಿತ ನಿರ್ಮಾಣ ಕಾರ್ಯಗಳು (ನಿರಾಶ್ರಿತ ಶಿಬಿರಗಳ ನಿರ್ಮಾಣ, ಕೆರೆ–ಕಟ್ಟೆಗಳು ಉಕ್ಕಿ ಹರಿಯದಂಥ ನಿರ್ಮಾಣ ಕಾರ್ಯ, ನೈಸರ್ಗಿಕ ವಿಪತ್ತಿನಿಂದ ಹಾಳಾದ ರಸ್ತೆಗಳ ದುರಸ್ತಿ, ಬಿರುಗಾಳಿಯಿಂದ ನಾಶವಾದ ತೋಟ ಮತ್ತು ಮನೆ ಮರು ನಿರ್ಮಾಣ, ಕಾಳ್ಗಿಚ್ಚು ನಿಯಂತ್ರಣ ಕಾರ್ಯಗಳು)
125 ಕೆಲಸದ ದಿನಗಳು ಎನ್ನುವುದು ತಲೆಬರಹ ಮಾತ್ರ. 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಲಾಗುತ್ತದೆ ಎನ್ನುವುದನ್ನು ಸಣ್ಣದಾಗಿ ಒಳಗೆ ಸೇರಿಸಲಾಗಿದೆ: ನರೇಗಾಕ್ಕೆ ಕೇಂದ್ರ ಸರ್ಕಾರವೇ ಪೂರ್ಣ ಪ್ರಮಾಣದಲ್ಲಿ ಅನುದಾನ ನೀಡುತ್ತದೆ. ಆದರೆ, ಹೊಸ ಮಸೂದೆಯ ಪ್ರಕಾರ, ರಾಜ್ಯ ಸರ್ಕಾರವು ಶೇ 40ರಷ್ಟು ಅನುದಾನ ನೀಡಬೇಕು. ಅಂದರೆ, ರಾಜ್ಯ ಸರ್ಕಾರಗಳು ₹50 ಸಾವಿರ ಕೋಟಿಯನ್ನು ಹೆಚ್ಚುವರಿಯಾಗಿ ಖರ್ಚು ಮಾಡಬೇಕಾಗುತ್ತದೆ. ಅನುದಾನ ನೀಡುವ ಜವಾಬ್ದಾರಿಯನ್ನು ರಹಸ್ಯ ವಿಧಾನದಲ್ಲಿ ರಾಜ್ಯ ಸರ್ಕಾರಗಳ ತಲೆಮೇಲೆ ಹಾಕುವುದನ್ನು ಸುಧಾರಣೆ ಎನ್ನುವುದಿಲ್ಲ
ನರೇಗಾವು ಬೇಡಿಕೆ ಕೇಂದ್ರಿತವಾಗಿತ್ತು: ಒಂದು ವೇಳೆ ಕಾರ್ಮಿಕನು ಕೆಲಸ ಬೇಕು ಎಂದು ಕೇಳಿದರೆ, ಕೇಂದ್ರ ಸರ್ಕಾರವು ಅದಕ್ಕೆ ಹಣ ನೀಡಬೇಕಿತ್ತು. ಆದರೆ, ಹೊಸ ಮಸೂದೆಯಲ್ಲಿ ಈ ಅವಕಾಶವನ್ನು ಕಿತ್ತುಕೊಂಡು, ಪೂರ್ವ ನಿಗದಿತ ನಿಯಮಾನುಸಾರ ಹಂಚಿಕೆ ಮತ್ತು ಗರಿಷ್ಠ ಮಿತಿಯನ್ನು ಹೇರಲಾಗಿದೆ. ಒಮ್ಮೆ ಕೇಂದ್ರ ಸರ್ಕಾರ ನೀಡಿದ ಅನುದಾನ ಮುಗಿದರೆ, ಜನರ ಹಕ್ಕು ಮೊಟಕುಗೊಳ್ಳುತ್ತದೆ
ಪಂಚಾಯಿತಿಗಳನ್ನು ಬದಿಗೊತ್ತಿ, ಡ್ಯಾಶ್‌ಬೋರ್ಡ್‌ಗಳಿಗೆ ಅಧಿಕಾರ ನೀಡಿಕೆ: ಸ್ಥಳೀಯವಾದ ಅಗತ್ಯಕ್ಕೆ ತಕ್ಕಂತೆ ಗ್ರಾಮ ಸಭೆ ಮತ್ತು ಪಂಚಾಯಿತಿಗಳು ಕೆಲಸದ ಯೋಜನೆ ರೂಪಿಸುತ್ತಿದ್ದವು. ಆದರೆ, ಈಗ ಜಿಐಎಸ್ ತಂತ್ರಾಂಶ, ಪಿಎಂ ಗತಿ ಶಕ್ತಿ ದತ್ತಾಂಶಗಳ ಮೇಲೆ ಯೋಜನೆಗಳು ರೂಪುಗೊಳ್ಳುತ್ತವೆ. ಬಯೊಮೆಟ್ರಿಕ್, ಜಿಯೊ ಟ್ಯಾಗಿಂಗ್, ಡ್ಯಾಶ್‌ಬೋರ್ಡ್, ಕೃತಕ ಬುದ್ಧಿಮತ್ತೆ ಸಹಾಯದಿಂದ ಮಾಡುವ ಲೆಕ್ಕಪರಿಶೋಧನೆಯನ್ನು ಕಡ್ಡಾಯ ಮಾಡಲಾಗಿದೆ. ತಂತ್ರಜ್ಞಾನ ಕೈಕೊಟ್ಟರೆ ಗ್ರಾಮೀಣ ಭಾಗದ ಕೋಟಿಗಟ್ಟಲೆ ಜನರು ಕೆಲಸದಿಂದ ವಂಚಿತರಾಗುತ್ತಾರೆ
ಇನ್ನೂ ಕೆಟ್ಟ ಅಂಶವೇನೆಂದರೆ, ನೆಟ್ಟಿ–ಕಟಾವು ಎಂಬ ಕೃಷಿ ಋತುವಿನ ಹೆಸರಿನಲ್ಲಿ 60 ಕೆಲಸ ದಿನಗಳನ್ನು ಕಡಿತ ಮಾಡಲಾಗಿದೆ. ಇದು ಕಾರ್ಮಿಕ ಗ್ಯಾರಂಟಿಯೊ ಕಾರ್ಮಿಕ ನಿಯಂತ್ರಣವೊ? ನೀವು ಕೆಲಸ ಮಾಡಬೇಡಿ, ಹಣ ಗಳಿಸಬೇಡಿ ಎಂದು ಕಾನೂನುಬದ್ಧವಾಗಿ ಕೇಂದ್ರ ಸರ್ಕಾರ ಹೇಳಿದಂತಾಗಿದೆ
ಕೇಂದ್ರಹೇಳುವುದೇನು?
ಕೌಶಲರಹಿತ ಕೂಲಿ ಕೆಲಸ ಮಾಡಲು ಸ್ವಯಂಪ್ರೇರಿತರಾಗಿ ಬರುವ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬದ ಪ್ರತಿ ವಯಸ್ಕ ವ್ಯಕ್ತಿಗೆ ಪ್ರತಿ ಹಣಕಾಸು ವರ್ಷದಲ್ಲಿ 125 ದಿನಗಳ ಕೆಲಸಕ್ಕೆ ಶಾಸನಬದ್ಧ ಖಾತರಿ ನೀಡುವುದು ಈ ಕಾಯ್ದೆಯ ಉದ್ದೇಶ.
2047ರ ಹೊತ್ತಿಗೆ ವಿಕಸಿತ ಭಾರತದ ಮುನ್ನೋಟಕ್ಕೆ ಅನುಗುಣವಾಗಿ ಗ್ರಾಮೀಣ ಚೌಕಟ್ಟನ್ನು ರೂಪಿಸಲು ಈ ಕಾಯ್ದೆ ಸಿದ್ಧಪಡಿಸಲಾಗಿದೆ. ಸಮೃದ್ಧ ಮತ್ತು ಚೈತನ್ಯಯುತ ಗ್ರಾಮೀಣ ಭಾರತಕ್ಕಾಗಿ ಸಶಕ್ತೀಕರಣ, ಪ್ರಗತಿ, ಸಮನ್ವಯ ಮತ್ತು ಪರಿಪೂರ್ಣತೆಯನ್ನು ಸಾಧಿಸುವ ಉದ್ದೇಶವನ್ನೂ ಇದು ಹೊಂದಿದೆ.
ಅಪಘಾತತಡೆಗೆಮಾರ್ಗಸೂಚಿರೂಪಿಸಲು ‘ಸುಪ್ರೀಂ’ ಚಿಂತನೆ
ಸಂದರ್ಭ: ಎಕ್ಸ್‌ಪ್ರೆಸ್ ವೇಗಳುಮತ್ತುರಾಷ್ಟ್ರೀಯಹೆದ್ದಾರಿಗಳಲ್ಲಿಅಪಘಾತಗಳನ್ನುತಡೆಗಟ್ಟಲಿಕ್ಕಾಗಿದೇಶದಾದ್ಯಂತಅನ್ವಯವಾಗುವಮಾರ್ಗಸೂಚಿಗಳನ್ನುರೂಪಿಸುವಬಗ್ಗೆಸುಪ್ರೀಂಕೋರ್ಟ್ಚಿಂತನೆನಡೆಸಿದೆ.
ರಾಜಸ್ಥಾನದ ಫಲೋದಿಯಲ್ಲಿ ನ. 2ರಂದು ನಡೆದಿದ್ದ ಅಪಘಾತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕೊಂಡು ವಿಚಾರಣೆ ನಡೆಸುತ್ತಿದೆ.
ನ್ಯಾಯಮೂರ್ತಿಗಳಾದ ಜೆ.ಕೆ.ಮಾಹೇಶ್ವರಿ ಮತ್ತು ವಿಜಯ್ ಬಿಷ್ಣೋಯಿ ಅವರ ಪೀಠವು, ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಎಕ್ಸ್‌ಪ್ರೆಸ್ ವೇಗಳ ಎರಡೂ ಬದಿಗಳಲ್ಲಿ ಅಕ್ರಮವಾಗಿ ತಲೆಎತ್ತಿರುವ ಢಾಬಾಗಳು ಅಪಘಾತಗಳಿಗೆ ಕಾರಣ ಆಗಿರಲೂಬಹುದು ಎಂದು ಸೋಮವಾರ ಹೇಳಿತು.
ಇಂತಹ ಢಾಬಾಗಳ ವಿರುದ್ಧ ಕ್ರಮಕೈಗೊಳ್ಳಲು ಲಭ್ಯವಿರುವ ನಿಯಮಗಳ ವಿವರ ಸಲ್ಲಿಸುವಂತೆ ಪೀಠವು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿತು.
ಅಕ್ರಮ ಢಾಬಾಗಳ ವಿರುದ್ಧ ಇಲ್ಲಿಯ ವರೆಗೆ ತೆಗೆದುಕೊಂಡಿರುವ ಕ್ರಮ ಗಳು, ಇಂತಹ ಕ್ರಮ ತೆಗೆದುಕೊಳ್ಳುವ ಅಧಿಕಾರವು ಯಾವ ಪ್ರಾಧಿಕಾರದ್ದು ಮತ್ತು ಯಾವೆಲ್ಲಾ ಸಂಸ್ಥೆಗಳು ನಿಬಂಧನೆ ಗಳನ್ನು ಪಾಲಿಸುತ್ತಿಲ್ಲ ಎಂಬ ಬಗ್ಗೆ ಮಾಹಿತಿ ಒದಗಿಸುವಂತೆಯೂ ತಿಳಿಸಿದೆ.
‘ಹೆದ್ದಾರಿ ಬದಿಗಳಲ್ಲಿರುವ ಅನಧಿಕೃತ ಢಾಬಾಗಳು ಮತ್ತು ಸಣ್ಣ ಹೋಟೆಲ್‌ಗಳನ್ನು ತೆರವುಗೊಳಿಸುವ ಅಧಿಕಾರ ನಮಗೆ ಇದೆ. ಆದರೆ ಜಿಲ್ಲಾಡಳಿತದ ಕೈಕೆಳಗಿರುವ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸರಿಗೆ ಆ ವಿಷಯದಲ್ಲಿ ನಮಗಿಂತಲೂ ಹೆಚ್ಚಿನ ಅಧಿಕಾರ ಇದೆ. ಆದ್ದರಿಂದ, ಈ ವಿಚಾರದಲ್ಲಿ ನಾವು ಪರಿಹಾರವೊಂದನ್ನು ಕಂಡುಕೊಳ್ಳಬೇಕಿದೆ’ ಎಂದು ಮೆಹ್ತಾ ಪೀಠಕ್ಕೆ ತಿಳಿಸಿದರು.
ಭಾರತ್‌ಮಾಲಾ ಹೆದ್ದಾರಿಯಲ್ಲಿ ರಾಜಸ್ಥಾನದ ಫಲೋದಿ ಎಂಬಲ್ಲಿ ನಿಂತಿದ್ದ ಟ್ರಕ್‌ವೊಂದಕ್ಕೆ ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದು 10 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 15 ಮಂದಿ ಮೃತಪಟ್ಟಿದ್ದರು.
ಈ ಅಪಘಾತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ.10ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿ ಸಿತ್ತು. ಫಲೋದಿ ಮೂಲಕ ಹಾದು ಹೋಗುವ ಹೆದ್ದಾರಿ ಬದಿಯಲ್ಲಿರುವ ಢಾಬಾಗಳ ಸಂಖ್ಯೆಯ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸಚಿವಾಲಯವನ್ನು ಕೇಳಿತ್ತು.
‘ಒಂದುರಾಜ್ಯಕ್ಕೆಸೀಮಿತವಾಗಿಲ್ಲ’
‘ಈ ವಿಷಯವು ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗಿಲ್ಲ. ಇಡೀ ದೇಶಕ್ಕೆ ಸಂಬಂಧಿಸಿದ್ದಾಗಿದೆ. ಆದ್ದರಿಂದ ಇಡೀ ದೇಶಕ್ಕೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸಲು ನ್ಯಾಯಾಲಯ ಚಿಂತಿಸುತ್ತಿದೆ’ ಎಂದು ನ್ಯಾಯಮೂರ್ತಿ ಜೆ.ಕೆ.ಮಾಹೇಶ್ವರಿ ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿಕಸ್ ಕ್ಯೂರಿ ಆಗಿ ನೇಮಕಗೊಂಡಿರುವ ಹಿರಿಯ ವಕೀಲ ಎ.ಎನ್.ಎಸ್.ನಾಡಕರ್ಣಿ, ‘ಹೆದ್ದಾರಿಗಳ ಬದಿಗಳಲ್ಲಿ ವ್ಯಾಪಕವಾಗಿ ಒತ್ತುವರಿ ನಡೆದಿರುವುದನ್ನು ತೋರಿಸಲು ಗೂಗಲ್ ಚಿತ್ರಗಳನ್ನು ಸಲ್ಲಿಸಿದ್ದೇನೆ’ ಎಂದು ಹೇಳಿದರು.
ಚಿನ್ನದ ಪದಕ ಪುರಸ್ಕೃತರಿಗೆ ನೀಡುತ್ತಿದ್ದ ₹5,000 ನಗದನ್ನು ₹10 ಸಾವಿರಕ್ಕೆ ಏರಿಸಲಾಗಿದೆ. ತಿಂಗಳ ಭತ್ಯೆ ₹ 500 ಅನ್ನು ₹1000ಕ್ಕೆ ಏರಿಸ ಲಾಗಿದೆ. ಬೆಳ್ಳಿ ಪದಕ ಪುರಸ್ಕೃತರಿಗೆ ನಗದು ಬಹುಮಾನವನ್ನು ₹ 2,500ರಿಂದ ₹ 5,000ಕ್ಕೆ, ತಿಂಗಳ ಭತ್ಯೆ ₹250 ಅನ್ನು ₹ 500ಕ್ಕೆ ಏರಿಸಲಾಗಿದೆ.
ಪರಿಷ್ಕೃತ ನಗದು ಪುರಸ್ಕಾರವು 2026ರ ಜನವರಿ 1ರಿಂದ ಜಾರಿಗೆ ಬರಲಿದೆ. ಈ ಹಿಂದೆ ಪುರಸ್ಕಾರ ಪಡೆದವರಿಗೂ 2026ರಿಂದ ಪರಿಷ್ಕೃತ ಭತ್ಯೆ ಸಿಗಲಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ತಿಳಿಸಿದ್ದಾರೆ.
ಸಂದರ್ಭ: ಭಾರತದಮೂವರುಶಿಕ್ಷಣತಜ್ಞರುಒಂದುಮಿಲಿಯನ್ ಡಾಲರ್ (ಸುಮಾರು ₹9.07 ಕೋಟಿ) ಮೊತ್ತದ ‘ಗ್ಲೋಬಲ್ ಟೀಚರ್ ಪ್ರಶಸ್ತಿ– 2026’ರಟಾಪ್ 50ರಶಾರ್ಟ್ಲಿಸ್ಟ್ನಲ್ಲಿಸ್ಥಾನಪಡೆದಿದ್ದಾರೆ.
ಮೀರಠ್‌ನ ಶಾಲಾ ಶಿಕ್ಷಕ ಸುಧಾಂಶು ಶೇಖರ್ ಪಾಂಡಾ, ಜಮ್ಮು ಮತ್ತು ಕಾಶ್ಮೀರದ ಶಿಕ್ಷಕ ಮೆಹ್ರಾಜ್ ಖುರ್ಷಿದ್ ಮಲಿಕ್ ಮತ್ತು ಗ್ರಾಮೀಣ ಜನರಿಗೆ ಶಿಕ್ಷಣ ದೊರೆಯಲು ಶ್ರಮಿಸುತ್ತಿರುವ ರೂಬಲ್ ನಾಗಿ ಸ್ಪರ್ಧೆಯಲ್ಲಿದ್ದಾರೆ.
ವಿಧಾನಸಭೆಯಲ್ಲಿ ಜೆಡಿಎಸ್‌ನ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಈ ಮಾಹಿತಿ ನೀಡಿದ್ದಾರೆ.
ಈಗಾಗಲೇ ಮೀಸಲಿರಿಸಿರುವ ಅನುದಾನದಲ್ಲಿ ಯೋಜನೆ ಪೂರ್ಣಗೊ ಳಿಸಲು ತೀರ್ಮಾನಿಸಲಾಗಿದೆ. ಬಯಲು ಸೀಮೆ ಪ್ರದೇಶಗಳಾದ ಕೋಲಾರ,ಚಿಕ್ಕ ಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲಾಗುವುದು. ಈ ಯೋಜನೆ ಯಡಿ ಕೋಲಾರ ಗುರುತ್ವ ಪೈಪ್‌ಲೈನ್ ಪ್ಯಾಕೇಜ್ 3 ಮತ್ತು 4, ಕೋಲಾರ ಫೀಡರ್ ಪೈಪ್‌ಲೈನ್ ಪ್ಯಾಕೇಜ್ 5 ಮತ್ತು 6 ಹಾಗೂ ಶ್ರೀನಿವಾಸಪುರ ಫೀಡರ್ ಪೈಪ್‌ಲೈನ್ ಪ್ಯಾಕೇಜ್ 1 ರಿಂದ 3ರ ಕಾಮ ಗಾರಿಗಳನ್ನು ಆರಂಭಿಸಲು ಕಳೆದ ಮೇ 16ರಂದೇ ಅನುಮೋದನೆ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಪ್ರಸ್ತುತ ಕಾಮಗಾರಿಗಳ ಪೈಪ್‌ಲೈನ್ ಅಲೈನ್‌ಮೆಂಟ್, ವಿನ್ಯಾಸ, ನಕ್ಷೆಗಳ ತಯಾರಿಕೆ ಕಾರ್ಯ ಪೂರ್ಣಗೊಂಡಿದೆ. ಗುಣಮಟ್ಟ ಖಾತರಿ ಯೋಜನೆ ಕೂಡ ಅನುಮೋದನೆ ಹಂತದಲ್ಲಿದೆ. ಭೂಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಗುತ್ತಿಗೆ ಕರಾರಿನ ಅನ್ವಯ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ.
ರೈತರೊಂದಿಗೆ ತ್ರಿಪಕ್ಷೀಯ ಒಪ್ಪಂದ ಮಾಡಿಕೊಂಡಿದ್ದು, ಈ ಎಲ್ಲ ಪ್ರಕ್ರಿಯೆ ಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗು ವುದು ಎಂದು ಭರವಸೆ ನೀಡಿದ್ದಾರೆ.
‘ಬಾಂಗ್ಲಾದೊಂದಿಗಿನಸಂಬಂಧಶಾಶ್ವತ’
ಸಂದರ್ಭ: ಪ್ರಸ್ತುತಭಾರತದಲ್ಲಿರುವಪದಚ್ಯುತಪ್ರಧಾನಿಶೇಖ್ಹಸೀನಾಅವರುನೀಡಿದ ‘ಪ್ರಚೋದನಕಾರಿಹೇಳಿಕೆ’ಗಳಬಗ್ಗೆಬಾಂಗ್ಲಾದೇಶದವಿದೇಶಾಂಗಕಚೇರಿಯುಗಂಭೀರಕಳವಳವ್ಯಕ್ತಪಡಿಸಿ, ಭಾರತೀಯಹೈಕಮಿಷನರ್ ಪ್ರಣಯ್ವರ್ಮಾಅವರಿಗೆಸಮನ್ಸ್ ನೀಡಿದೆ.
ಇದಾಗಿ ಗಂಟೆಗಳ ನಂತರ ಹೇಳಿಕೆ ನೀಡಿರುವ ಪ್ರಣಯ್ ಅವರು, ‘ಬಾಂಗ್ಲಾದೊಂದಿಗಿನ ಭಾರತದ ಸಂಬಂಧಗಳು ಅಲ್ಪಕಾಲಿಕವಲ್ಲ, ಬದಲಾಗಿ ಶಾಶ್ವತ’ ಎಂದು ಭಾನುವಾರ ಹೇಳಿದ್ದಾರೆ.
ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘಟನೆಯಾದ ‘ಇತಿಹಾಸ್ ಒ ಒಯಿಟ್ಟಿಜ್ಜೋ ಪರಿಷತ್’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ ನಾಡಿದ ಪ್ರಣಯ್ ಅವರು, ‘ಭಾರತ–ಬಾಂಗ್ಲಾ ಸಂಬಂಧ ಶಾಶ್ವತವಾಗಿದ್ದು, ಅದು ರಕ್ತ ಮತ್ತು ತ್ಯಾಗದಲ್ಲಿ ಬೆಸೆದು ಕೊಂಡಿದೆ. ಅದನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
ಆಂಧ್ರಪ್ರದೇಶವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತಿಹೆಚ್ಚು ಪ್ರಮಾಣದಲ್ಲಿ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ವಿಧಿಸುತ್ತದೆ. ಇದು ಅಲ್ಲಿನ ದುಬಾರಿ ಬೆಲೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.
ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ ₹109.74, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಅದು ₹82.46 ಎಂದು ತಿಳಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್‌ನ ಅಂತಿಮ ಮಾರಾಟ ಬೆಲೆಯು ಕೇಂದ್ರ ಸರ್ಕಾರ ನಿಗದಿಪಡಿಸಿದ ಎಕ್ಸೈಸ್ ಸುಂಕ ಹಾಗೂ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದ ಸರ್ಕಾರ ನಿಗದಿಮಾಡಿದ ವ್ಯಾಟ್ ಪ್ರಮಾಣವನ್ನು ಒಳಗೊಂಡಿ ರುತ್ತದೆ. ಹೀಗಾಗಿ, ಸರಕು ಸಾಗಣೆ ಮತ್ತು ಸ್ಥಳೀಯ ತೆರಿಗೆಯಿಂದಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ವ್ಯತ್ಯಾಸವಿರುತ್ತದೆ ಎಂದು ಹೇಳಿದ್ದಾರೆ.
ಆಂಧ್ರಪ್ರದೇಶದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ₹29.06 ವ್ಯಾಟ್ ವಿಧಿಸಲಾಗುತ್ತದೆ. ಇದು ದೇಶದಲ್ಲಿ ಅತ್ಯಧಿಕ. ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಪೆಟ್ರೋಲ್ ಮೇಲಿನ ವ್ಯಾಟ್ ಕೇವಲ ₹0.82 ಮಾತ್ರ ಇದೆ. ಪ್ರತಿ ಲೀಟರ್ ಡೀಸೆಲ್ ಬೆಲೆಯು ಆಂಧ್ರಪ್ರದೇಶದಲ್ಲಿ ₹97.57, ವ್ಯಾಟ್ ₹21.56 ಇದೆ. ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಡೀಸೆಲ್ ಬೆಲೆ ₹78.05, ವ್ಯಾಟ್ ₹0.77ರಷ್ಟು ಇದೆ.
ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಕೆ.ಜಿ.ಗೆ ₹41ಕ್ಕೆ ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಬೇಕು. ಹೆಚ್ಚುವರಿಯಾಗಿ 5 ಲಕ್ಷ ಟನ್‌ಗಳಷ್ಟು ಸಕ್ಕರೆಯನ್ನು ಎಥೆನಾಲ್ ಉತ್ಪಾದನೆಗೆ ಬಳಸಲು ಅವಕಾಶ ನೀಡಬೇಕು ಎಂದು ಅವು ಕೋರಿವೆ.
ಮಾರುಕಟ್ಟೆಯಲ್ಲಿ ಸಕ್ಕರೆ ದರ ಇಳಿಕೆ ಹಾಗೂ ವೆಚ್ಚಗಳ ಹೆಚ್ಚಳವು ರೈತರಿಗೆ ನೀಡಬೇಕಿರುವ ಮೊತ್ತದ ಮೇಲೆ ಪರಿಣಾಮ ಉಂಟುಮಾಡುತ್ತಿವೆ ಎಂದು ಅವು ಎಚ್ಚರಿಸಿವೆ.
ಪ್ರಸಕ್ತ ಹಂಗಾಮು ಆರಂಭವಾದ ನಂತರದಲ್ಲಿ ಸಕ್ಕರೆ ಕಾರ್ಖಾನೆಗಳು ಸಗಟು ವಹಿವಾಟುದಾರರಿಗೆ ಮಾರಾಟ ಮಾಡುವ ಸಕ್ಕರೆಯ ಬೆಲೆಯು ಪ್ರತಿ ಟನ್‌ಗೆ ₹2,300ರಷ್ಟು ಕುಸಿದಿದೆ. ಈಗ ಅದು ಟನ್‌ಗೆ ₹37,700ರಷ್ಟು ಇದೆ ಎಂದು ಸಹಕಾರಿ ಸಕ್ಕರೆ ಕಾರ್ಖಾನೆಗಳ ರಾಷ್ಟ್ರೀಯ ಒಕ್ಕೂಟವು (ಎನ್‌ಎಫ್‌ಸಿಎಸ್‌ಎಫ್) ಹೇಳಿದೆ.
ಡಿಸೆಂಬರ್ 15ರವರೆಗಿನ ದತ್ತಾಂಶದ ಪ್ರಕಾರ ದೇಶದ ಒಟ್ಟು 479 ಸಕ್ಕರೆ ಕಾರ್ಖಾನೆಗಳು ಒಟ್ಟು 77.90 ಲಕ್ಷ ಟನ್ ಸಕ್ಕರೆ ಉತ್ಪಾದಿಸಿವೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ಆಗಿದ್ದ 60.70 ಲಕ್ಷ ಟನ್ ಸಕ್ಕರೆ ಉತ್ಪಾದನೆಗಿಂತ ಹೆಚ್ಚು ಎಂದು ಎನ್‌ಎಫ್‌ಸಿಎಸ್‌ಎಫ್ ನೀಡಿರುವ ದತ್ತಾಂಶಗಳು ಹೇಳುತ್ತಿವೆ.
ಕಬ್ಬು ಅರೆಯುವಿಕೆಯು ಈ ಹಂಗಾಮಿನಲ್ಲಿ ಶೇ 25.6ರಷ್ಟು ಹೆಚ್ಚಾಗಿ 900.75 ಲಕ್ಷ ಟನ್‌ಗೆ ಹೆಚ್ಚಾಗಿದೆ ಎಂದು ಒಕ್ಕೂಟವು ಹೇಳಿಕೆಯಲ್ಲಿ ತಿಳಿಸಿದೆ.
ದೇಶದಲ್ಲಿ ಅತಿಹೆಚ್ಚು ಸಕ್ಕರೆ ಉತ್ಪಾದಿಸುವ ರಾಜ್ಯವಾದ ಮಹಾರಾಷ್ಟ್ರ ದಲ್ಲಿ ಉತ್ಪಾದನೆಯು ದುಪ್ಪಟ್ಟಾಗಿದೆ. ಕರ್ನಾಟಕದಲ್ಲಿ ಹಿಂದಿನ ವರ್ಷದ ಇದೇ ಅವಧಿಯಲ್ಲಿ ಉತ್ಪಾದನೆಯು 13.50 ಲಕ್ಷ ಟನ್ ಇದ್ದಿದ್ದು ಈ ಬಾರಿ 15.50 ಲಕ್ಷ ಟನ್ ಆಗಿದೆ.
ಪ್ರಸಕ್ತ ಹಂಗಾಮಿನಲ್ಲಿ ಒಟ್ಟು 15 ಲಕ್ಷ ಟನ್ ಸಕ್ಕರೆ ರಫ್ತಿಗೆ ಕೇಂದ್ರವು ಅನುಮತಿ ನೀಡಿದೆ. ಆದರೆ ಈ ಕ್ರಮವೊಂದೇ ಸಕ್ಕರೆ ಕಾರ್ಖಾನೆಗಳ ನಗದು ಬಿಕ್ಕಟ್ಟನ್ನು ಪರಿಹರಿಸುವುದಿಲ್ಲ ಎಂದು ಹೇಳಿದೆ.
ಪುಟಿದೆದ್ದರಫ್ತುವಹಿವಾಟು
ಸಂದರ್ಭ: ನವೆಂಬರ್ನಲ್ಲಿದೇಶದರಫ್ತುಪ್ರಮಾಣವುಪುಟಿದೆದ್ದಿದ್ದು, ಶೇಕಡ 19.37ರಷ್ಟುಏರಿಕೆಕಂಡಿದೆ. ಇದುಆರುತಿಂಗಳಗರಿಷ್ಠಮಟ್ಟ. ನವೆಂಬರ್ನಲ್ಲಿಒಟ್ಟು ₹3.45 ಲಕ್ಷಕೋಟಿಯಷ್ಟುಮೌಲ್ಯದಸರಕುಗಳನ್ನುರಫ್ತುಮಾಡಲಾಗಿದೆ.
ನವೆಂಬರ್ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಎಂಜಿನಿಯರಿಂಗ್ ಉತ್ಪನ್ನಗಳು ಹೆಚ್ಚಿನ ಪ್ರಮಾಣದಲ್ಲಿ ರಫ್ತಾಗಿವೆ.
ನವೆಂಬರ್‌ನಲ್ಲಿ ಆಮದು ಪ್ರಮಾಣವು ಶೇ 1.88ರಷ್ಟು ಕಡಿಮೆ ಆಗಿದ್ದು ₹5.68 ಲಕ್ಷ ಕೋಟಿಗೆ ತಲುಪಿದೆ. ಚಿನ್ನ, ಕಚ್ಚಾ ತೈಲ, ಕಲ್ಲಿದ್ದಲು ಮತ್ತು ಕಲ್ಲಿದ್ದಲ ಕಿಟ್ಟದ ಆಮದು ಕಡಿಮೆ ಆಗಿದ್ದುದು ಇದಕ್ಕೆ ಕಾರಣ.
ನವೆಂಬರ್‌ನಲ್ಲಿ ರಫ್ತು ಮಾಡಲಾಗಿರುವ ಸರಕುಗಳ ಒಟ್ಟು ಮೌಲ್ಯವು ಮೇ ತಿಂಗಳ ನಂತರದ ಗರಿಷ್ಠವಾಗಿದೆ. ಚಿನ್ನದ ಆಮದು ನವೆಂಬರ್‌ನಲ್ಲಿ ಶೇ 59.15ರಷ್ಟು ಕಡಿಮೆ ಆಗಿದೆ. ಕಚ್ಚಾ ತೈಲದ ಆಮದು ಶೇ 11.27ರಷ್ಟು ತಗ್ಗಿದೆ.
ಆಮದು ಕಡಿಮೆ ಆಗಿರುವ ಕಾರಣದಿಂದಾಗಿ ದೇಶದ ವ್ಯಾಪಾರ ಕೊರತೆ ಅಂತರವು ಕೂಡ ನವೆಂಬರ್‌ನಲ್ಲಿ ಕಡಿಮೆ ಆಗಿದೆ.
ಅಮೆರಿಕವು ಭಾರತದ ಸರಕುಗಳ ಮೇಲೆ ಶೇ 50ರಷ್ಟು ಸುಂಕ ವಿಧಿಸಿದ್ದರೂ ರಫ್ತು ಪ್ರಮಾಣ ಹೆಚ್ಚಾಗಿದೆ. ‘ಎಲೆಕ್ಟ್ರಾನಿಕ್ಸ್, ಎಂಜಿನಿಯರಿಂಗ್, ರಾಸಾಯನಿಕಗಳು, ಮುತ್ತು ಮತ್ತು ಆಭರಣಗಳ ರಫ್ತು ಹೆಚ್ಚಾಗಿದ್ದುದು ಒಟ್ಟು ರಫ್ತಿನ ಪ್ರಮಾಣ ಏರಿಕೆ ಕಾಣಲು ನೆರವಾಗಿದೆ’ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.
ಏಪ್ರಿಲ್‌ನಿಂದ ನವೆಂಬರ್‌ವರೆಗಿನ ಅವಧಿಯಲ್ಲಿ ಭಾರತದ ಸರಕುಗಳು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗಿರುವ ದೇಶಗಳ ಸಾಲಿನಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿ ಇದೆ ಎಂದು ಭಾರತೀಯ ರಫ್ತು ಸಂಘಟನೆಗಳ ಒಕ್ಕೂಟದ (ಎಫ್‌ಐಇಒ) ಅಧ್ಯಕ್ಷ ಎಸ್.ಸಿ. ರಲ್ಹಾನ್ ಹೇಳಿದ್ದಾರೆ.
ಸಗಟುಹಣದುಬ್ಬರಏರಿಕೆ
ಸಂದರ್ಭ: ದೇಶದಲ್ಲಿಸಗಟುಹಣದುಬ್ಬರದರವು (ಡಬ್ಲ್ಯುಪಿಐ) ನವೆಂಬರ್ ತಿಂಗಳಿನಲ್ಲಿಶೇ (–)0.32ರಷ್ಟಕ್ಕೆಏರಿಕೆಕಂಡಿದೆಎಂದುಕೇಂದ್ರಕೈಗಾರಿಕಾಸಚಿವಾಲಯತಿಳಿಸಿದೆ.
ದ್ವಿದಳ ಧಾನ್ಯಗಳು ಮತ್ತು ತರಕಾರಿಗಳ ಬೆಲೆಯಲ್ಲಿನ ಏರಿಕೆಯು ಸಗಟು ಹಣದುಬ್ಬರ ಹೆಚ್ಚಳಕ್ಕೆ ಕಾರಣ ಎಂದು ಅದು ತಿಳಿಸಿದೆ. ಅಕ್ಟೋಬರ್‌ನಲ್ಲಿ ಸಗಟು ಹಣದುಬ್ಬರ ಶೇ (–)1.21ರಷ್ಟಿತ್ತು, ಕಳೆದ ವರ್ಷದ ನವೆಂಬರ್‌ನಲ್ಲಿ ಇದು ಶೇ 2.16ರಷ್ಟಿತ್ತು.
‘ಆಹಾರ ಪದಾರ್ಥಗಳು, ಖನಿಜ ತೈಲಗಳು, ಕಚ್ಚಾ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ವಿದ್ಯುತ್, ಮೂಲ ಲೋಹಗಳ ಉತ್ಪಾದನಾ ವೆಚ್ಚದಲ್ಲಿನ ಇಳಿಕೆಯಿಂದ ಸಗಟು ಹಣದುಬ್ಬರವು ನವೆಂಬರ್‌ನಲ್ಲಿ ಋಣಾತ್ಮಕ ದರದಲ್ಲಿದೆ’ ಎಂದು ತಿಳಿಸಿದೆ.
ಅಕ್ಟೋಬರ್‌ನಲ್ಲಿ ಆಹಾರ ಪದಾರ್ಥಗಳ ಬೆಲೆ ಇಳಿಕೆಯು ಶೇ 8.31ರಷ್ಟಿತ್ತು. ನವೆಂಬರ್‌ನಲ್ಲಿ ಶೇ 4.16ರಷ್ಟಿದೆ. ತರಕಾರಿಗಳ ಸಗಟು ಬೆಲೆ ಇಳಿಕೆಯು ಶೇ 20.23ರಷ್ಟಾಗಿದೆ. ಇದು ಅಕ್ಟೋಬರ್‌ನಲ್ಲಿ ಶೇ 34.97ರಷ್ಟಿತ್ತು.
ದ್ವಿದಳ ಧಾನ್ಯಗಳ ಬೆಲೆ ಇಳಿಕೆಯು ಶೇ 15.21ರಷ್ಟು, ಆಲೂಗೆಡ್ಡೆ ಮತ್ತು ಈರುಳ್ಳಿ ಸಗಟು ದರ ಇಳಿಕೆವು ಕ್ರಮವಾಗಿ ಶೇ 36.14ರಷ್ಟು ಮತ್ತು ಶೇ 64.70ರಷ್ಟು ಆಗಿದೆ.
ತಯಾರಿಸಿದ ಸರಕುಗಳ ಹಣದುಬ್ಬರ ಶೇ 1.54ರಿಂದ ಶೇ 1.33ಕ್ಕೆ ಇಳಿದಿದೆ. ಇಂಧನ ಮತ್ತು ವಿದ್ಯುತ್ ಸಗಟು ದರ ಇಳಿಕೆಯು ಶೇ 2.55ರಿಂದ ಶೇ 2.27ಕ್ಕೆ ಬಂದಿದೆ ಎಂದು ತಿಳಿಸಿದೆ.
ನವೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 0.71ರಷ್ಟು ಆಗಿದೆ.
