Sun. May 10th, 2026

Kannada

ಪ್ರಚಲಿತ ವಿದ್ಯಮಾನಗಳು: 9 & 10ನೇ ಡಿಸೆಂಬರ್ 2025

  • ₹6 ಲಕ್ಷ ಕೋಟಿ ಸಾಲ ರೈಟ್ಆಫ್

ಸಂದರ್ಭ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳು ಕಳೆದ ಐದೂವರೆ ವರ್ಷಗಳಲ್ಲಿ ಒಟ್ಟು ₹6.15 ಲಕ್ಷ ಕೋಟಿ ಮೊತ್ತದ ಸಾಲವನ್ನು ರೈಟ್ಆಫ್ಮಾಡಿವೆ ಎಂದು ಕೇಂದ್ರ ಸರ್ಕಾರವು ಸಂಸತ್ತಿಗೆ ತಿಳಿಸಿದೆ.

  • ‘ಆರ್‌ಬಿಐ ನೀಡಿರುವ ಮಾಹಿತಿ ಪ್ರಕಾರ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ರೈಟ್‌ಆಫ್‌ ಮಾಡಿರುವ ಮೊತ್ತವು ಕಳೆದ ಐದು ಹಣಕಾಸು ವರ್ಷಗಳಲ್ಲಿ ಹಾಗೂ ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್‌ 30ರವರೆಗೆ ₹6.15 ಲಕ್ಷ ಕೋಟಿಯಷ್ಟಾಗಿದೆ’ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
  • ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಕೇಂದ್ರ ಸರ್ಕಾರವು 2022–23ರ ನಂತರದಲ್ಲಿ ಬಂಡವಾಳದ ನೆರವು ಒದಗಿಸಿಲ್ಲ. ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ತಮ್ಮ ಹಣಕಾಸಿನ ಸ್ಥಿತಿಯನ್ನು ಗಮನಾರ್ಹವಾಗಿ ಸುಧಾರಿಸಿಕೊಂಡಿವೆ. ಅವು ಲಾಭದಾಯಕವಾಗಿ ನಡೆಯುತ್ತಿವೆ, ಬಂಡವಾಳದ ಸ್ಥಿತಿಯನ್ನು ಸುಧಾರಿಸಿಕೊಂಡಿವೆ ಎಂದು ಚೌಧರಿ ಹೇಳಿದ್ದಾರೆ.
  • ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಈಗ ಬಂಡವಾಳದ ಅಗತ್ಯಗಳಿಗಾಗಿ ಮಾರುಕಟ್ಟೆ ಮೂಲಗಳನ್ನು ನೆಚ್ಚಿಕೊಳ್ಳುತ್ತಿವೆ, ಆಂತರಿಕ ನಿಧಿಯನ್ನು ಬಳಸಿಕೊಳ್ಳುತ್ತಿವೆ. ಅವು 2022ರ ಏಪ್ರಿಲ್‌ 1ರ ನಂತರದಲ್ಲಿ ಈಕ್ವಿಟಿ ಮತ್ತು ಸಾಲಪತ್ರಗಳ ಮೂಲಕ ಬಂಡವಾಳ ಮಾರುಕಟ್ಟೆ ಗಳಿಂದ ಒಟ್ಟು ₹1.79 ಲಕ್ಷ ಕೋಟಿ ಸಂಗ್ರಹಿಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