ಅಮೆರಿಕದ ಉಪ ವ್ಯಾಪಾರ ಪ್ರತಿನಿಧಿ ರಿಕ್ ಸ್ವಿಟ್ಜರ್ ಅವರು ವ್ಯಾಪಾರ ಮಾತುಕತೆಗಾಗಿ ಕಳೆದ ವಾರ ಭಾರತಕ್ಕೆ ಬಂದಿದ್ದರು. ‘ವ್ಯಾಪಾರ ಒಪ್ಪಂದದ ಚೌಕಟ್ಟಿನ ವಿಚಾರವಾಗಿ ನಾವು ಬಹಳ ಮುಂದೆ ಬಂದಿದ್ದೇವೆ. ಅದು ಅಲ್ಪಾವಧಿಯಲ್ಲೇ ಸಾಧ್ಯವಾಗಬಹುದು. ಆದರೆ ಅದಕ್ಕೆ ಸಮಯಮಿತಿ ವಿಧಿಸಲು ನಾನು ಬಯಸುವುದಿಲ್ಲ’ ಎಂದು ಅಗರ್ವಾಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಾತುಕತೆ ಪೂರ್ಣಗೊಂಡು, ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದವೊಂದು ಜಾರಿಗೆ ಬರುವುದನ್ನು ಭಾರತದ ರಫ್ತುದಾರರು ಕಾತರದಿಂದ ಕಾಯುತ್ತಿದ್ದಾರೆ. ಅಮೆರಿಕವು ಭಾರತದ ಸರಕುಗಳ ಮೇಲೆ ಒಟ್ಟು ಶೇ 50ರಷ್ಟು ಸುಂಕ ವಿಧಿಸಿರುವುದರಿಂದಾಗಿ ರಫ್ತು ವಲಯಕ್ಕೆ ತೊಂದರೆ ಆಗಿದೆ.
ಡಾ.ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ನಡೆದ ಫೈನಲ್‌ನಲ್ಲಿ 36 ಅಂಕಗಳೊಂದಿಗೆ ಹರಿಯಾಣದ ಮನು ಅಗ್ರಸ್ಥಾನಿ ಯಾದರು.
ಕರ್ನಾಟಕದ ಶೂಟರ್ ದಿವ್ಯಾ ಟಿ.ಎಸ್. 32 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದರು. ಹರಿಯಾಣದ ಅಂಜಲಿ ಚೌಧರಿ (28) ಕಂಚಿನ ಪದಕ ತಮ್ಮದಾಗಿಸಿಕೊಂಡರು.
ಅರ್ಹತಾ ಸುತ್ತಿನಲ್ಲಿ ದಿವ್ಯಾ 587 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದರೆ, ಮನು (581) ನಾಲ್ಕನೇ ಸ್ಥಾನ ಗಳಿಸಿದರು. ಅಂಜಲಿ ಚೌಧರಿ (582) ಮತ್ತು ಅನ್ನು ರಾಜ್ ಸಿಂಗ್ (582) ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದರು.
ಕುಸ್ತಿ: ಶ್ವೇತಾಗೆಬೆಳ್ಳಿಪದಕ
ಸಂದರ್ಭ: ಕರ್ನಾಟಕದ ಶ್ವೇತಾ ಎಸ್.ಅಣ್ಣಿಕೆರೆ ಅವರು ಅಹಮದಾಬಾದಿನಲ್ಲಿ ಭಾನುವಾರ ಮುಕ್ತಾಯಗೊಂಡ ಸೀನಿ ಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಷಿಪ್‌ನ ಮಹಿಳೆಯರ 50 ಕೆ.ಜಿ. ವಿಭಾಗ ದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡರು.
ಹಳಿಯಾಳದ ಅರ್ಲವಾಡ ಗ್ರಾಮದ ಶ್ವೇತಾ ಅವರು ಫೈನಲ್‌ನಲ್ಲಿ ರೈಲ್ವೇಸ್‌ನ ಅಂತರರಾಷ್ಟ್ರೀಯ ಕುಸ್ತಿಪಟು, ಅಗ್ರ ಶ್ರೇಯಾಂಕದ ನೀಲಂ ಅವರಿಗೆ ಮಣಿದರು.
ಕರ್ನಾಟಕದ ಆಟಗಾರ್ತಿ ಸೆಮಿ ಫೈನಲ್‌ನಲ್ಲಿ ಮಹಾರಾಷ್ಟ್ರದ ಗೌರಿ ಪಾಟೀಲ್ ಅವರನ್ನು 2 ಪಾಯಿಂಟ್ ಗಳಿಂದ, ಕ್ವಾರ್ಟರ್‌ಫೈನಲ್‌ನಲ್ಲಿ ಹರಿಯಾಣದ ಮುಸ್ಕಾನ್ ಅವರನ್ನು 10–0ಯಿಂದ ಸೋಲಿಸಿದ್ದರು.
19 ವರ್ಷ ವಯಸ್ಸಿನ ಶ್ವೇತಾ, ಉತ್ತರಾಖಂಡದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ರಾಷ್ಟ್ರೀಯ ಕ್ರೀಡೆಗಳಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು.
ಪುರುಷರ 70 ಕೆ.ಜಿ. ವಿಭಾಗದಲ್ಲಿ ರೈಲ್ವೇಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ರೋಹನ್ ಎನ್.ಘೆವಡಿ ಅವರು ಕಂಚಿನ ಪದಕ ತಮ್ಮದಾಗಿಸಿಕೊಂಡರು.
ಹಳಿಯಾಳದ ರೋಹನ್ ಕಂಚಿನ ಪದಕಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಸರ್ವಿಸಸ್‌ನ ನವೀನ್ ಅವರನ್ನು 8–4 ಪಾಯಿಂಟ್‌ಗಳಿಂದ ಸೋಲಿಸಿದರು. ಹರಿಯಾಣದ ಅಭಿಮನ್ಯು ಚಿನ್ನದ ಪದಕ ಗೆದ್ದರೆ, ಉತ್ತರ ಪ್ರದೇಶದ ರವಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.
ಕೃಷ್ಣಾ ಕೊಳ್ಳದಲ್ಲಿ ಸಂಗ್ರಹವಾಗುವ ಒಟ್ಟು ನೀರಿನಲ್ಲಿ, ಕರ್ನಾಟಕವು 173 ಟಿಎಂಸಿ ಅಡಿಗಳಷ್ಟು ನೀರನ್ನು ಬಳಸಿಕೊಳ್ಳಬಹುದು ಎಂದು ಕೃಷ್ಣಾ ಜಲವಿವಾದ ನ್ಯಾಯಮಂಡಳಿ–2 ತೀರ್ಪಿತ್ತು 15 ವರ್ಷಗಳೇ ಕಳೆದಿವೆ.
5.95 ಲಕ್ಷ ಹೆಕ್ಟೇರ್‌ಗೆ ನೀರಾವರಿ ಒದಗಿಸಬಹುದಾಗಿದ್ದ ಈ ಯೋಜನೆ ವಿಳಂಬವಾದಷ್ಟೂ ರೈತರ ಬದುಕು ಹಸನಾಗುವುದು ಮುಂದೆ ಹೋಗುತ್ತಿದೆ.
ಕೃಷ್ಣಾ ಜಲವಿವಾದ ಹೊಸತಲ್ಲ. 1956ರಲ್ಲೇ ಆಂಧ್ರಪ್ರದೇಶ ನೀರು ಹಂಚಿಕೆ ಸಂಬಂಧ ತಕರಾರು ದಾಖಲಿ ಸಿತ್ತು. ಸುಪ್ರೀಂಕೋರ್ಟ್ ಮತ್ತು ಆನಂತರ ರಚನೆಯಾದ ಕೃಷ್ಣಾ ಜಲವಿವಾದ ನ್ಯಾಯಮಂಡಳಿಯು ಕಾಲಕಾಲಕ್ಕೆ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ನೀರು ಹಂಚಿಕೆ ಮಾಡಿ ತೀರ್ಪಿತ್ತಿದೆ. ಆ ಪ್ರಕಾರವೇ ಕರ್ನಾಟಕವು ಕೃಷ್ಣಾ ಮೇಲ್ದಂಡೆ ಹಂತ–1ರ ಕಾಮಗಾರಿ ಮುಗಿಸಿದೆ, ಹಂತ–2ರ ಕಾಮಗಾರಿ ಮುಗಿಯುವ ವಿವಿಧ ಹಂತಗಳಲ್ಲಿ ಇದೆ. ಈ ಮಧ್ಯೆಯೇ ನ್ಯಾಯಮಂಡಳಿಯು ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519.6 ಮೀಟರ್‌ಗಳಿಂದ 524.25 ಮೀಟರ್‌ಗಳಿಗೆ ಹೆಚ್ಚಿಸಲು ಹಾಗೂ ಕರ್ನಾಟಕಕ್ಕೆ ಕೃಷ್ಣಾ ಕೊಳ್ಳದ 173 ಟಿಎಂಸಿ ನೀರು ಹಂಚಿಕೆ ಮಾಡಿ 2010ರಲ್ಲೇ ಅಂತಿಮ ತೀರ್ಪು ನೀಡಿತ್ತು.
2013ರ ನವೆಂಬರ್‌ನಲ್ಲಿ ಪೂರಕ ವರದಿ ನೀಡಿತ್ತು.
ನ್ಯಾಯಮಂಡಳಿಯ ತೀರ್ಪು ಪ್ರಕಟವಾಗುತ್ತಿದ್ದಂತೆ ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು ಭಾಗದ ಬಹುತೇಕ ರೈತರು, ತಮ್ಮ ಹೊಲಗಳಿಗೆ ನೀರು ಹರಿಯುವ ಮತ್ತು ತಾವು ಚಿನ್ನದ ಬೆಲೆಯ ಬೆಳೆ ಬೆಳಯುವ ಕನಸು ಕಂಡಿದ್ದರು. ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ತಯಾರಿ ನಡೆಸುತ್ತಿದ್ದಂತೆ ತಕರಾರುಗಳು ಆರಂಭವಾಗಿದ್ದವು.
2013ರಲ್ಲಿ ಅಂದಾಜಿಸಿದ್ದಂತೆ, ಅಣೆಕಟ್ಟೆಯ ಎತ್ತರವನ್ನು 524.25 ಮೀಟರ್‌ಗಳಿಗೆ ಹೆಚ್ಚಿಸಿದರೆ 75,000 ಎಕರೆಯಷ್ಟು ಜಮೀನು ಮುಳುಗಡೆಯಾಗಲಿದೆ. ಕಾಲುವೆ ನಿರ್ಮಾಣ ಮತ್ತಿತರ ಕಾಮಗಾರಿಯೂ ಒಳಗೊಂಡು ಒಟ್ಟು 1.33 ಲಕ್ಷ ಎಕರೆ ಪ್ರದೇಶವನ್ನು ಭೂಸ್ವಾಧೀನಕ್ಕೆ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯದಲ್ಲೇ ಆವರೆಗಿನ ಅತ್ಯಂತ ದೊಡ್ಡ ನೀರಾವರಿ ಯೋಜನೆ ಅದಾಗಿತ್ತು. ಅಂತೆಯೇ ಭೂಸ್ವಾಧೀನ ಪ್ರಕ್ರಿಯೆ ವಿರುದ್ಧ ಮತ್ತು ಹೆಚ್ಚಿನ ಪರಿಹಾರ ಕೋರಿ ವಿವಿಧ ನ್ಯಾಯಾಲಯಗಳಲ್ಲಿ 28,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾದವು. ಬೃಹತ್ ಯೋಜನೆ ಎಂಬ ಹೆಗ್ಗಳಿಕೆ ಜತೆಗೇ ಅತಿಹೆಚ್ಚು ಪ್ರಕರಣಗಳನ್ನು ಎದುರಿಸಿದ ಯೋಜನೆ ಎಂಬ ಅಪಖ್ಯಾತಿಗೂ ಕೃಷ್ಣಾ ಮೇಲ್ದಂಡೆ –3ನೇ ಹಂತವು ಗುರಿಯಾಗಬೇಕಾಯಿತು.
ಹತ್ತಾರು ಸಾವಿರ ಪ್ರಕರಣಗಳು ಇದ್ದ ಕಾರಣಕ್ಕೆ, ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಯಿತು. ‘ಈ ಸಮಸ್ಯೆಯ ಗಂಭೀರತೆಯನ್ನು ಅರಿಯದ ಸರ್ಕಾರಗಳು, ಪ್ರಕರಣಗಳನ್ನು ನಿರ್ಲಕ್ಷ್ಯ ಮಾಡುತ್ತಾ ಬಂದವು. 2013ರಿಂದ ಈವರೆಗೆ ಆಡಳಿತ ನಡೆಸಿದ ಎಲ್ಲ ಪಕ್ಷಗಳ ಸರ್ಕಾರಗಳೂ ಯೋಜನೆಯನ್ನು ಕಡೆಗಣಿಸಿಯೇ ಇದ್ದವು. ಈ ಕಾರಣದಿಂದಲೇ 100 ರೂಪಾಯಿ ಪರಿಹಾರ ಕೊಡಬೇಕಾಗಿದ್ದೆಡೆ, 1,000 ರೂಪಾಯಿ ಕೊಡಬೇಕಾದ ಸ್ಥಿತಿ ಬಂದಿದೆ’ ಎಂಬುದು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಟೀಕೆ.
ಯೋಜನೆಯ ರೂಪುರೇಷೆ ಸಿದ್ಧಪಡಿಸಿದ್ದಾಗ ₹17,600 ಕೋಟಿ ವೆಚ್ಚವನ್ನು ಅಂದಾಜು ಮಾಡಲಾಗಿತ್ತು. ಪ್ರಕರಣಗಳು ವಿಳಂಬವಾದಂತೆ ಒಮ್ಮೆ ವೆಚ್ಚವನ್ನು ₹24,000 ಕೋಟಿಗೆ, ಇನ್ನೊಮ್ಮೆ ₹51,148 ಕೋಟಿಗೆ, ಈಗ ಮತ್ತೆ ₹1 ಲಕ್ಷ ಕೋಟಿಗೆ ಪರಿಷ್ಕರಿಸಲಾಗಿದೆ. ಇದರಲ್ಲಿ ಭೂಸ್ವಾಧೀನ ಪ್ರಕ್ರಿಯೆಗೇ ಸುಮಾರು ₹80,000 ಕೋಟಿ ಬೇಕಾಗುತ್ತದೆ ಎಂಬುದು ಸರ್ಕಾರದ ಅಂದಾಜು. ಒಂದು ಹಂತದಲ್ಲಿ ಭೂಸ್ವಾಧೀನದ ವೆಚ್ಚವೇ ₹2.10 ಲಕ್ಷ ಕೋಟಿಗೆ ಮುಟ್ಟುವಂತಹ ಸ್ಥಿತಿ ಎದುರಾಗಿತ್ತು. ‘ಬಾಗಲಕೋಟೆಯ ಒಂದು ಜಮೀನಿಗೆ ಪ್ರತಿ ಎಕರೆಗೆ ₹23 ಕೋಟಿ, ವಿಜಯಪುರದಲ್ಲಿ ಒಂದು ಎಕರೆಗೆ ₹11.92 ಕೋಟಿ ಪರಿಹಾರ ನೀಡುವಂತೆ ವಿವಿಧ ನ್ಯಾಯಾಲಯಗಳು ಆದೇಶ ನೀಡಿದ್ದವು. ಆ ಪ್ರಕಾರ ಒಟ್ಟು 75,000 ಎಕರೆ ಭೂಸ್ವಾಧೀನಕ್ಕೆ ₹2.10 ಲಕ್ಷ ಕೋಟಿ ಬೇಕಾಗುತ್ತದೆ’ ಎಂದು ನೀರಾವರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಗೆ ಉತ್ತರ ನೀಡಿದ್ದರು.
ಭೂಸ್ವಾಧೀನದ ವೆಚ್ಚವೇ ₹2 ಲಕ್ಷ ಕೋಟಿ ದಾಟುತ್ತದೆ ಎಂಬುದು ಗೊತ್ತಾದಾಗ, ಇನ್ನು ಈ ಯೋಜನೆ ಸಂಪೂರ್ಣವಾಗಿ ನನೆಗುದಿಗೆ ಬಿದ್ದಹಾಗೆ ಎಂಬುದು ಉತ್ತರ ಕರ್ನಾಟಕದ ರೈತರು ಕೈಚೆಲ್ಲಿದ್ದರು. ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷದ ಕೆಲ ಶಾಸಕರು, ಈ ಯೋಜನೆ ಅನುಷ್ಠಾನ ಸಾಧ್ಯವೇ ಇಲ್ಲ ಎಂಬಂತಹ ಹೇಳಿಕೆಗಳನ್ನು ನೀಡಿದರು. ಯೋಜನೆ ಕೈತಪ್ಪುವ ಅಪಾಯವನ್ನು ಅರಿತ ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿತು.
ಭೂಮಿ ಕಳೆದುಕೊಳ್ಳಲಿರುವ ರೈತರ ಜಮೀನಿಗೆ ಏಕರೀತಿಯ ಪರಿಹಾರ ನಿಗದಿ ಮಾಡಲು ಮತ್ತು ನ್ಯಾಯಾಲಯಗಳಲ್ಲಿ ಇರುವ ಪ್ರಕರಣಗಳನ್ನು ಹಿಂಪಡೆಯುವಂತೆ ರೈತರ ಮನವೊಲಿಸಲು ಮುಂದಾಯಿತು. ರೈತ ಮುಖಂಡರ ಜತೆಗೆ, ಸಂಬಂಧಿತ ಜಿಲ್ಲೆಯ ಜನಪ್ರತಿನಿಧಿಗಳ ಜತೆಗೆ ಸಾಲು–ಸಾಲು ಸಭೆ ನಡೆಸಿತು. ಕಡೆಗೆ ಪ್ರತಿ ಎಕರೆ ಖುಷ್ಕಿ ಜಮೀನಿಗೆ ₹25 ಲಕ್ಷ ಮತ್ತು ಪ್ರತಿ ಎಕರೆ ನೀರಾವರಿ ಜಮೀನಿಗೆ ₹30 ಲಕ್ಷ ನಿಗದಿ ಮಾಡುವುದಾಗಿ ಘೋಷಿಸಿತು. ಈ ಮೊತ್ತದ ಪರಿಹಾರಕ್ಕೆ ರೈತರಿಂದ ಮತ್ತೆ ವ್ಯಾಪಕ ವಿರೋಧ ವ್ಯಕ್ತವಾಯಿತು. ಮತ್ತಷ್ಟು ಸುತ್ತಿನ ಸಭೆ ನಡೆಸಿದ ಸರ್ಕಾರವು ಪ್ರತಿ ಎಕರೆ ಖುಷ್ಕಿ ಜಮೀನಿಗೆ ₹30 ಲಕ್ಷ ಮತ್ತು ಪ್ರತಿ ಎಕರೆ ನೀರಾವರಿ ಜಮೀನಿಗೆ ₹40 ಲಕ್ಷ ಪರಿಹಾರವನ್ನು ನಿಗದಿಪಡಿಸಿತು.
ಇಷ್ಷಕ್ಕೇ, ಈ ಯೋಜನೆಯ ಕಾಮಗಾರಿ ಆರಂಭವಾಗುತ್ತದೆ ಎಂದುಕೊಂಡರೆ ತಪ್ಪಾಗುತ್ತದೆ. ಏಕೆಂದರೆ ಇನ್ನು 13,900ಕ್ಕೂ ಹೆಚ್ಚು ಪ್ರಕರಣಗಳು ನ್ಯಾಯಾಲಯದಲ್ಲಿ ಇವೆ. ರೈತರು ಆ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಆನಂತರವೇ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲು ಸಾಧ್ಯವಾಗುತ್ತದೆ. ಆದರೆ ಈ ಕೆಲಸ ಅಷ್ಟು ಸುಲಭದಂತೆ ಕಾಣುತ್ತಿಲ್ಲ. ಭೂಸ್ವಾಧೀನ ವಿಳಂಬವಾದರೆ, ವೆಚ್ಚ ಇನ್ನಷ್ಟು ಹೆಚ್ಚಾಗಲಿದೆ ಎಂಬ ಅಪಾಯವೂ ಇದ್ದೇ ಇದೆ. ಒಟ್ಟಿನಲ್ಲಿ ಭೂಸ್ವಾಧೀನ ವಿರೋಧಿಸಿ ಮತ್ತು ಹೆಚ್ಚಿನ ಪರಿಹಾರ ಕೋರಿ ದಾಖಲಿಸಲಾದ ಪ್ರಕರಣಗಳ ನಿರ್ವಹಣೆಯಲ್ಲಿ ಎಲ್ಲ ಸರ್ಕಾರಗಳು ಹಾಗೂ ಸಂಬಂಧಿತ ಅಧಿಕಾರಿಗಳು ಎಡವಿದ ಕಾರಣಕ್ಕೆ ₹17,600 ಕೋಟಿ ವೆಚ್ಚದ ಯೋಜನೆ, ಈಗ ₹1 ಲಕ್ಷ ಕೋಟಿಯಷ್ಟಾಗಿದೆ.
ನ್ಯಾಯಮಂಡಳಿಯು 2010ರಲ್ಲಿ ತೀರ್ಪು ನೀಡಿದ ಮತ್ತು ಅಣೆಕಟ್ಟೆ ಎತ್ತರವನ್ನು 1956ರ ಮೂಲ ಯೋಜನೆಯಲ್ಲಿ ಇದ್ದಂತೆ 524.25 ಮೀಟರ್‌ಗೆ ಹೆಚ್ಚಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ ನಂತರ ಕೇಂದ್ರ ಸರ್ಕಾರವು ಈ ಸಂಬಂಧ ಅಧಿಸೂಚನೆ ಹೊರಡಿಸಬೇಕಿತ್ತು. ಆದರೆ ಈವರೆಗೆ ಅಂತಹ ಅಧಿಸೂಚನೆ ಹೊರಡಿಸಿಲ್ಲ.
ಕೃಷ್ಣಾ ಜಲವಿವಾದ ನ್ಯಾಯಮಂಡಳಿ–2, ‘ಈ ತೀರ್ಪಿನ ಅನುಷ್ಠಾನಕ್ಕಾಗಿ ಕೃಷ್ಣಾ ಜಲ ತೀರ್ಪು ಅನುಷ್ಠಾನ ಮಂಡಳಿ ರಚಿಸಬೇಕು’ ಎಂದು ತೀರ್ಪಿನಲ್ಲಿ ಆದೇಶಿಸಿತ್ತು. ಆದರೆ ಈವರೆಗೆ ಅನುಷ್ಠಾನ ಮಂಡಳಿ ರಚನೆಯಾಗಿಲ್ಲ.
2010ರ ತೀರ್ಪಿನ ವಿರುದ್ಧ ಆಂಧ್ರಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
‘ಮುಂದಿನ ಆದೇಶದವರೆಗೆ, ನ್ಯಾಯಮಂಡಳಿಯು ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳಿಗೆ ಅಧಿಸೂಚನೆ ಹೊರಡಿಸಬಾರದು’ ಎಂದು ತಡೆಯಾಜ್ಞೆ ನೀಡಿದೆ. ಇದು ಪೂರ್ವಾನ್ವಯ ಆಗದೇ ಇದ್ದರೂ, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆ ಹೊರಡಿಸದೇ ಇರಲು ಈ ತಡೆಯಾಜ್ಞೆಯನ್ನು ಮುಂದು ಮಾಡಿದ್ದಿದೆ. ಈ ತಡೆಯಾಜ್ಞೆ ವಿರುದ್ಧ ಮೇಲ್ಮನವಿ ಸಲ್ಲಿಸಿ ಎಂದು ರಾಜ್ಯ ಸರ್ಕಾರವು ಕೋರಿದ್ದರೂ, 14 ವರ್ಷದಲ್ಲಿ ಕೇಂದ್ರ ಸರ್ಕಾರವು ಅಂತಹದ್ದೊಂದು ಕ್ರಮ ತೆಗೆದುಕೊಂಡಿಲ್ಲ.
ಕೃಷ್ಣಾ ನದಿಯ ನೀರನ್ನು ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ಅವಲಂಬಿಸಿರುವ ಕಾರಣಕ್ಕೆ ನದಿಯ ಪಾತ್ರದಲ್ಲಿ ಕೈಗೊಳ್ಳುವ ಯಾವುದೇ ಕಾಮಗಾರಿಗೆ ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸುವುದು ಕಡ್ಡಾಯ. ಬೃಹತ್ ಯೋಜನೆ ಆಗಿರುವ ಕಾರಣಕ್ಕೆ ಇದನ್ನು ‘ರಾಷ್ಟ್ರೀಯ ಯೋಜನೆ’ ಎಂದೂ ಘೋಷಿಸಬೇಕಾಗುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆ–3ನೇ ಹಂತ ಅನುಷ್ಠಾನಕ್ಕೆ ಬಂದರೆ ಮಹಾರಾಷ್ಟ್ರಕ್ಕೂ ಹೆಚ್ಚು ನೀರು ಲಭ್ಯವಾಗುತ್ತದೆ ಮತ್ತು ಆಂಧ್ರಪ್ರದೇಶಕ್ಕೂ ಜಲಾಶಯದಿಂದ ಹೆಚ್ಚು ನೀರು ಬಿಡಬೇಕಾಗುತ್ತದೆ. ಆದರೆ ಪ್ರಮುಖ ಕಾಮಗಾರಿಗಳೆಲ್ಲವೂ ಕರ್ನಾಟಕ ನೆಲದಲ್ಲಿ ನಡೆಯುತ್ತದೆ ಹಾಗೂ ಪೂರ್ಣ ವೆಚ್ಚವನ್ನು ಕರ್ನಾಟಕವೇ ಭರಿಸಬೇಕಾಗುತ್ತದೆ. ಇದೊಂದು ರೀತಿಯಲ್ಲಿ ಕರ್ನಾಟಕವು ಹೊರೆ ಹೊತ್ತುಕೊಂಡು ಮಹಾರಾಷ್ಟ್ರಕ್ಕೆ ಮತ್ತು ಆಂಧ್ರಪ್ರದೇಶಕ್ಕೆ ನೀರಿನ ಅನುಕೂಲ ಮಾಡಿಕೊಡುವ ಕೆಲಸವಾಗುತ್ತದೆ.
ಕರ್ನಾಟಕಕ್ಕೆ ಆಗುವ ಈ ಹೆಚ್ಚಿನ ಹೊರೆಯನ್ನು ತಪ್ಪಿಸಲು ಕೇಂದ್ರ ಸರ್ಕಾರವೂ ಒಂದಷ್ಟು ಹಣ ಬಿಡುಗಡೆ ಮಾಡಬೇಕಾಗುತ್ತದೆ. ಕೇಂದ್ರವು ಹಾಗೆ ಹಣ ಬಿಡುಗಡೆ ಮಾಡಲು ಅಧಿಸೂಚನೆ ಹೊರಡಿಸಿದ್ದರಷ್ಟೇ ಸಾಧ್ಯ.
‘ಜಲ ವ್ಯವಹಾರಗಳ ಸಂಸದೀಯ ಸಮಿತಿಯು 2018ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯ ಪ್ರಕಾರ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ’ ಎಂದು ಘೋಷಿಸಿದರೆ, ಕೇಂದ್ರವು ಅಂದಾಜು ₹29,000 ಕೋಟಿಯನ್ನು ರಾಜ್ಯಕ್ಕೆ ನೀಡಬೇಕಾಗುತ್ತದೆ. ₹19,000 ಕೋಟಿಯಷ್ಟು ನೇರವಾಗಿ ಯೋಜನೆಗೆ ನೀಡಿದರೆ, ಕೇಂದ್ರ ಪ್ರಾಯೋಜಿತ ವಿವಿಧ ನೀರಾವರಿ ಯೋಜನೆಗಳ ಅಡಿಯಲ್ಲಿ ಸುಮಾರು ₹10,000 ಕೋಟಿಯನ್ನು ಕರ್ನಾಟಕಕ್ಕೆ ಒದಗಿಸಬೇಕಾಗುತ್ತದೆ. ಇದು ರಾಜ್ಯ ಸರ್ಕಾರದ ವೆಚ್ಚವನ್ನು ಶೇ 30ರಷ್ಟು ಕಡಿಮೆ ಮಾಡುವ ಸಂಭವವಿತ್ತು. ಆದರೆ ಈ ವರದಿಯನ್ನು ಕೇಂದ್ರವು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಸಮಿತಿ ಮತ್ತೊಮ್ಮೆ ಅಂತಹ ವರದಿ ನೀಡಲಿಲ್ಲ. ಯೋಜನೆ ಕುರಿತಾಗಿ ಅಧಿಸೂಚನೆ ಹೊರಡಿಸುವ ಬಗ್ಗೆ ಕೇಂದ್ರ ಸರ್ಕಾರ ಯಾವ ತರಹದ ಕ್ರಮವನ್ನೂ ತೆಗೆದುಕೊಂಡಿಲ್ಲ’ ಎಂಬುದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಯೊಬ್ಬರ ಆರೋಪ.
2010ರಿಂದ 2023ರವರೆಗೆ ರಾಜ್ಯದಲ್ಲಿ ಐದು ಸರ್ಕಾರಗಳು ಆಡಳಿತ ನಡೆಸಿದ್ದು, ಕೇಂದ್ರದಿಂದ ಅಧಿಸೂಚನೆ ಪಡೆಯುವಂತೆ ಮಾಡುವಲ್ಲಿ ವಿಫಲವಾಗಿವೆ. ಈಗಿನ ಕಾಂಗ್ರೆಸ್ ಸರ್ಕಾರವು, ‘ಅಧಿಸೂಚನೆ ಹೊರಡಿಸಿ’ ಎಂದು ಕೇಂದ್ರಕ್ಕೆ ಹಲವು ಬಾರಿ ಪತ್ರ ಬರೆದಿದೆ. ಮುಖ್ಯಮಂತ್ರಿ, ನೀರಾವರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ. ಆದರೆ ಕೇಂದ್ರ ಸರ್ಕಾರವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಸಂಬಂಧ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ರಾಜ್ಯ ಸರ್ಕಾರವು ಹಲವು ಬಾರಿ ಹೇಳಿದೆ. ಆದರೆ, ಅದೂ ಸಾಧ್ಯವಾಗಿಲ್ಲ.
ಕೇಂದ್ರದ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಪಕ್ಷಗಳ ಸಂಸದರು ಈವರೆಗೆ ಈ ವಿಷಯದ ಬಗ್ಗೆ ಪ್ರಸ್ತಾಪಿಸಿಲ್ಲ.
ಮಹಾರಾಷ್ಟ್ರ ತಕರಾರು, ಆಂಧ್ರದ ಅಸಹಕಾರ
ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸಿದರೆ ತಮ್ಮ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ತಲೆದೋರುತ್ತದೆ ಎಂದು ಮಹಾರಾಷ್ಟ್ರ ಸರ್ಕಾರವು ಇತ್ತೀಚೆಗೆ ತಕರಾರು ಎತ್ತಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಈ ಬಗ್ಗೆ ಸಾರ್ವಜನಿಕ ಸಭೆಗಳಲ್ಲಿ ಮಾತನಾಡಿದ್ದಲ್ಲದೆ, ಕೇಂದ್ರ ಸರ್ಕಾರದಲ್ಲೂ ತಕರಾರು ದಾಖಲಿಸಿದ್ದರು.
‘ಮಹಾರಾಷ್ಟ್ರದ ಈ ನಡೆಯ ಹಿಂದೆ ರಾಜಕೀಯವಲ್ಲದೆ ಬೇರೇನಿಲ್ಲ. ಸಾಂಗ್ಲಿ ಮತ್ತು ಕೊಲ್ಲಾಪುರದಲ್ಲಿ ನದಿಪಾತ್ರವನ್ನು ಒತ್ತುವರಿ ಮಾಡಿರುವುದರಿಂದ ಪ್ರವಾಹ ಉಂಟಾಗುತ್ತಿದೆ. ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವುದರಿಂದ ಯಾವುದೇ ಅಪಾಯವಿಲ್ಲ ಎಂದು ಮಹಾರಾಷ್ಟ್ರ ಸರ್ಕಾರವೇ ಜಲತಜ್ಞ ವಡ್ನೇರೆ ನೇತೃತ್ವದ ತಜ್ಞರ ಸಮಿತಿ 2019ರಲ್ಲಿ ಮನವಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ಸಹ ಈ ವರದಿಯನ್ನು ಒಪ್ಪಿಕೊಂಡಿತ್ತು. ಆದರೆ ದೇವೇಂದ್ರ ಫಡಣವೀಸ್ ಅವರು ರಾಜಕೀಯಕ್ಕಾಗಿ ತಕರಾರು ಎತ್ತುತ್ತಿದ್ದಾರೆ’ ಎಂದು ಈ ಹಿಂದೆ ನೀರಾವರಿ ಖಾತೆ ನಿರ್ವಹಿಸಿದ್ದ ಸಚಿವ ಎಂ.ಬಿ.ಪಾಟೀಲ ಅವರು ಬಹಿರಂಗವಾಗಿಯೇ ಹೇಳಿದ್ದರು.
ಇನ್ನು ಯೋಜನೆ ಸಂಬಂಧ ಕೇಂದ್ರವು ಅಧಿಸೂಚನೆ ಹೊರಡಿಸದೇ ಇರುವ ಬಗ್ಗೆ ತಕರಾರು ದಾಖಲಿಸಲು ಹಾಗೂ ಅಧಿಸೂಚನೆ ಹೊರಡಿಸುವಂತೆ ಒತ್ತಡ ಹೇರಲು ರಾಜ್ಯ ಸರ್ಕಾರವು ಆಂಧ್ರಪ್ರದೇಶ ಸರ್ಕಾರವನ್ನು ಹಲವು ಭಾರಿ ಕೋರಿದೆ. ಯೋಜನೆಯ ಅತ್ಯಂತ ದೊಡ್ಡ ಫಲಾನುಭವಿ ಆದ ಆಂಧ್ರವು (ಆಂಧ್ರಕ್ಕೆ 193 ಟಿಎಂಸಿ ಅಡಿ, ಕರ್ನಾಟಕಕ್ಕೆ 173 ಟಿಎಂಸಿ ಅಡಿ ನೀರು ಹಂಚಿಕೆಯಾಗಿದೆ) ಈ ಕೋರಿಕೆಗೆ ಸ್ಪಂದಿಸಿಲ್ಲ. ಆಂಧ್ರದಲ್ಲಿ ಸರ್ಕಾರ ನಡೆಸುತ್ತಿರುವ ಟಿಡಿಪಿ ಪಕ್ಷವು ಕೇಂದ್ರ ಸರ್ಕಾರದ ಬಹುಮುಖ್ಯ ಮಿತ್ರ ಪಕ್ಷ. ಆದರೂ ಕರ್ನಾಟಕ ಸರ್ಕಾರದ ಪ್ರಯತ್ನಕ್ಕೆ ಟಿಡಿಪಿ ಸಹಕರಿಸುತ್ತಿಲ್ಲ.
‘ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ನಾನೇ ಸ್ವತಃ 30 ಬಾರಿ ಕರೆ ಮಾಡಿದ್ದೇನೆ. ಆದರೆ ಅವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರವು ಅಧಿಸೂಚನೆ ಹೊರಡಿಸಿದರಷ್ಟೇ ಅನುಷ್ಠಾನ ಸಾಧ್ಯ. ಅವರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಅವರ ರಾಜ್ಯದ ಜನರ ಹಿತಾಸಕ್ತಿ ಬಲಿಕೊಡುತ್ತಿದ್ದಾರೆ. ಜತೆಗೆ, ಕರ್ನಾಟಕದ ರೈತರನ್ನು ನ್ಯಾಯವಂಚಿತರನ್ನಾಗಿಸುತ್ತಿದ್ದಾರೆ. ತುಂಗಭದ್ರಾ ಅಣೆಕಟ್ಟೆಯ ಕ್ರೆಸ್ಟ್‌ಗೇಟ್‌ಗಳನ್ನು ಬದಲಿಸುವ ವಿಚಾರದಲ್ಲೂ ಅವರು ಇಂಥದ್ದೇ ರಾಜಕೀಯ ಮಾಡುತ್ತಿದ್ದಾರೆ’ ಎಂಬುದು ಡಿ.ಕೆ.ಶಿವಕುಮಾರ್ ಅವರ ಆರೋಪ.
ರಾಜ್ ಕುಮಾರ್ ಗೋಯಲ್ ನೂತನ ಮುಖ್ಯ ಮಾಹಿತಿ ಆಯುಕ್ತ
ಕೇಂದ್ರ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರನ್ನಾಗಿ (ಸಿಐಸಿ) ಮಾಜಿ ಕಾನೂನು ಕಾರ್ಯದರ್ಶಿ ರಾಜ್ ಕುಮಾರ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ಇವರೊಂದಿಗೆ 8 ಆಯುಕ್ತರನ್ನೂ ನೇಮಿಸಲಾಗಿದೆ.
ಆಯೋಗದಲ್ಲಿ ಖಾಲಿ ಇದ್ದ ಎಲ್ಲ ಸ್ಥಾನಗಳು ಕಳೆದ 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭರ್ತಿಯಾಗಿವೆ. ಇದೇ ಸೆಪ್ಟೆಂಬರ್‌ನಲ್ಲಿ ನಿವೃತ್ತರಾದ ಹೀರಾಲಾಲ್ ಸಮಾರಿಯಾ ಅವರ ಬಳಿಕ ಆಯೋಗಕ್ಕೆ ಮುಖ್ಯ ಮಾಹಿತಿ ಆಯುಕ್ತರೇ ಇಲ್ಲದಂತಾಗಿತ್ತು. ಈವರೆಗೆ ಆಯೋಗದಲ್ಲಿ ಇಬ್ಬರೇ ಆಯುಕ್ತರು ಕಾರ್ಯನಿರ್ವಹಿಸುತ್ತಿದ್ದರು.
ಸೋಮವಾರ ಬೆಳಿಗ್ಗೆ 11 ಗಂಟೆಗೆ ಗೋಯಲ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಬಳಿಕ, ಗೋಯಲ್ ಅವರು 8 ಆಯುಕ್ತರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಆಯ್ಕೆ ಸಮಿತಿಯು ಖಾಲಿ ಇದ್ದ ಹುದ್ದೆಗಳಿಗೆ ನೇಮಕಾತಿ ಮಾಡಿದೆ. ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದ್ದರು.
‘ಆಯುಕ್ತರ ಆಯ್ಕೆಯಲ್ಲಿ ಬಹುಜನ ಸಮಾಜಕ್ಕೆ ಮನ್ನಣೆ ನೀಡಲಾಗಿಲ್ಲ’ ಎಂದು ರಾಹುಲ್ ತಮ್ಮ ಆಕ್ಷೇಪ ಮುಂದಿಟ್ಟಿದ್ದರು. ಆದರೆ, ಈ ಆಕ್ಷೇಪವನ್ನು ಕೇಂದ್ರ ತಳ್ಳಿ ಹಾಕಿದೆ. ಹೀರಾಲಾಲ್ ಅವರು ದಲಿತ ಸಮುದಾಯಕ್ಕೆ ಸೇರಿದ ಮೊದಲ ಮುಖ್ಯ ಮಾಹಿತಿ ಆಯುಕ್ತರಾಗಿದ್ದರು.
ಮೂವರು ಮಹಿಳಾ ಆಯುಕ್ತರು
ರೈಲ್ವೆ ಮಂಡಳಿಯ ಮಾಜಿ ಮುಖ್ಯಸ್ಥೆ ಜಯಾ ವರ್ಮಾ ಸಿನ್ಹಾ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಕ ಮಂಡಳಿಯ ಸದಸ್ಯರಾಗಿದ್ದ ಸುಧಾ ರಾಣಿ ರೇಲಂಗಿ ಅವರನ್ನು ಹೊಸದಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಆಯೋಗದಲ್ಲಿ ಸದ್ಯ ಮೂವರು ಮಹಿಳಾ ಮಾಹಿತಿ ಆಯುಕ್ತರಾಗಿದ್ದಾರೆ. ಸತರ್ಕ್ ನಾಗರಿಕ್ ಸಂಘಟನ್ ಅವರ ಅಧ್ಯಯನದ ಪ್ರಕಾರ, ಮಾಹಿತಿ ಆಯುಕ್ತರಲ್ಲಿ ನೇಮಕವಾಗುವ ಒಟ್ಟು ಅಧಿಕಾರಿಗಳ ಪೈಕಿ ಶೇ 9ರಷ್ಟು ಮಾತ್ರ ಮಹಿಳೆಯಾಗಿರುತ್ತಾರೆ.
ಅರ್ಧದಷ್ಟು ಮಂದಿ ಅಧಿಕಾರಿ ವರ್ಗದವರು: ಆಯೋಗಕ್ಕೆ ನೇಮಕ ಆಗಿರುವವರಲ್ಲಿ ಅರ್ಧದಷ್ಟು ಮಂದಿ ಮಾಜಿ ಅಧಿಕಾರಿಗಳಾಗಿದ್ದಾರೆ. ಮಾಹಿತಿ ಆಯುಕ್ತರಾಗಿ ನೇಮಕವಾಗುವವರಲ್ಲಿ ಶೇ 58ರಷ್ಟು ಮಂದಿ ಸರ್ಕಾರದ ನಿವೃತ್ತ ಅಧಿಕಾರಿಗಳಾಗಿರುತ್ತಾರೆ ಎಂದು ಇದೇ ಸಂಘಟನೆಯ ಅಧ್ಯಯನ ತಿಳಿಸಿದೆ.
ಈ ಹಿಂದೆ ಭಾರತ ಉನ್ನತ ಶಿಕ್ಷಣ ಆಯೋಗ (ಎಚ್‌ಇಸಿಐ) ಎಂದು ನಾಮಕರಣ ಮಾಡಿದ್ದ ಪ್ರಸ್ತಾವಿತ ಮಸೂದೆಗೆ ‘ವಿಕಸಿತ ಭಾರತ್ ಶಿಕ್ಷಾ ಅಧಿಕ್ಷಣ್’ (ವಿಬಿಎಸ್‌ಎ) ಎಂದು ಹೆಸರಿಡಲು ನಿರ್ಧರಿಸಲಾಗಿದೆ.
ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯಲ್ಲಿ ಉನ್ನತ ಶಿಕ್ಷಣ ನಿಯಂತ್ರಣವನ್ನು ಏಕೀಕೃತ ವ್ಯವಸ್ಥೆಗೆ ತರಲು ಪ್ರಸ್ತಾವಿಸಲಾಗಿತ್ತು. ವಿಶ್ವವಿದ್ಯಾಲಯದ ಅನುದಾನ ಆಯೋಗ (ಯುಜಿಸಿ) ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) ಹಾಗೂ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಸಂಸ್ಥೆಯೂ(ಎನ್‌ಸಿಟಿಇ) ವಿಬಿಎಸ್‌ಎನಲ್ಲಿ ವಿಲೀನವಾಗಲಿವೆ.
‘ವಿಬಿಎಸ್‌ಎ ಮಸೂದೆಗೆ ಸಂಪುಟವು ಒಪ್ಪಿಗೆ ನೀಡಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯುಜಿಸಿಯು ತಾಂತ್ರಿಕೇತರ ಉನ್ನತ ಶಿಕ್ಷಣವನ್ನು ನೋಡಿಕೊಳ್ಳು ತ್ತಿದೆ. ಎಐಸಿಟಿಇಯು ತಾಂತ್ರಿಕ ಶಿಕ್ಷಣದ ಮೇಲುಸ್ತುವಾರಿ ವಹಿಸಿದ್ದರೆ, ಎನ್‌ಸಿಟಿಯು ಶಿಕ್ಷಕರ ಶಿಕ್ಷಣದ ವಿಚಾರದ ಮೇಲೆ ನಿಗಾ ವಹಿಸಿದೆ.
ಉದ್ದೇಶಿತ ಆಯೋಗವು ಉನ್ನತ ಶಿಕ್ಷಣದ ನಿಯಂತ್ರಣಕ್ಕೆ ಏಕೀಕೃತ ವ್ಯವಸ್ಥೆ ಹೊಂದಿರಲಿದೆ. ಆದರೆ, ವೈದ್ಯಕೀಯ ಹಾಗೂ ಕಾನೂನು ಶಿಕ್ಷಣ ಇದರ ವ್ಯಾಪ್ತಿಗೆ ಬರುವುದಿಲ್ಲ. ಈ ನೂತನ ವ್ಯವಸ್ಥೆಯು ನಿಯಂತ್ರಣ, ಮಾನ್ಯತೆ ಹಾಗೂ ವೃತ್ತಿಪರ ಮಾನದಂಡವನ್ನು ನಿಗದಿಪಡಿಸುವ ಗುರಿ ಹೊಂದಬೇಕು ಎಂದು ಶಿಫಾರಸಿನಲ್ಲಿ ತಿಳಿಸಲಾಗಿತ್ತು.
ಪರಮಾಣು ಶಕ್ತಿಯ ಸುಸ್ಥಿರ ಬಳಕೆ ಹಾಗೂ ಪ್ರಗತಿ ನಿಟ್ಟಿನಲ್ಲಿ ಭಾರತ ಪರಿವರ್ತನೆ (ಶಾಂತಿ) ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಕಳೆದ ಫೆಬ್ರುವರಿಯಲ್ಲಿ ಬಜೆಟ್ ಮಂಡಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಖಾಸಗಿ ಸಹಭಾಗಿತ್ವದಲ್ಲಿ ಪರಮಾಣು ಇಂಧನ ಕೇಂದ್ರ ಸ್ಥಾಪಿಸುವ ಯೋಜನೆ ಹೊಂದಿರುವುದಾಗಿ ಘೋಷಣೆ ಮಾಡಿದ್ದರು.
ಸಣ್ಣ ಮಾಡ್ಯುಲರ್ ಪರಮಾಣು ಸ್ಥಾವರಗಳ ಅಭಿವೃದ್ಧಿ, ಸಂಶೋಧನೆಗಾಗಿ ₹ 20 ಸಾವಿರ ಕೋಟಿ ಮೊತ್ತದ ಯೋಜನೆಯನ್ನು ಈ ವೇಳೆ ಘೋಷಿಸಿದ್ದರು. ಖಾಸಗಿ ಸಹಭಾಗಿತ್ವದಲ್ಲಿ ದೇಶೀಯವಾಗಿ 2033ರ ವೇಳೆಗೆ ಇಂತಹ 5 ಸ್ಥಾವರಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದೂ ಅವರು ಹೇಳಿದ್ದರು.
ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಅಧಿವೇಶನದಲ್ಲಿ ಈ ಮಸೂದೆ ಮಂಡನೆ ಮಾಡುವ ಸಾಧ್ಯತೆ ಇದೆ. ಅಧಿವೇಶನವು ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ.
ವಿಮಾ ಕಾನೂನುಗಳ (ತಿದ್ದುಪಡಿ) ಮಸೂದೆ 2025, ವಿಮಾ ಕ್ಷೇತ್ರದ ಅಭಿವೃದ್ಧಿ ಮತ್ತು ವಹಿವಾಟನ್ನು ಸರಳಗೊಳಿಸುವ ಉದ್ದೇಶ ಹೊಂದಿದೆ. ಈ ಮಸೂದೆಯನ್ನು ಸೋಮವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ತಿಳಿಸಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಈ ವರ್ಷದ ಬಜೆಟ್ ಮಂಡನೆ ವೇಳೆ, ಹಣಕಾಸು ವಲಯದ ಸುಧಾರಣೆಗಳ ಭಾಗವಾಗಿ ಪ್ರಸ್ತುತ ವಿಮಾ ವಲಯದಲ್ಲಿರುವ ಎಫ್‌ಡಿಐ ಮಿತಿಯನ್ನು ಶೇ 74ರಿಂದ ಶೇ 100ಕ್ಕೆ ಹೆಚ್ಚಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದರು. ಇಲ್ಲಿಯವರೆಗೆ ವಿಮಾ ವಲಯವು ₹82 ಸಾವಿರ ಕೋಟಿ ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಿದೆ.
ವಿಮಾ ವಲಯದಲ್ಲಿ ಎಫ್‌ಡಿಐ ಅನ್ನು ಶೇ 100ಕ್ಕೆ ಹೆಚ್ಚಿಸುವುದು ಸೇರಿದಂತೆ 1938ರ ವಿಮಾ ಕಾಯ್ದೆಯ ವಿವಿಧ ನಿಬಂಧನೆಗಳನ್ನು ತಿದ್ದುಪಡಿ ಮಾಡಲು ಹಣಕಾಸು ಸಚಿವಾಲಯ ಪ್ರಸ್ತಾಪಿಸಿದೆ.
ಈ ಪ್ರಕ್ರಿಯೆಯ ಭಾಗವಾಗಿ, ಜೀವ ವಿಮಾ ನಿಗಮ ಕಾಯ್ದೆ 1956 ಮತ್ತು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 1999 ಅನ್ನು ವಿಮಾ ಕಾಯ್ದೆ 1938ರ ಜೊತೆಗೆ ತಿದ್ದುಪಡಿ ಮಾಡಲಾಗುತ್ತಿದೆ.
ಎಲ್‌ಐಸಿ ಕಾಯ್ದೆಗೆ ತರಲು ಉದ್ದೇಶಿಸಿರುವ ಬದಲಾವಣೆಗಳು, ಭಾರತೀಯ ಜೀವ ವಿಮಾ ನಿಗಮದ ಆಡಳಿತ ಮಂಡಳಿಗೆ ಕಾರ್ಯಾಚರಣೆ ತೀರ್ಮಾನಗಳನ್ನು ತೆಗೆದುಕೊಳ್ಳುವ ಅಧಿಕಾರ ನೀಡುವ ಪ್ರಸ್ತಾವ ಹೊಂದಿವೆ. ತಿದ್ದುಪಡಿಯು ಕಾನೂನಾಗಿ ಜಾರಿಗೆ ಬಂದರೆ ಶಾಖೆಗಳ ವಿಸ್ತರಣೆ, ನೇಮಕಾತಿಯಂತಹ ತೀರ್ಮಾನಗಳನ್ನು ಆಡಳಿತ ಮಂಡಳಿಯೇ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.
ಪ್ರಸ್ತಾವಿತ ತಿದ್ದುಪಡಿಗಳು ವಿಮಾ ಪಾಲಿಸಿ ಹೊಂದಿರುವವರ ಹಿತಾಸಕ್ತಿ ರಕ್ಷಿಸಿ, ಅವರ ಹಣಕಾಸಿನ ಭದ್ರತೆಯನ್ನು ಹೆಚ್ಚಿಸಲಿದೆ. ಜೊತೆಗೆ ವಿಮಾ ವಲಯಕ್ಕೆ ಇನ್ನಷ್ಟು ಹೆಚ್ಚು ಕಂಪನಿಗಳು ಪ್ರವೇಶಿಸುವುದಕ್ಕೆ ನೆರವು ಒದಗಿಸುವ, ಆ ಮೂಲಕ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಉದ್ದೇಶ ಹೊಂದಿವೆ.
ಸಂದರ್ಭ: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಈ ವರ್ಷ ₹51,700 ಕೋಟಿ ತೆರಿಗೆ ಪಾಲು ಹಂಚಿಕೆ ಮಾಡಿದೆ. ಕಂತು ಕಂತುಗಳಲ್ಲಿ ರಾಜ್ಯದ ಪಾಲಿನ ಅನುದಾನ ಬಂದಿದೆ.
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಈ ಸಾಲಿನಲ್ಲಿ ₹16,000 ಕೋಟಿ ನೀಡುವುದಾಗಿ ವಾಗ್ದಾನ ಮಾಡಿದೆ. ಆದರೆ, ಈ ವರೆಗೆ ₹7 ಸಾವಿರ ಕೋಟಿಯಷ್ಟೇ ನೀಡಿದೆ. ಇನ್ನೂ ₹9 ಸಾವಿರ ಕೋಟಿ ನೀಡಬೇಕಿದೆ. ಈ ಅನುದಾನ ಶೀಘ್ರ ಬಿಡುಗಡೆಗೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ಜಲಜೀವನ್ ಮಿಷನ್ ಯೋಜನೆಯಲ್ಲೂ ಕೇಂದ್ರದ ಪಾಲು ₹4,574 ಕೋಟಿ ಬರಬೇಕಿದೆ.
ಎರಡುವರ್ಷದಿಂದಆರೋಗ್ಯಅನುದಾನಇಲ್ಲ
ಕರ್ನಾಟಕ ರಾಜ್ಯಕ್ಕೆ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ಆರೋಗ್ಯ ಅನುದಾನವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎರಡು ವರ್ಷಗಳಿಂದ ಬಿಡುಗಡೆಯೇ ಮಾಡಿಲ್ಲ.
ಆಯೋಗವು 2021–22ರಿಂದ 2025–26ರ ಅವಧಿಗೆ ರಾಜ್ಯಕ್ಕೆ ₹2,928 ಕೋಟಿ ಹಂಚಿಕೆ ಮಾಡಿತ್ತು. ಇಲ್ಲಿಯವರೆಗೆ ₹1,497 ಕೋಟಿ ಬಿಡುಗಡೆ ಆಗಿದೆ. 2024–25, 2025–26ರಲ್ಲಿ ಅನುದಾನವೇ ಬಂದಿಲ್ಲ.
ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ ಬಿಡುಗಡೆಯಾದ ಅನುದಾನವೆಷ್ಟು, ರಾಜ್ಯ ಖರ್ಚು ಮಾಡಿರುವುದೆಷ್ಟು ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ್ದರು. ಇದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವ ಪ್ರತಾಪ್ ರಾವ್ ಜಾಧವ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.
ರಾಜ್ಯದ ಗ್ರಾಮೀಣ ಭಾಗದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ಆರಂಭಿಸುವ ಕುರಿತಂತೆ ಕಾಂಗ್ರೆಸ್‌ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸರ್ಕಾರದ ಸೆಳೆದರು. ಅದಕ್ಕೆ ಉತ್ತರಿಸಿದ ಮುನಿಯಪ್ಪ, ‘ನಿಯಮದಂತೆ 3 ಕಿ.ಮೀ.ಗೊಂದು ನ್ಯಾಯಬೆಲೆ ಅಂಗಡಿ ತೆರೆಯ ಲಾಗುವುದು. ಒಂದು ವೇಳೆ ನ್ಯಾಯಬೆಲೆ ಅಂಗಡಿಗಳಿಲ್ಲದ ಕಡೆಗಳಲ್ಲಿ ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸಲಾಗುವುದು’ ಎಂದರು.
‘ಗುಡ್ಡಗಾಡು ಪ್ರದೇಶದಲ್ಲಿ ಕಡಿಮೆ ಪಡಿತರ ಚೀಟಿದಾರರಿದ್ದರೂ ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸುತ್ತೇವೆ. ಗ್ರಾಮಾಂತರ ಭಾಗದಲ್ಲಿ 500 ಮತ್ತು ನಗರ ಪ್ರದೇಶದಲ್ಲಿ 800 ಪಡಿತರ ಚೀಟಿಗೊಂದು ನ್ಯಾಯಬೆಲೆ ಅಂಗಡಿ ತೆರೆಯಲಾಗಿದೆ. ಇದೀಗ ಎಸ್‌ಸಿ, ಎಸ್‌ಟಿ ಸಮುದಾಯ ದವರಿಗಾಗಿ ಹೊಸದಾಗಿ 3,200 ನ್ಯಾಯ ಬೆಲೆ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ’ ಎಂದರು.
‘ನೇಕಾರರಬಿಲ್ ಮೊತ್ತಮನ್ನಾ: ಸಿ.ಎಂಜೊತೆಚರ್ಚೆ’
‘ವಿದ್ಯುತ್ ಮಗ್ಗಗಳಿಗೆ 10 ಎಚ್‌ಪಿವರೆಗೆ 2023ರ ನವೆಂಬರ್‌ನಿಂದ ಜಾರಿ ಮಾಡಿರುವ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು 2023ರ ಏಪ್ರಿಲ್‍ನಿಂದಲೇ ಅನ್ವಯಗೊಳಿಸ ಬೇಕೆಂಬ ನೇಕಾರರ ಬೇಡಿಕೆಯನ್ನು ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನಿ ಸಲಾಗುವುದು’ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಧಾನಸಭೆಯಲ್ಲಿ ಬಿಜೆಪಿಯ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.‘ನೇಕಾರರ ವಿದ್ಯುತ್ ಬಿಲ್ ಅಂದಾಜು ₹20 ಕೋಟಿಯಷ್ಟು ಬಾಕಿ ಇದೆ. ಅದನ್ನು ಮನ್ನಾ ಮಾಡುವುದ ರಿಂದ ಸರ್ಕಾರಕ್ಕೆ ಹೊರೆಯಾಗುವುದಿಲ್ಲ. ಈ ಕುರಿತು ತೀರ್ಮಾನ ಕೈಗೊಳ್ಳುವವರೆಗೆ ವಿದ್ಯುತ್ ಪೂರೈಕೆ ಕಂಪನಿಗಳು ನೇಕಾರ ಕೈಮಗ್ಗಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ನಿರ್ದೇಶನ ನೀಡ ಬೇಕು’ ಎಂದು ಜೊಲ್ಲೆ ಆಗ್ರಹಿಸಿದರು. ಬಿಜೆಪಿಯ ಸಿದ್ದು ಸವದಿ, ಬಿ.ವೈ. ವಿಜಯೇಂದ್ರ, ಪ್ರಭು ಚವ್ಹಾಣ್ ದನಿಗೂಡಿಸಿದರು.
‘ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹತ್ತು ಎಚ್‌ಪಿ ವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. 2023ರ ನವೆಂಬರ್‌ನಿಂದ ಈ ಆದೇಶ ಜಾರಿಗೆ ಬಂದಿದ್ದು, ಅಂದಿನಿಂದ ಅನ್ವಯವಾಗುತ್ತಿದೆ. ನೇಕಾರರ ಬೇಡಿಕೆ ಯಂತೆ ಹತ್ತರಿಂದ 20 ಎಚ್‌ಪಿವರೆಗಿನ ಪ್ರತಿ ಯೂನಿಟ್‍ಗೆ ₹1.25 ರಿಯಾಯಿತಿ ದರದಲ್ಲಿ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಈ ಯೋಜನೆಗಳಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು ₹130 ಕೋಟಿ ವೆಚ್ಚವಾಗುತ್ತಿದೆ’ ಎಂದು ಸಚಿವರು ವಿವರಿಸಿದರು.
‘ಅನೇಕ ನೇಕಾರರು ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರುವವರೆಗೆ ವಿದ್ಯುತ್ ಬಿಲ್ ಪಾವತಿ ಮಾಡಿದ್ದಾರೆ. ಕೆಲವರು ಮಾತ್ರ ಬಾಕಿ ಉಳಿಸಿಕೊಂಡಿ ದ್ದಾರೆ. ಯಾವುದೇ ಯೋಜನೆ ಸರ್ಕಾರದ ಆದೇಶ ಹೊರಬಿದ್ದ ನಂತರ ಅನ್ವಯವಾಗುತ್ತದೆ. ಆದರೂ, ಆದೇಶ ಹೊರಬೀಳುವ ಹಿಂದಿನ ಅವಧಿಗೂ ಅನ್ವಯ ಮಾಡಬೇಕು ಎಂಬ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸಲಿದೆ’ ಎಂದರು.
ಹು–ಧಾಪಾಲಿಕೆವಿಭಜನೆಗೆನಿಯೋಗ
‘ಹುಬ್ಬಳ್ಳಿ– ಧಾರವಾಡ ಮಹಾನಗರಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕ ಧಾರವಾಡ ಮಹಾನಗರಪಾಲಿಕೆಯಾಗಿ ಮಾಡುವ ಪ್ರಸ್ತಾವವನ್ನು ರಾಜ್ಯಪಾಲರಿಗೆ ಸಲ್ಲಿಸಲಾಗಿದೆ. ಆದಷ್ಟು ಬೇಗ ಅನುಮೋದನೆ ನೀಡುವಂತೆ ಮನವಿ ಮಾಡಲು ರಾಜ್ಯಪಾಲರ ಬಳಿ ನಿಯೋಗ ಕೊಂಡೊಯ್ಯಲಾಗುವುದು’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಪ್ರಸಾದ್ ಅಬ್ಬಯ್ಯ ಮಾತನಾಡಿ, ‘ಧಾರವಾಡ ಮಹಾನಗರಪಾಲಿಕೆಯನ್ನಾಗಿ ಜನವರಿ ತಿಂಗಳಲ್ಲಿಯೇ ಅಧಿಸೂಚನೆ ಹೊರಡಿಸಿದ್ದರೂ ಈವರೆಗೂ ಕಾರ್ಯಗತ ಆಗಿಲ್ಲ. ಅನುಮೋದನೆಗಾಗಿ ರಾಜ್ಯಪಾಲರಿಗೆ ಸಲ್ಲಿಸಿದ ಕಡತ ಏಳು ತಿಂಗಳಿನಿಂದ ಅವರ ಬಳಿಯೇ ಇದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಅದಕ್ಕೆ ಉತ್ತರಿಸಿದ ಸಚಿವರು, ‘ಹುಬ್ಬಳ್ಳಿ– ಧಾರವಾಡ ಮಹಾನಗರಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕ ಧಾರವಾಡ ಮಹಾನಗರಪಾಲಿಕೆ ರಚಿಸಲು ಮತ್ತು ಉಳಿದ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರಪಾಲಿಕೆ ಎಂದು ಮುಂದುವರಿಸಲು ಉದ್ದೇಶಿಸಿ, ಬಾಧಿತರಿಂದ ಆಕ್ಷೇಪಣೆ, ಸಲಹೆಗಳನ್ನು ಆಹ್ವಾನಿಸಿ 2025ರ ಜ. 21ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಆಕ್ಷೇಪಣೆ, ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶನಾಲಯದಿಂದ ಧಾರವಾಡ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದ್ದು, ಆ ವರದಿ ಸಹಿತ ರಾಜ್ಯಪಾಲರ ಅನುಮೋದನೆ ಸಲ್ಲಿಸಲಾಗಿದೆ’ ಎಂದರು.
ಮಿಲ್ಲಿಂಗ್ (ಚಿಕ್ಕ ಚಿಕ್ಕ ತುಂಡು) ಕೊಬ್ಬರಿಯ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ ₹445 ಹೆಚ್ಚಿಸಿ ₹12,027ಕ್ಕೆ ನಿಗದಿ ಪಡಿಸಲಾಗಿದೆ. ಉಂಡೆ ಕೊಬ್ಬರಿಯ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ ₹400 ಹೆಚ್ಚಿಸಿ ₹12,500ಕ್ಕೆ ನಿಗದಿ ಮಾಡಲಾಗಿದೆ.
ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭ ಖಚಿತಪಡಿಸಲು ಮತ್ತು ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಉತ್ಪಾದನೆ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸಿನ ಮೇರೆಗೆ ಕೊಬ್ಬರಿಯ ‘ನ್ಯಾಯಯುತ ಮತ್ತು ಸರಾಸರಿ ಗುಣಮಟ್ಟ’ಕ್ಕೆ ಎಂಎಸ್‌ಪಿ ನಿಗದಿಪಡಿಸಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೇಡ್) ಹಾಗೂ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟವು (ಎನ್‌ಸಿಸಿಎಫ್) ಕೇಂದ್ರ ನೋಡಲ್ ಏಜೆನ್ಸಿಗಳಾಗಿ ಕಾರ್ಯನಿರ್ವಹಿಸುವುದನ್ನು ಮುಂದು ವರಿಸುತ್ತವೆ ಎಂದು ವೈಷ್ಣವ್ ಹೇಳಿದರು.
2014ರಿಂದ ಕೇಂದ್ರ ಸರ್ಕಾರವು ಮಿಲ್ಲಿಂಗ್ ಕೊಬ್ಬರಿಯ ಎಂಎಸ್‌ಪಿಯನ್ನು ಗಣನೀಯವಾಗಿ ಹೆಚ್ಚಿಸಿದೆ. 2014ರ ಮಾರುಕಟ್ಟೆ ಋತುವಿನಲ್ಲಿ ಕ್ವಿಂಟಲ್‌ಗೆ ಎಂಎಸ್‌ಪಿ ₹5,250 ಇತ್ತು. ದಶಕದಲ್ಲಿ ಬೆಂಬಲ ಬೆಲೆ ಶೇ 129ರಷ್ಟು ಜಾಸ್ತಿ ಆಗಿದೆ. ಉಂಡೆ ಕೊಬ್ಬರಿಯ ಬೆಲೆಯು ಕ್ವಿಂಟಲ್‌ಗೆ ₹5,500ರಿಂದ ₹12,500ಕ್ಕೆ ಏರಿಕೆಯಾಗಿದ್ದು, ಶೇ 127ರಷ್ಟು ಹೆಚ್ಚಳ ವಾಗಿದೆ ಎಂದು ಮಾಹಿತಿ ನೀಡಿದರು.
ಬೆಳೆಗಾರರಿಗೆ ಲಾಭದಾಯಕ ಬೆಲೆ ಒದಗಿಸುವ ಸಲುವಾಗಿ ಸರ್ಕಾರವು 2018-19ರ ಬಜೆಟ್‌ನಲ್ಲಿ, ಎಲ್ಲ ಬೆಳೆಗಳ ಎಂಎಸ್‌ಪಿಯನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿ ಸಲಾಗುವುದು ಎಂದು ಘೋಷಿಸಿತ್ತು ಎಂದು ಅವರು ನೆನಪಿಸಿದರು.
ದೇಶದಲ್ಲಿ ಕೊಬ್ಬರಿ ಮಾರುಕಟ್ಟೆ ಋತುವು ಸಾಮಾನ್ಯವಾಗಿ ಜನವರಿ ಯಿಂದ ಏಪ್ರಿಲ್‌ವರೆಗೆ ಇರುತ್ತದೆ. ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಅಧಿಕ ಪ್ರಮಾಣದಲ್ಲಿ ಕೊಬ್ಬರಿ ಉತ್ಪಾದನೆ ಆಗುತ್ತದೆ.
‘ತನ್ನ ಪ್ರಾಯೋಜಕತ್ವದ ರೈತ ಉತ್ಪಾದಕ ಸಂಸ್ಥೆಗಳ (ಎಫ್‌ಪಿಒ) ಕಾರ್ಯಕ್ರಮವನ್ನು ಮತ್ತೆ ಐದು ವರ್ಷ ಕೇಂದ್ರ ಸರ್ಕಾರ ವಿಸ್ತರಿಸಲಿದೆ’ ಎಂದು ಕೇಂದ್ರ ಕೃಷಿ ಸಚಿವಾಲಯದ ಕಾರ್ಯದರ್ಶಿ ದೇವೇಶ್ ಚತುರ್ವೇದಿ ಹೇಳಿದ್ದಾರೆ.
ಸರ್ಕಾರದ ನಿಯಮಗಳ ಪಾಲನೆ ಮತ್ತು ಹಣಕಾಸಿನ ಅಡೆತಡೆಗಳನ್ನು ಪರಿಹರಿಸಲು 2026-31ರವರೆಗೆ ಈ ವಿಸ್ತರಣೆ ಮಾಡಲಾಗುತ್ತಿದೆ ಎಂದು ಶುಕ್ರವಾರ ಹೇಳಿದ್ದಾರೆ.
ದೇಶದಲ್ಲಿ 10 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ರಚನೆಗೆ ಕೇಂದ್ರ ಸರ್ಕಾರವು 2020ರ ಫೆಬ್ರುವರಿಯಲ್ಲಿ ಚಾಲನೆ ನೀಡಿತ್ತು. ಈಗಾಗಲೇ 10 ಸಾವಿರ ಎಫ್‌ಪಿಒ ನೋಂದಣಿ ಆಗಿದ್ದು, ಈ ಪೈಕಿ ಹಲವು ಎಫ್‌ಪಿಒ ಕಳೆದ ಎರಡು ವರ್ಷದಲ್ಲಿ ರಚನೆ ಆಗಿವೆ. ಹೀಗಾಗಿ, ಈ ಸಂಘಗಳ ಸಶಕ್ತಗೊಳಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ರೈತರಿಗೆ ಹೆಚ್ಚಿನ ಪ್ರತಿಫಲ ನೀಡಲು ಸಾಧ್ಯವಾಗುವ ರೀತಿಯಲ್ಲಿ ಎಫ್‌ಪಿಒ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಂಪನಿ ಕಾಯ್ದೆ ಅಡಿಯಲ್ಲಿನ ಮಾನದಂಡಗಳನ್ನು ಪಾಲಿಸುವುದೇ ಎಫ್‌ಪಿಒಗೆ ದೊಡ್ಡ ಸವಾಲಾಗಿದೆ. 3ರಿಂದ 5 ವರ್ಷದವರೆಗೆ ದಂಡದಿಂದ ವಿನಾಯಿತಿ ನೀಡುವಂತೆ ಸಂಸದೀಯ ವ್ಯವಹಾರ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
2024–25ರ ಆರ್ಥಿಕ ವರ್ಷದಲ್ಲಿ ಎಫ್‌ಪಿಒ ವಾರ್ಷಿಕ ವಹಿವಾಟು ₹9 ಸಾವಿರ ಕೋಟಿ ಆಗಿದೆ ಎಂದ ಅವರು, ಒಟ್ಟು ವ್ಯವಹಾರ ₹10 ಸಾವಿರ ಕೋಟಿ ದಾಟುವ ಅಂದಾಜಿದೆ. ದೇಶದ 52 ಲಕ್ಷ ರೈತರಿಗೆ ಎಫ್‌ಪಿಒದಿಂದ ಅನುಕೂಲವಾಗಿದೆ ಎಂದು ಹೇಳಿದ್ದಾರೆ.
ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಪ್ರತ್ಯೇಕವಾಗಿ ನೋಂದಾಯಿ ಸಲಾದ 40 ಸಾವಿರದಿಂದ 50 ಸಾವಿರ ಎಫ್‌ಪಿಒಗಳನ್ನು ಸೇರಿಸಿದರೆ, ಒಟ್ಟು ಎಫ್‌ಪಿಒಗಳ ಸಂಖ್ಯೆಯು ಇನ್ನಷ್ಟು ಹೆಚ್ಚಳವಾಗುತ್ತದೆ.
ಪ್ರಸ್ತುತ, ದೊಡ್ಡ ಗಾತ್ರದ ವಹಿವಾಟು ನಡೆಸಲು ಎಫ್‌ಪಿಒ ಮಿತಿ ₹30 ಲಕ್ಷದಷ್ಟಿದ್ದು, ಇದು ಸಾಕಾಗುವುದಿಲ್ಲ. ಬೆಳೆ ಖರೀದಿ ವೇಳೆ ಅಥವಾ ರೈತರಿಗೆ ಮುಂಗಡ ಪಾವತಿ ಮಾಡುವಾಗ ಇದು ಕನಿಷ್ಠ ₹50 ಲಕ್ಷದಿಂದ ₹1 ಕೋಟಿ ಆಗಿರಬೇಕು ಎಂದು ಹೇಳಿದ್ದಾರೆ.
ಸರ್ಕಾರವು ಎಫ್‌ಪಿಒಗಳಿಗೆ ಸಾಲದ ಗ್ಯಾರಂಟಿ ಅಥವಾ ಹಣಕಾಸಿನ ನೆರವು ಸೌಲಭ್ಯಗಳನ್ನು ವಿಸ್ತರಿಸಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.
ಏನಿದುಎಫ್ಪಿಒ: ಸಾಮೂಹಿಕ ಕೃಷಿಯನ್ನು ಬೆಂಬಲಿಸುವುದು ಮತ್ತು ಉತ್ತೇಜಿಸುವುದು ಎಫ್‌ಪಿಒ ರಚನೆಯ ಹಿಂದಿನ ಉದ್ದೇಶ. ಈ ಸಂಸ್ಥೆಗಳು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತಂತ್ರಜ್ಞಾನ, ಸಾಲ, ಮಾರುಕಟ್ಟೆಗಳು ಮತ್ತು ಕೃಷಿಗೆ ಸಂಬಂಧಿತ ವಿಷಯಗಳ ಬಗ್ಗೆ ಮಾಹಿತಿಯನ್ನು ಒದಗಿಸುವ ಮೂಲಕ ತಮ್ಮ ಆದಾಯವನ್ನು ಸುಧಾರಿಸಲು ಸಹಾಯ ಮಾಡುತ್ತವೆ. ರೈತ ಉತ್ಪಾದಕ ಸಂಸ್ಥೆಗಳ ಮೇಳಗಳು ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಲು, ಹೊಸ ತಂತ್ರಜ್ಞಾನಗಳನ್ನು ಅಳವಡಿಸಲು, ಪರಸ್ಪರ ಅನುಭವಗ ಳನ್ನು ಹಂಚಿಕೊಳ್ಳಲು ವೇದಿಕೆಗಳಾಗಿವೆ.
ಈ ಪಾಲುದಾರಿಕೆಯ ಭಾಗವಾಗಿ ಅಂಚೆ ಇಲಾಖೆಯ ಆಯ್ದ ನೌಕರರು ಮತ್ತು ಏಜೆಂಟ್‌ಗಳಿಗೆ ತರಬೇತಿ ನೀಡಿ, ಅಧಿಕೃತ ಮ್ಯೂಚುವಲ್ ಫಂಡ್ ವಿತರಕರಾಗಿ ನೇಮಕ ಮಾಡಲಾಗುತ್ತದೆ.
ಅಂಚೆ ಇಲಾಖೆಯ ಬೃಹತ್ ಜಾಲವನ್ನು ಬಳಸಿಕೊಂಡು ಪ್ರಮುಖವಾಗಿ ಗ್ರಾಮೀಣ ಮತ್ತು ಅರೆನಗರ ಪ್ರದೇಶದಲ್ಲಿನ ಜನರು ಆರ್ಥಿಕ ಪಾಲ್ಗೊಳ್ಳುವಿ ಕೆಯಲ್ಲಿ ಹೆಚ್ಚಿಸುವ ಉದ್ದೇಶವನ್ನು ಈ ಪಾಲುದಾರಿಕೆ ಹೊಂದಿದೆ. ದೇಶದ ಅತಿದೊಡ್ಡ ಆನ್‌ಲೈನ್ ಮ್ಯೂಚುವಲ್ ಫಂಡ್ ವಿತರಣೆಯ ವ್ಯವಸ್ಥೆಯಾದ ಮುಂಬೈ ಷೇರು ವಿನಿಮಯ ಕೇಂದ್ರದ ಸ್ಟಾರ್ ಎಂಎಫ್ ವೇದಿಕೆಯನ್ನು ಬಳಸಿಕೊಂಡು ಈ ಸೇವೆ ನೀಡಲಿದೆ ಎಂದು ಬಿಎಸ್‌ಇ ತಿಳಿಸಿದೆ.
ದೇಶದಲ್ಲಿ ವಿನಿಮಯ ಆಧಾರಿತ ವಹಿವಾಟುಗಳಲ್ಲಿ ಈ ವೇದಿಕೆಯು ಶೇ 85ಕ್ಕೂ ಹೆಚ್ಚು ಖಾತೆಗಳನ್ನು ನಿರ್ವಹಣೆ ಮಾಡುತ್ತದೆ. ಪ್ರತಿ ತಿಂಗಳು 7 ಕೋಟಿಗೂ ಹೆಚ್ಚು ವಹಿವಾಟು ನಡೆಸುತ್ತದೆ ಎಂದು ತಿಳಿಸಿದೆ.
‘ಈ ಪಾಲುದಾರಿಕೆಯಿಂದ ಗ್ರಾಹಕರಿಗೆ ಆಧುನಿಕ ಹೂಡಿಕೆಯ ಆಯ್ಕೆಯನ್ನು ಅಂಚೆ ಇಲಾಖೆ ಒದಗಿಸಲಿದೆ. ಟಯರ್–2 ಮತ್ತು ಟಯರ್–3 ನಗರಗಳಲ್ಲಿ ಮ್ಯೂಚುವಲ್ ಫಂಡ್ ಉದ್ಯಮವು ವೇಗ ಪಡೆದುಕೊಳ್ಳ ಲಿದ್ದು, ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸುವ ನಿರೀಕ್ಷೆ ಇದೆ’ ಎಂದು ಅಂಚೆ ಇಲಾಖೆಯ ಪ್ರಧಾನ ವ್ಯವಸ್ಥಾಪಕ ನಿರ್ದೇಶಕಿ (ಸಿಸಿಎಸ್ ಮತ್ತು ಆರ್‌ಬಿ) ಮನೀಷಾ ಬನ್ಸಾಲ್ ಬಾದಲ್ ಹೇಳಿದ್ದಾರೆ.