  • ಬ್ಯಾಂಕ್‌ಗಳು ತಮ್ಮ ಆಡಳಿತ ಮಂಡಳಿ ಅನುಮೋದನೆ ನೀಡಿದ ನಿಯಮ ಹಾಗೂ ಆರ್‌ಬಿಐ ಮಾರ್ಗಸೂಚಿಗಳಿಗೆ ಅನುಗುಣವಾಗಿ ರೈಟ್‌ಆಫ್‌ ತೀರ್ಮಾನ ತೆಗೆದುಕೊಳ್ಳುತ್ತಿವೆ ಎಂದು ಸಚಿವರು ಹೇಳಿದ್ದಾರೆ. ಆದರೆ ರೈಟ್‌ಆಫ್‌ ಎಂದರೆ ಸಾಲ ಮನ್ನಾ ಅಲ್ಲ, ಸಾಲ ಮನ್ನಾ ಆಗುವುದಿಲ್ಲ, ಸಾಲ ವಸೂಲಿ ಪ್ರಕ್ರಿಯೆ ಮುಂದುವರಿಯುತ್ತದೆ. ಆದರೆ ಬ್ಯಾಂಕ್‌ನ ಲೆಕ್ಕಪತ್ರಗಳಲ್ಲಿ ಎನ್‌ಪಿಎ ಪ್ರಮಾಣ ಕಡಿಮೆಯಾಗಿ ಕಾಣಿಸುತ್ತದೆ.
  • ರೈಟ್‌ಆಫ್‌ ಆದ ಸಾಲಗಳ ವಸೂಲಿಯು ನಿರಂತರ ಪ್ರಕ್ರಿಯೆ. ಬ್ಯಾಂಕ್‌ಗಳು ತಮಗೆ ಲಭ್ಯವಿರುವ ವಿವಿಧ ಮಾರ್ಗಗಳ ಮೂಲಕ ವಸೂಲಾತಿ ಪ್ರಕ್ರಿಯೆಯನ್ನು ಮುಂದುವರಿಸುತ್ತವೆ. ‘ಸರ್ಫೇಸಿ ಕಾಯ್ದೆ’ ಅಡಿ ಕ್ರಮ ಜರುಗಿಸುವುದು, ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಎಲ್‌ಟಿ) ಮೊರೆ ಹೋಗುವುದು, ಸಿವಿಲ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಕೆಲಸವನ್ನು ಅವು ಮಾಡುತ್ತವೆ ಎಂದು ವಿವರಿಸಿದ್ದಾರೆ.
  • ವಸೂಲಾಗದ ಸಾಲಗಳಿಗೆ ಹಣ ತೆಗೆದಿರಿಸುವ ಕೆಲಸ ಆಗಿರುತ್ತದೆ. ಹೀಗಾಗಿ ರೈಟ್‌ಆಫ್‌ ಪ್ರಕ್ರಿಯೆಯ ಕಾರಣದಿಂದಾಗಿ ನಗದು ಹೊರಹರಿಯುವಿಕೆ ಇರುವುದಿಲ್ಲ. ಬ್ಯಾಂಕ್‌ನಲ್ಲಿ ನಗದು ಲಭ್ಯತೆ ಮೇಲೆ ಕೆಟ್ಟ ಪರಿಣಾಮ ಇರುವುದಿಲ್ಲ ಎಂದು ಕೂಡ ಅವರು ಮಾಹಿತಿ ನೀಡಿದ್ದಾರೆ.
  • ಪಾಳುಬಿದ್ದಿದ್ದ ಭೂಮಿಯಲ್ಲಿ ಕಾಂಡ್ಲಾ ವನ