ಸಂದರ್ಭ: ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳದ ದೇಶಗಳಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಮೆಕ್ಸಿಕೊ ಸುಂಕ ಹೆಚ್ಚಳ ಮಾಡಿರುವುದು, ಭಾರತದ ಎಲೆಕ್ಟ್ರಾನಿಕ್ಸ್, ಲೋಹ, ವಾಹನಗಳ ಬಿಡಿಭಾಗಗಳು, ರಾಸಾಯನಿಕ ರಫ್ತಿನ ಮೇಲೆ ಭಾರಿ ಹೊಡೆತ ಬೀಳಲಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
2026ರ ಜನವರಿ 1ರಿಂದ ಪರಿಷ್ಕೃತ ಸುಂಕ ಜಾರಿಗೆ ಬರಲಿದೆ. ಕೆಲವು ಸರಕುಗಳಿಗೆ ಕನಿಷ್ಠ ಶೇ 5ರಿಂದ ಗರಿಷ್ಠ ಶೇ 50ರವರೆಗೆ ಸುಂಕ ಹೆಚ್ಚಿಸಲಾಗಿದೆ.
ಭಾರತದಿಂದ ಮೆಕ್ಸಿಕೊಕ್ಕೆ ರಫ್ತಾಗುವ ಸರಕುಗಳಲ್ಲಿ ವಾಹನಗಳು ಮತ್ತು ವಾಹನಗಳ ಬಿಡಿಭಾಗಗಳ ಪಾಲು ಗರಿಷ್ಠ ಮಟ್ಟದಲ್ಲಿದೆ. ಆಮದು ಸುಂಕ ಹೆಚ್ಚಳವು ಈ ಕ್ಷೇತ್ರದ ಮೇಲೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಲಿದೆ ಎಂದು ಜಾಗತಿಕ ವ್ಯಾಪಾರ ಸಂಶೋಧನಾ ಉಪಕ್ರಮ (ಜಿಟಿಆರ್‌ಐ) ಹೇಳಿದೆ.
ಭಾರತದಿಂದ ಆಮದು ಮಾಡಿ ಕೊಳ್ಳುವ ಪ್ರಯಾಣಿಕ ವಾಹನಗಳಿಗೆ ಮೆಕ್ಸಿಕೊ ಸದ್ಯ ಶೇ 20ರಷ್ಟು ಸುಂಕ ವಿಧಿಸುತ್ತಿದೆ. 2026ರ ಜನವರಿಯಿಂದ ಇದು ಶೇ 35ಕ್ಕೆ ಏರಿಕೆಯಾಗಲಿದೆ. ಕಳೆದ ಹಣಕಾಸು ವರ್ಷದಲ್ಲಿ ಭಾರತವು 938.35 ದಶಲಕ್ಷ ಡಾಲರ್ ಮೊತ್ತದ (₹8,500 ಕೋಟಿ ) ವಾಹನಗಳನ್ನು ಮತ್ತು 507.26 ದಶಲಕ್ಷ ಡಾಲರ್ (₹4,595 ಕೋಟಿ) ಮೊತ್ತದ ವಾಹನಗಳ ಬಿಡಿಭಾಗಗಳನ್ನು ಮೆಕ್ಸಿಕೊಕ್ಕೆ ರಫ್ತು ಮಾಡಿತ್ತು.
ಭಾರತದ ಜವಳಿ, ಪ್ಲಾಸ್ಟಿಕ್, ಸಾವಯವ ರಾಸಾಯನಿಕಗಳು, ಎಲೆಕ್ಟ್ರಾನಿಕ್ಸ್, ಔಷಧ, ಎಲೆಕ್ಟ್ರಿಕ್ ವಸ್ತುಗಳ ರಫ್ತಿನ ಮೇಲೆ ಮೆಕ್ಸಿಕೊದ ಆಮದು ಸುಂಕ ಹೆಚ್ಚಳವು ಪರಿಣಾಮ ಬೀರಲಿದೆ ಎಂದು ಭಾರತೀಯ ರಫ್ತುದಾರರ ಒಕ್ಕೂಟದ (ಎಫ್‌ಐಇಒ) ಪ್ರಧಾನ ನಿರ್ದೇಶಕ ಅಜಯ್ ಶಾಹಿ ಅಭಿಪ್ರಾಯಪಟ್ಟಿದ್ದಾರೆ.
ಭಾರತವು ಕಳೆದ ಹಣಕಾಸು ವರ್ಷದಲ್ಲಿ ಮೆಕ್ಸಿಕೊಕ್ಕೆ 284.53 ದಶಲಕ್ಷ ಡಾಲರ್ ಮೊತ್ತದ (₹2,577 ಕೋಟಿ) ಸ್ಮಾರ್ಟ್‌ಫೋನ್‌ಗಳನ್ನು ರಫ್ತು ಮಾಡಿತ್ತು. ಜನವರಿಯಿಂದ ಸ್ಮಾರ್ಟ್‌ಫೋನ್ ಆಮದು ಸುಂಕವು ಶೇ 35ಕ್ಕೆ ಏರಿಕೆಯಾಗಲಿದೆ. ಇದು ಭಾರತದ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿಗಳಿಗೆ ಪೆಟ್ಟು ನೀಡಲಿದೆ. ಭಾರತದಿಂದ ಕೈಗಾರಿಕಾ ಯಂತ್ರೋಪಕರಣಗಳನ್ನು ಮೆಕ್ಸಿಕೊ ಆಮದು ಮಾಡಿಕೊಳ್ಳುತ್ತಿದ್ದು, ಈ ಉದ್ಯಮದ ಮೇಲೂ ಶೇ 35ರಷ್ಟು ಸುಂಕ ಹೆಚ್ಚಳವು ಬರೆ ಎಳೆಯಲಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
ಚಿಲ್ಲರೆಹಣದುಬ್ಬರಹೆಚ್ಚಳ
ಸಂದರ್ಭ: ಆಹಾರಪದಾರ್ಥಗಳಬೆಲೆಯಲ್ಲಿನಹೆಚ್ಚಳದಿಂದಚಿಲ್ಲರೆಹಣದುಬ್ಬರವುನವೆಂಬರ್ ತಿಂಗಳಿನಲ್ಲಿಶೇ 0.71ಕ್ಕೆಏರಿಕೆಯಾಗಿದೆಎಂದುರಾಷ್ಟ್ರೀಯಸಾಂಖ್ಯಿಕಕಚೇರಿ (ಎನ್ಎಸ್ಒ) ತಿಳಿಸಿದೆ.
ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ 0.25ಕ್ಕೆ ಇಳಿಕೆಯಾಗಿತ್ತು. ಜಿಎಸ್‌ಟಿ ದರ ಪರಿಷ್ಕರಣೆಯು ಇಳಿಕೆಗೆ ನೆರವಾಗಿತ್ತು. ಹಣದುಬ್ಬರವು ಸತತ ಎರಡನೇ ತಿಂಗಳೂ ಶೇ 1ರೊಳಗೆ ಇದೆ.
ಆಹಾರ ಪದಾರ್ಥಗಳ ಹಣದುಬ್ಬರವು ನವೆಂಬರ್‌ನಲ್ಲಿ ಶೇ 3.91ರಷ್ಟಿದೆ. ತರಕಾರಿಗಳು, ಮೊಟ್ಟೆ, ಮಾಂಸ ಮತ್ತು ಮೀನು, ಮಸಾಲೆ ಪದಾರ್ಥಗಳು, ಇಂಧನ ಬೆಲೆಯಲ್ಲಿನ ಹೆಚ್ಚಳವೇ ಹಣದುಬ್ಬರ ಏರಿಕೆಗೆ ಕಾರಣ ಎಂದು ತಿಳಿಸಿದೆ.
ನಿವೃತ್ತಿಹಿಂಪಡೆದವಿನೇಶ್: ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿಪದಕಗೆಲ್ಲುವಗುರಿ
2024ರ ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆ.ಜಿ. ವಿಭಾಗದ ಸ್ಪರ್ಧೆಗೆ ಮೊದಲು ನಿಗದಿಗಿಂತ 100 ಗ್ರಾಂ ಹೆಚ್ಚುವರಿ ತೂಕ ಇದ್ದ ಕಾರಣ ಅವರನ್ನು ಚಿನ್ನದ ಪದಕದ ಸ್ಪರ್ಧೆಯ ವೇಳೆ ಅನರ್ಹಗೊಳಿಸಲಾ ಗಿತ್ತು. 31 ವರ್ಷ ವಯಸ್ಸಿನ ವಿನೇಶ್ ತೀವ್ರ ನಿರಾಸೆಗೆ ಒಳಗಾಗಿ, ಕೆಲವೇ ದಿನಗಳ ನಂತರ ನಿವೃತ್ತಿ ಪ್ರಕಟಿಸಿದ್ದರು.
ತಮಗೆ ಜಂಟಿಯಾಗಿ ಬೆಳ್ಳಿ ಪದಕ ನೀಡುವಂತೆ ವಿನೇಶ್ ಅವರು ಕ್ರೀಡಾ ನ್ಯಾಯಮಂಡಳಿಗೆ (ಸಿಎಎಸ್) ಮೊರೆಹೋಗಿದ್ದರು. ಆದರೆ ಸಿಎಎಸ್ ಇದಕ್ಕೆ ಒಪ್ಪಿರಲಿಲ್ಲ. ಇದರ ಬೆನ್ನಲ್ಲೇ ವಿನೇಶ್ ಅವರು ಕುಸ್ತಿಗೆ ವಿದಾಯ ಹೇಳಿದ್ದರು. ರಾಜಕೀಯಕ್ಕೆ ಸೇರ್ಪಡೆ ಗೊಂಡ ಅವರು ಹರಿಯಾಣದ ಜುಲಾನಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕಿಯಾಗಿದ್ದರು.
‘ನಿಮ್ಮ ಪಾಲಿಗೆ ಪ್ಯಾರಿಸ್ ಕೂಟ ಕೊನೆಯೇ ಎಂದು ಜನ ಕೇಳುತ್ತಲೇ ಬಂದಿದ್ದರು. ನನ್ನ ಬಳಿ ಉತ್ತರವಿರಲಿಲ್ಲ. ನಾನು ಒತ್ತಡ, ನಿರೀಕ್ಷೆಯ ಭಾರ ಮತ್ತು ನನ್ನದೇ ಮಹತ್ವಾಕಾಂಕ್ಷೆಯ ಪರಿಣಾಮ ಮ್ಯಾಟ್ ತೊರೆಯಬೇಕಾಯಿತು. ವರ್ಷಗಳಲ್ಲಿ ಮೊದಲ ಬಾರಿ ಈಗ ನಿರಾಳಭಾವ ಮೂಡಿದೆ’ ಎಂದು ವಿನೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಸೋಮವೀರ್ ರಾಠಿ ಅವರನ್ನು ವಿವಾಹವಾಗಿರುವ ವಿನೇಶ್ ಜುಲೈನಲ್ಲಿ ಗಂಡುಮಗುವಿಗೆ ತಾಯಿಯಾಗಿದ್ದರು.
‘ಹೊಸ ಸ್ಪೂರ್ತಿಯೊಡನೆ ಲಾಸ್ ಏಂಜಲೀಸ್ 28 ಕ್ರೀಡೆಗಳಿಗೆ ಹೊಸದಾಗಿ ಪಯಣ ಆರಂಭಿಸುವುದಾಗಿ ವಿನೇಶ್ ತಿಳಿಸಿದ್ದಾರೆ.
‘ಅಂಜಿಕೆಯಿಲ್ಲದ ಹೃದಯ, ಬತ್ತದ ಸ್ಫೂರ್ತಿಯೊಡನೆ ಲಾಸ್ ಏಂಜಲೀಸ್ 2028ರತ್ತ ಹೆಜ್ಜೆಯಿಡುತ್ತಿದ್ದೇನೆ. ಈ ಬಾರಿ ನಾನೊಬ್ಬಳೇ ಇಲ್ಲ, ನನ್ನ ಮಗನೂ ನನ್ನ ಜೊತೆಯಲ್ಲಿದ್ದಾನೆ. ಲಾಸ್ ಏಂಜಲೀಸ್ ಹಾದಿಯಲ್ಲಿ ನನ್ನ ಅತಿ ದೊಡ್ಡ ಪ್ರೇರಣೆ ಮತ್ತು ನನ್ನ ಪುಟ್ಟ ಚಿಯರ್‌ಲೀಡರ್ ಇದ್ದಾನೆ’ ಎಂದು ಹೇಳಿದ್ದಾರೆ.
ಒಲಿಂಪಿಕ್ ಸ್ಪರ್ಧೆಯೊಂದರ ಚಿನ್ನದ ಪದಕದ ಸ್ಪರ್ಧೆಗೆ ಅರ್ಹತೆ ಪಡೆದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಶ್ರೇಯ ಈಗಾಗಲೇ ಅವರದಾಗಿದೆ. ಮೂರು ಬಾರಿಯ ಒಲಿಂಪಿಯನ್ ಆಗಿರುವ ವಿನೇಶ್, ಏಷ್ಯನ್ ಕ್ರೀಡೆ ಮತ್ತು ಕಾಮನ್ವೆಲ್ತ್ ಕ್ರೀಡೆಗಳಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
‘ಗೋಟ್ (GOAT – Greatest Of All Time) ಟೂರ್ ಆಫ್ ಇಂಡಿಯಾ 2025’ ಕಾರ್ಯಕ್ರಮದ ಅಂಗವಾಗಿ ಮೆಸ್ಸಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಪ್ರವಾಸದಲ್ಲಿ ಅವರು ನಾಲ್ಕು ನಗರಗಳಿಗೆ (ಕೋಲ್ಕತ್ತ, ಅಹಮದಾಬಾದ್, ಮುಂಬೈ ಮತ್ತು ನವದೆಹಲಿ) ಭೇಟಿ ನೀಡುವರು. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಭೇಟಿ ಯೊಂದಿಗೆ 38 ವರ್ಷದ ಸೂಪರ್ ಸ್ಟಾರ್ ಆಟಗಾರನ ಭಾರತ ಪ್ರವಾಸ ಮುಕ್ತಾಯವಾಗಲಿದೆ.
ಕೋಲ್ಕತ್ತದಲ್ಲಿ ನಿರ್ಮಿಸಲಾಗಿರುವ ತಮ್ಮ 70 ಅಡಿ ಎತ್ತರದ ಪ್ರತಿಮೆಯನ್ನು ಶನಿವಾರ ಬೆಳಿಗ್ಗೆ ಮೆಸ್ಸಿ ಅವರು ವರ್ಚುವಲ್ ಆಗಿ ಅನಾವರಣ ಮಾಡುವರು. ಭದ್ರತಾ ಕಾರಣದಿಂದಾಗಿ ಅವರು ಖುದ್ದಾಗಿ ಹಾಜರಾಗುತ್ತಿಲ್ಲ.
ಮೆಸ್ಸಿ ಅವರು ಕೋಲ್ಕತ್ತದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ಅವರು ಪ್ರದರ್ಶನ ಪಂದ್ಯವನ್ನು ಆಡಲಿದ್ದಾರೆ.
‘ಆರ್‌ಬಿಐ ನೀಡಿರುವ ಮಾಹಿತಿ ಪ್ರಕಾರ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ರೈಟ್‌ಆಫ್ ಮಾಡಿರುವ ಮೊತ್ತವು ಕಳೆದ ಐದು ಹಣಕಾಸು ವರ್ಷಗಳಲ್ಲಿ ಹಾಗೂ ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ 30ರವರೆಗೆ ₹6.15 ಲಕ್ಷ ಕೋಟಿಯಷ್ಟಾಗಿದೆ’ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಕೇಂದ್ರ ಸರ್ಕಾರವು 2022–23ರ ನಂತರದಲ್ಲಿ ಬಂಡವಾಳದ ನೆರವು ಒದಗಿಸಿಲ್ಲ. ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ತಮ್ಮ ಹಣಕಾಸಿನ ಸ್ಥಿತಿಯನ್ನು ಗಮನಾರ್ಹವಾಗಿ ಸುಧಾರಿಸಿಕೊಂಡಿವೆ. ಅವು ಲಾಭದಾಯಕವಾಗಿ ನಡೆಯುತ್ತಿವೆ, ಬಂಡವಾಳದ ಸ್ಥಿತಿಯನ್ನು ಸುಧಾರಿಸಿಕೊಂಡಿವೆ ಎಂದು ಚೌಧರಿ ಹೇಳಿದ್ದಾರೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಈಗ ಬಂಡವಾಳದ ಅಗತ್ಯಗಳಿಗಾಗಿ ಮಾರುಕಟ್ಟೆ ಮೂಲಗಳನ್ನು ನೆಚ್ಚಿಕೊಳ್ಳುತ್ತಿವೆ, ಆಂತರಿಕ ನಿಧಿಯನ್ನು ಬಳಸಿಕೊಳ್ಳುತ್ತಿವೆ. ಅವು 2022ರ ಏಪ್ರಿಲ್ 1ರ ನಂತರದಲ್ಲಿ ಈಕ್ವಿಟಿ ಮತ್ತು ಸಾಲಪತ್ರಗಳ ಮೂಲಕ ಬಂಡವಾಳ ಮಾರುಕಟ್ಟೆ ಗಳಿಂದ ಒಟ್ಟು ₹1.79 ಲಕ್ಷ ಕೋಟಿ ಸಂಗ್ರಹಿಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬ್ಯಾಂಕ್‌ಗಳು ತಮ್ಮ ಆಡಳಿತ ಮಂಡಳಿ ಅನುಮೋದನೆ ನೀಡಿದ ನಿಯಮ ಹಾಗೂ ಆರ್‌ಬಿಐ ಮಾರ್ಗಸೂಚಿಗಳಿಗೆ ಅನುಗುಣವಾಗಿ ರೈಟ್‌ಆಫ್ ತೀರ್ಮಾನ ತೆಗೆದುಕೊಳ್ಳುತ್ತಿವೆ ಎಂದು ಸಚಿವರು ಹೇಳಿದ್ದಾರೆ. ಆದರೆ ರೈಟ್‌ಆಫ್ ಎಂದರೆ ಸಾಲ ಮನ್ನಾ ಅಲ್ಲ, ಸಾಲ ಮನ್ನಾ ಆಗುವುದಿಲ್ಲ, ಸಾಲ ವಸೂಲಿ ಪ್ರಕ್ರಿಯೆ ಮುಂದುವರಿಯುತ್ತದೆ. ಆದರೆ ಬ್ಯಾಂಕ್‌ನ ಲೆಕ್ಕಪತ್ರಗಳಲ್ಲಿ ಎನ್‌ಪಿಎ ಪ್ರಮಾಣ ಕಡಿಮೆಯಾಗಿ ಕಾಣಿಸುತ್ತದೆ.
ರೈಟ್‌ಆಫ್ ಆದ ಸಾಲಗಳ ವಸೂಲಿಯು ನಿರಂತರ ಪ್ರಕ್ರಿಯೆ. ಬ್ಯಾಂಕ್‌ಗಳು ತಮಗೆ ಲಭ್ಯವಿರುವ ವಿವಿಧ ಮಾರ್ಗಗಳ ಮೂಲಕ ವಸೂಲಾತಿ ಪ್ರಕ್ರಿಯೆಯನ್ನು ಮುಂದುವರಿಸುತ್ತವೆ. ‘ಸರ್ಫೇಸಿ ಕಾಯ್ದೆ’ ಅಡಿ ಕ್ರಮ ಜರುಗಿಸುವುದು, ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಎಲ್‌ಟಿ) ಮೊರೆ ಹೋಗುವುದು, ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಕೆಲಸವನ್ನು ಅವು ಮಾಡುತ್ತವೆ ಎಂದು ವಿವರಿಸಿದ್ದಾರೆ.
ವಸೂಲಾಗದ ಸಾಲಗಳಿಗೆ ಹಣ ತೆಗೆದಿರಿಸುವ ಕೆಲಸ ಆಗಿರುತ್ತದೆ. ಹೀಗಾಗಿ ರೈಟ್‌ಆಫ್ ಪ್ರಕ್ರಿಯೆಯ ಕಾರಣದಿಂದಾಗಿ ನಗದು ಹೊರಹರಿಯುವಿಕೆ ಇರುವುದಿಲ್ಲ. ಬ್ಯಾಂಕ್‌ನಲ್ಲಿ ನಗದು ಲಭ್ಯತೆ ಮೇಲೆ ಕೆಟ್ಟ ಪರಿಣಾಮ ಇರುವುದಿಲ್ಲ ಎಂದು ಕೂಡ ಅವರು ಮಾಹಿತಿ ನೀಡಿದ್ದಾರೆ.
ರೈತರಿಗೆ ಉತ್ತಮ ಆದಾಯ ಸಿಗುತ್ತದೆ, ಕಾರ್ಯದರ್ಶಿ, ಸ್ನೇಹ ಕುಂಜ ಸಂಸ್ಥೆ
ಹಲವು ದಶಕಗಳ ಹಿಂದೆ ಸಿಗಡಿ ಮೀನಿನ ಕೃಷಿಗೆ ಬಳಕೆಯಾಗಿ, ಪಾಳುಬಿದ್ದಿದ್ದ 600 ಎಕರೆ ವಿಸ್ತೀರ್ಣದ ಗಜನಿ ಭೂಮಿಯಲ್ಲಿ ಕಾಂಡ್ಲಾವನ ರೂಪುಗೊಂಡಿದೆ.
ಹೊನ್ನಾವರದ ‘ಸ್ನೇಹ ಕುಂಜ’ ಸಂಸ್ಥೆಯು ಗಜನಿ ಭೂಮಿಯ ಒಡೆತನವುಳ್ಳ 250 ರೈತರನ್ನು ಬಳಸಿ ಕಾಂಡ್ಲಾ ಗಿಡಗಳನ್ನು ಬೆಳೆಸುವಂತೆ ಮಾಡಿದೆ. ಹೀಗೆ ಬೆಳೆಸಿದ ಗಿಡಗಳಿಂದ ಸಂಗ್ರಹವಾಗುವ ‘ಕಾರ್ಬನ್ ಕ್ರೆಡಿಟ್’ ಆದಾಯವನ್ನೂ ರೈತರಿಗೆ ನೀಡಲಾಗುತ್ತದೆ.
‘ಹಿಂದೆ ಕಗ್ಗ ತಳಿಯ ಭತ್ತ ಬೆಳೆಯುತ್ತಿದ್ದ ಪ್ರದೇಶದಲ್ಲಿ ಅಘನಾಶಿನಿ ನದಿಯ ಹಿನ್ನೀರು ಬಳಸಿ ಗಜನಿಗಳಲ್ಲಿ ಸಿಗಡಿ ಕೃಷಿ ನಡೆಸಲು ಉದ್ಯಮಿಗಳಿಗೆ ರೈತರು ಜಮೀನು ನೀಡಿದ್ದರು. ಬಿಳಿ ಚುಕ್ಕಿ ರೋಗ ಬಂದು ಸಿಗಡಿ ಕೃಷಿ ನಷ್ಟವಾಗಿತ್ತು. ಹೊಂಡಗಳಲ್ಲಿ ಮುಂದೆ ಕೃಷಿ ಸಾಧ್ಯವಾಗದೆ, ಹಲವು ದಶಕಗಳಿಂದ ಹಾಗೇ ಇದ್ದವು. ಇದೇ ಜಾಗವನ್ನು ಈಗ ಕಾಂಡ್ಲಾ ವನವಾಗಿ ರೂಪಿಸಲಾಗಿದೆ’ ಎಂದು ಸ್ನೇಹಕುಂಜ ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಹೆಗಡೆ ತಿಳಿಸಿದರು.
‘ಕಾಂಡ್ಲಾ ಗಿಡಗಳು ವಾತಾವರಣದಲ್ಲಿನ ಇಂಗಾಲದ ಡೈ ಆಕ್ಸೈಡ್ ಹೀರಿ ವಾತಾವರಣ ಶುದ್ಧಗೊಳಿಸುತ್ತವೆ. ಕಾಂಡ್ಲಾ ವನ ಪ್ರಮಾಣ ಹೆಚ್ಚಿದಷ್ಟು ಪರಿಸರದಲ್ಲಿ ಇಂಗಾಲದ ಪ್ರಮಾಣ ಕಡಿಮೆಯಾಗುತ್ತದೆ. ಈ ಕಾರ್ಯಕ್ಕೆ ಹಿಮಾಲಯ ವೆಲ್‌ನೆಸ್ ಕಂಪನಿ ಮತ್ತು ವ್ಯಾಲ್ಯು ನೆಟ್ವರ್ಕ್ ವೆಂಚರ್ಸ್ ಎಂಬ ಏಜೆನ್ಸಿ ಮೂಲಕ ಪರಿಸರ ರಕ್ಷಣೆಗೆ ಕಾಂಡ್ಲಾ ಕೃಷಿ ಕೈಕೊಳ್ಳಲಾಗಿದೆ’ ಎಂದು ಹೇಳಿದರು.
‘ಪ್ರತಿ ವರ್ಷ 12 ಸಾವಿರ ಮೆಟ್ರಿಕ್ ಟನ್ ಇಂಗಾಲವನ್ನು ನೆಲದಡಿ ಹುದು ಗಿಸಿ ಪರಿಸರ ಶುದ್ಧ ಮಾಡಲು ರೈತರ ಜಮೀನು ಬಳಕೆ ಆಗುತ್ತದೆ. ಇದರಿಂದ ರೈತರಿಗೆ ಕಾರ್ಬನ್ ಕ್ರೆಡಿಟ್ ಹೆಸರಿನಲ್ಲಿ ಪ್ರತಿ ಎಕರೆಗೆ ₹6 ರಿಂದ ₹ 8 ಸಾವಿರ ಆದಾಯ ಸಿಗುತ್ತದೆ’ ಎಂದು ಅವರು ತಿಳಿಸಿದರು.
ರೈತರ 5 ಗುಂಪುರಚನೆ
‘ಕುಮಟಾದ ಧಾರೇಶ್ವರದಿಂದ ಮಾದನಗೇರಿವರೆಗೆ 2020-21ರಿಂದ ರೈತರ ಪಾಳುಬಿದ್ದ ಗಜನಿ ಭೂಮಿಯಲ್ಲಿ ಕಾಂಡ್ಲಾ ಗಿಡ ನೆಡುವ ಯೋಜನೆ ಕೈಗೆತ್ತಿಕೊಂಡಿದ್ದೇವೆ. 250 ರೈತರ ಜೊತೆ ಈ ಬಗ್ಗೆ ಒಪ್ಪಂದ ಮಾಡಿಕೊಂಡು ತಲಾ 50 ಜನರ ರೈತರ 5 ಗುಂಪು ರಚಿಸಲಾಗಿದೆ’ ಎಂದು ಸ್ನೇಹ ಕುಂಜ ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಹೆಗಡೆ ತಿಳಿಸಿದರು.
‘ಕಾರ್ಬನ್ ಕ್ರೆಡಿಟ್ ಆದಾಯ ಎಲ್ಲ ರೈತರ ಬ್ಯಾಂಕ್ ಖಾತೆಗಳಿಗೆ ಸಮನಾಗಿ ಜಮೆ ಆಗುವಂತೆ ವ್ಯವಸ್ಥೆ ರೂಪಿಸಲಾಗಿದೆ. 2026ರ ಮಾರ್ಚ್‌ನಲ್ಲಿ ಮೊದಲ ಹಂತದ ಕಾರ್ಬನ್ ಕ್ರೆಡಿಟ್ ಮೊತ್ತ ರೈತರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ’ ಎಂದರು.
‘ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ಕೆ-ರೇರಾ) ಮತ್ತು ಅದರ ಮೇಲ್ಮನವಿ ಪ್ರಾಧಿಕಾರ ಹೊರಡಿಸಿರುವ ಆದೇಶಗಳನ್ನು ಸಿವಿಲ್ ನ್ಯಾಯಾಲಯ ಗಳಲ್ಲಿ, ಅನುಷ್ಠಾನ ಕೋರಿಕೆ ಅರ್ಜಿ (ಎಕ್ಸಿಕ್ಯೂಷನ್ ಪಿಟಿಷನ್) ಸಲ್ಲಿಸುವ ಮೂಲಕ ಜಾರಿಗೆ ತರಲು ಆಗದು’ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸಿವಿಲ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ‘ಮಂತ್ರಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್’ ಸಲ್ಲಿಸಿದ್ದ ಮೂರು ರಿಟ್ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ರಿಯಲ್ ಎಸ್ಟೇಟ್ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ರೇರಾ ಆದೇಶಗಳು ನಾಗರಿಕ ಸಂಹಿತೆ ಪ್ರಕ್ರಿಯೆಯಲ್ಲಿನ (ಸಿಪಿಸಿ) ‘ಡಿಕ್ರಿ’ ಅರ್ಥದ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂಬ ವಿಶೇಷ ಉಲ್ಲೇಖವನ್ನು ನಮೂದಿಸಿದೆ.
‘ಕಲಂ 40(1)ರ ಅಡಿ ರೇರಾ ವಿಧಿಸುವ ಪರಿಹಾರದ ಮೊತ್ತ ಅಥವಾ ದಂಡವನ್ನು ಬಡ್ಡಿ ಸಹಿತ ವಸೂಲು ಮಾಡಬಹುದು. ಅದನ್ನು ಭೂ ಕಂದಾಯ ಎಂದು ಪರಿಗಣಿಸಬಹುದು ಎಂದು ತಿಳಿಸಲಾಗಿದೆ. ಅಂತೆಯೇ, ಕಲಂ 79ರ ಅಡಿ ರೇರಾದ ಆದೇಶ ಮತ್ತು ದಾವೆಗಳನ್ನು ಪುರಸ್ಕರಿಸಲು ಸಿವಿಲ್ ಕೋರ್ಟ್‌ಗೆ ನಿರ್ಬಂಧವಿದೆ’ ಎಂಬುದನ್ನು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಬಿಲ್ಡರ್‌ಗಳ ಮನವಿ ತಿರಸ್ಕರಿಸಿದ್ದ ಸಿವಿಲ್ ಕೋರ್ಟ್‌ನ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಪೀಠ, ‘ಪ್ರತಿವಾದಿ ರೇರಾ ಕಂದಾಯ ಅಧಿಕಾರಿಗಳ ಮೂಲಕ ಆದೇಶ ಜಾರಿಗೆ ಇತರೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲು ಸ್ವತಂತ್ರವಾಗಿದೆ’ ಎಂದು ಸ್ಪಷ್ಟಪಡಿಸಿದೆ.
ಪ್ರಕರಣವೇನು?: ಮನೆ ಖರೀದಿದಾರರ ಪರ ‘ಕೆ-ರೇರಾ’ 2023ರಲ್ಲಿ ಹಲವು ಆದೇಶಗಳನ್ನು ನೀಡಿತ್ತು. ಈ ಆದೇಶಗಳನ್ನು ಜಾರಿಗೊಳಿಸುವಂತೆ ಕೋರಿ ಮನೆ ಖರೀದಿದಾರರು ಸಿವಿಲ್ ಕೋರ್ಟ್‌ನಲ್ಲಿ ಆದೇಶಗಳ ಅನುಷ್ಠಾನ ಕೋರಿಕೆ ಅರ್ಜಿಗಳನ್ನು (ಎಕ್ಸಿಕ್ಯೂಷನ್ ಪಿಟಿಷನ್) ಸಲ್ಲಿಸಿದ್ದರು.
ಈ ಅರ್ಜಿಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಲ್ಡರ್‌ಗಳು, ‘ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ಮತ್ತು ಅದರ ಮೇಲ್ಮನವಿ ಪ್ರಾಧಿಕಾರ ಹೊರಡಿಸಿರುವ ಆದೇಶಗಳನ್ನು ಸಿವಿಲ್ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗದು. ಸಿವಿಲ್ ಕೋರ್ಟ್‌ಗಳಿಗೆ ಕಲಂ 79ರ ಅಡಿ ಅಂತಹ ಅರ್ಜಿಗಳನ್ನು ಪುರಸ್ಕರಿಸುವ ಅಧಿಕಾರವಿಲ್ಲ. ಕರ್ನಾಟಕ ರೇರಾ ನಿಯಮ 26ರ ಅಡಿ ಹೇಗೆ ಆದೇಶಗಳನ್ನು ಜಾರಿಗೊಳಿಸಬಹುದು ಎಂಬುದು ಈಗಾಗಲೇ ವಿದಿತವಾಗಿದೆ’ ಎಂಬ ವಾದ ಮಂಡಿಸಿದ್ದರು.
ಇದಕ್ಕೆ ಪ್ರತಿಯಾಗಿ ಮನೆ ಖರೀದಿದಾರರು, ‘ರೇರಾ ಆದೇಶಗಳು ಡಿಕ್ರಿ ಇದ್ದಂತೆ. ಹಾಗಾಗಿ, ಎಕ್ಸಿಕ್ಯೂಷನ್ ಅರ್ಜಿಗಳು ಸ್ವೀಕಾರಾರ್ಹ ಮತ್ತು ಸಿವಿಲ್ ಕೋರ್ಟ್‌ಗಳು ಅವುಗಳನ್ನು ಜಾರಿಗೊಳಿಸುವ ಅಧಿಕಾರ ಹೊಂದಿವೆ’ ಎಂದು ಪ್ರತಿವಾದ ಮಂಡಿಸಿದ್ದರು.
ಡಿಕ್ರಿವ್ಯಾಖ್ಯಾನ
ಸಿವಿಲ್ ಪ್ರೊಸೀಜರ್ ಕೋಡ್ (ಸಿಪಿಸಿ) ಕಲಂ 2(2)ರಲ್ಲಿ ಡಿಕ್ರಿ ಎಂದು ವ್ಯಾಖ್ಯಾನಿಸಲು ಮೂರು ಅಗತ್ಯ ಷರತ್ತುಗಳನ್ನು ಪೂರೈಸಬೇಕಾಗುತ್ತದೆ.
lತೀರ್ಪು ಮೂಲ ದಾವೆಯಿಂದ ಬಂದಿರಬೇಕು
lವ್ಯಾಜ್ಯ ದೂರಿನೊಂದಿಗೆ ಆರಂಭವಾಗಿರಬೇಕು ಮತ್ತು ಡಿಕ್ರಿಯೊಂದಿಗೆ ಕೊನೆಯಾಗಬೇಕು
lನ್ಯಾಯಾಲಯ ತೀರ್ಪನ್ನು ಅಂತಿಮಗೊಳಿಸಿರಬೇಕು
lರೇರಾ ಮುಂದಿರುವ ಪ್ರಕ್ರಿಯೆಗಳು ದೂರುಗಳಷ್ಟೇ. ಅವು ಮೂಲ ದಾವೆಗಳಲ್ಲ. ಹಾಗಾಗಿ, ಅವುಗಳನ್ನು ದಾವೆಗಳೆಂದು ಪರಿಗಣಿಸಲಾಗದು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯ ಸೋಮವಾರ ಆಯೋಜಿಸಿದ್ದ ಕೃಷಿ ವಿಜ್ಞಾನ ಕೇಂದ್ರಗಳ (ಕೆವಿಕೆ) ಕೃಷಿ ವಿಜ್ಞಾನಿಗಳಿಗೆ ಸ್ಮಾರ್ಟ್ ಕೃಷಿಯ ಬಗ್ಗೆ ಸಲಹೆ, ಎಐ ತಂತ್ರಜ್ಞಾನ ಆಧಾರಿತ ಬೆಳೆ ವಿಶ್ಲೇಷಣೆ ನಡೆಸುವ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ನಮ್ಮ ಕೆವಿಕೆ ವಿಜ್ಞಾನಿಗಳು ಗ್ರಾಮೀಣ ಭಾಗದ ರೈತರು ಹಾಗೂ ವಿಶ್ವವಿದ್ಯಾಲಯಗಳ ನಡುವೆ ಜ್ಞಾನದ ಸೇತುವೆಗಳಾಗಿ ಕಾರ್ಯನಿರ್ವಹಿಸುತ್ತಿ ದ್ದಾರೆ. ಅದರ ಜೊತೆಗೆ ರೈತರ ಹೊಲ, ಗದ್ದೆಗಳಿಗೆ ಭೇಟಿ ನೀಡಿ ವೈಜ್ಞಾನಿಕ ಸಲಹೆಗಳನ್ನು ನೀಡುತ್ತಿದ್ದಾರೆ. ಆದ್ದರಿಂದ ವಿಜ್ಞಾನಿಗಳಿಗೆ ಹೊಸ–ಹೊಸ ತಂತ್ರಜ್ಞಾನದ ತರಬೇತಿ ಗಳನ್ನು ನೀಡಲಾಗುತ್ತಿದೆ’ ಎಂದು ಹೇಳಿದರು.
‘ವಿಸ್ತರಣಾ ನಿರ್ದೇಶಕ ವೈ.ಎನ್. ಶಿವಲಿಂಗಯ್ಯ ಮಾತನಾಡಿ, ‘ಹೊಸ ತಂತ್ರಜ್ಞಾನಗಳು ರೈತರ ಬದುಕಿಗೆ ಹೊಸ ಭರವಸೆ ನೀಡುತ್ತವೆ. ರೈತರಿಗೆ ತಲುಪುವ ಪ್ರತಿಯೊಂದು ಸಲಹೆಯೂ ಹೆಚ್ಚು ನಿಖರ, ವೈಜ್ಞಾನಿಕ ಮತ್ತು ಫಲಪ್ರದವಾಗಬೇಕು’ ಎಂದು ಹೇಳಿದರು.
ಜಗತ್ತಿನ ಎದುರು ತೋರಿಸಲಿಕ್ಕಾಗಿ ನಡೆಸಿದ ಯತ್ನಗಳು ಬಹುಶಃ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗಮನದಲ್ಲಿ ಇರಿಸಿಕೊಂಡಿದ್ದವು.
ತಮ್ಮ ಸ್ನೇಹಿತ ಯಾರು ಎಂಬುದನ್ನು ತೀರ್ಮಾನಿಸುವ ವಿಚಾರದಲ್ಲಿ ಸ್ವತಂತ್ರವಾಗಿಯೇ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂಬ ಸಂದೇಶವನ್ನು ಟ್ರಂಪ್ ಅವರಿಗೆ ರವಾನಿಸಲು ಭಾರತ ಮತ್ತು ರಷ್ಯಾ ಹೀಗೆ ಮಾಡಿರಬಹುದು. ಉಕ್ರೇನ್ ಜೊತೆಗಿನ ಯುದ್ಧ ಆರಂಭವಾದ ನಂತರದಲ್ಲಿ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡಿರುವುದು ಇದೇ ಮೊದಲು.
ತಮ್ಮನ್ನು ಏಕಾಂಗಿಯಾಗಿಸುವಲ್ಲಿ ಅಮೆರಿಕ ಯಶಸ್ಸು ಕಂಡಿಲ್ಲ ಎಂದು ಪುಟಿನ್ ಹೇಳಿದ್ದಾರೆ. 23ನೇ ಭಾರತ–ರಷ್ಯಾ ವಾರ್ಷಿಕ ಶೃಂಗಸಭೆಯ ವೇದಿಕೆಯನ್ನು ಬಳಸಿಕೊಂಡ ಮೋದಿ ಅವರು, ಟ್ರಂಪ್ ಅವರ ನಿರ್ಬಂಧಗಳು ಭಾರತ ಮತ್ತು ರಷ್ಯಾ ನಡುವಿನ ದಶಕಗಳಷ್ಟು ಹಳೆಯದಾದ ಸ್ನೇಹಕ್ಕೆ ಧಕ್ಕೆ ಉಂಟುಮಾಡಿಲ್ಲ ಎಂಬ ಸಂದೇಶ ರವಾನಿಸಿದರು.
ಎರಡು ದೇಶಗಳ ನಡುವಿನ ವಿಶೇಷವಾದ ಪಾಲುದಾರಿಕೆಯಿಂದ ಸಿಗುವ ಅನುಕೂಲಗಳು ಜಾಗತಿಕ ಮಟ್ಟದಲ್ಲಿ ಸೃಷ್ಟಿಯಾಗುತ್ತಿರುವ ಹೊಸ ಸವಾಲುಗಳನ್ನು ಎದುರಿಸಲು ಇಬ್ಬರಿಗೂ ನೆರವಾಗಬಹುದು ಎಂಬುದನ್ನು ಈ ಶೃಂಗಸಭೆಯು ತೋರಿಸಿದೆ.
ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ತಗ್ಗಿಸಬೇಕು ಎಂದು ಭಾರತದ ಮೇಲೆ ಪಾಶ್ಚಾತ್ಯ ಜಗತ್ತು ಒತ್ತಡ ಹೇರುತ್ತಿದೆ. ಅದರಲ್ಲೂ ಮುಖ್ಯವಾಗಿ ಅಮೆರಿಕವು ತೀವ್ರ ಪ್ರಮಾಣದಲ್ಲಿ ಒತ್ತಡ ತರುತ್ತಿದೆ. ಆದರೆ, ಈ ಒತ್ತಡಗಳ ನಡುವೆಯೂ ಭಾರತಕ್ಕೆ ‘ಇಂಧನ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುತ್ತದೆ’ ಎಂಬ ಭರವಸೆಯನ್ನು ರಷ್ಯಾ ನೀಡಿರುವುದು ಗಮನಾರ್ಹ. ಸ್ವಾಯತ್ತೆಯ ವಿಚಾರದಲ್ಲಿ ನುಡಿದಂತೆ ನಡೆಯುವ ಶಕ್ತಿ ತನಗೆ ಇದೆ ಎಂಬುದನ್ನು ಈ ಮೂಲಕ ಭಾರತ ಕೂಡ ತೋರಿಸಿದೆ. ಕಾಜನ್‌ನಲ್ಲಿ 2024ರ ಅಕ್ಟೋಬರ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗದಲ್ಲಿ ಮಾಡಿಕೊಂಡ ಒಪ್ಪಂದದ ಆಧಾರದಲ್ಲಿ, ಎರಡೂ ದೇಶಗಳ ನಡುವಿನ ವ್ಯಾಪಾರ ವಹಿವಾಟುಗಳಲ್ಲಿ ಸ್ಥಳೀಯ ಕರೆನ್ಸಿಗಳನ್ನು ಬಳಕೆ ಮಾಡಲು ಒಟ್ಟಾಗಿ ಮುಂದಡಿ ಇರಿಸುವುದಕ್ಕೆ ಆದ್ಯತೆ ನೀಡಲಾಗುತ್ತದೆ ಎನ್ನುವುದು ಕೂಡ ವ್ಯಾಪಾರ ಸಂಬಂಧವನ್ನು ಸುಧಾರಿಸಿಕೊಳ್ಳುವ ಬದ್ಧತೆ ಎರಡೂ ದೇಶಗಳಿಗೆ ಇದೆ ಎಂಬುದನ್ನು ತೋರಿಸುತ್ತದೆ.
ರಕ್ಷಣಾ ವಹಿವಾಟುಗಳು ಮಾತ್ರವಲ್ಲದೆ, ಔಷಧ ಮತ್ತು ರಸಗೊಬ್ಬರ ದಂತಹ ವಲಯಗಳಿಗೆ ಆದ್ಯತೆ ನೀಡಿರುವುದು ವ್ಯಾಪಾರ ವಹಿವಾಟಿನ ಮೊತ್ತವನ್ನು ಹೆಚ್ಚಿಸುವ ಬದ್ಧತೆಯನ್ನು ತೋರಿಸುತ್ತಿದೆ. ರಫ್ತು ಪ್ರಮಾಣವನ್ನು ಹೆಚ್ಚು ಮಾಡಿ ರಷ್ಯಾ ಜೊತೆಗಿನ ವ್ಯಾಪಾರ ಕೊರತೆ ಅಂತರವನ್ನು ತಗ್ಗಿಸುವ ಬಯಕೆಯನ್ನು ಭಾರತ ಹೊಂದಿದೆ.
ರಷ್ಯಾದ ಜೊತೆ ಭಾರತ ಹೊಂದಿರುವ ಸ್ನೇಹ ಇಂದು–ನಿನ್ನೆಯದಲ್ಲ. ದಶಕಗಳ ಹಿಂದಿನ ಈ ನಂಟು ‘ಎಸ್–400’ನಂತಹ ಅತ್ಯಂತ ಮಹತ್ವದ ರಕ್ಷಣಾ ಉಪಕರಣದ ಖರೀದಿಯ ಮೂಲಕ ಇನ್ನಷ್ಟು ಗಾಢವಾಗಿದೆ. ಆದರೆ, ಭಾರತವು ರಷ್ಯಾ ಜೊತೆಗಿನ ಐತಿಹಾಸಿಕ ಸಂಬಂಧವನ್ನು ಬಲಪಡಿಸುತ್ತ, ಅಮೆರಿಕ ಹಾಗೂ ಐರೋಪ್ಯ ಒಕ್ಕೂಟದ ಜೊತೆಗಿನ ಸಂಬಂಧವನ್ನೂ ತೂಗಿಸಿಕೊಂಡು ಮುನ್ನಡೆಯಬೇಕಿದೆ.
ರಷ್ಯಾ–ಉಕ್ರೇನ್ ಯುದ್ಧದ ವಿಚಾರದಲ್ಲಿ ತಾನು ಶಾಂತಿಯ ಪರವಾಗಿ ಇದ್ದೇನೆ ಎಂಬುದನ್ನು ಸ್ಪಷ್ಟಪಡಿಸುವ ಮೂಲಕ ಭಾರತವು ಪಾಶ್ಚಿಮಾತ್ಯ ದೇಶಗಳ ಕಳವಳಗಳಿಗೆ ಸ್ಪಂದಿಸುವ ಕೆಲಸ ಮಾಡಿದೆ.
ಭಾರತವು ಈಗ ರಷ್ಯಾ–ಚೀನಾ ಸಂಬಂಧದಲ್ಲಿನ ಆತ್ಮೀಯತೆಯನ್ನು ಸೂಕ್ಷ್ಮವಾಗಿ ಅವಲೋಕಿಸಬೇಕಿದೆ. ಹಾಗೆಯೇ, ಚೀನಾ ಜೊತೆಗಿನ ಸಂಬಂಧದಲ್ಲಿ ಈಚೆಗೆ ಆಗಿರುವ ಸುಧಾರಣೆಗಳನ್ನು ಉಳಿಸಿಕೊಳ್ಳಬೇಕಿದೆ.
ಐದು ವರ್ಷಗಳಿಗೂ ಹೆಚ್ಚಿನ ಅವಧಿಯ ನಂತರ ಭಾರತ ಮತ್ತು ಚೀನಾ, ಉನ್ನತ ಮಟ್ಟದ ಅಧಿಕಾರಿಗಳ ನಡುವಿನ ಮಾತುಕತೆಗಳನ್ನು ಈಚೆಗೆ ಪುನರಾರಂಭಿಸಿವೆ. ಎರಡೂ ದೇಶಗಳು, ಪರಸ್ಪರರಿಗೆ ಇರುವ ಪ್ರಯೋಜನವನ್ನು ಅರಿತು ಸಂಬಂಧ ಸುಧಾರಣೆಗೆ ಮುಂದಾಗಿವೆ.
ಚೀನಾ ಜೊತೆಗಿನ ಸಂಬಂಧದ ವಿಚಾರವಾಗಿ ಎಚ್ಚರಿಕೆಯೊಂದಿಗೆ ಹೆಜ್ಜೆ ಹಾಕುತ್ತ, ಚೀನಾ–ರಷ್ಯಾ ಸಂಬಂಧವನ್ನು ಎಚ್ಚರಿಕೆಯಿಂದ ಗಮನಿಸುತ್ತ ಭಾರತವು– ಚೀನಾ, ಅಮೆರಿಕ ಮತ್ತು ರಷ್ಯಾ ಜೊತೆಗಿನ ತನ್ನ ಸಂಬಂಧವನ್ನು ಸರಿದೂಗಿಸಿಕೊಂಡು ಮುನ್ನಡೆಯಬೇಕಿದೆ.
ಪುಟಿನ್ ಅವರಿಗೆ ರತ್ನಗಂಬಳಿ ಹಾಸಿ ಸ್ವಾಗತ ಕೋರುವ ಮೂಲಕ ಭಾರತವು ತನ್ನ ಹಿತಾಸಕ್ತಿಗಳ ರಕ್ಷಣೆಗಾಗಿ, ಅದರಲ್ಲೂ ಮುಖ್ಯವಾಗಿ ಇಂಧನಕ್ಕೆ ಸಂಬಂಧಿಸಿದ ಹಿತಾಸಕ್ತಿಗಳನ್ನು ಕಾಯ್ದುಕೊಳ್ಳಲು ರಷ್ಯಾ ಜೊತೆ ಬಲವಾದ ಸಂಬಂಧವನ್ನು ಉಳಿಸಿಕೊಳ್ಳುವ ಬದ್ಧತೆಯನ್ನು ತೋರಿಸಿದೆ.
ಐಟಿಆರ್ ನಮೂನೆಗಳ ಸರಳೀಕರಣ ಕ್ಕೆ ಸಂಬಂಧಿಸಿದ ಸಿಬಿಡಿಟಿ ಸಮಿತಿಯು ತೆರಿಗೆ ತಜ್ಞರ ಜೊತೆ, ಸಂಸ್ಥೆಗಳ ಜೊತೆ ಹಾಗೂ ಆದಾಯ ತೆರಿಗೆ ಇಲಾಖೆಯ ಕೆಲವು ಅಧಿಕಾರಿಗಳ ಜೊತೆ ವ್ಯಾಪಕ ಸಮಾಲೋಚನೆ ನಡೆಸುತ್ತಿದೆ ಎಂದು ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಆಗಸ್ಟ್ 21ರಂದು ರಾಷ್ಟ್ರಪತಿ ಯವರ ಅಂಕಿತ ಪಡೆದಿರುವ ಆದಾಯ ತೆರಿಗೆ ಕಾಯ್ದೆ – 2025 ಮುಂದಿನ ಹಣಕಾಸು ವರ್ಷದ ಮೊದಲ ದಿನದಿಂದ (2026ರ ಏಪ್ರಿಲ್ 1) ಜಾರಿಗೆ ಬರಲಿದೆ. ಇದು ಈಗ ಚಾಲ್ತಿಯಲ್ಲಿ ಇರುವ ಆದಾಯ ತೆರಿಗೆ ಕಾಯ್ದೆ – 1961ರ ಬದಲಿಗೆ ಜಾರಿಗೊಳ್ಳುತ್ತದೆ.
ತ್ರೈಮಾಸಿಕ ಟಿಡಿಎಸ್ ನಮೂನೆ, ಐಟಿಆರ್ ನಮೂನೆ ಸೇರಿದಂತೆ ಹೊಸ ಕಾಯ್ದೆಯ ಅಡಿಯಲ್ಲಿ ಅಗತ್ಯವಿರುವ ಎಲ್ಲ ನಮೂನೆಗಳನ್ನು ಸಿದ್ಧಪಡಿಸಲಾ ಗುತ್ತಿದೆ. ಹೊಸ ಕಾಯ್ದೆ ಜಾರಿಗೆ ಬಂದ ನಂತರದ ಮೊದಲ ತೆರಿಗೆ ವರ್ಷವಾದ 2026–27ಕ್ಕೆ ಸಂಬಂಧಿಸಿದ ಐಟಿಆರ್ ನಮೂನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಅವುಗಳನ್ನು 2027–28ಕ್ಕೆ ಮೊದಲು ಅಧಿಸೂಚನೆಯಲ್ಲಿ ಪ್ರಕಟಿಸ ಲಾಗುತ್ತದೆ ಎಂದು ಚೌಧರಿ ಹೇಳಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದ ಆದಾಯಕ್ಕೆ ಸಂಬಂಧಿಸಿದ ಐಟಿಆರ್ ನಮೂನೆಗಳನ್ನು ಸರಳೀಕರಿಸುವ ಕೆಲಸ ನಡೆಯುತ್ತಿದೆ, ಅವುಗಳನ್ನು 1961ರ ಕಾಯ್ದೆಗೆ ಅನುಗುಣವಾಗಿ ಅಧಿಸೂಚನೆ ಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಶೇ 30 ಸ್ಥಾನಮಹಿಳೆಯರಿಗೆನಿಗದಿ: ರಾಜ್ಯವಕೀಲರಪರಿಷತ್ತುಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರ ಪೀಠವು, ‘ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಶೇ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರು ಪ್ರತಿನಿಧಿಸಬೇಕು. ಅದರಲ್ಲಿ ಶೇ 20ರಷ್ಟು ಸ್ಥಾನಗಳನ್ನು ಚುನಾವಣೆ ಮೂಲಕ ಮತ್ತು ಶೇ 10ರಷ್ಟು ಸ್ಥಾನಗಳನ್ನು ನಾಮ ನಿರ್ದೇಶನದ ಮೂಲಕ ಭರ್ತಿ ಮಾಡಬೇಕು’ ಎಂದು ಹೇಳಿತು.
ಚುನಾವಣೆಯಲ್ಲಿ ಸ್ಪರ್ಧಿಸುವ ಮಹಿಳಾ ವಕೀಲರ ಸಂಖ್ಯೆ ಕಡಿಮೆ ಯಿದ್ದರೆ, ಅಂತರ ರಾಜ್ಯಗಳ ವಕೀಲರ ಪರಿಷತ್ತುಗಳಲ್ಲಿ ನಾಮ ನಿರ್ದೇಶನಕ್ಕೆ ಸಂಬಂಧಿಸಿದ ಪ್ರಸ್ತಾಪವನ್ನು ನ್ಯಾಯಾಲಯದ ಮುಂದೆ ಇಡಬೇಕು ಎಂದೂ ನಿರ್ದೇಶಿಸಿದೆ.
ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿರುವ ನಿರ್ದೇಶನದಂತೆ ಆರು ರಾಜ್ಯಗಳ ವಕೀಲರ ಪರಿಷತ್ತುಗಳ ಚುನಾವಣೆಗೆ ಅಧಿಸೂಚನೆ ಹೊರಡಿಸ ಲಾಗಿದೆ ಎಂದು ಭಾರತೀಯ ವಕೀಲರ ಪರಿಷತ್ತಿನ (ಬಿಸಿಐ) ಅಧ್ಯಕ್ಷರೂ ಆಗಿರುವ ಹಿರಿಯ ವಕೀಲ ಮನನ್ ಕುಮಾರ್ ಮಿಶ್ರಾ ಅವರು ಪೀಠಕ್ಕೆ ತಿಳಿಸಿದರು.
‘ಶೇ 15ರಷ್ಟು ಸ್ಥಾನಗಳನ್ನು ಮಹಿಳಾ ಸದಸ್ಯರ ನಾಮ ನಿರ್ದೇಶನದ ಮೂಲಕ ಭರ್ತಿ ಮಾಡಿಕೊಳ್ಳಲು ಅವಕಾಶ ನೀಡಬೇಕು’ ಎಂದು ಅವರು ಪೀಠಕ್ಕೆ ಮನವಿ ಮಾಡಿದರು. ಆದರೆ, ‘ನಾಮ ನಿರ್ದೇಶನವನ್ನು ಶೇ 10ರಷ್ಟು ಸೀಟುಗಳಿಗೆ ಸೀಮಿತಗೊಳಿಸಿದರೆ ಸೂಕ್ತ’ ಎಂದು ಪೀಠ ತಿಳಿಸಿತು.
ಈಗಾಗಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಿರುವ ಪರಿಷತ್ತುಗಳಲ್ಲಿ ಮಹಿಳೆಯರಿಗೆ ಸ್ಥಾನಗಳನ್ನು ಮೀಸಲಿಡುವುದು ವಿವೇಕಯುತ ನಿರ್ಧಾರವಲ್ಲ ಎಂದೂ ಪೀಠ ಹೇಳಿತು.
ಆಂಧ್ರ ಪ್ರದೇಶ, ಪಂಜಾಬ್ ಮತ್ತು ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ಬಿಹಾರ ಹಾಗೂ ಛತ್ತೀಸಗಢ ರಾಜ್ಯಗಳ ವಕೀಲರ ಪರಿಷತ್ತುಗಳ ಚುನಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದಿತು.
‘ಮಹಿಳೆಯರು ಸ್ಪರ್ಧಿಸಲು ಹಿಂಜರಿಯುವಂತಹ ಪರಿಷತ್ತುಗಳಲ್ಲಿ ನಾಮ ನಿರ್ದೇಶನ ಪ್ರಕ್ರಿಯೆ ಕೈಗೊಳ್ಳಲಾಗುವುದು. ಅಂತಿಮವಾಗಿ ಕಾರ್ಯಕಾರಿ ಮಂಡಳಿಯಲ್ಲಿ ಮಹಿಳೆಯರಿಗೆ ಶೇ 30ರಷ್ಟು ಪ್ರಾತಿನಿಧ್ಯ ಸಿಗುವುದನ್ನು ಖಾತರಿಪಡಿಸಬೇಕು’ ಎಂದು ಹೇಳಿತು.
ಎಲ್ಲಾ ರಾಜ್ಯಗಳ ವಕೀಲರ ಪರಿಷತ್ತುಗಳಲ್ಲಿ ಮೂರನೇ ಒಂದರಷ್ಟು ಸ್ಥಾನಗಳನ್ನು ಹಿಳೆಯರಿಗೆ ಮೀಸಲಿಡಬೇಕೆಂದು ಕೋರಿ ವಕೀಲರಾದ ಯೋಗಮಾಯಾ ಎಂ.ಜಿ ಮತ್ತು ಶೆಹ್ಲಾ ಚೌಧರಿ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.
ಪುರುಷರ ಟ್ರ್ಯಾಪ್ ಫೈನಲ್‌ನಲ್ಲಿ ವಿಶ್ವ ಚಾಂಪಿಯನ್‌ಷಿಪ್ ಕಂಚು ವಿಜೇತ ಝೋರಾವರ್ ಸಿಂಗ್ ಸಂಧು ಏಳನೇ ಸ್ಥಾನ ಪಡೆದರು. ಅಂತಿಮ ದಿನದ ಶಾಟ್‌ಗನ್ ಸ್ಪರ್ಧೆಯಲ್ಲಿದ್ದ ಭಾರತದ ಏಕೈಕ ಶೂಟರ್ ಅವರಾಗಿದ್ದರು.
ಅರ್ಹತಾ ಸುತ್ತಿನಲ್ಲಿ 125ರಲ್ಲಿ 119 ಅಂಕ ಪಡೆದಿದ್ದ ಝೋರಾವರ್ ಅವರು ಆರನೇ ಸ್ಥಾನದೊಂದಿಗೆ ಫೈನಲ್ ಪ್ರವೇಶಿಸಿದ್ದರು. ಐಎಸ್‌ಎಸ್‌ಎಫ್ ಹೊಸ ನಿಯಮಗಳ ಪ್ರಕಾರ ಆರು ಶೂಟರ್‌ಗಳ ಬದಲಿಗೆ ಈ ಬಾರಿ ಎಂಟು ಮಂದಿ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆದಿದ್ದರು.
30 ಶಾಟ್‌ಗಳ ಫೈನಲ್‌ನಲ್ಲಿ ಲಯ ತಪ್ಪಿದ ಝೋರಾವರ್ 7 ಅಂಕ ಸಂಪಾದಿಸಲಷ್ಟೇ ಶಕ್ತವಾದರು. ಅಮೆರಿಕದ ಹಿಂಟನ್ ವಿಲಿಯಂ (29) ಚಿನ್ನ ಗೆದ್ದರೆ, ಗ್ವಾಟೆಮಾಲಾದ ಬ್ರೋಲ್ ಕಾರ್ಡೆನಾಸ್ ಜೀನ್ ಪಿಯರ್ (28) ಬೆಳ್ಳಿ ಜಯಿಸಿದರು. ಅಮೆರಿಕದ ಮತ್ತೊಬ್ಬ ಶೂಟರ್ ಎಲರ್ ವಾಲ್ಟನ್ (23) ಕಂಚು ತಮ್ಮದಾಗಿಸಿಕೊಂಡರು.
4 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ ಗೆದ್ದ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಿತು. 2 ಚಿನ್ನ, 3 ಬೆಳ್ಳಿ, ಒಂದು ಕಂಚಿನ ಪದಕಗಳೊಂದಿಗೆ ಭಾರತ ಎರಡನೇ ಸ್ಥಾನ ಗಳಿಸಿತು. ಅಮೆರಿಕ (6 ಪದಕ) ಮೂರನೇ ಸ್ಥಾನ ಪಡೆಯಿತು.
ಮುಟ್ಟಿನರಜೆನಿರಾಕರಿಸಿದರೆದಂಡ: ಮಸೂದೆಸಿದ್ಧ l ಮೇ 28ಕ್ಕೆ ‘ಮುಟ್ಟಿನನೈರ್ಮಲ್ಯದಿನ’ ಆಚರಣೆಗೆನಿರ್ಧಾರ
ಸಂದರ್ಭ: ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವ, ಮುಟ್ಟು ಆದವರನ್ನು ಕೆಟ್ಟದಾಗಿ ನಡೆಸಿಕೊಳ್ಳುವ, ತಾರತಮ್ಯ ಮಾಡುವ ಅಥವಾ ಅಸ್ಪೃಶ್ಯ ಎಂದು ಪರಿಗಣಿಸುವವರಿಗೆ ₹5 ಸಾವಿರದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಉದ್ದೇಶದಿಂದ ‘ಕರ್ನಾಟಕ ಮಹಿಳಾ ಯೋಗಕ್ಷೇಮ ರಜೆ ಕಾಯ್ದೆ– 2025’ರ ಕರಡು ಮಸೂದೆಯನ್ನು ಸರ್ಕಾರ ಸಿದ್ಧಪಡಿಸಿದೆ. ಇಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ.
‘ರಾಜ್ಯ ಸರ್ಕಾರದ ಅಧೀನದ ಶಿಕ್ಷಣ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸೇವೆಗಳಲ್ಲಿ ತೊಡಗಿರುವ ಮಹಿಳೆಯರು ಮುಟ್ಟಾದರೆ, ಆ ಅವಧಿಯಲ್ಲಿ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಈ ಮಸೂದೆಯನ್ನು ರೂಪಿಸಲಾಗಿದೆ. ಮಸೂದೆಯ ಅನ್ವಯ ಹುಡುಗಿಯರು, ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಮುಟ್ಟಿನ ರಜೆ ಪಡೆಯಲು ಅರ್ಹರು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ.
ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಮುಟ್ಟಿನ ರಜೆಯನ್ನು ಮಂಜೂರು ಮಾಡಿ ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿ ಇರುವ ಮೆಟ್ಟಿಲುಗಳ ಮೇಲೆ ಜಗತ್ತಿನಲ್ಲಿಯೇ ಎರಡನೇ ಅತಿ ದೊಡ್ಡದಾದ ತ್ರಿವರ್ಣ ಧ್ವಜವನ್ನು ಮಂಗಳವಾರ ಅನಾವರಣ ಮಾಡಿ ಅವರು ಮಾತನಾಡಿದರು. ‘ನಮ್ಮ ತ್ರಿವರ್ಣ ಧ್ವಜದಲ್ಲಿರುವ ಕೇಸರಿ, ಬಿಳಿ, ಹಸಿರು ಬಣ್ಣಗಳು ಶೌರ್ಯ, ಸ್ವಾಭಿಮಾನ, ಶಾಂತಿ, ಸಮೃದ್ಧಿಯನ್ನು ಪ್ರತಿಬಿಂಬಿಸುತ್ತವೆ. ರಾಷ್ಟ್ರ ಧ್ವಜವನ್ನು ಪ್ರತಿಯೊಬ್ಬರೂ ಗೌರವಿಸಬೇಕು’ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಸುವರ್ಣ ವಿಧಾನಸೌಧದ ಮಟ್ಟಿಲುಗಳ ಮೇಲೆ ಬೃಹತ್ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿರುವುದು, ದೇಶ ಪ್ರೇಮವನ್ನು ಮುಂದಿನ ಪೀಳಿಗೆಗೆ ದಾಟಿಸುವ ಕ್ರಮವಾಗಿದೆ’ ಎಂದರು.
ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ‘ಚಿತ್ರದುರ್ಗ ನಾಲೆಗೆ ನೀರು ಹರಿಸುವ ವಿಚಾರಕ್ಕೆ ಸರ್ಕಾರ ಬದ್ಧವಿದೆ. ಕೇಂದ್ರ ಸರ್ಕಾರ ಈ ಯೋಜನೆಗೆ ನೀಡುವುದಾಗಿ ಘೋಷಣೆ ಮಾಡಿದ ಹಣವನ್ನು ಪಡೆಯಲು ಸರ್ವ ಪಕ್ಷಗಳ ನಿಯೋಗವೊಂದನ್ನು ಆದಷ್ಟು ಬೇಗನೆ ಕರೆದೊಯ್ಯುತ್ತೇವೆ’ ಎಂದು ಭರವಸೆ ನೀಡಿದರು.
ಜಪಾನ್ ಪ್ರಶಸ್ತಿಗೆಶ್ರೀಹರಿಆಯ್ಕೆ
ಸಂದರ್ಭ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ವಿಜ್ಞಾನಿ ಮತ್ತು ಉದ್ಯಮಿ ಶ್ರೀಹರಿ ಚಂದ್ರಘಾಟಗಿ ಅವರು ಜಪಾನ್‌ನ ಉದ್ಯಮ ತಂತ್ರಜ್ಞಾನದ ‘ಸೂಪರ್ ಮ್ಯಾನುಫ್ಯಾಕ್ಚರ್ಸ್ (ಚೋ ಮೊನೊಡುಜುಕುರಿ)’ ಅತ್ಯುನ್ನತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಪರಿಸರ ಸಂರಕ್ಷಣೆ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಶ್ರೀಹರಿ ಅವರು ಮಾಡಿದ ಉನ್ನತ ಸಾಧನೆಯನ್ನು ಪರಿಗಣಿಸಲಾಗಿದೆ. ಎರಡೂವರೆ ದಶಕಗಳಿಂದ ಟೋಕಿಯೋದಲ್ಲಿ ನೆಲೆಸಿರುವ ಅವರು, ‘ಎಕೋಸೈಕಲ್ ಕಾರ್ಪೊರೇಷನ್’ ಎಂಬ ಸಂಸ್ಥೆ ಸ್ಥಾಪಿಸಿ ಮುನ್ನಡೆಸುತ್ತಿದ್ದಾರೆ.
ಜಪಾನ್ ಸರ್ಕಾರದ ಆರ್ಥಿಕ, ವ್ಯಾಪಾರ, ಕೈಗಾರಿಕಾ ಸಚಿವಾಲಯ ಸೇರಿ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಅನಂತ್ ಅಂಬಾನಿಗೆಗ್ಲೋಬಲ್ಹ್ಯೂಮನ್ಸೊಸೈಟಿಪ್ರಶಸ್ತಿ
ಸಂದರ್ಭ: ರಿಲಯನ್ಸ್ ಫೌಂಡೇಷನ್ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವಂತಾರದ ಸ್ಥಾಪಕ ಅನಂತ್ ಅಂಬಾನಿ ಅವರಿಗೆ ಅಮೆರಿಕದ ಗ್ಲೋಬಲ್ ಹ್ಯೂಮನ್ ಸೊಸೈಟಿಯು ವಿಶ್ವ ಮಾನವೀಯ ಪ್ರಶಸ್ತಿ ಪ್ರದಾನ ಮಾಡಿದೆ.
ವನ್ಯಜೀವಿ ಸಂರಕ್ಷಣೆಯಲ್ಲಿ ಅನಂತ್ ಅಂಬಾನಿ ಅವರ ದೂರದೃಷ್ಟಿಯ ನಾಯಕತ್ವ, ವೈಜ್ಞಾನಿಕ ಕ್ರಮಗಳನ್ನು ಸಂಸ್ಥೆಯು ಶ್ಲಾಘಿಸಿದೆ. ಅಂತರ ರಾಷ್ಟ್ರೀಯ ಮಟ್ಟದ ಈ ಪುರಸ್ಕಾರ ಪಡೆದ ಏಷ್ಯಾದ ಮೊದಲಿಗ ಹಾಗೂ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅನಂತ್ ಪಾತ್ರರಾಗಿದ್ದಾರೆ.
ಅಳಿವಿನಂಚಿನಲ್ಲಿರುವ ವನ್ಯಜೀವಿ ತಳಿಗಳನ್ನು ಸಂರಕ್ಷಿಸುವಲ್ಲಿ ಅಂಬಾನಿ ಅವರ ಸುಸ್ಥಿರ ಕ್ರಮಗಳು ನೆರವಾಗಿವೆ. ವನ್ಯಜೀವಿಗಳು ಮತ್ತು ಮನುಷ್ಯರ ಬದುಕಿನಲ್ಲಿ ಗಮನಾರ್ಹ ಬದಲಾವಣೆ ತರಲು ಅಜೀವ ಬದ್ಧತೆ ಪ್ರದರ್ಶಿಸುವ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ಮೀಸಲಿಡ ಲಾಗಿದೆ’ ಎಂದು ಗ್ಲೋಬಲ್ ಹ್ಯೂಮನ್ ಸೊಸೈಟಿಯ ಪ್ರಕಟಣೆ ತಿಳಿಸಿದೆ.
‘ಅತ್ಯುತ್ಕೃಷ್ಟ ಕಾಳಜಿ ಮೂಲಕ ಪ್ರತಿಯೊಂದು ಪ್ರಾಣಿಯ ಘನತೆಯನ್ನು ವಂತಾರ ಎತ್ತಿ ಹಿಡಿದಿದೆ’ ಎಂದು ಗ್ಲೋಬಲ್ ಹ್ಯೂಮನ್ ಸೊಸೈಟಿಯ ಅಧ್ಯಕ್ಷೆ ಮತ್ತು ಸಿಇಒ ಡಾ. ರಾಬಿನ್ ಗ್ಯಾನ್ಜೆರ್ಟ್ ಹೇಳಿದ್ದಾರೆ.
’ಪ್ರಾಣಿಗಳು ನಮಗೆ ಮಾನವೀಯತೆ, ವಿಶ್ವಾಸ ಮತ್ತು ಬದುಕಿನ ಸಮತೋಲನವನ್ನು ಕಲಿಸುತ್ತವೆ. ಸೇವೆಯ ಮೂಲಕ ಪ್ರತಿಯೊಂದು ಪ್ರಾಣಿಯ ಘನತೆಯನ್ನು ಎತ್ತಿ ಹಿಡಿಯುವ ಕೆಲಸವನ್ನು ವಂತಾರ ಮಾಡುತ್ತಿದೆ’ ಎಂದು ಅನಂತ್ ಅಂಬಾನಿ ಹೇಳಿದ್ದಾರೆ.
ವಂದೇಮಾತರಂಸ್ಫೂರ್ತಿಗೀತೆಯಸುತ್ತವಿವಾದದಜ್ವಾಲೆ
ಖ್ಯಾತ ಬಂಗಾಳಿ ಲೇಖಕರಾಗಿದ್ದ ಬಂಕಿಮಚಂದ್ರ ಚಟರ್ಜಿ ಅವರು 1874ರಲ್ಲಿ ‘ಬಂಗದರ್ಶನ್’ ಎನ್ನುವ ಸಾಹಿತ್ಯ ಪತ್ರಿಕೆಯಲ್ಲಿ ವಿಗ್ರಹಾರಾಧನೆಯ ಬಗ್ಗೆ ಲೇಖನವೊಂದನ್ನು ಬರೆದಿದ್ದರು. ವಿಗ್ರಹಾರಾಧನೆಯು ಜ್ಞಾನ–ವಿಜ್ಞಾನದ ವಿರೋಧಿ ಎಂದು ಪ್ರತಿಪಾದಿಸಿದ್ದ ಅವರು, ಜ್ಞಾನದ ಬೆಳವಣಿಗೆಯನ್ನು ಉತ್ತೇಜಿಸಿದ ಗ್ರೀಕ್ ತತ್ವಜ್ಞಾನಿಗಳಾಗಲಿ, ವಿಜ್ಞಾನಿಗಳಾಗಲಿ, ಆರ್ಯನ್ ಸಾಧುಗಳಾಗಲಿ ವಿಗ್ರಹಾರಾಧನೆಯ ಪರವಾಗಿರಲಿಲ್ಲ ಎಂದು ಲೇಖನದಲ್ಲಿ ಉಲ್ಲೇಖಿಸಿದ್ದರು. ಸುಮಾರು ಅದೇ ಅವಧಿಯಲ್ಲಿಯೇ (1875) ಅವರು ‘ವಂದೇ ಮಾತರಂ’ (ನಮಿಸುವೆ ಮಾತೆಗೆ) ಗೀತೆಯ ಮೊದಲ ಎರಡು ಪ್ಯಾರಾಗಳನ್ನು ಬರೆದರು. ಅವುಗಳಲ್ಲಿ ಮೂರ್ತಿಪೂಜೆಯ ಉಲ್ಲೇಖ ಇರಲಿಲ್ಲ. ಅದನ್ನು ಅವರು ಎಲ್ಲಿಯೂ ಪ್ರಕಟಿಸಲಿಲ್ಲ.
ಬಂಕಿಮಚಂದ್ರರ ‘ಅನಂದಮಠ’ ಕಾದಂಬರಿಯು 1881ರಲ್ಲಿ ‘ಬಂಗದರ್ಶನ್’ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿ, ಅಪಾರ ಜನಪ್ರಿಯತೆ ಪಡೆಯಿತು. ಬಂಗಾಳದಲ್ಲಿ ತೀವ್ರ ಬರಗಾಲ, ರೈತರ ಸಂಕಷ್ಟ ಇದ್ದ ಕಾಲದ (1770) ಕಥಾವಸ್ತುವನ್ನು ಹೊಂದಿದ್ದ ಕಾದಂಬರಿಯು, ಫಕೀರರು–ಸನ್ಯಾಸಿಗಳು ಈಸ್ಟ್ ಇಂಡಿಯಾ ಕಂಪನಿಯ ಗುಲಾಮನಂತಿದ್ದ ನವಾಬನ ವಿರುದ್ಧ ಹೋರಾಡುವುದರ ಕಥನವಾಗಿತ್ತು. ವಿಶೇಷ ಏನೆಂದರೆ, ಅವರು ಈ ಹಿಂದೆ ಬರೆದಿದ್ದ ‘ವಂದೇ ಮಾತರಂ’ ಹಾಡು ಕಾದಂಬರಿಯಲ್ಲಿ ಸ್ಥಾನ ಪಡೆದಿತ್ತು. ಅವರ ಗೀತೆಯಲ್ಲಿ ಮೂಲದ ಎರಡು ಪ್ಯಾರಾಗಳ ಜತೆಗೆ ಹೊಸದಾಗಿ ಎರಡು ಪ್ಯಾರಾ ಸೇರಿದ್ದವು ಮತ್ತು ಮುಖ್ಯವಾಗಿ, ವಿಗ್ರಹಾರಾಧನೆಯ ಉಲ್ಲೇಖವಿತ್ತು. ಕಾದಂಬರಿಯ ಕೊನೆಯಲ್ಲಿ ಸನ್ಯಾಸಿಗಳು ಗೀತೆಯನ್ನು ಹಾಡುತ್ತಾರೆ. ಗದ್ಯ–ಪದ್ಯ ಮಿಶ್ರಿತ ಶೈಲಿಯಲ್ಲಿ, ದೇವಿ ದುರ್ಗೆಯನ್ನು ತಾಯಿಯೊಂದಿಗೆ (ದೇಶ) ಸಮೀಕರಿಸಿ, ಆ ತಾಯಿಯ ಪ್ರಾಕೃತಿಕ ವೈಭವ ಮತ್ತು ಶಕ್ತಿ ಸಾಮರ್ಥ್ಯಗಳನ್ನು ಅವರು ಚಿತ್ರಿಸಿದ್ದರು. ತಾಯಿಯ ಉಗ್ರರೂಪವನ್ನೂ ಗೀತೆಯಲ್ಲಿ ವರ್ಣಿಸಿದ್ದರು. ಬಂಕಿಮಚಂದ್ರರು ತಮ್ಮ ಸ್ವಾತಂತ್ರ್ಯ ಹೋರಾಟದ ಕಥಾವಸ್ತುವಿನ ಕೃತಿಯಲ್ಲಿ ಹಿಂದೂ ಧಾರ್ಮಿಕ ಪ್ರತಿಮೆಗಳಿರುವ ಗೀತೆಯನ್ನು ಬಳಸಿದ್ದರು.