ಸಂದರ್ಭ: ಇಂಗಾಲ ಪ್ರಮಾಣ ಕುಗ್ಗಿಸಿದ್ದಕ್ಕೆ ರೈತರ ಖಾತೆಗೆಕಾರ್ಬನ್ ಕ್ರೆಡಿಟ್ ರೂಪದಲ್ಲಿ ನಗದು ಜಮೆ ಕಾಂಡ್ಲಾ ಕೃಷಿ ಪ್ರದೇಶವು ಮೀನು, ಸಿಗಡಿ, ಏಡಿ ಸೇರಿ ಜಲಚರಗಳ ಸಂತತಿ ಬೆಳೆಯಲು ಅನುಕೂಲಕರ.

  • ರೈತರಿಗೆ ಉತ್ತಮ ಆದಾಯ ಸಿಗುತ್ತದೆ, ಕಾರ್ಯದರ್ಶಿ, ಸ್ನೇಹ ಕುಂಜ ಸಂಸ್ಥೆ
  • ಹಲವು ದಶಕಗಳ ಹಿಂದೆ ಸಿಗಡಿ ಮೀನಿನ ಕೃಷಿಗೆ ಬಳಕೆಯಾಗಿ, ಪಾಳುಬಿದ್ದಿದ್ದ 600 ಎಕರೆ ವಿಸ್ತೀರ್ಣದ ಗಜನಿ ಭೂಮಿಯಲ್ಲಿ ಕಾಂಡ್ಲಾವನ ರೂಪುಗೊಂಡಿದೆ.
  • ಹೊನ್ನಾವರದ ‘ಸ್ನೇಹ ಕುಂಜ’ ಸಂಸ್ಥೆಯು ಗಜನಿ ಭೂಮಿಯ ಒಡೆತನವುಳ್ಳ 250 ರೈತರನ್ನು ಬಳಸಿ ಕಾಂಡ್ಲಾ ಗಿಡಗಳನ್ನು ಬೆಳೆಸುವಂತೆ ಮಾಡಿದೆ. ಹೀಗೆ ಬೆಳೆಸಿದ ಗಿಡಗಳಿಂದ ಸಂಗ್ರಹವಾಗುವ ‘ಕಾರ್ಬನ್ ಕ್ರೆಡಿಟ್’ ಆದಾಯವನ್ನೂ ರೈತರಿಗೆ ನೀಡಲಾಗುತ್ತದೆ.
  • ‘ಹಿಂದೆ ಕಗ್ಗ ತಳಿಯ ಭತ್ತ ಬೆಳೆಯುತ್ತಿದ್ದ ಪ್ರದೇಶದಲ್ಲಿ ಅಘನಾಶಿನಿ ನದಿಯ ಹಿನ್ನೀರು ಬಳಸಿ ಗಜನಿಗಳಲ್ಲಿ ಸಿಗಡಿ ಕೃಷಿ ನಡೆಸಲು ಉದ್ಯಮಿಗಳಿಗೆ ರೈತರು ಜಮೀನು ನೀಡಿದ್ದರು. ಬಿಳಿ ಚುಕ್ಕಿ ರೋಗ ಬಂದು ಸಿಗಡಿ ಕೃಷಿ ನಷ್ಟವಾಗಿತ್ತು. ಹೊಂಡಗಳಲ್ಲಿ ಮುಂದೆ ಕೃಷಿ ಸಾಧ್ಯವಾಗದೆ, ಹಲವು ದಶಕಗಳಿಂದ ಹಾಗೇ ಇದ್ದವು. ಇದೇ ಜಾಗವನ್ನು ಈಗ ಕಾಂಡ್ಲಾ ವನವಾಗಿ ರೂಪಿಸಲಾಗಿದೆ’ ಎಂದು ಸ್ನೇಹಕುಂಜ ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಹೆಗಡೆ ತಿಳಿಸಿದರು.
  • ‘ಕಾಂಡ್ಲಾ ಗಿಡಗಳು ವಾತಾವರಣದಲ್ಲಿನ ಇಂಗಾಲದ ಡೈ ಆಕ್ಸೈಡ್‍ ಹೀರಿ ವಾತಾವರಣ ಶುದ್ಧಗೊಳಿಸುತ್ತವೆ. ಕಾಂಡ್ಲಾ ವನ ಪ್ರಮಾಣ ಹೆಚ್ಚಿದಷ್ಟು ಪರಿಸರದಲ್ಲಿ ಇಂಗಾಲದ ಪ್ರಮಾಣ ಕಡಿಮೆಯಾಗುತ್ತದೆ. ಈ ಕಾರ್ಯಕ್ಕೆ ಹಿಮಾಲಯ ವೆಲ್‌ನೆಸ್ ಕಂಪನಿ ಮತ್ತು ವ್ಯಾಲ್ಯು ನೆಟ್ವರ್ಕ್ ವೆಂಚರ್ಸ್ ಎಂಬ ಏಜೆನ್ಸಿ ಮೂಲಕ ಪರಿಸರ ರಕ್ಷಣೆಗೆ ಕಾಂಡ್ಲಾ ಕೃಷಿ ಕೈಕೊಳ್ಳಲಾಗಿದೆ’ ಎಂದು ಹೇಳಿದರು.
  • ‘ಪ್ರತಿ ವರ್ಷ 12 ಸಾವಿರ ಮೆಟ್ರಿಕ್ ಟನ್‍ ಇಂಗಾಲವನ್ನು ನೆಲದಡಿ ಹುದು ಗಿಸಿ ಪರಿಸರ ಶುದ್ಧ ಮಾಡಲು ರೈತರ ಜಮೀನು ಬಳಕೆ ಆಗುತ್ತದೆ. ಇದರಿಂದ ರೈತರಿಗೆ ಕಾರ್ಬನ್ ಕ್ರೆಡಿಟ್ ಹೆಸರಿನಲ್ಲಿ ಪ್ರತಿ ಎಕರೆಗೆ ₹6 ರಿಂದ ₹ 8 ಸಾವಿರ ಆದಾಯ ಸಿಗುತ್ತದೆ’ ಎಂದು ಅವರು ತಿಳಿಸಿದರು.