ಬ್ರಿಟಿಷರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳುತ್ತಿದ್ದ, ಸ್ವಾತಂತ್ರ್ಯ ಹೋರಾಟವು ಹಬ್ಬುತ್ತಿದ್ದ ಕಾಲ ಅದು. ಈ ಚಾರಿತ್ರಿಕ ಸಂದರ್ಭದಲ್ಲಿ ಸಹಜವಾಗಿಯೇ ‘ವಂದೇ ಮಾತರಂ’ ಗೀತೆಯೂ ನಿಧಾನಕ್ಕೆ ಜನಪ್ರಿಯವಾಗತೊಡಗಿತ್ತು. 1896ರ ಕಾಂಗ್ರೆಸ್ ಸಮಾವೇಶದಲ್ಲಿ ಗೀತೆಯನ್ನು ಮೊದಲ ಬಾರಿಗೆ ಹಾಡಲಾಯಿತು. ಬ್ರಿಟಿಷರು 1905ರಲ್ಲಿ ಹಿಂದೂ–ಮುಸ್ಲಿಂ ಜನಸಂಖ್ಯಾ ಬಾಹುಳ್ಯದ ಆಧಾರದಲ್ಲಿ ಬಂಗಾಳವನ್ನು ವಿಭಜಿಸಲು ಮುಂದಾದರು. ಈ ಸಂದರ್ಭದಲ್ಲಿ ‘ವಂದೇ ಮಾತರಂ’ ಮತ್ತಷ್ಟು ಜನಪ್ರಿಯತೆ ಪಡೆಯಿತು. ಜನ ಅದನ್ನು ವ್ಯಾಪಕವಾಗಿ ಹಾಡತೊಡಗಿದರು. 1920ರ ಹೊತ್ತಿಗೆ ಬಹುತೇಕ ಭಾಷೆಗಳಿಗೆ ಅನುವಾದಗೊಂಡಿದ್ದ ಅದು, ರಾಷ್ಟ್ರೀಯವಾದಿಗಳ ನೆಚ್ಚಿನ ಹಾಡಾಗಿ ಬದಲಾಗಿತ್ತು.
ಮುಸ್ಲಿಂ ವಿರೋಧ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ‘ವಂದೇ ಮಾತರಂ’ ಅನ್ನು ಸ್ವಾತಂತ್ರ್ಯ ಹೋರಾಟದ ಸ್ಫೂರ್ತಿಗೀತೆಯಾಗಿ ಬಳಸುತ್ತಿತ್ತು. ಹಿಂದೂಗಳು ಕೋಮು ಹಿಂಸಾಚಾರದ ಸಂದರ್ಭದಲ್ಲಿ ಈ ಹಾಡನ್ನು ಬಳಸುತ್ತಿದ್ದರು. ಈ ದಿಸೆಯಲ್ಲಿ ಬಂಕಿಮಚಂದ್ರರ ಜೀವಿತಾವಧಿಯಲ್ಲಿಯೇ ಗೀತೆಗೆ ಮುಸ್ಲಿಂ ಸಮುದಾಯದ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಮುಸ್ಲಿಂ ಅರಸರ ವಿರುದ್ಧ ಹಿಂದೂಗಳ ಹೋರಾಟವನ್ನು ‘ಆನಂದಮಠ’ ಕಾದಂಬರಿಯಲ್ಲಿ ವೈಭವೀಕರಿಸಲಾಗಿದೆ ಎನ್ನುವ ವಿಶ್ಲೇಷಣೆಯೂ ಕೇಳಿಬಂದಿತ್ತು. ಜತೆಗೆ, ಹಿಂದೂ ದೇವತೆಯ ಪ್ರಸ್ತಾಪ, ವರ್ಣನೆ ಇರುವ ಗೀತೆಯಲ್ಲಿ ತಾಯ್ನಾಡನ್ನು ದೈವೀಕರಿಸಿರುವುದರ ಬಗ್ಗೆ ಮುಸ್ಲಿಮರಿಂದ ವಿರೋಧದ ಧ್ವನಿಗಳು ಕೇಳಿಬಂದವು. ಸ್ವಾತಂತ್ರ್ಯ ಹೋರಾಟವು ಎಲ್ಲ ಸಮುದಾಯಗಳ ಹೋರಾಟವಾಗಿದ್ದು, ಅಂಥ ಹೋರಾಟದಲ್ಲಿ ಈ ಗೀತೆ ಹಾಡುವುದು ಮುಸ್ಲಿಮರಿಗೆ ಇರಿಸುಮುರುಸು ಉಂಟುಮಾಡುತ್ತದೆ, ಅವರನ್ನು ಹೋರಾಟದಿಂದ ಹೊರಗಿಡುತ್ತದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾದವು. ಆದರೆ, ಶಾಲೆಗಳಲ್ಲಿ ಎಲ್ಲ ಧರ್ಮದ ಮಕ್ಕಳೂ ‘ವಂದೇ ಮಾತರಂ’ ಹಾಡುವುದನ್ನು ಕಾಂಗ್ರೆಸ್ ಕಡ್ಡಾಯ ಮಾಡಿತು. ಇದರಿಂದ ಮುಸ್ಲಿಮರ ಅಸಮಾಧಾನ ಹೆಚ್ಚಾಗುತ್ತಾ ಸಾಗಿ, ಮುಸ್ಲಿಂ ಲೀಗ್ ಪ್ರವೇಶದೊಂದಿಗೆ ಅದು ಮತ್ತಷ್ಟು ಸಂಕೀರ್ಣ ಸ್ವರೂಪ ಪಡೆಯಿತು.
ರಾಜಕೀಯ ಲೇಪ: ‘ವಂದೇ ಮಾತರಂ’ ಗೀತೆಯು ‘ಆನಂದಮಠ’ ಕಾದಂಬರಿಯಲ್ಲಿ ಸ್ಥಾನ ಪಡೆದ ದಿನದಿಂದಲೂ ಆಯಾ ಕಾಲಮಾನದ ರಾಜಕೀಯ, ಆಡಳಿತ ವ್ಯವಸ್ಥೆಗೆ ತಕ್ಕಂತೆ ಹಲವು ಸ್ವರೂಪಗಳನ್ನು ಪಡೆಯುತ್ತಲೇ ಬಂದಿದೆ. ಬಂಕಿಮಚಂದ್ರರು ತಮ್ಮ ಹಿಂದೂ ಧಾರ್ಮಿಕ ಹಿನ್ನೆಲೆಗನುಗುಣವಾಗಿ ಬರೆದ ಸ್ತುತಿಗೀತೆಯು ತನ್ನ ಗೇಯಗುಣ, ಭಾವತೀವ್ರತೆ, ಆಕರ್ಷಕ ಶೈಲಿಯಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಜನರನ್ನು ಸೆಳೆಯಲು ಬಳಕೆಯಾಯಿತು. ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್ ಹುಟ್ಟು ಪಡೆದ ನಂತರ ಅದರ ಕೋಮು ಆಯಾಮಕ್ಕೆ ಹೆಚ್ಚು ಒತ್ತು ಸಿಕ್ಕಿತು.
ಸ್ವಾತಂತ್ರ್ಯಪೂರ್ವದಲ್ಲಿ ಅದನ್ನು ರಾಷ್ಟ್ರಗೀತೆಯನ್ನಾಗಿ ಮಾಡುವ ಚಿಂತನೆ ಕೆಲವರಲ್ಲಿತ್ತು. ಐದು ಪ್ಯಾರಾಗಳ ಹಾಡನ್ನು ಎರಡು ಪ್ಯಾರಾಗಳಿಗೆ ಇಳಿಸುವ ನಿರ್ಧಾರವನ್ನು ನೆಹರೂ ಅವರನ್ನೊಳಗೊಂಡತೆ ಅಂದಿನ ನಾಯಕರು ಕೈಗೊಂಡಿದ್ದರು. ಅದರ ಜನಪ್ರಿಯತೆ, ಸ್ಫೂರ್ತಿಗುಣವನ್ನು ಅರಿತಿದ್ದ ನೆಹರೂ ಅವರು, ಸ್ವಾತಂತ್ರ್ಯಾ ನಂತರ ಅದನ್ನು ರಾಷ್ಟ್ರೀಯ ಹಾಡನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಮುಂದೆ, ಹಾಡಿನ ಸುತ್ತ ಚರ್ಚೆಗಳು ಚಾಲ್ತಿಯಲ್ಲಿದ್ದರೂ, ಅದು ತೀವ್ರಗೊಂಡದ್ದು ರಾಷ್ಟ್ರೀಯವಾದಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ. 2026ರ ಮಾರ್ಚ್–ಏಪ್ರಿಲ್‌ನಲ್ಲಿ ಪಶ್ಚಿಮ ಬಂಗಾಳದ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಈಗಿನಿಂದಲೇ ನೆಲ ಹದಗೊಳಿಸುವ ಪ್ರಯತ್ನವಾಗಿ ಬಂಕಿಮಚಂದ್ರ ಮತ್ತು ‘ವಂದೇ ಮಾತರಂ’ ಮೂಲಕ ಹಿಂದೂ ಕಾರ್ಯಸೂಚಿಯನ್ನು ಮುನ್ನೆಲೆಗೆ ತರುತ್ತಿದೆ ಎನ್ನುವ ವಿಶ್ಲೇಷಣೆಗಳಿವೆ.
ಮುಸ್ಲಿಂ ಲೀಗ್ ತೀವ್ರ ವಿರೋಧ
ಕಲ್ಕತ್ತದಲ್ಲಿ 1896ರಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 12ನೇ ಸಮಾವೇಶದಲ್ಲಿ ರವೀಂದ್ರ ನಾಥ ಟ್ಯಾಗೋರ್ ಅವರು ಮೊದಲ ಬಾರಿಗೆ ಈ ಗೀತೆಯನ್ನು ಹಾಡಿದಾಗ, ರಹೀಮುತುಲ್ಲಾ ಸಯಾನಿ ಅವರು ಆ ಸಮಾವೇಶದ ಅಧ್ಯಕ್ಷರಾಗಿದ್ದರು. 1905ರ ನಂತರ ‘ವಂದೇ ಮಾತರಂ’ ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಬದಲಾಯಿತು. ಆದರೆ, ಹಾಡಿನಲ್ಲಿರುವ ದೇವತೆಗಳ ಪ್ರಸ್ತಾಪ ಮತ್ತು ಹಿಂದೂ ಪರವಾದ ಧ್ವನಿ ಮುಸ್ಲಿಮರ ಆಕ್ಷೇಪಕ್ಕೆ ಕಾರಣವಾಯಿತು.
ಬಂಗಾಳ ವಿಭಜನೆಯ ನಂತರ ಜಮಲ್‌ಪುರ (1907) ಸೇರಿದಂತೆ ಬಂಗಾಳದ ಹಲವು ಕಡೆಗಳಲ್ಲಿ ಕೋಮು ಘರ್ಷಣೆಗಳು ನಡೆದವು.
1908ರ ಡಿ.30ರಂದು ಅಮೃತಸರದಲ್ಲಿ ನಡೆದಿದ್ದ ಅಖಿಲ ಭಾರತ ಮುಸ್ಲಿಂ ಲೀಗ್‌ನ ಎರಡನೇ ಸಮಾವೇಶದಲ್ಲಿ ಅಧ್ಯಕ್ಷರಾಗಿದ್ದ ಸೈಯದ್ ಅಲಿ ಇಮಾಮ್ ಅವರು ‘ವಂದೇ ಮಾತರಂ’ ಹಿಂದೂ ರಾಷ್ಟ್ರೀಯವಾದದ ಭಾಗವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು. ನೈಜ ಭಾರತೀಯ ರಾಷ್ಟ್ರೀಯವಾದದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು. ಈ ಗೀತೆ ಮುಸ್ಲಿಮರ ಸಂಪ್ರದಾಯಕ್ಕೆ ವಿರೋಧವಾದುದು ಎಂದೂ ಹೇಳಿದ್ದರು.
1937ರ ಅಕ್ಟೋಬರ್‌ನಲ್ಲಿ ಮಹಮ್ಮದ್ ಅಲಿ ಜಿನ್ನಾ ಅವರ ನೇತೃತ್ವದಲ್ಲಿ ನಡೆದಿದ್ದ ಮುಸ್ಲಿಂ ಲೀಗ್‌ನ 25ನೇ ವಾರ್ಷಿಕ ಸಮಾವೇಶವು ‘ವಂದೇ ಮಾತರಂ’ ವಿರುದ್ಧವಾಗಿ ನಿರ್ಣಯ ಕೈಗೊಂಡಿತ್ತು. ಇದನ್ನು ರಾಷ್ಟ್ರಗೀತೆ ಎಂದು ಘೋಷಿಸುವ ಭಾರತೀಯ ಕಾಂಗ್ರೆಸ್‌ನ ನಿರ್ಧಾರವನ್ನು ಖಂಡಿಸಿತ್ತು. ಅಲ್ಲದೇ, ‘ಇದು ಸಂವೇದನಾರಹಿತ, ಮುಸ್ಲಿಂ ವಿರೋಧಿ. ಕಾಂಗ್ರೆಸ್‌ನ ನಿಲುವು, ಯೋಚನೆಗಳು ವಿಗ್ರಹಾರಾಧನೆಯ ಪರವಾಗಿವೆ. ಇದು ಭಾರತದಲ್ಲಿ ನೈಜ ರಾಷ್ಟ್ರೀಯವಾದದ ಬೆಳವಣಿಗೆಯನ್ನು ಬುಡಮೇಲು ಮಾಡಲಿದೆ’ ಎಂದು ನಿರ್ಣಯದಲ್ಲಿ ಹೇಳಲಾಗಿತ್ತು.
ಎರಡು ಪ್ಯಾರಾ ಬಳಸುವ ನಿರ್ಧಾರ
ಮುಸ್ಲಿಂ ಸಮುದಾಯದಿಂದ ತೀವ್ರ ವಿರೋಧ ಬಂದ ನಂತರ ಕಲ್ಕತ್ತದಲ್ಲಿ ಜವಾಹರಲಾಲ್ ನೆಹರೂ ಅವರ ಅಧ್ಯಕ್ಷತೆಯಲ್ಲಿ 1937ರ ಅ.26ರಂದು ಸಭೆ ಸೇರಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಐದು ಪ್ಯಾರಾಗಳನ್ನು ಹೊಂದಿದ್ದ ‘ವಂದೇ ಮಾತರಂ’ ಗೀತೆಯಲ್ಲಿ ಮೊದಲ ಎರಡು ಪ್ಯಾರಾಗಳನ್ನು ಮಾತ್ರ ಬಳಸುವ ಬಗ್ಗೆ ಚರ್ಚೆ ನಡೆಸಿತ್ತಲ್ಲದೇ, ಈ ಬಗ್ಗೆ ಸುದೀರ್ಘ ಹೇಳಿಕೆಯನ್ನೂ ಬಿಡುಗಡೆ ಮಾಡಿತ್ತು.
‘ಕಳೆದ 30 ವರ್ಷಗಳಲ್ಲಿ ದೇಶದಾದ್ಯಂತ ಕಂಡುಬಂದಿರುವ ಜನರ ತ್ಯಾಗ ಮತ್ತು ನರಳಾಟದೊಂದಿಗೆ ‘ವಂದೇ ಮಾತರಂ’ ಬೆಸೆದುಕೊಂಡಿದೆ. ಈ ಗೀತೆ ಮತ್ತು ಅದರಲ್ಲಿನ ಪದಗಳು ಬಂಗಾಳ ಮತ್ತು ದೇಶದ ಇತರ ಕಡೆಗಳಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ವಿರುದ್ಧದ ರಾಷ್ಟ್ರೀಯ ಸಂಕೇತವಾಗಿ ರೂಪುಗೊಂಡಿವೆ. ಕ್ರಮೇಣ ಹಾಡಿನ ಮೊದಲೆರಡು ಪ್ಯಾರಾಗಳ ಬಳಕೆಯು ದೇಶದ ಇತರ ಪ್ರಾಂತ್ಯಗಳಿಗೆ ಹರಡಿದೆ ಮತ್ತು ಅವುಗಳಿಗೆ ರಾಷ್ಟ್ರೀಯ ಪ್ರಾಮುಖ್ಯವೂ ಸಿಕ್ಕಿದೆ. ಹಾಡಿನ ಉಳಿದ ಸಾಲುಗಳ ಬಳಕೆ ಅಪರೂಪವಾಗಿದೆ. ಮೊದಲ ಎರಡು ಪ್ಯಾರಾಗಳು ನಮ್ಮ ತಾಯಿನೆಲದ ಸೌಂದರ್ಯ ಮತ್ತು ಆಕೆಯ ಕೊಡುಗೆಗಳನ್ನು ಕೋಮಲವಾದ ಭಾಷೆಯಲ್ಲಿ ಕಟ್ಟಿಕೊಟ್ಟಿದೆ. ಧಾರ್ಮಿಕವಾಗಿ ಅಥವಾ ಬೇರೆ ಯಾವುದೇ ದೃಷ್ಟಿಕೋನದಿಂದ ಆಕ್ಷೇಪಿಸಬಹುದಾದ ಯಾವ ಸಂಗತಿಗಳು ಇವುಗಳಲ್ಲಿ ಇಲ್ಲ’ ಎಂದು ಹೇಳಿಕೆಯಲ್ಲಿ ವಿವರಿಸಲಾಗಿತ್ತು.
ಮುಸ್ಲಿಮರು ವ್ಯಕ್ತಪಡಿಸಿದ್ದ ಆಕ್ಷೇಪವನ್ನು ಅದರಲ್ಲಿ ಪ್ರಸ್ತಾಪಿಸಲಾಗಿತ್ತು.
ಈ ಹೇಳಿಕೆಯನ್ನು ಸಿದ್ಧಪಡಿಸುವಲ್ಲಿ ನೆಹರೂ ಅವರ ಪಾತ್ರವಿತ್ತು. ರವೀಂದ್ರನಾಥ ಟ್ಯಾಗೋರ್ ಅವರು ಇದಕ್ಕೆ ಸಮ್ಮತಿಸಿದ್ದರು. ಕಾಂಗ್ರೆಸ್ ಸಮಿತಿಯು ಮೊದಲೆರಡು ಪ್ಯಾರಾಗಳನ್ನು ಹೊಂದಿದ ‘ವಂದೇ ಮಾತರಂ’ ಅನ್ನು ರಾಷ್ಟ್ರೀಯ ಗೀತೆಯನ್ನಾಗಿ ಘೋಷಿಸಲು ಸಮ್ಮತಿಸಿತ್ತು.
ದೇಶದ ಸ್ವಾತಂತ್ರ್ಯ ಸಂಗ್ರಾಮದ ಭಾಗವಾಗಿದ್ದ ಈ ಗೀತೆಯನ್ನು ಎಲ್ಲರೂ ಒಪ್ಪಬೇಕು ಎಂದು ಮಹಾತ್ಮ ಗಾಂಧೀಜಿ ಅವರು ಬಯಸಿದ್ದರು. ಆದರೆ, ಅದರ ಹೇರಿಕೆಯನ್ನು ವಿರೋಧಿಸಿದ್ದರು.
ರಾಷ್ಟ್ರಗೀತೆಗೆ ಸಮನಾದ ಸ್ಥಾನಮಾನ
ಸ್ವಾತಂತ್ರ್ಯಾನಂತರ ರಾಷ್ಟ್ರಗೀತೆಯನ್ನಾಗಿ ಯಾವ ಹಾಡನ್ನು ಆಯ್ಕೆ ಮಾಡಬೇಕು ಎಂಬ ಚರ್ಚೆ ಸಂವಿಧಾನ ರಚನಾ ಸಭೆಯಲ್ಲಿ ನಡೆದಿತ್ತು.
1948ರ ಆಗಸ್ಟ್ 25ರಂದು ನಡೆದಿದ್ದ ಸಂವಿಧಾನ ರಚನಾ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನೆಹರೂ ಅವರು ರವೀಂದ್ರನಾಥ್ ಟ್ಯಾಗೋರ್ ವಿರಚಿತ ‘ಜನ ಗಣ ಮನ’ದ ಪರವಾಗಿ ಮಾತನಾಡಿದ್ದರು. ‘ನೈರುತ್ಯ ಏಷ್ಯಾದಲ್ಲಿ ಭಾರತೀಯ ರಾಷ್ಟ್ರೀಯ ಸೇನೆಯು ಈ ಹಾಡನ್ನು ರಾಷ್ಟ್ರಗೀತೆಯನ್ನಾಗಿ ಅಳವಡಿಸಿಕೊಂಡಿತ್ತು. ಭಾರತದಲ್ಲೂ ಇದು ಜನಪ್ರಿಯವಾಗಿದೆ. ಜನ ಗಣ ಮನವನ್ನು ಅಥವಾ ಬೇರೆ ಹಾಡನ್ನು ರಾಷ್ಟ್ರಗೀತೆಯನ್ನಾಗಿ ಆಯ್ಕೆ ಮಾಡುವ ಬಗ್ಗೆ ಎಲ್ಲ ಪ್ರಾಂತ್ಯಗಳ ರಾಜ್ಯಪಾಲರ ಅಭಿಪ್ರಾಯವನ್ನು ಕೇಳಿದ್ದೆ. ಒಬ್ಬರನ್ನು ಬಿಟ್ಟು ಉಳಿದೆಲ್ಲರೂ ‘ಜನ ಗಣ ಮನ’ಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಅಭಿಪ್ರಾಯವನ್ನು ಸಂಪುಟ ಪರಿಗಣಿಸಿದ್ದು, ಸಂವಿಧಾನ ರಚನಾ ಸಭೆಯು ಅಂತಿಮ ನಿರ್ಧಾರ ಕೈಗೊಳ್ಳುವವರೆಗೂ ಜನ ಗಣ ಮನವನ್ನು ತಾತ್ಕಾಲಿಕವಾಗಿ ರಾಷ್ಟ್ರಗೀತೆಯನ್ನಾಗಿ ಬಳಸಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದರು.
ತಮ್ಮ ಭಾಷಣದಲ್ಲಿ ‘ವಂದೇ ಮಾತರಂ’ನ ಬಗ್ಗೆಯೂ ಪ್ರಸ್ತಾಪಿಸಿದ್ದ ಅವರು, ‘ನಿಜಕ್ಕೂ ಅದು ಪ್ರಮುಖವಾದ ರಾಷ್ಟ್ರೀಯ ಹಾಡು. ನಮ್ಮ ದೇಶ ಮತ್ತು ಸ್ವಾತಂತ್ರ್ಯ ಹೋರಾಟದೊಂದಿಗೆ ಗುರುತಿಸಿಕೊಂಡಿದೆ. ಅದರ ಸ್ಥಾನವನ್ನು ಬೇರೆ ಯಾವ ಹಾಡು ಕೂಡ ತುಂಬಲು ಸಾಧ್ಯವಿಲ್ಲ. ರಾಷ್ಟ್ರಗೀತೆಯ ವಿಚಾರಕ್ಕೆ ಬಂದಾಗ ಪದಗಳಿಗಿಂತಲೂ ರಾಗ/ಧಾಟಿ (ಟ್ಯೂನ್) ಮುಖ್ಯ’ ಎಂದು ಪ್ರತಿಪಾದಿಸಿದ್ದರು.
1950ರ ಜನವರಿ 24ರಂದು ಸಂವಿಧಾನ ರಚನಾ ಸಭೆಯಲ್ಲಿ ಮಾತನಾಡಿದ್ದ ಅಧ್ಯಕ್ಷ ಡಾ.ರಾಜೇಂದ್ರ ಪ್ರಸಾದ್ ಅವರು, ‘ಪದಗಳು ಮತ್ತು ಸಂಗೀತವನ್ನೊಳಗೊಂಡ ಜನ ಗಣ ಮನವು ದೇಶದ ರಾಷ್ಟ್ರಗೀತೆಯಾಗಿದ್ದು, ಸಂದರ್ಭ ಬಂದಾಗ ಸರ್ಕಾರ ಅನುಮತಿಸಿದರೆ ಗೀತೆಯಲ್ಲಿನ ಪದಗಳನ್ನು ಬದಲಾಯಿಸುವುದಕ್ಕೆ ಅವಕಾಶ ಇರುತ್ತದೆ. ಭಾರತದ ಸ್ವಾತಂತ್ರ್ಯದಲ್ಲಿ ಪ್ರಮುಖ ಪಾತ್ರವಹಿಸಿದ ‘ವಂದೇ ಮಾತರಂ’ಗೆ ಕೂಡ ‘ಜನ ಗಣ ಮನ’ಕ್ಕೆ ಸಮನಾದ ಗೌರವ, ಅದಕ್ಕೆ ಸರಿಸಮಾನದ ಸ್ಥಾನಮಾನವನ್ನೇ ನೀಡಬೇಕು’ ಎಂದು ಹೇಳಿದ್ದರು.
ಇಡೀ ಸಭೆಯು ಕರತಾಡನದ ಮೂಲಕ ಈ ಹೇಳಿಕೆಯನ್ನು ಅನುಮೋದಿಸಿತ್ತು. ಆಧಾರ: ಜ್ಯೂಲಿಯಸ್ ಜೆ.ಲೈಪ್ನರ್ ಭಾಷಾಂತರಿಸಿದ ‘ಆನಂದಮಠ, ಆರ್ ದಿ ಸೇಕ್ರೆಡ್ ಬ್ರದರ್‌ಹುಡ್’ ಕೃತಿ, ಅಮರೇಂದ್ರ ಲಕ್ಷ್ಮಣ್ ಗಾಡ್ಗೀಳ್ ಅವರ ‘ವಂದೇ ಮಾತರಂ’ ಕೃತಿ, ಪಿಐಬಿ, ತಜ್ಞರ ಲೇಖನಗಳು
‘ವಂದೇ ಮಾತರಂ’ ಗೀತೆ 19ನೇ ಶತಮಾನದ ಕೊನೆ– 20ನೇ ಶತಮಾನದ ಆರಂಭದಲ್ಲಿ ದೇಶದಾದ್ಯಂತ ಪಸರಿಸಿತು. ಅದೆಷ್ಟು ಖ್ಯಾತಿ ಗಳಿಸಿತು ಎಂದರೆ, 1906 ಆಗಸ್ಟ್ 6ರಂದು ಕಲ್ಕತ್ತದಲ್ಲಿ ‘ವಂದೇ ಮಾತರಂ’ ಹೆಸರಿನಲ್ಲಿ ಇಂಗ್ಲಿಷ್ ಪತ್ರಿಕೆ ಆರಂಭಗೊಂಡಿತು. ವಿಪಿನ್ ಚಂದ್ರಪಾಲ್ (ಲಾಲ್–ಬಾಲ್–ಪಾಲ್ ಎಂದು ಖ್ಯಾತಿ ಗಳಿಸಿದ ಮೂವರಲ್ಲಿ ಒಬ್ಬರು) ಇದರ ಸಂಸ್ಥಾಪಕರು. ಈ ಪತ್ರಿಕೆಯ ವಿರುದ್ಧ ಬ್ರಿಟಿಷ್ ಆಡಳಿತ ದೇಶದ್ರೋಹ ಪ್ರಕರಣವನ್ನೂ ದಾಖಲಿಸಿತ್ತು
ಭಾರತವು, ಬಾಸ್ಮತಿ, ಸೋನಾ ಮಸೂರಿ ಸೇರಿದಂತೆ ವಿವಿಧ ತಳಿಗಳ ಅಕ್ಕಿಯನ್ನು ತಂದು ಅಮೆರಿಕದ ಮಾರುಕಟ್ಟೆಗೆ ಸುರಿಯುತ್ತಿದ್ದು, ಆಮದು ನಿಯಂತ್ರಿಸಲು ಅಕ್ಕಿ ಮೇಲೆ ಹೆಚ್ಚಿನ ತೆರಿಗೆ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ವೈಟ್‌ಹೌಸ್‌ನಲ್ಲಿ ಕೃಷಿ ವಲಯದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ, ಲೂಸಿಯಾನದ ಕೆನಡಿ ಅಕ್ಕಿ ಗಿರಣಿಯ ಮೆರಿಲ್ ಕೆನಡಿ ಅವರು, ‘ಭಾರತ, ಥಾಯ್ಲೆಂಡ್ ಮತ್ತು ಚೀನಾ ಅಮೆರಿಕದ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ಅಕ್ಕಿಯನ್ನು ತಂದು ಸುರಿಯುತ್ತಿವೆ. ಇದರಿಂದ ಅಮೆರಿಕದ ಅಕ್ಕಿ ಉತ್ಪಾದಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಲ್ಲಿ ಭಾರತದ ಪಾಲು ಗರಿಷ್ಠ ಮಟ್ಟದಲ್ಲಿದೆ’ ಎಂದು ದೂರಿದರು.
‘ಯಾಕೆ, ಭಾರತ ಅಮೆರಿಕದ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ಅಕ್ಕಿ ತಂದು ಸುರಿಯುತ್ತಿದೆ. ಭಾರತದ ಅಕ್ಕಿಗೆ ತೆರಿಗೆಯಿಂದ ವಿನಾಯ್ತಿ ನೀಡಲಾಗಿದೆಯೇ’ ಎಂದು ಟ್ರಂಪ್, ಸಭೆಯಲ್ಲಿ ಹಾಜರಿದ್ದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರನ್ನು ಪ್ರಶ್ನಿಸಿದರು. ‘ಇಲ್ಲ, ನಾವು ಈ ಬಗ್ಗೆ ಶೀಘ್ರದಲ್ಲೇ ಹೊಸ ಒ ಪ್ಪಂದ ಮಾಡಿ ಕೊಳ್ಳುತ್ತೇವೆ’ ಎಂದು ಬೆಸೆಂಟ್ ಹೇಳಿದರು.
‘ಅಮೆರಿಕನ್ನರಿಗೆ ಬೇಕಾಗುವಷ್ಟು ಭತ್ತವನ್ನು ಅಮೆರಿಕದ ರೈತರೇ ಬೆಳೆಯುತ್ತಾರೆ. ನಮಗೆ ಬೇರೆ ದೇಶಗಳೊಂದಿಗೆ ನ್ಯಾಯಯುತ ವ್ಯಾಪಾರ ಬೇಕೇ ಹೊರತು, ಉಚಿತ ವ್ಯಾಪಾರವಲ್ಲ. ಅಕ್ಕಿ ಆಮದಿನ ಮೇಲೆ ನಿಯಂತ್ರಣ ಹೇರಬೇಕು‘ ಎಂದು ಕೆನಡಿ, ಟ್ರಂಪ್ ಅವರನ್ನು ಒತ್ತಾಯಿಸಿದರು.
‘ಭಾರತವು ಅಮೆರಿಕದ ಮಾರುಕಟ್ಟೆಗೆ ಅಕ್ಕಿಯನ್ನು ತಂದು ಸುರಿಯಬಾರದು. ‘ತೆರಿಗೆ’ ವಿಧಿಸುವ ಮೂಲಕ ಈ ಸಮಸ್ಯೆಯನ್ನು ನಾವು ಸರಳವಾಗಿ ಬಗೆಹರಿಸಿಕೊಳ್ಳಬಹುದು’ ಎಂದು ಟ್ರಂಪ್ ಹೇಳಿದರು.
ಭಾರತದಿಂದ ಆಮದು ಮಾಡಿಕೊಳ್ಳುವ ಅಕ್ಕಿಯ ಮೇಲೆ ಅಮೆರಿಕವು ಮೊದಲು ಶೇ 10ರಷ್ಟು ತೆರಿಗೆ ವಿಧಿಸಿತ್ತು. ಟ್ರಂಪ್ ಆಡಳಿತವು ಇತ್ತೀಚೆಗೆ ತೆರಿಗೆ ಪರಿಷ್ಕರಣೆ ಮಾಡಿದ ಬಳಿಕ ಇದು ಶೇ 40ಕ್ಕೆ ಏರಿಕೆಯಾಗಿದೆ.
ಸಭೆ ಮುಗಿದ ಬಳಿಕ ಟ್ರಂಪ್, ಅಮೆರಿಕದ ಕೃಷಿಕರಿಗಾಗಿ ನಾಲ್ಕು ವರ್ಷಗಳ ಅವಧಿಗೆ 12 ಶತಕೋಟಿ ಡಾಲರ್ (₹1.07 ಲಕ್ಷ ಕೋಟಿ) ಕೃಷಿ ಪರಿಹಾರ ಪ್ಯಾಕೇಜ್ ಪ್ರಕಟಿಸಿದರು. ಕೃಷಿ ಕಾರ್ಯದರ್ಶಿ ಬ್ರೂಕ್ ರೋಲಿನ್ಸ್, ಕೃಷಿ ವಲಯದ ಪ್ರತಿನಿಧಿಗಳು, ಟ್ರಂಪ್ ಸಂಪುಟದ ಸದಸ್ಯರು ಭಾಗವಹಿಸಿದ್ದರು.
ಅಮೆರಿಕಕ್ಕೆ 2.74 ಲಕ್ಷಟನ್ ಬಾಸ್ಮತಿಅಕ್ಕಿ
ಬಾಸ್ಮತಿ ಅಕ್ಕಿ ರಫ್ತಿನಲ್ಲಿ ಅಮೆರಿಕವು ಭಾರತಕ್ಕೆ ವಿಶ್ವದಲ್ಲೇ ನಾಲ್ಕನೆಯ ಅತಿ ದೊಡ್ಡ ಮಾರುಕಟ್ಟೆ. 2024–25ನೇ ಸಾಲಿನ ಹಣಕಾಸು ವರ್ಷದಲ್ಲಿ ಭಾರತವು ಅಮೆರಿಕಕ್ಕೆ 337 ದಶಲಕ್ಷ ಡಾಲರ್ (₹3,028 ಕೋಟಿ) ಮೌಲ್ಯದ 2.74 ಲಕ್ಷ ಟನ್‌ನಷ್ಟು ಅಕ್ಕಿಯನ್ನು ರಫ್ತು ಮಾಡಿದೆ. ಇದೇ ಅವಧಿಯಲ್ಲಿ 61 ಸಾವಿರ ಟನ್‌ನಷ್ಟು ಬಾಸ್ಮತಿಯೇತರ ಅಕ್ಕಿಯನ್ನೂ ಅಮೆರಿಕಕ್ಕೆ ರಫ್ತು ಮಾಡಲಾಗಿದೆ.
ಸಂದರ್ಭ:‘ಪ್ರಸಕ್ತಆರ್ಥಿಕವರ್ಷದಲ್ಲಿದೇಶದರಸಗೊಬ್ಬರಆಮದು 2.23 ಕೋಟಿಟನ್ಗೆಹೆಚ್ಚಳವಾಗುವನಿರೀಕ್ಷೆಇದೆ’ಎಂದುಭಾರತೀಯರಸಗೊಬ್ಬರಸಂಘ (ಎಫ್ಎಐ) ತಿಳಿಸಿದೆ.
ಇದು ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 41ರಷ್ಟು ಹೆಚ್ಚು ಎಂದು ತಿಳಿಸಿದೆ. ದೇಶದಲ್ಲಿ ಸುರಿದ ಉತ್ತಮ ಮುಂಗಾರು, ಬೇಡಿಕೆ ಹೆಚ್ಚಳಕ್ಕೆ ಕಾರಣ ಎಂದು ತಿಳಿಸಿದೆ.
ಭಾರತವು ಜಗತ್ತಿನಲ್ಲಿ ಅತಿಹೆಚ್ಚು ರಸಗೊಬ್ಬರ ಬಳಸುವ ದೇಶಗಳ ಪೈಕಿ 2ನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದೆ. ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ ದೇಶದಲ್ಲಿ 1.44 ಕೋಟಿ ಟನ್‌ನಷ್ಟು ರಸಗೊಬ್ಬರ ಆಮದಾಗಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ 85.6 ಲಕ್ಷ ಟನ್ ಆಮದಾಗಿತ್ತು. ಇದಕ್ಕೆ ಹೋಲಿಸಿದರೆ ಆಮದು ಪ್ರಮಾಣ ಈ ಅವಧಿಯಲ್ಲಿ ಶೇ 69ರಷ್ಟು ಹೆಚ್ಚಳವಾಗಿದೆ.
‘ದೇಶದಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ರಸಗೊಬ್ಬರದ ಆಮದು ಪ್ರಮಾಣ ಹೆಚ್ಚಳವಾಗಿದೆ’ ಎಂದು ಎಫ್‌ಎಐ ಅಧ್ಯಕ್ಷ ಎಸ್. ಶಂಕರ್‌ಸುಬ್ರಮಣಿಯನ್ ಹೇಳಿದ್ದಾರೆ.
ನವೆಂಬರ್ ಅಂತ್ಯದ ವೇಳೆಗೆ ರಸಗೊಬ್ಬರ ದಾಸ್ತಾನು 1.02 ಕೋಟಿ ಟನ್‌ನಷ್ಟಿದೆ. ಈ ದಾಸ್ತಾನಿನಲ್ಲಿ 50 ಲಕ್ಷ ಟನ್ ಯೂರಿಯಾ, 17 ಲಕ್ಷ ಟನ್ ಡಿಎಪಿ ಮತ್ತು 35 ಲಕ್ಷ ಟನ್ ಎನ್‌ಪಿಕೆ ರಸಗೊಬ್ಬರ ಸೇರಿದೆ ಎಂದು ಹೇಳಿದ್ದಾರೆ.
ಕೋರಮಂಡಲ್ ಇಂಟರ್‌ನ್ಯಾಷನಲ್‌ನ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಶಂಕರ್‌ಸುಬ್ರಮಣಿಯನ್ ಅವರು, ಕಳೆದ ಎರಡು ತಿಂಗಳಿನಲ್ಲಿ ಭಾರತವು ದೊಡ್ಡ ಪ್ರಮಾಣದಲ್ಲಿ ಒಪ್ಪಂದ ಮಾಡಿಕೊಂಡಿದ್ದು, ಯಾವುದೇ ಪೂರೈಕೆ ನಿರ್ಬಂಧಗಳಿಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ರಸಗೊಬ್ಬರ ಉತ್ಪಾದನೆ ಕಳೆದ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ 2.97 ಕೋಟಿ ಟನ್‌ನಷ್ಟಿತ್ತು. ಅದು ಈ ಬಾರಿ 2.99 ಕೋಟಿ ಟನ್‌ಗೆ ಹೆಚ್ಚಳವಾಗಿದೆ.
ಈ ಪೈಕಿ 1.71 ಕೋಟಿ ಟನ್ ಯೂರಿಯಾ, 23.2 ಲಕ್ಷ ಟನ್ ಡಿಎಪಿ, 70.4 ಲಕ್ಷ ಟನ್ ಎನ್‌ಪಿಕೆ ರಸಗೊಬ್ಬರ ಮತ್ತು 34.8 ಲಕ್ಷ ಟನ್ ಎಸ್‌ಎಸ್‌ಪಿ ಇದೆ. ವಾರ್ಷಿಕವಾಗಿ ದೇಶದಲ್ಲಿ 7 ಕೋಟಿ ಟನ್‌ನಷ್ಟು ರಸಗೊಬ್ಬರ ಬಳಕೆ ಆಗುತ್ತದೆ.
ಕಲಬುರಗಿಯಲ್ಲಿ ವಿಮಾನ ಹಾರಾಟ ಸ್ಥಗಿತ ಕುರಿತಂತೆ ಬಿಜೆಪಿಯ ಶಶೀಲ್ ನಮೋಶಿ ಶೂನ್ಯವೇಳೆಯಲ್ಲಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ‘ದೇಶದ ವಿಮಾನಯಾನ ಕ್ಷೇತ್ರದಲ್ಲಿ ಸುಧಾರಣೆ ತರಲು ಕೇಂದ್ರ ಸರ್ಕಾರ ಉಡಾನ್ ಯೋಜನೆ ಜಾರಿಗೆ ತಂದಿದೆ.
ಈ ಯೊಜನೆಯಡಿ ಮೂರು ವರ್ಷ ಮಾತ್ರ ಪ್ರಾದೇಶಿಕ ವಿಮಾನಯಾನದ ಅಭಿವೃದ್ಧಿ, ಪುನಶ್ಚೇತನಕ್ಕೆ ಆರ್ಥಿಕ ನೆರವನ್ನು ನೀಡುತ್ತಿದೆ. ಇದನ್ನು 10 ವರ್ಷಕ್ಕೆ ವಿಸ್ತರಿಸಿ, ಐದು ವರ್ಷ ಪೂರ್ತಿ ನಿಲ್ದಾಣಗಳ ಅಭಿವೃದ್ಧಿಗೆ ನೆರವು ಒದಗಿಸಬೇಕು. ಉಳಿದ ಐದು ವರ್ಷದ ಅವಧಿಗೆ ರಾಜ್ಯ ಸರ್ಕಾರ ಶೇ 50ರ ಅನುಪಾತದಲ್ಲಿ ಅನುದಾನ ಒದಗಿಸಲು ಸಿದ್ಧವಿದೆ’ ಎಂದು ಹೇಳಿದರು.
ಕೇಂದ್ರ ಸರ್ಕಾರದ ಪ್ರಾದೇಶಿಕ ಸಂಪರ್ಕ ಯೋಜನೆಯಡಿ ಕಲಬುರಗಿ ವಿಮಾನ ನಿಲ್ದಾಣ 2022ರಿಂದ ಕಾರ್ಯಾಚರಣೆ ಆರಂಭಗೊಂಡಿತ್ತು. ವಿಮಾನಯಾನ ಸಂಸ್ಥೆಗಳು ಕೇಂದ್ರದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಜೊತೆ ಉಡಾನ್ ಯೋಜನೆಯಡಿ ಒಪ್ಪಂದ ಮಾಡಿಕೊಂಡಿವೆ. ಅದರಂತೆ ಮೂರು ವರ್ಷ ಸೇವೆ ಒದಗಿಸಿವೆ. ಅವಧಿ ಪೂರ್ಣಗೊಂಡ ಕಾರಣ ಸೇವೆ ಸ್ಥಗಿತಗೊಳಿಸಿವೆ. ಅವಧಿ ವಿಸ್ತರಿಸದಿದ್ದರೆ ಉಡಾನ್ ಯೋಜನೆಯಡಿ ವಿಮಾನಯಾನ ಸೌಲಭ್ಯ ಪಡೆದ ನಿಲ್ದಾಣಗಳು ಬಂದ್ ಆಗಲಿವೆ ಎಂದು ಹೇಳಿದರು.
ಸಂದರ್ಭ: ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನಮಕ್ಕಳುಸಾಮಾಜಿಕಜಾಲತಾಣಗಳನ್ನುಬಳಸುವುದನ್ನುನಿಷೇಧಿಸುವಕಾನೂನುಬುಧವಾರದಿಂದಜಾರಿಗೆಬರಲಿದೆ.
ಮಕ್ಕಳ ಸಾಮಾಜಿಕ ಜಾಲತಾಣಗಳ ಬಳಕೆಗೆ ಸಂಬಂಧಿಸಿದಂತೆ ಸಮಗ್ರವಾದ ಕಾನೂನು ರೂಪಿಸಿರುವ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನಿನ ಮೂಲಕ ಸಾಮಾಜಿಕ ಜಾಲತಾಣ ವೇದಿಕೆಗಳು ಬಳಕೆದಾರರ ವಯಸ್ಸನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ.
‘ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸಲು ಸಾಮಾಜಿಕ ಹೊಣೆಗಾರಿಕೆಯನ್ನು ನಿಗದಿಪಡಿಸುವ ಉದ್ದೇಶ ಈ ಕಾನೂನಿಗೆ ಇದೆ’ ಎಂದು ಅಲ್ಲಿನ ಸರ್ಕಾರ ಹೇಳಿದೆ.
ಆದರೆ, ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಕಿಕ್, ಸ್ನಾಪ್‌ಚಾಟ್, ಟಿಕ್‌ಟಾಕ್, ಯೂಟ್ಯೂಬ್, ಥ್ರೆಡ್ಸ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಬಳಸದೆ ತಮ್ಮ ಸ್ನೇಹಿತರ ಜತೆಗೆ ಸಂಪರ್ಕ ದಲ್ಲಿರುವುದು ಹೇಗೆ ಎಂಬ ಚಿಂತೆ ಮಕ್ಕಳನ್ನು ಕಾಡುತ್ತಿದೆ.
‘ಈ ನಿಷೇಧವು ನಮ್ಮ ಮೇಲೆ ಸಕಾರಾತ್ಮಕ ಪರಿಣಾಮ ಬೀರುವುದಿಲ್ಲ. ನಾವು ಸ್ನೇಹಿತರು ಪರಸ್ಪರ ಸಂಪರ್ಕದಲ್ಲಿರಲು ಪರ್ಯಾಯ ಆಯ್ಕೆಗಳು ಸಾಕಷ್ಟಿಲ್ಲ’ ಎಂದು ಮೆಲ್ಬರ್ನ್‌ನ 15 ವರ್ಷದ ಬಾಲಕ ರಿಲೆ ಅಲೆನ್ ಹೇಳಿದ್ದಾರೆ.
ಸಂದರ್ಭ: ಪ್ರಾದೇಶಿಕ ಅಸಮತೋಲನಕ್ಕೆ ಸಂಬಂಧಿಸಿದಂತೆ ಎಲ್ಲ ವಿಭಾಗ, ಜಿಲ್ಲೆಗಳಲ್ಲಿ ಸಭೆ ನಡೆಸಿದ್ದು, ಈ ತಿಂಗಳಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಪ್ರೊ. ಎಂ. ಗೋವಿಂದ ರಾವ್, ಅಧ್ಯಕ್ಷರು, ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ.
ಉತ್ತರ ಕರ್ನಾಟಕ ಭಾಗದಲ್ಲಿ ಅಸಮತೋಲನ ನಿವಾರಣೆ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ಮೂಲಸೌಕರ್ಯ ಸೇರಿದಂತೆ ವಿವಿಧ ವಲಯಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ‘ವಿಶೇಷ ಅಭಿವೃದ್ಧಿ ಯೋಜನೆ’ (ಎಸ್‌ಡಿಪಿ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ರಾಜ್ಯ ಸರ್ಕಾರ ₹31,198 ಕೋಟಿ ಸುರಿದಿದೆ.
ಇಷ್ಟು ಹಣ ಸುರಿದರೂ ಈ ಭಾಗದಲ್ಲಿನ ಜ್ವಲಂತ ಸಮಸ್ಯೆಗಳಿಗೆ ನಿರೀಕ್ಷಿತ ಪರಿಹಾರ ಸಿಕ್ಕಿಲ್ಲ ಎನ್ನುವುದು ಈ ಭಾಗದ ಜನಪ್ರತಿನಿಧಿಗಳ ಒಕ್ಕೊರಲ ಕೊರಗು. ಪ್ರತಿ ಬಾರಿಯಂತೆ ಈ ಬಾರಿಯೂ ಬೆಳಗಾವಿ ಅಧಿವೇಶನ ದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ, ಬೇಡಿಕೆಗಳ ಪಟ್ಟಿ ಮುಂದಿಡಲು ನಿರ್ಧರಿಸಿದ್ದಾರೆ.
ನೀರಾವರಿ ಯೋಜನೆಗಳು, ಕೈಗಾರಿಕೆಗಳ ಸ್ಥಾಪನೆ, ಉದ್ಯೋಗ ಸೃಷ್ಟಿ, ಕನ್ನಡ ಶಾಲೆಗಳ ಶಿಥಿಲಾವಸ್ಥೆ, ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳು, ಮೂಲಸೌಕರ್ಯ, ಪ್ರವಾಸೋದ್ಯಮ ಹೀಗೆ ವಿವಿಧ ವಿಚಾರಗಳಲ್ಲಿ ಈ ಭಾಗ ಹಿಂದುಳಿದಿ ರುವುದನ್ನು ಪ್ರಸ್ತಾಪಿಸಿ, ಅನುದಾನ– ಅಭಿವೃದ್ಧಿಗೆ ಒತ್ತು ನೀಡುವಂತೆ ಪಕ್ಷಾತೀತವಾಗಿ ಪಟ್ಟು ಹಿಡಿಯಲು ಮುಂದಾಗಿದ್ದಾರೆ.
‘ಉತ್ತರ ಕರ್ನಾಟಕ ಭಾಗಕ್ಕೆ ಡಿ.ಎಂ. ನಂಜುಂಡಪ್ಪ ವರದಿಯ ಅನ್ವಯ 2008–09ರಿಂದ 2024–25ರ ಅವಧಿಯಲ್ಲಿ ‘ವಿಶೇಷ ಅಭಿವೃದ್ಧಿ ಯೋಜನೆ’ಯಡಿ (ಎಸ್‌ಡಿಪಿ) ₹17,710.28 ಕೋಟಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ 2013–14ರಿಂದ ಈವರೆಗೆ ₹13,488.45 ಕೋಟಿ ಸೇರಿ ಒಟ್ಟು ₹31,198 ಕೋಟಿ ವೆಚ್ಚ ಮಾಡಲಾಗಿದೆ’ ಎಂದು ಆರ್ಥಿಕ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.
ಉತ್ತರ ಮತ್ತು ದಕ್ಷಿಣ ಕರ್ನಾಟಕ ನಡುವಿನ ಅಸಮಾನತೆ ಯನ್ನು ಅಧ್ಯಯನ ಮಾಡಿ, ಆ ಅಸಮಾನತೆ ಯನ್ನು ತಗ್ಗಿಸಲು ಸೂಕ್ತ ಅಭಿವೃದ್ಧಿ ವಿಧಾನಗಳನ್ನು ಶಿಫಾರಸು ಮಾಡಲು 2000ದ ಅಕ್ಟೋಬರ್ ನಲ್ಲಿ ಡಿ.ಎಂ. ನಂಜುಂಡಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿಯನ್ನು ಅಂದಿನ ಸರ್ಕಾರ ರಚಿಸಿತ್ತು.
ಕೆಕೆಆರ್ಡಿಬಿ: ವೆಚ್ಚದಲ್ಲಿಹಿಂದೆ
ಕಲ್ಯಾಣ ಕರ್ನಾಟಕ ಪ್ರದೇಶಾ ಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ಪ್ರತಿ ವರ್ಷ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದ್ದರೂ, ಕಾಮಗಾರಿಗಳ ಕ್ರಿಯಾ ಯೋಜನೆ ಅನುಮೋದನೆ, ಅಂದಾಜು ಪಟ್ಟಿ ತಯಾರಿ ಮತ್ತು ಟೆಂಡರ್ ಪ್ರಕ್ರಿಯೆ ವಿಳಂಬವೂ ಸೇರಿದಂತೆ ನಾನಾ ಕಾರಣಗಳಿಂದ ನಿರೀಕ್ಷೆಯಂತೆ ವೆಚ್ಚ ಆಗಿಲ್ಲ.
ರಾಜ್ಯ ಸರ್ಕಾರ 2013–14ನೇ ಸಾಲಿನಿಂದ ಈವರೆಗೆ ಕೆಕೆಆರ್‌ಡಿಬಿಗೆ ₹26 ಸಾವಿರ ಕೋಟಿ ಅನುದಾನ ನಿಗದಿಪಡಿಸಿದೆ. 2024–25 ಮತ್ತು 2025–26ನೇ ಸಾಲಿನಲ್ಲಿ ಮಂಡಳಿಗೆ ತಲಾ ₹5 ಸಾವಿರ ಕೋಟಿ ನಿಗದಿಪಡಿಸಿದ್ದು, ಆ ಮೊತ್ತಕ್ಕೆ ಕ್ರಿಯಾಯೋಜನೆ ರೂಪಿಸಿ, ₹3 ಸಾವಿರ ಕೋಟಿಗೆ ಸೀಮಿತಗೊಳಿಸಿ ವೆಚ್ಚ ಭರಿಸಲು ಮತ್ತು ಉಳಿದ ಕಾಮಗಾರಿ ಗಳನ್ನು ಮುಂದುವರಿದ ಕಾಮಗಾರಿಯಾಗಿ ಮುಂದಿನ ವರ್ಷದಲ್ಲಿ ಅನುಷ್ಠಾನಗೊಳಿಸಲು ಆರ್ಥಿಕ ಇಲಾಖೆ ಸೂಚಿಸಿದೆ. ಈ ಮಧ್ಯೆ, ಕೆಕೆಆರ್‌ಡಿಬಿ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳು ತೀರಾ ಕಳಪೆಯಾಗಿದ್ದು, ಸರ್ಕಾರದ ಹಣ ಲೂಟಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇತ್ತೀಚೆಗೆ ವಿವಿಧ ಸಂಘಟನೆಗಳು ಕಲಬುರಗಿಯಲ್ಲಿರುವ ಕೆಕೆಆರ್‌ಡಿಬಿ ಕಚೇರಿ ಎದುರು ಧರಣಿಯನ್ನೂ ನಡೆಸಿವೆ.
ಈ ಸಮಿತಿಯು ಆಗ ಇದ್ದ 176 ತಾಲ್ಲೂಕುಗಳಲ್ಲಿನ ಕೃಷಿ, ಉದ್ದಿಮೆ, ಆರ್ಥಿಕ, ಸಾಮಾಜಿಕ, ಜನಸಂಖ್ಯೆ ಹೀಗೆ ಐದು ವಲಯಗಳಲ್ಲಿ 35 ಸೂಚಕಗಳನ್ನು ಬಳಸಿ ಅಧ್ಯಯನ ನಡೆಸಿ 2002ರ ಜೂನ್‌ನಲ್ಲಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ಸಮಿತಿಯು 176 ತಾಲ್ಲೂಕುಗಳ ಪೈಕಿ 114 ತಾಲ್ಲೂಕುಗಳು ಅಭಿವೃದ್ಧಿಯಲ್ಲಿ ಹಿಂದುಳಿದಿರುವುದನ್ನು ಗುರುತಿಸಿತ್ತು. ಅವುಗಳಲ್ಲಿ ಅತ್ಯಂತ ಹಿಂದುಳಿದ 39, ಅತೀ ಹಿಂದುಳಿದ 40, ಹಿಂದುಳಿದ 35 ತಾಲ್ಲೂಕುಗಳಾಗಿದ್ದವು. ಈಗ ತಾಲ್ಲೂಕುಗಳ ಒಟ್ಟು ಸಂಖ್ಯೆ 240 ಆಗಿದೆ. ಈ ಪೈಕಿ, ನಾಲ್ಕು ತಾಲ್ಲೂಕುಗಳು ಇನ್ನೂ ರಚನೆ ಆಗಿಲ್ಲ.
ನಂಜುಂಡಪ್ಪವರದಿಯ ಶಿಫಾರಸಿನ ಅನ್ವಯ ರಾಜ್ಯದಲ್ಲಿರುವ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ 2007–08ರಿಂದ 2024–25ನೇ ಸಾಲಿನವರೆಗೆ 18 ವರ್ಷಗಳಲ್ಲಿ ಒಟ್ಟಾರೆ 48,866.49 ಕೋಟಿ ನಿಗದಿಪಡಿಸಿ, ₹40,159.42 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಅದರಲ್ಲಿ ₹36,866.56 ಕೋಟಿ ವೆಚ್ಚ ಮಾಡಲಾಗಿದೆ. ಈ ಮೊತ್ತದಲ್ಲಿ ಶೇ 60ರಷ್ಟು ಅನುದಾನವನ್ನು ಉತ್ತರ ಕರ್ನಾಟಕ ಭಾಗದ ತಾಲ್ಲೂಕುಗಳಲ್ಲಿ ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಲಾಗಿದೆ.
ದೊಡ್ಡ ಮೊತ್ತದ ಅನುದಾನ ವೆಚ್ಚ ಮಾಡಿದರೂ ರಾಜ್ಯದಲ್ಲಿ ಉತ್ತರ– ದಕ್ಷಿಣ ಭಾಗದಲ್ಲಿನ ಪ್ರಾದೇಶಿಕ ಅಸಮತೋಲನ ನಿವಾರಿಸಲು ಸಾಧ್ಯವಾಗಿಲ್ಲ. ಅಲ್ಲದೆ, ನಂಜುಂಡಪ್ಪ ವರದಿ 25 ವರ್ಷಗಳಷ್ಟು ಹಳೆಯದಾಗಿದೆ. ಇದನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ರ ಡಿ. 15ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದಲ್ಲಿ, ಆಗ ಇದ್ದ 240 ತಾಲ್ಲೂಕುಗಳ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಲು ಉನ್ನತಮಟ್ಟ ಸಮಿತಿ ರಚಿಸಲಾಗುವುದು ಎಂದು ಘೋಷಿಸಿದ್ದರು.
‘ಕಳೆದ 24 ವರ್ಷಗಳಲ್ಲಿ ನಂಜುಂಡಪ್ಪ ವರದಿ ಆಧರಿಸಿ ಹಿಂದುಳಿದ ಪ್ರದೇಶಗಳಲ್ಲಿನ ಅಸಮತೋಲನ ನಿವಾರಿಸಲು ಬಹಳಷ್ಟು ಯೋಜನೆಗಳನ್ನು ರೂಪಿಸಿ ಬಂಡವಾಳ ಹೂಡಿಕೆ ಮಾಡಲಾಗಿದೆ. ಇದರಿಂದ ಆಗಿರುವ ಬದಲಾವಣೆ ಮತ್ತು ಪರಿಣಾಮ ಗಳನ್ನು ಅಧ್ಯಯನ ಮಾಡಲು ಪ್ರಸಕ್ತ ಸಾಲಿನಲ್ಲಿ ಉನ್ನತಾಧಿಕಾರ ಸಮಿತಿ ರಚಿಸಲಾಗುವುದು’ ಎಂದು 2024–25ನೇ ಸಾಲಿನ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಘೋಷಿಸಿದ್ದರು. ಅದರಂತೆ 2024ರ ಮಾರ್ಚ್ 16ರಂದು ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದ ರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ಸಂಬಂಧಿಸಿದಂತೆ ಈಗಾಗಲೇ ಸಚಿವರು, ಶಾಸಕರು, ಕೆಕೆಆರ್‌ಡಿಬಿ ಅಧ್ಯಕ್ಷರು, ಸಂಘ–ಸಂಸ್ಥೆಗಳು, ಕೈಗಾರಿಕೋದ್ಯಮಿ ಗಳೊಂದಿಗೆ ಚರ್ಚಿಸಿ ಸಂವಾದ ನಡೆಸಿ, ಮಾಹಿತಿಗಳನ್ನು, ಅಭಿಪ್ರಾಯಗಳನ್ನು ಕ್ರೋಡೀಕರಿಸಿದೆ. ಸಮಿತಿಯು ವರದಿಯ ಕರಡು ಸಿದ್ಧಪಡಿಸಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗೆ ಸಲ್ಲಿಸಲು ತಯಾರಿ ನಡೆಸಿದೆ.
ಪ್ರತಿ ಕ್ವಿಂಟಲ್‌ಗೆ ₹2,400 ಬೆಂಬಲ ಬೆಲೆಯಲ್ಲಿ, ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರುವ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಮೆಕ್ಕೆಜೋಳ ಖರೀದಿಸಿ ಎಂದು ಸಹಕಾರ ಇಲಾಖೆಯು ಇದೇ 2ರಂದು ಆದೇಶ ಹೊರಡಿಸಿತ್ತು.
ಇಲಾಖೆಯು ಹೇರಿದ್ದ ಈ ಮಿತಿಗೆ ರೈತರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇಲಾಖೆಯು ಭಾನುವಾರ ಆದೇಶ ಹೊರಡಿಸಿದ್ದು, ಮಿತಿಯನ್ನು 50 ಕ್ವಿಂಟಲ್‌ಗೆ ಹೆಚ್ಚಿಸಿದೆ.
‘ಉತ್ತರ’ದಸಮಸ್ಯೆಗಳಿಗೆಕಿವಿಯಾಗುವುದೇಸರ್ಕಾರ?
ರಾಜ್ಯದ ದಕ್ಷಿಣದ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರದ ಹಲವು ಜಿಲ್ಲೆಗಳು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿವೆ. ಸರ್ಕಾರವು ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಿಲ್ಲ ಎನ್ನುವುದು ಈ ಜಿಲ್ಲೆಗಳ ಹೋರಾಟಗಾರರ ಆರೋಪ. ಚುನಾವಣೆಯಲ್ಲಿ ಗೆಲವು ಸಾಧಿಸಿದ ಶಾಸಕರು, ಸಂಸದರು ಕೂಡ ತಮ್ಮ ಜಿಲ್ಲೆಗಳು ಎದುರಿಸುವ ಸಮಸ್ಯೆಗಳನ್ನು ವಿಧಾನಸಭೆ, ಲೋಕಸಭೆಗಳಲ್ಲಿ ಪ್ರಸ್ತಾಪಿಸುವುದಿಲ್ಲ. ಹೀಗಾಗಿ ತಮ್ಮ ನೋವು ನೀಗುವುದೆಂದು, ಅಭಿವೃದ್ಧಿಯ ಪ್ರಶ್ನೆಗಳಿಗೆ ಉತ್ತರ ಸಿಗುವುದೆಂದು ಎಂದು ಜನ ನೋವು ತೋಡಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೇ ಆಗಾಗ ಪ್ರತ್ಯೇಕ ರಾಜ್ಯದ ಕೂಗು ಏಳುತ್ತಿರುತ್ತದೆ.
ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನ ಕಲಂ 371 (ಜೆ) ಅಡಿಯಲ್ಲಿ ವಿಶೇಷ ಸವಲತ್ತುಗಳನ್ನು ಕಲ್ಪಿಸಿದರೂ ಈ ಭಾಗದ ಜಿಲ್ಲೆಗಳು ಇನ್ನೂ ಅಭಿವೃದ್ಧಿಯತ್ತ ಹೆಜ್ಜೆ ಹಾಕಿಲ್ಲ. ಮೂಲಸೌಕರ್ಯ, ಕೈಗಾರಿಕೆ, ಶಿಕ್ಷಣ, ಕೃಷಿ, ನೀರಾವರಿ, ನಗರ ಅಭಿವೃದ್ಧಿ, ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಮಸ್ಯೆಗಳು ಹಾಗೆಯೇ ಉಳಿದುಕೊಂಡಿವೆ.
ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧ ಸಜ್ಜುಗೊಂಡಿದೆ. ರಾಜ್ಯದ ಉತ್ತರದ ಜಿಲ್ಲೆಗಳು, ಅಲ್ಲಿನ ಜನರ ಸಂಕಷ್ಟಗಳ ಬಗ್ಗೆ ಚರ್ಚಿಸುವ ಉದ್ದೇಶದಿಂದ ಬೆಳಗಾವಿಯಲ್ಲಿ ಪ್ರತಿ ವರ್ಷ ಅಧಿವೇಶನ ನಡೆಸಲಾಗುತ್ತದೆ. ಆದರೆ, ಪ್ರತಿ ಬಾರಿಯೂ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಗ್ವಾದ, ಕಲಹಗಳಲ್ಲೇ ಅಧಿವೇಶನ ಮುಗಿದು ಹೋಗುತ್ತಿದೆ. ಈ ಬಾರಿಯಾದರೂ ಹಲವು ವರ್ಷಗಳಿಂದ ಪರಿಹಾರವಾಗದೇ ಉಳಿದಿರುವ ತಮ್ಮ ಸಮಸ್ಯೆಗಳು, ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ನಡೆಯಲಿ ಎಂಬುದು ಉತ್ತರ ಕರ್ನಾಟಕದ ಜಿಲ್ಲೆಗಳ ಜನರ ಆಶಯ.
ಈ ಭಾಗದ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಆಗಬೇಕಿರುವ ಕೆಲಸಗಳನ್ನು ಇಲ್ಲಿ ನೀಡಲಾಗಿದೆ.
ಬೆಳಗಾವಿ
lಬೆಳಗಾವಿ ಜಿಲ್ಲೆಯನ್ನು ವಿಭಜಿಸಿ, ಗೋಕಾಕ ಹಾಗೂ ಚಿಕ್ಕೋಡಿ ಕೇಂದ್ರಗಳಾಗಿ ಇನ್ನೆರಡು ಹೊಸ ಜಿಲ್ಲೆ ರಚಿಸಬೇಕು ಎಂಬ ಬೇಡಿಕೆ ಎರಡು ದಶಕಗಳಿಂದ ಇದ್ದು, ಹೋರಾಟ ಮುಂದುವರಿದಿದೆ
lಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮಾದರಿಯಲ್ಲೇ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಮಾಡಲಾಗುವುದು ಎಂದು ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿತ್ತು. ಕಾಂಗ್ರೆಸ್ ಸರ್ಕಾರ ಈ ಬೇಡಿಕೆಗೆ ಸ್ಪಂದಿಸಿಲ್ಲ
lಹಿಂದಿನ ಸರ್ಕಾರವು ಬೆಳಗಾವಿ ಜಿಲ್ಲೆಯ 14 ಏತ ನೀರಾವರಿಗಳಿಗೆ ಅನುಮೋದನೆ ನೀಡಿ, ₹5,000 ಕೋಟಿ ಅನುದಾನ ಒದಗಿಸಿತ್ತು. ಹಾಲಿ ಸರ್ಕಾರ ಬಂದ ಮೇಲೆ ಯಾವೊಂದು ಏತ ನೀರಾವರಿಗೂ ಹಣ ನೀಡಿಲ್ಲ
lಗೋಕಾಕ ಜಲಪಾತವನ್ನು ಜೋಗದ ಮಾದರಿಯಲ್ಲಿ ಅಂತರರಾಷ್ಟ್ರೀಯ ಪ್ರವಾಸಿತಾಣವಾಗಿಸಬೇಕು ಎಂಬ ಕೂಗು ಮೂರು ದಶಕಗಳಿಂದ ಇದೆ
lಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ, ಕಾಗವಾಡ ಹಾಗೂ ನೆರೆಯ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ದ್ರಾಕ್ಷಿ ಬೆಳೆಯಲಾಗುತ್ತದೆ. ಇದರಲ್ಲಿ ಶೇ 80ರಷ್ಟು ದ್ರಾಕ್ಷಿಯನ್ನು ಒಣಗಿಸಿ ಮಾರಾಟ ಮಾಡಲಾಗುತ್ತದೆ. ಶೇ 20ರಷ್ಟು ಮಾತ್ರ ಸ್ಥಳೀಯ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ದ್ರಾಕ್ಷಿ ಶೀಥಲೀಕರಣ ಘಟಕ ನಿರ್ಮಾಣ ಮಾಡುವುದು ಹಾಗೂ ರಫ್ತು ಮಾಡಲು ಕಾರ್ಗೊ ವಿಮಾನ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆ ಇನ್ನೂ ಈಡೇರಿಲ್ಲ
ಧಾರವಾಡ
lಧಾರವಾಡದ ವಿದ್ಯಾಲಯಗಳಲ್ಲಿ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳನ್ನು ಮಾಡುತ್ತಿದ್ದಾರೆ. ಹಾಸ್ಟೆಲ್‌ಗಳ ಕೊರತೆಯಿಂದ ಬಹಳಷ್ಟು ವಿದ್ಯಾರ್ಥಿಗಳು ಪಿ.ಜಿ, ಬಾಡಿಗೆ ಕೊಠಡಿ ಮೊದಲಾದವನ್ನು ಅವಲಂಬಿಸಬೇಕಾದ ಸ್ಥಿತಿ ಇದೆ
lಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಘೋಷಣೆಯಾಗಿದೆ. ಆದರೆ, ಈವರೆಗೆ ಅಂತಿಮ ಅಧಿಸೂಚನೆ ಪ್ರಕಟವಾಗಿಲ್ಲ. ಧಾರವಾಡಕ್ಕೆ ವರ್ತುಲ ರಸ್ತೆ ನಿರ್ಮಾಣ ಪ್ರಸ್ತಾವ, ಮಹದಾಯಿ ಯೋಜನೆ ನನೆಗುದಿಗೆ ಬಿದ್ದಿವೆ
lಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಹುಬ್ಬಳ್ಳಿಯಲ್ಲಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆಗೆ ಇಲ್ಲಿನ ಕೆಎಂಸಿಆರ್‌ಐ ಆಸ್ಪತ್ರೆಯಿಂದ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು, ಅನುಮೋದನೆ ಸಿಕ್ಕಿಲ್ಲ
lಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಜವಳಿ ಪಾರ್ಕ್ ನಿರ್ಮಿಸುವುದಾಗಿ 2022ರ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈವರೆಗೂ ಅದು ಕಾರ್ಯಗತವಾಗಿಲ್ಲ
lಉತ್ತರ ಕರ್ನಾಟಕ ಭಾಗದ ಜನಪದ ಕಲೆಗಳನ್ನು ಉಳಿಸಿ, ಬೆಳೆಸಲು ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಸಮೀಪದ ಅಧ್ಯಾಪಕ ನಗರದಲ್ಲಿ ನಿರ್ಮಿಸಲಾಗುತ್ತಿರುವ ‘ಜಾನಪದ ಜಗತ್ತು’ ಕಾಮಗಾರಿ 14 ವರ್ಷಗಳಿಂದ ನನೆಗುದಿಗೆ ಬಿದ್ದಿದೆ
ಬಳ್ಳಾರಿ
lಜಿಲ್ಲೆಯಲ್ಲಿ ವ್ಯಾಪಕವಾಗಿ ಮೆಣಸಿನಕಾಯಿ ಬೆಳೆಯುತ್ತಿದ್ದರೂ ಮೆಣಸಿನಕಾಯಿ ಮಾರುಕಟ್ಟೆ ಇಲ್ಲ
lಸಂಡೂರಿನಲ್ಲಿ ಮೈನಿಂಗ್ ಕಾಲೇಜು ಆರಂಭಿಸುವುದಾಗಿ ಹೇಳಿದ್ದ ಸರ್ಕಾರ ಈವರೆಗೆ ಕ್ರಮ ಜರುಗಿಸಿಲ್ಲ
ವಿಜಯನಗರ
lಹೊಸಪೇಟೆಯಲ್ಲಿ 250 ಹಾಸಿಗೆಗಳ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಇನ್ನೂ ಆರಂಭವಾಗದ ಕಾರಣ ಆರೋಗ್ಯ ಸೇವೆಗಳ ಸ್ಥಿತಿಯು ಚಿಂತಾಜನಕ ಸ್ಥಿತಿಯಲ್ಲಿದೆ
lರಾಜ್ಯದಲ್ಲಿಯೇ ಅತ್ಯಧಿಕ ಪ್ರಮಾಣದಲ್ಲಿ ಮಾಜಿ ದೇವದಾಸಿಯರು ಇರುವ ಜಿಲ್ಲೆ ಇದು. ಅಪೌಷ್ಟಿಕತೆ ಸಮಸ್ಯೆ ಇಲ್ಲಿನ ಮಕ್ಕಳನ್ನು ಕಾಡುತ್ತಿದ್ದು, ಸದ್ಯ ಜಿಲ್ಲೆಯಲ್ಲಿ 580 ಅಪೌಷ್ಟಿಕ ಮಕ್ಕಳಿರುವುದನ್ನು ಗುರುತಿಸಲಾಗಿದೆ. ಸುಮಾರು 100 ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಇಲ್ಲ. ಶಾಲಾ ಕಟ್ಟಡಗಳ ಸ್ಥಿತಿಯೂ ಅಷ್ಟೇ
l ಹಂಪಿ ಕನ್ನಡ ವಿಶ್ವವಿದ್ಯಾಲಯವು ಭಾಷೆಯ ಅಭಿವೃದ್ಧಿ, ಸಂಶೋಧನೆಗಾಗಿ ಸ್ಠಾಪನೆಯಾಗಿರುವ ದೇಶದ ಏಕೈಕ ವಿಶ್ವವಿದ್ಯಾಲಯ. ಇಲ್ಲಿ ಬೋಧಕರು, ಅನುದಾನದ ಕೊರತೆ ಕಾಡುತ್ತಿದೆ
ವಿಜಯಪುರ
lಜಿಲ್ಲೆಯವರೇ ಆದ ಎಂ.ಬಿ.ಪಾಟೀಲ ಅವರು ಬೃಹತ್ ಕೈಗಾರಿಕಾ ಸಚಿವರಾಗಿದ್ದರೂ ಇದುವರೆಗೆ ಕೈಗಾರಿಕೆಗಳು ಆರಂಭವಾಗಿಲ್ಲ. ಮೈಸೂರು ಸ್ಯಾಂಡಲ್ ಸೋಪ್ ಘಟಕ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದರೂ ಆರಂಭವಾಗಿಲ್ಲ
lವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಆರಂಭಿಸಬೇಕು, ಉದ್ದೇಶಿತ ಖಾಸಗಿ ಸಹಭಾಗಿತ್ವವನ್ನು (ಪಿಪಿಪಿ) ಕೈಬಿಡಬೇಕು ಎಂದು ಆಗ್ರಹಿಸಿ ವಿವಿಧ ವಿದ್ಯಾರ್ಥಿಪರ, ದಲಿತ ಪರ, ಮಹಿಳಾ ಪರ, ರೈತ, ಕಾರ್ಮಿಕ ಪರ, ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಒಗ್ಗೂಡಿ ಮೂರು ತಿಂಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿವೆ
l ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಕಾರ್ಯಾರಂಭಿಸಿಲ್ಲ
lವಿಜಯಪುರದ ಇಟ್ಟಂಗಿಹಾಳದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಫುಡ್ ಪಾರ್ಕ್ ಸ್ಥಾಪನೆ ಕಾರ್ಯ ಹಾಗೂ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ ಅನುಷ್ಠಾನವಾಗದೇ ನನೆಗುದಿಗೆ ಬಿದ್ದಿವೆ
ಗದಗ
lಕಪ್ಪತ್ತಗುಡ್ಡವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವಂತೆ ಜನರ ಕೂಗಿಗೆ ಇನ್ನೂ ಬಲ ಬಂದಿಲ್ಲ. ನೀಲನಕ್ಷೆ ಸಿದ್ಧವಾಗಿದ್ದರೂ ಅನುದಾನ ಬಿಡುಗಡೆ ಆಗಿಲ್ಲ
lಗದಗ ಜಿಲ್ಲೆಯಲ್ಲಿ ಪ್ರವಾಸಿ ಕೇಂದ್ರಗಳ ಸಮಗ್ರ ಅಭಿವೃದ್ಧಿಗಾಗಿ ತಜ್ಞರು ಅಧ್ಯಯನ ನಡೆಸಿ ಅಂದಾಜು ₹804 ಕೋಟಿ ಅನುದಾನ ಬೇಕು ಎಂದು ಸರ್ಕಾರಕ್ಕೆ ವರದಿ ಕೊಟ್ಟಿದ್ದಾರೆ. ಆದರೆ, ಈವರೆಗೆ ಹಣ ಬಿಡುಗಡೆಯಾಗಿಲ್ಲ
lಗದಗ -ಬೆಟಗೇರಿ ಅವಳಿ ನಗರದಲ್ಲಿ 24/7 ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆಗೊಂಡು ಹಲವು ವರ್ಷಗಳು ಕಳೆದರೂ ಪ್ರತಿದಿನವೂ ನೀರು ಸಿಗುತ್ತಿಲ್ಲ. ಕೆಲವೊಮ್ಮೆ ಮಳೆಗಾಲದಲ್ಲೂ ನೀರಿಗೆ ತತ್ವಾರ ಎದುರಾಗುತ್ತಿದೆ
ಬಾಗಲಕೋಟೆ
1964ರಲ್ಲಿ ಆರಂಭಗೊಂಡ ಕೃಷ್ಣಾ ಮೇಲ್ದಂಡೆ ಯೋಜನೆ ಆರು ದಶಕಗಳು ಕಳೆದರೂ ಪೂರ್ಣಗೊಂಡಿಲ್ಲ. ಇದು ವಿಜಯಪುರ, ಕಲಬುರ್ಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳ 12.14 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸುವ ಬೃಹತ್ ಯೋಜನೆಯಾಗಿದೆ. ಮೊದಲ ಹಾಗೂ ಎರಡನೇ ಹಂತದಲ್ಲಿ ಈಗಾಗಲೇ 6.12 ಲಕ್ಷ ಹೆಕ್ಟೇರ್‌ಗೆ ನೀರು ಒದಗಿಸಲಾಗಿದೆ. ಇನ್ನೂ 6 ಲಕ್ಷ ಹೆಕ್ಟೇರ್‌ಗೆ ನೀರು ಒದಗಿಸುವ ಮೂರನೇ ಹಂತದ ಕಾಮಗಾರಿ ಆಗಬೇಕಿದೆ
ಹಾವೇರಿ
lಅಖಂಡ ಧಾರವಾಡ ಜಿಲ್ಲೆಯಿಂದ ವಿಭಜನೆಗೊಂಡು ಹೊಸ ಜಿಲ್ಲೆಯಾಗಿ 28 ವರ್ಷವಾದರೂ ಹಾವೇರಿ ನಗರಕ್ಕೆ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ವರದಾ, ತುಂಗಭದ್ರಾ ನದಿಗಳು ಹರಿದಿರುವ ಜಿಲ್ಲೆಯಲ್ಲಿ, ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಯೋಜನೆಗಳಿಲ್ಲ
lಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯಲ್ಲಿ ವಿಶ್ವದ ಏಕೈಕ ಜಾನಪದ ವಿಶ್ವವಿದ್ಯಾಲಯವಿದೆ. ಹಾವೇರಿಯಲ್ಲಿಯೂ ನೂತನವಾಗಿ ಹಾವೇರಿ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಎರಡು ವಿಶ್ವವಿದ್ಯಾಲಯಗಳಿಗೂ ಅನುದಾನವಿಲ್ಲ
lಹಾವೇರಿ, ರಾಣೆಬೆನ್ನೂರು, ಹಿರೇಕೆರೂರು, ಬ್ಯಾಡಗಿ, ರಟ್ಟೀಹಳ್ಳಿ, ಶಿಗ್ಗಾವಿ ಹಾಗೂ ಸವಣೂರು ತಾಲ್ಲೂಕುಗಳು ಸಾಕಷ್ಟು ಹಿಂದುಳಿದಿವೆ. ಎಲ್ಲ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳ ಅಗತ್ಯವಿರುವುದಾಗಿ ಜನರು ಒತ್ತಾಯಿಸುತ್ತಿದ್ದಾರೆ
ಕಲಬುರಗಿ
lಜಿಲ್ಲೆಯ ಬಹುತೇಕ ನೀರಾವರಿ ಯೋಜನೆಗಳು ವಿಫಲವಾಗಿದ್ದು, ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್, ಚಿಂಚೋಳಿ ತಾಲ್ಲೂಕಿನ ನಾಗರಾಳ, ಚಂದ್ರಂಪಳ್ಳಿ ಜಲಾಶಯದ ನೀರು ಹರಿಸಲು ವಿತರಣಾ ಜಾಲವನ್ನು ಬಲಪಡಿಸಲು ಅನುದಾನದ ಅಗತ್ಯವಿದೆ
lಕಲಬುರಗಿ ತಾಲ್ಲೂಕಿನ ಹೊನ್ನಕಿರಣಗಿ ಬಳಿ ಪಿಎಂ ಮಿತ್ರಾ ಯೋಜನೆಯಡಿ ಆರಂಭಿಸಲು ಉದ್ದೇಶಿಸಿರುವ ಜವಳಿ ಪಾರ್ಕ್ ಅನುಷ್ಠಾನ ಮಾಡಲು ಅನುದಾನಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಬೇಕಾಗಿದೆ
lಹೊಸದಾಗಿ ರಚನೆಯಾದ ಶಹಬಾದ್, ಕಾಳಗಿ, ಕಮಲಾಪುರ, ಯಡ್ರಾಮಿ ತಾಲ್ಲೂಕುಗಳಿಗೆ ತಾಲ್ಲೂಕು ಆಸ್ಪತ್ರೆಗಳನ್ನು ಮಂಜೂರು ಮಾಡಬೇಕು ಎಂಬುದು ಇಲ್ಲಿನ ಜನರ ಆಗ್ರಹ
ಕೊಪ್ಪಳ
lಕೊಪ್ಪಳ ಸಮೀಪದಲ್ಲಿ ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸ್ ಇಂಡಿಯಾ ಕಾರ್ಖಾನೆಗಳು ವಿಸ್ತರಣೆಗೆ ಮುಂದಾಗಿದ್ದು, ಈ ಕಾರ್ಖಾನೆಗಳು ಆರಂಭವಾದರೆ ಜಿಲ್ಲಾ ಕೇಂದ್ರ ದೂಳುಮಯವಾಗುತ್ತದೆ. ಈಗಾಗಲೇ ಇರುವ ಕಾರ್ಖಾನೆಗಳಿಂದ ಕೊಪ್ಪಳ ತಾಲ್ಲೂಕಿನ 20 ಹಳ್ಳಿಗಳು ನಲುಗಿ ಹೋಗಿವೆ. ಅದೇ ಪರಿಸ್ಥಿತಿ ಜಿಲ್ಲಾ ಕೇಂದ್ರಕ್ಕೂ ಬರುತ್ತದೆ ಎನ್ನುವ ಆತಂಕ ಜನರಲ್ಲಿದ್ದು ಜಿಲ್ಲಾ ಬಚಾವೊ ಆಂದೋಲನ ಸಮಿತಿ ಅನಿರ್ದಿಷ್ಟ ಅವಧಿ ಧರಣಿ ನಡೆಸುತ್ತಿದೆ. ಜಿಲ್ಲೆಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈಗಾಗಲೇ ಭೇಟಿಯಾಗಿದ್ದಾರೆ. ಬಲ್ಡೋಟಾ ವಿಸ್ತರಣೆ ನಿಲ್ಲಿಸಬೇಕು ಎಂದು ಮೌಖಿಕವಾಗಿ ಹೇಳಿದ್ದಾರೆ. ಈ ಕುರಿತು ಸರ್ಕಾರ ಸ್ಪಷ್ಟನಿರ್ಧಾರ ಕೈಗೊಳ್ಳಬೇಕು, ಲಿಖಿತವಾಗಿ ಆದೇಶ ಹೊರಡಿಸಬೇಕು ಎಂಬುದು ಜಿಲ್ಲೆಯ ಜನರ ಆಗ್ರಹ
lತುಂಗಭದ್ರಾ ಜಲಾಶಯದಲ್ಲಿ ಅಂದಾಜು 30 ಟಿಎಂಸಿ ಅಡಿಯಷ್ಟು ಹೂಳು ತುಂಬಿಕೊಂಡಿದೆ. ಜಲಾಶಯ ತುಂಬಿದ ಬಳಿಕ ವ್ಯರ್ಥವಾಗಿ ಹರಿಯುವ ನೀರು ನದಿ ಪಾಲಾಗುವ ಬದಲು ಸಂಗ್ರಹಿಸಲು ಜಿಲ್ಲೆಯ ಕನಕಗಿರಿ ತಾಲ್ಲೂಕಿನ ನವಲಿ ಗ್ರಾಮದ ಬಳಿ ಸಮಾನಾಂತರ ಜಲಾಶಯ ನಿರ್ಮಿಸಲು ₹13,040 ಕೋಟಿ ಮೊತ್ತದ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ. ತುಂಗಭದ್ರಾ ಜಲಾಶಯದ ನೀರಿನಲ್ಲಿ ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳು ಪಾಲು ಹೊಂದಿದ್ದು, ಆ ರಾಜ್ಯಗಳಿಂದ ಸ್ಪಂದನೆ ಸಿಗದ ಕಾರಣ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ
ಬೀದರ್
l1987ರಲ್ಲಿ ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡು ಸಂತ್ರಸ್ತರಾದ ರೈತರಿಗೆ ಪರಿಹಾರ ನೀಡಬೇಕೆನ್ನುವುದು ನಾಲ್ಕು ದಶಕಗಳ ಪ್ರಮುಖ ಬೇಡಿಕೆಯಾಗಿದೆ. ಹೋದ ವರ್ಷ ರೈತರು ಸುದೀರ್ಘ ಒಂದು ವರ್ಷ ಧರಣಿ ನಡೆಸಿದ್ದರು. ಸರ್ಕಾರ ವಿವಿಧ ರೀತಿಯ ನೆಪಗಳನ್ನು ಒಡ್ಡಿ ಪರಿಹಾರ ವಿಳಂಬ ಮಾಡುತ್ತಲೇ ಇದೆ
lಕಾರಂಜಾ–ಮಾಂಜ್ರಾ ನದಿ ಜಲಾನಯನ ಪ್ರದೇಶದಲ್ಲಿ ಎರಡು ಏತ ನೀರಾವರಿ ವ್ಯವಸ್ಥೆಗಳನ್ನು ನಿರ್ಮಿಸುವ ಪ್ರಸ್ತಾವ ರಾಜ್ಯ ಸರ್ಕಾರದ ಮುಂದಿದೆ. ಈ ಯೋಜನೆಗಳು ಕೃಷ್ಣಾ ನದಿ ಜಲಾನಯನ ಪ್ರದೇಶದಿಂದ 8.4 ಟಿಎಂಸಿ ಅಡಿ ನೀರನ್ನು ಮತ್ತು ಬಚಾವತ್ ನದಿ ನೀರು ಹಂಚಿಕೆ ಪ್ರಕಾರ ಗೋದಾವರಿ ಜಲಾನಯನ ಪ್ರದೇಶದಿಂದ ಬಳಕೆಯಾಗದ ನೀರನ್ನು ಬಳಸಲು ಉದ್ದೇಶಿಸಲಾಗಿದೆ. ಆದರೆ, ಇದಕ್ಕೆ ಅನುದಾನ ನೀಡಿಲ್ಲ.