ರೈತರ 5 ಗುಂಪು ರಚನೆ

  • ‘ಕುಮಟಾದ ಧಾರೇಶ್ವರದಿಂದ ಮಾದನಗೇರಿವರೆಗೆ 2020-21ರಿಂದ ರೈತರ ಪಾಳುಬಿದ್ದ ಗಜನಿ ಭೂಮಿಯಲ್ಲಿ ಕಾಂಡ್ಲಾ ಗಿಡ ನೆಡುವ ಯೋಜನೆ ಕೈಗೆತ್ತಿಕೊಂಡಿದ್ದೇವೆ. 250 ರೈತರ ಜೊತೆ ಈ ಬಗ್ಗೆ ಒಪ್ಪಂದ ಮಾಡಿಕೊಂಡು ತಲಾ 50 ಜನರ ರೈತರ 5 ಗುಂಪು ರಚಿಸಲಾಗಿದೆ’ ಎಂದು ಸ್ನೇಹ ಕುಂಜ ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಹೆಗಡೆ ತಿಳಿಸಿದರು.
  • ‘ಕಾರ್ಬನ್ ಕ್ರೆಡಿಟ್ ಆದಾಯ ಎಲ್ಲ ರೈತರ ಬ್ಯಾಂಕ್ ಖಾತೆಗಳಿಗೆ ಸಮನಾಗಿ ಜಮೆ ಆಗುವಂತೆ ವ್ಯವಸ್ಥೆ ರೂಪಿಸಲಾಗಿದೆ. 2026ರ ಮಾರ್ಚ್‌ನಲ್ಲಿ ಮೊದಲ ಹಂತದ ಕಾರ್ಬನ್ ಕ್ರೆಡಿಟ್ ಮೊತ್ತ ರೈತರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ’ ಎಂದರು.
  • ರೇರಾ ಆದೇಶ: ‘ಡಿಕ್ರಿಅಲ್ಲ

ಸಂದರ್ಭ: ಕರ್ನಾಟಕ ರಿಯಲ್ಎಸ್ಟೇಟ್ನಿಯಂತ್ರಣ ಪ್ರಾಧಿಕಾರದ ಆದೇಶಗಳು: ರೇರಾ ಆದೇಶಗಳು ಕಾನೂನು ವಿಶ್ಲೇಷಣಾ ವ್ಯಾಪ್ತಿಗೆ ಒಳಪಡುವುದಿಲ್ಲ. ರೇರಾ ಆದೇಶಗಳನ್ನು ಜಾರಿಗೊಳಿಸಲು ತಹಶೀಲ್ದಾರ್ಸಂಪೂರ್ಣ ವಿಫಲವಾದಾಗ ಮಾತ್ರ ಸಕ್ಷಮ ಕೋರ್ಟ್ಮೊರೆ ಹೋಗಬಹುದು ನ್ಯಾ.ಎಂ.ನಾಗಪ್ರಸನ್ನ.