lಕಲ್ಯಾಣ ಕರ್ನಾಟಕಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ಸೌಲಭ್ಯ ಕಲ್ಪಿಸುವ 371 (ಜೆ) ಸಮರ್ಪಕ ಅನುಷ್ಠಾನಗೊಳಿಸಬೇಕು. ಬ್ಯಾಕ್‌ಲಾಗ್ ಸೇರಿದಂತೆ ಎಲ್ಲಾ ರೀತಿಯ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಬೇಕು ಎನ್ನುವ ಆಗ್ರಹವೂ ಇದೆ
ಯಾದಗಿರಿ
lಯಾದಗಿರಿ ಜಿಲ್ಲೆಯಾಗಿ 15 ವರ್ಷಗಳು ಕಳೆದರೂ ಜಿಲ್ಲಾ ಕೇಂದ್ರದಲ್ಲಿ ಒಳಚರಂಡಿ ವ್ಯವಸ್ಥೆಯೇ ಇಲ್ಲ. ಕೊಳಚೆ ನೀರನ್ನು ಸಂಸ್ಕರಣೆ ಮಾಡದೆ ಭೀಮಾ ನದಿಗೆ ಬಿಡಲಾಗುತ್ತಿದೆ. ಇದರ ಜೊತೆಗೆ ಯಾದಗಿರಿ ನಗರಕ್ಕೆ ರಿಂಗ್ ರಸ್ತೆಯೂ ಇಲ್ಲ
lಯಾದಗಿರಿ ತಾಲ್ಲೂಕಿನ ಕಡೇಚೂರು–ಬಾಡಿಯಾಳ ಸೀಮೆಯಲ್ಲಿ ಕೈಗಾರಿಕಾ ವಲಯ ಸ್ಥಾಪನೆಗೆ 3,300 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿದೆ. ಆದರೆ, ಸೂಕ್ತ ಕೈಗಾರಿಕೆಗಳು ಬರದೆ ಇದು ಈಗ ರಾಸಾಯನಿಕ ಔಷಧಿ ಕಂಪನಿಗಳಿಗೆ ಜಾಗ ಮಾಡಿಕೊಟ್ಟಂತೆ ಆಗಿದೆ. ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರವೂ ಬಂದಿಲ್ಲ
lಜಿಲ್ಲೆಯು ಭತ್ತದ ಕಣಜ ಎಂದು ಕರೆಸಿಕೊಳ್ಳುತ್ತಿದ್ದರೂ ಅಕ್ಕಿ ಗಿರಣಿಗಳು ಸ್ಥಾಪನೆಯಾಗಿಲ್ಲ. ರೈತರು ಹೆಚ್ಚಾಗಿ ಹತ್ತಿ ಮತ್ತು ಬ್ಯಾಡಗಿ ಮೆಣಸಿನಕಾಯಿ ಬೆಳೆ ಬೆಳೆಯುತ್ತಾರೆ. ಆದರೆ ಸೂಕ್ತ ಮಾರುಕಟ್ಟೆ ಇಲ್ಲವಾಗಿದೆ. ಹತ್ತಿ ಸಂಶೋಧನಾ ಕೇಂದ್ರ ಸ್ಥಾಪಿಸುವ ಬೇಡಿಕೆಗೆ ಮನ್ನಣೆ ಸಿಗುತ್ತಿಲ್ಲ
ರಾಯಚೂರು
lಜಿಲ್ಲೆಯ ನದಿ ತೀರದ ಗ್ರಾಮಗಳ ರೈತರ ಹೊಲಗಳಿಗೆ ಪ್ರಸ್ತುತ ಮಾರ್ಚ್ 30ರ ವರೆಗೆ ಮಾತ್ರ ನೀರು ಪೂರೈಕೆಯಾಗುತ್ತಿದೆ. ಆಲಮಟ್ಟಿ ಡ್ಯಾಂ ಎತ್ತರಿಸಿದರೆ ಏಪ್ರಿಲ್ 15ರ ವರೆಗೂ ನೀರು ಲಭಿಸಲಿದೆ. ಇದರಿಂದ ಬೇಸಿಗೆಯಲ್ಲಿ ನೀರಿನ ಕೊರತೆ ನೀಗಲಿದೆ. ಜಿಲ್ಲೆಯಲ್ಲಿ ಮುಖ್ಯ ಕಾಲುವೆಗಳು ನಿರ್ಮಾಣವಾಗಿವೆ. ಇದರ ಜತೆಗೆ ಹೊಲಗಾಲುವೆಗಳೂ ನಿರ್ಮಾಣವಾಗಬೇಕು ಎಂಬುದು ರೈತರ ಒತ್ತಾಯ
lಜಿಲ್ಲೆಯಲ್ಲಿ ಕೃಷ್ಣ ಭಾಗ್ಯ ಜಲ ನಿಗಮದ ‘ಬಿ’ ಸ್ಕೀಮ್ (ಅಣೆಕಟ್ಟು ಎತ್ತರ ಕಾಮಗಾರಿ ನಡೆದಾಗ ನೀರು ಹರಿಸುವುದು) ಯೋಜನೆಯಡಿ ನಾರಾಯಣಪುರ ಬಲದಂಡೆ 9 (ಎ) ವಿತರಣಾ ಕಾಲುವೆ ಕಾಮಗಾರಿ 13 ವರ್ಷಗಳಿಂದ ನನೆಗುದಿಗೆ ಬಿದ್ದಿದೆ
l ಯುಕೆಪಿ–3ರಲ್ಲಿ ನಾರಾಯಣಪುರ ಬಲದಂಡೆ ಕಾಲುವೆ 150 ಕಿಮೀ ವರೆಗೆ ವಿಸ್ತರಣೆ ಹಾಗೂ ರಾಂಪುರ ಏತ ನೀರಾವರಿ ಯೋಜನೆ 20ರಿಂದ 27 ಕಿ.ಮೀ ವರೆಗೆ ವಿಸ್ತರಣೆ ಕಾಮಗಾರಿ ಮುಗಿದಿದೆ. ಲಿಂಗಸುಗೂರು ತಾಲ್ಲೂಕಿನ ಹೊನ್ನಹಳ್ಳಿ, ಯರಡೋಣಾ, ಗುಡದನಾಳ ಸೇರಿದಂತೆ ಇತರೆ ಗ್ರಾಮಗಳಲ್ಲಿನ ರೈತರ ಜಮೀನು ದಾಖಲೆಯಲ್ಲಿ ಕೆಲ ದೋಷಗಳು ಇರುವುದರಿಂದ ಭೂ ಪರಿಹಾರ ಬಂದಿಲ್ಲ
l ಜಿಲ್ಲೆಯಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿರುವ ಕಾರಣ ಸಾರಿಗೆ ಸಂಪರ್ಕ ಹಾಗೂ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿದೆ. ರಸ್ತೆಗಳು ಸರಿಯಾಗಿ ಇಲ್ಲದ ಕಾರಣ ರೈತರರು ಕೃಷಿ ಉತ್ಪನ್ನಗಳನ್ನು ಎಪಿಎಂಸಿಗೆ ಸಾಗಿಸಲು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ
lಜಿಲ್ಲೆಯಲ್ಲಿ 110 ಜಿನ್ನಿಂಗ್ ಫ್ಯಾಕ್ಟರಿಗಳಿದ್ದರೂ ಜವಳಿ ಪಾರ್ಕ್ ನಿರ್ಮಿಸಲು ಉದ್ಯಮಿಗಳು ಮುಂದೆ ಬರುತ್ತಿಲ್ಲ. ಸಾರಿಗೆ ಸಮಸ್ಯೆಯೇ ಅಭಿವೃದ್ಧಿಗೆ ತೊಡಕಾಗಿದೆ
ಆಧಾರ್: ಗುರುತು ತಾಳೆಗೆ ಹೊಸ ನಿಯಮ
ಸಂದರ್ಭ: ಹೋಟೆಲ್ಗಳು, ಕಾರ್ಯಕ್ರಮಸಂಘಟಕರುತಮ್ಮಗ್ರಾಹಕರಿಂದಆಧಾರ್ ಕಾರ್ಡ್ನನೆರಳಚ್ಚುಪ್ರತಿಪಡೆದು, ಅವುಗಳನ್ನುತಮ್ಮಲ್ಲಿಇರಿಸಿಕೊಳ್ಳುವುದನ್ನುಕಡಿಮೆಮಾಡಲುಹೊಸನಿಯಮಗಳನ್ನುಶೀಘ್ರವೇಪ್ರಕಟಿಸಲಾಗುತ್ತದೆಎಂದುಅಧಿಕಾರಿಯೊಬ್ಬರುತಿಳಿಸಿದ್ದಾರೆ. ಹೀಗೆ ಆಧಾರ್ ಕಾರ್ಡ್ ಪ್ರತಿ ಪಡೆದುಕೊಳ್ಳುವುದು ಆಧಾರ್ ಕಾಯ್ದೆಗೆ ವಿರುದ್ಧ.
ಹೋಟೆಲ್ ಪ್ರತಿನಿಧಿಗಳು, ಕಾರ್ಯಕ್ರಮ ಸಂಘಟಕರು ಮುಂತಾದವರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವ್ಯಕ್ತಿಯ ಗುರುತನ್ನು ತಾಳೆ ಮಾಡುವ ತಂತ್ರಜ್ಞಾನವನ್ನು ಪಡೆಯಬೇಕು ಎಂದಾದರೆ ತಮ್ಮ ಸಂಸ್ಥೆಯನ್ನು ನೋಂದಣಿ ಮಾಡಿಸುವುದು ಕಡ್ಡಾಯ ಎನ್ನುವ ನಿಯಮಕ್ಕೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು (ಯುಐಡಿಎಐ) ಒಪ್ಪಿಗೆ ನೀಡಿದೆ ಎಂದು ಅದರ ಸಿಇಒ ಭುವನೇಶ್ ಕುಮಾರ್ ಹೇಳಿದ್ದಾರೆ.
‘ಹೊಸ ನಿಯಮವನ್ನು ಶೀಘ್ರದಲ್ಲಿಯೇ ಅಧಿಸೂಚನೆಯಲ್ಲಿ ಪ್ರಕಟಿಸಲಾಗುತ್ತದೆ. ಆಧಾರ್ ಸಂಖ್ಯೆಯನ್ನು ಆಧರಿಸಿ ವ್ಯಕ್ತಿಯ ಗುರುತು ತಾಳೆ ಮಾಡುವ ಸಂಸ್ಥೆಗಳು ತಮ್ಮ ಹೆಸರನ್ನು ನೋಂದಣಿ ಮಾಡುವುದನ್ನು ಈ ನಿಯಮವು ಕಡ್ಡಾಯಗೊಳಿಸುತ್ತದೆ’ ಎಂದು ಕುಮಾರ್ ತಿಳಿಸಿದ್ದಾರೆ.
ಆಧಾರ್‌ನ ಕೇಂದ್ರ ದತ್ತಾಂಶ ಕೋಶದ ಜೊತೆ ಸಂಪರ್ಕ ಹೊಂದದೆಯೂ ವ್ಯಕ್ತಿಯ ಗುರುತು ತಾಳೆ ನೋಡುವ ಹೊಸ ಆ್ಯಪ್ ಒಂದನ್ನು ಯುಐಡಿಎಐ ಪರೀಕ್ಷಿಸುತ್ತಿದೆ. ಈ ಹೊಸ ಆ್ಯಪ್‌ಅನ್ನು ವಿಮಾನ ನಿಲ್ದಾಣಗಳಲ್ಲಿ, ಗ್ರಾಹಕರ ವಯಸ್ಸಿನ ಆಧಾರದಲ್ಲಿ ಉತ್ಪನ್ನ ಗಳನ್ನು ಮಾರಾಟ ಮಾಡಬೇಕಿರುವ ಅಂಗಡಿಗಳಲ್ಲಿ ಬಳಕೆ ಮಾಡಬಹುದು.
ಸೌರಕೃಷಿಪಂಪ್ ಸೆಟ್ : ಮಹಾರಾಷ್ಟ್ರಕ್ಕೆಅಗ್ರಸ್ಥಾನ: ಮೂವತ್ತುದಿನಗಳಲ್ಲಿ 45 ಸಾವಿರಕ್ಕೂಹೆಚ್ಚುಕೃಷಿಪಂಪ್ ಅಳವಡಿಕೆ
ಈ ಸಾಧನೆಯ ಮೂಲಕ ಭಾರತದಲ್ಲಿ ವೇಗವಾಗಿ ಸೌರಶಕ್ತಿ ಆಧಾರಿತ ಚಟುವಟಿಕೆಗಳನ್ನು ಅಳವಡಿಸುತ್ತಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರವು ಅಗ್ರಸ್ಥಾನ ದಲ್ಲಿದೆ. ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಸರ್ಕಾರವೊಂದು ವೇಗವಾಗಿ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಸೌರ ಕೃಷಿ ಪಂಪ್‌ಗಳನ್ನು ಅಳವಡಿಸುತ್ತಿರುವುದರಲ್ಲಿ ಮಹಾರಾಷ್ಟ್ರಎರಡನೇಸ್ಥಾನದಲ್ಲಿದೆ. ಚೀನಾಮೊದಲಸ್ಥಾನದಲ್ಲಿದೆ.
ಈ ಸಾಧನೆಯು, ಕೇಂದ್ರ ಸರ್ಕಾರದ ಪಿಎಂ–ಕುಸಮ್ ಬಿ ಮತ್ತು ಮಗೇಲ್ ತ್ಯಾಲಾ ಸೌರ್ ಕೃಷಿ ಪಂಪ್ ಯೋಜನೆಗಳ (ಎಂಟಿಎಸ್‌ಕೆಪಿವೈ) ಪರಿಣಾಮಕಾರಿ ಅನುಷ್ಠಾನದ ಮೂಲಕ ಭಾರತದಲ್ಲಿ ಶುದ್ಧ ಇಂಧನದ ಪರಿವರ್ತನೆ, ರೈತರ ಜೀವನೋಪಾಯ ಸುಧಾರಣೆ ಮತ್ತು ಸುಸ್ಥಿರ ನೀರಾವರಿಯನ್ನು ಪ್ರೋತ್ಸಾಹಿಸುವ ರಾಜ್ಯ ಸರ್ಕಾರದ ಬದ್ಧತೆಯ ಪ್ರತಿಬಿಂಬವಾಗಿದೆ.
‘ರಾಜ್ಯದಾದ್ಯಂತ ಒಂದು ತಿಂಗಳಲ್ಲಿ 45,911ಕ್ಕೂ ಹೆಚ್ಚು ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಗಳನ್ನು ಅನುಷ್ಠಾನಗೊಳಿ ಸಲಾಗಿದೆ. ಈ ಮೂಲಕ ಸೌರ ಕೃಷಿ ಚಟುವಟಿಕೆಗಳ ಅನುಷ್ಠಾನದಲ್ಲಿ ಮಹಾರಾಷ್ಟ್ರವನ್ನು, ದೇಶದ ಪ್ರಥಮ ರಾಜ್ಯವನ್ನಾಗಿ ಮಾಡಿದ್ದೇವೆ. ಈ ಸಾಧನೆಯು ಸುಸ್ಥಿರ ನೀರಾವರಿಯನ್ನು ಖಚಿತಪಡಿಸುತ್ತ್ತದೆ. ಅಷ್ಟೇ ಅಲ್ಲದೇ, ಕೃಷಿಯಲ್ಲಿ ಉತ್ಪಾದಕತೆ ಮತ್ತು ರೈತರ ಆದಾಯವನ್ನು ಸುಧಾರಿಸುತ್ತದೆ, ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ’ ಎಂದು ಮಹಾರಾಷ್ಟ್ರ ಸರ್ಕಾರದ ಇಂಧನ ಸಚಿವರೂ ಆಗಿರುವ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತಿಳಿಸಿದ್ದಾರೆ.
ಎಂಎಸ್‌ಇಡಿಸಿಎಲ್, ರಾಜ್ಯ ದಾದ್ಯಂತ ಈವರೆಗೆ 7.47 ಲಕ್ಷಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಗಳನ್ನು ಸ್ಥಾಪಿಸಲಾಗಿದೆ. 10.45 ಲಕ್ಷ ಕೃಷಿ ಪಂಪ್‌ಗಳ ಸ್ಥಾಪನೆಯ ಗುರಿ ಹೊಂದಿದೆ. ಇದು ರಾಜ್ಯ, ದೇಶ ವಲ್ಲದೇ, ಅಂತರರಾಷ್ಟ್ರೀಯ ಮಟ್ಟದಲ್ಲಿ ಅನುಷ್ಠಾನಗೊಳಿಸಬಹುದಾದ ಮಾದರಿಯನ್ನು ಸೃಷ್ಟಿಸಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸುತ್ತಾರೆ.
ಹೈದರಾಬಾದ್‌ನ (ಫೈನಾನ್ಸಿಯಲ್ ಡಿಸ್ಟ್ರಿಕ್ಟ್) ನಾನಕ್‌ರಾಮಗೂಡದಲ್ಲಿರುವ ಅಮೆರಿಕ ಕಾನ್ಸುಲೆಟ್ ಜನರಲ್ ಕಟ್ಟಡವಿರುವ ರಸ್ತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರಿಡಲು ಪ್ರಸ್ತಾಪ ಸಿದ್ಧಪಡಿಸಿದೆ. ಈ ಸಂಬಂಧ ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಅಮೆರಿಕ ರಾಯಭಾರ ಕಚೇರಿಗೆ ತೆಲಂಗಾಣ ಸರ್ಕಾರ ಪತ್ರ ಬರೆದಿದೆ.
ನವದೆಹಲಿಯಲ್ಲಿ ಭಾರತ–ಅಮೆರಿಕ ಕಾರ್ಯತಂತ್ರದ ಪಾಲುದಾರಿಗೆ ವಾರ್ಷಿಕ ಸಭೆ ಉದ್ದೇಶಿಸಿ ಮಾತನಾಡಿದ್ದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹೈದರಾಬಾದ್ ನಗರದ ಪ್ರಮುಖ ರಸ್ತೆಗಳಿಗೆ ಗಣ್ಯವಕ್ತಿ, ಪ್ರಮುಖ ಕಂಪನಿಗಳ ಹೆಸರಿಡುವ ಪ್ರಸ್ತಾಪವಿದೆ ಎಂದು ತಿಳಿಸಿದ್ದರು.
ಸಿಮ್ರನ್ಪ್ರೀತ್ ಕೌರ್ಗೆಪಿಸ್ತೂಲ್ ಚಿನ್ನ
ವಿಶ್ವಕಪ್ ಶೂಟಿಂಗ್ 50 ಮೀ. ರೈಫಲ್ ತ್ರೀ ಪೊಸಿಷನ್: ಐಶ್ವರಿ ಪ್ರಸಾದ್‌ಗೆ ಬೆಳ್ಳಿ
ಯುವ ಪ್ರತಿಭೆ ಸಿಮ್ರನ್‌ಪ್ರೀತ್ ಕೌರ್ ಬ್ರಾರ್ ಅವರು ಐಎಸ್‌ಎಸ್‌ಎಫ್ ವಿಶ್ವಕಪ್ ಟೂರ್ನಿಯ ಮಹಿಳೆಯರ 25 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ಭಾನುವಾರ ಪ್ರಬಲ ಕಣದ ಸವಾಲನ್ನು ಎದುರಿಸಿ ಚಿನ್ನದ ಪದಕ ಗೆದ್ದುಕೊಂಡರು. ಪುರುಷರ 50 ಮೀ. ರೈಫಲ್ ತ್ರೀ ಪೊಸಿಷನ್ಸ್ ಸ್ಪರ್ಧೆಯಲ್ಲಿ ಐಶ್ವರಿ ಪ್ರಸಾದ್ ಸಿಂಗ್ ತೋಮಾರ್ ಅವರು ಪದಾರ್ಪಣೆಯಲ್ಲೇ ಬೆಳ್ಳಿ ಪದಕ ಕೊರಳಿಗೇರಿಸಿಕೊಂಡರು.
21 ವರ್ಷ ವಯಸ್ಸಿನ ಸಿಮ್ರನ್‌ಪ್ರೀತ್ ಅವರು ಫೈನಲ್‌ನಲ್ಲಿ ಅಮೋಘ 41 ಸ್ಕೋರ್ ಶೂಟ್ ಮಾಡಿ ತಮ್ಮ ವೃತ್ತಿ ಬದುಕಿನ ಅತಿ ದೊಡ್ಡ ಸಾಧನೆ ದಾಖಲಿಸಿದರು. ಆ ಹಾದಿಯಲ್ಲಿ, ಒಲಿಂಪಿಕ್ ಚಾಂಪಿಯನ್, ಕೊರಿಯಾದ ಯಾಂಗ್ ಜಿ ಇನ್ ಹೆಸರಿನಲ್ಲಿದ್ದ ವಿಶ್ವ ಜೂನಿಯರ್ ದಾಖಲೆ ಸರಿಗಟ್ಟಿ ಪೋಷಕರಿಗೆ ಹೆಮ್ಮೆ ಮೂಡಿಸಿದರು. ಸಿಮ್ರನ್ ಅವರಿಗೆ ಬೆಂಬಲ ನೀಡಲು ತಂದೆ ಸರ್ಕಾರಿ ನೌಕರಿಯನ್ನು ತ್ಯಜಿಸಿದ್ದರು.
ಚೀನಾದ ಯಾವೊ ಕ್ಸಿಯಾನ್‌ಕ್ಸುನ್ (36 ಸ್ಕೋರ್) ಬೆಳ್ಳಿ ಮತ್ತು ಜರ್ಮನಿಯ ದೊರೀನ್ ವೆನ್ನೆಕಾಂಪ್ (30) ಅವರು ಕಂಚಿನ ಪದಕ ಪಡೆದರು. ಅನುಭವಿ ಯಾವೊ ಅವರು 10 ಮೀ. ಏರ್ ಪಿಸ್ತೂಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಆಗಿದ್ದಾರೆ.
ಫೈನಲ್‌ಗೆ ಅರ್ಹತೆ ಪಡೆದ ಭಾರತದ ಮತ್ತೋರ್ವ ಶೂಟರ್ ಇಶಾ ಸಿಂಗ್ ಅವರು ಏಳನೇ ಸ್ಥಾನ ಪಡೆದರು. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅವಳಿ ಪದಕ ಪಡೆದಿದ್ದ ಮನು ಭಾಕರ್ (581 ಪಾಯಿಂಟ್) ಅವರು ಅರ್ಹತಾ ಸುತ್ತಿನಲ್ಲಿ ಒಂಬತ್ತನೇ ಸ್ಥಾನ ಗಳಿಸಿದ್ದರು.
ಈ ವರ್ಷದ ಏಪ್ರಿಲ್‌ನಲ್ಲಿ ಲಿಮಾದಲ್ಲಿ (ಪೆರು) ನಡೆದಿದ್ದ ವಿಶ್ವಕಪ್‌ನಲ್ಲಿ ಬೆಳ್ಳಿ ಗೆದ್ದಿದ್ದ ಸಿಮ್ರನ್‌ಪ್ರೀತ್ ಭಾನುವಾರ ಕ್ವಾಲಿಫಿಕೇಷನ್‌ನಲ್ಲಿ 584 ಪಾಯಿಂಟ್ಸ್ ಸ್ಕೋರ್ ಮಾಡಿ ಐದನೇ ಹಾಗೂ ಇಶಾ 585 ಸ್ಕೋರ್‌ನೊಡನೆ ನಾಲ್ಕನೇ ಸ್ಥಾನ ಗಳಿಸಿ ಫೈನಲ್‌ಗೇರಿದ್ದರು.
ಐಶ್ವರಿಗೆಬೆಳ್ಳಿ: ಇದಕ್ಕೆ ಮೊದಲು, ಪುರು ಷರ ರೈಫಲ್ ತ್ರೀ ಪೊಸಿಷನ್ ಸ್ಪರ್ಧೆಯ ಫೈನಲ್‌ನಲ್ಲಿ ಝೆಕ್ ಗಣರಾಜ್ಯದ ಜಿರಿ ಪ್ರಿವ್ರಾಟ್‌ಸ್ಕಿ 414.2 ಪಾಯಿಂಟ್ಸ್ ಸ್ಕೋರ್ ಮಾಡಿ ಚಿನ್ನ ಗೆದ್ದುಕೊಂಡಿದ್ದರು. ಐಶ್ವರಿ ಅವರಿಗಿಂತ ಕೇವಲ 09.9 ಪಾಯಿಂಟ್ ಅಂತರದಿಂದ ಹಿಂದೆಬಿದ್ದು ಎರಡನೇ ಸ್ಥಾನಕ್ಕೆ ಸರಿದರು. ಒಲಿಂಪಿಕ್ ಚಾಂಪಿಯನ್, ಚೀನಾದ ಲಿಯು ಯುಕುನ್ ಕಂಚಿನ ಪದಕ ಗಳಿಸಿದರು.
ಆ ಮೂಲಕ ಐಶ್ವರಿ ವಿಶ್ವ ಮತ್ತು ಏಷ್ಯಾ ಮಟ್ಟದ ಎಲ್ಲಾ ಸ್ಪರ್ಧೆಗಳಲ್ಲಿ ಐಶ್ವರಿ ಪ್ರಸಾದ್ ಪದಕ ಗೆದ್ದಂತಾಯಿತು. ಎರಡು ಬಾರಿಯ ಒಲಿಂಪಿಯನ್ ಆಗಿರುವ ಐಶ್ವರಿ ಮಾಜಿ ವಿಶ್ವ ಜೂನಿಯರ್ ಚಾಂಪಿಯನ್ ಆಗಿದ್ದಾರೆ. ಹಾಲಿ ಏಷ್ಯನ್ ಚಾಂಪಿಯನ್ ಆಗಿರುವ ಅವರು ಅಕ್ಟೋಬರ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದರು.
ಅರ್ಹತಾ ಸುತ್ತಿನಲ್ಲಿ ಅವರು 595 ಪಾಯಿಂಟ್ ಸ್ಕೋರ್ ಮಾಡಿ ಎರಡನೇ ಸ್ಥಾನ ಗಳಿಸಿದ್ದರು. ಈ ಸುತ್ತಿನಲ್ಲಿ ಅಮೋಘ ಪ್ರದರ್ಶನ ನೀಡಿದ ಚೀನಾದ ಟಿಯಾನ್ ಜಿಯಾಮಿಂಗ್ ಅವರು ವಿಶ್ವದಾಖಲೆಯ 598 ಸ್ಕೋರ್‌ನೊಡನೆ ಅಗ್ರಸ್ಥಾನ ಪಡೆದಿದ್ದರು. ಅಂತಿಮ ಎಂಟರಲ್ಲಿ ಚೀನಾದ ಮೂವರ ಜೊತೆ, ವರ್ಷದ ಅಥ್ಲೀಟ್ ಜಾನ್–ಹೆರ್ಮನ್ ಹೆಗ್ (ನಾರ್ವೆ) ಮತ್ತು ಇಸ್ತವಾನ್ ಪೆನಿ (ಹಂಗೆರಿ) ಅವರೂ ಸ್ಥಾನ ಪಡೆದಿದ್ದರು.
ಮಂಡಿಯೂರಿ ಶೂಟ್ ಮಾಡುವ ಸ್ಪರ್ಧೆಯ 10 ಶಾಟ್‌ಗಳ ನಂತರ ಐಶ್ವರಿ 102.8 ಸ್ಕೋರ್‌ನೊಡನೆ ನಾಲ್ಕನೇ ಸ್ಥಾನ ದಲ್ಲಿದ್ದರು. ಪ್ರೋನ್ (ಅಂಗಾತ ಸ್ಥಿತಿಯಲ್ಲಿ ಶೂಟ್ ಮಾಡುವ) ಪೊಸಿಷನ್ ನಂತರ ಅವರು ಎರಡನೇ ಸ್ಥಾನಕ್ಕೇರಿದರು. ಜಿರಿ ಪ್ರಿವ್ರಾಟ್‌ಸ್ಕಿ ಆಗ ಐಶ್ವರಿ ಅವರಿಗಿಂತ 3.3 ಪಾಯಿಂಟ್ ಮುಂದಿದ್ದರು. ಲಿಯು ಮೂರನೇ ಸ್ಥಾನದಲ್ಲಿದ್ದರು.
ಮಹಿಳೆಯರ ರೈಫಲ್ ತ್ರೀ ಪೊಸಿಷನ್ ನಲ್ಲಿ ಸಿಫ್ತ್ ಕೌರ್ ಸಮ್ರಾ, ಮಹಿಳೆಯರ 25 ಮೀ.ಪಿಸ್ತೂಲ್ ಫೈನಲ್‌ನಲ್ಲಿ ಮನು ಭಾಕರ್ ಅವರು ಅವರು ಅರ್ಹತಾ ಸುತ್ತಿಗಿಂತ ಮೇಲೇರಲು ವಿಫಲರಾದರು.
ಅರ್ಹತಾ ಸುತ್ತಿನಲ್ಲಿ ಸಿಫ್ತ್ 584 ಸ್ಕೋರ್‌ನೊಡನೆ ಹತ್ತನೇ ಸ್ಥಾನ ಪಡೆದರೆ, ಮನು 581 ಸ್ಕೋರ್‌ನೊಡನೆ 9ನೇ ಸ್ಥಾನ ಪಡೆದರು.