  • ‘ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ (ಕೆ-ರೇರಾ) ಮತ್ತು ಅದರ ಮೇಲ್ಮನವಿ ಪ್ರಾಧಿಕಾರ ಹೊರಡಿಸಿರುವ ಆದೇಶಗಳನ್ನು ಸಿವಿಲ್‌ ನ್ಯಾಯಾಲಯ ಗಳಲ್ಲಿ, ಅನುಷ್ಠಾನ ಕೋರಿಕೆ ಅರ್ಜಿ (ಎಕ್ಸಿಕ್ಯೂಷನ್‌ ಪಿಟಿಷನ್‌) ಸಲ್ಲಿಸುವ ಮೂಲಕ ಜಾರಿಗೆ ತರಲು ಆಗದು’ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.
  • ಸಿವಿಲ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿ ‘ಮಂತ್ರಿ ಡೆವಲಪರ್ಸ್‌ ಪ್ರೈವೇಟ್‌ ಲಿಮಿಟೆಡ್‌’ ಸಲ್ಲಿಸಿದ್ದ ಮೂರು ರಿಟ್‌ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ರಿಯಲ್‌ ಎಸ್ಟೇಟ್‌ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ರೇರಾ ಆದೇಶಗಳು ನಾಗರಿಕ ಸಂಹಿತೆ ಪ್ರಕ್ರಿಯೆಯಲ್ಲಿನ (ಸಿಪಿಸಿ) ‘ಡಿಕ್ರಿ’ ಅರ್ಥದ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂಬ ವಿಶೇಷ ಉಲ್ಲೇಖವನ್ನು ನಮೂದಿಸಿದೆ.
  • ‘ಕಲಂ 40(1)ರ ಅಡಿ ರೇರಾ ವಿಧಿಸುವ ಪರಿಹಾರದ ಮೊತ್ತ ಅಥವಾ ದಂಡವನ್ನು ಬಡ್ಡಿ ಸಹಿತ ವಸೂಲು ಮಾಡಬಹುದು. ಅದನ್ನು ಭೂ ಕಂದಾಯ ಎಂದು ಪರಿಗಣಿಸಬಹುದು ಎಂದು ತಿಳಿಸಲಾಗಿದೆ. ಅಂತೆಯೇ, ಕಲಂ 79ರ ಅಡಿ ರೇರಾದ ಆದೇಶ ಮತ್ತು ದಾವೆಗಳನ್ನು ಪುರಸ್ಕರಿಸಲು ಸಿವಿಲ್‌ ಕೋರ್ಟ್‌ಗೆ ನಿರ್ಬಂಧವಿದೆ’ ಎಂಬುದನ್ನು ನ್ಯಾಯಪೀಠ ಸ್ಪಷ್ಟಪಡಿಸಿದೆ.
  • ಬಿಲ್ಡರ್‌ಗಳ ಮನವಿ ತಿರಸ್ಕರಿಸಿದ್ದ ಸಿವಿಲ್‌ ಕೋರ್ಟ್‌ನ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಪೀಠ, ‘ಪ್ರತಿವಾದಿ ರೇರಾ ಕಂದಾಯ ಅಧಿಕಾರಿಗಳ ಮೂಲಕ ಆದೇಶ ಜಾರಿಗೆ ಇತರೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲು ಸ್ವತಂತ್ರವಾಗಿದೆ’ ಎಂದು ಸ್ಪಷ್ಟಪಡಿಸಿದೆ.
  • ಪ್ರಕರಣವೇನು?: ಮನೆ ಖರೀದಿದಾರರ ಪರ ‘ಕೆ-ರೇರಾ’ 2023ರಲ್ಲಿ ಹಲವು ಆದೇಶಗಳನ್ನು ನೀಡಿತ್ತು. ಈ ಆದೇಶಗಳನ್ನು ಜಾರಿಗೊಳಿಸುವಂತೆ ಕೋರಿ ಮನೆ ಖರೀದಿದಾರರು ಸಿವಿಲ್‌ ಕೋರ್ಟ್‌ನಲ್ಲಿ ಆದೇಶಗಳ ಅನುಷ್ಠಾನ ಕೋರಿಕೆ ಅರ್ಜಿಗಳನ್ನು (ಎಕ್ಸಿಕ್ಯೂಷನ್‌ ಪಿಟಿಷನ್‌) ಸಲ್ಲಿಸಿದ್ದರು.
  • ಈ ಅರ್ಜಿಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಲ್ಡರ್‌ಗಳು, ‘ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ ಮತ್ತು ಅದರ ಮೇಲ್ಮನವಿ ಪ್ರಾಧಿಕಾರ ಹೊರಡಿಸಿರುವ ಆದೇಶಗಳನ್ನು ಸಿವಿಲ್‌ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗದು. ಸಿವಿಲ್‌ ಕೋರ್ಟ್‌ಗಳಿಗೆ ಕಲಂ 79ರ ಅಡಿ ಅಂತಹ ಅರ್ಜಿಗಳನ್ನು ಪುರಸ್ಕರಿಸುವ ಅಧಿಕಾರವಿಲ್ಲ. ಕರ್ನಾಟಕ ರೇರಾ ನಿಯಮ 26ರ ಅಡಿ ಹೇಗೆ ಆದೇಶಗಳನ್ನು ಜಾರಿಗೊಳಿಸಬಹುದು ಎಂಬುದು ಈಗಾಗಲೇ ವಿದಿತವಾಗಿದೆ’ ಎಂಬ ವಾದ ಮಂಡಿಸಿದ್ದರು.
  • ಇದಕ್ಕೆ ಪ್ರತಿಯಾಗಿ ಮನೆ ಖರೀದಿದಾರರು, ‘ರೇರಾ ಆದೇಶಗಳು ಡಿಕ್ರಿ ಇದ್ದಂತೆ. ಹಾಗಾಗಿ, ಎಕ್ಸಿಕ್ಯೂಷನ್‌ ಅರ್ಜಿಗಳು ಸ್ವೀಕಾರಾರ್ಹ ಮತ್ತು ಸಿವಿಲ್‌ ಕೋರ್ಟ್‌ಗಳು ಅವುಗಳನ್ನು ಜಾರಿಗೊಳಿಸುವ ಅಧಿಕಾರ ಹೊಂದಿವೆ’ ಎಂದು ಪ್ರತಿವಾದ ಮಂಡಿಸಿದ್ದರು.

ಡಿಕ್ರಿ ವ್ಯಾಖ್ಯಾನ

ಸಿವಿಲ್‌ ಪ್ರೊಸೀಜರ್‌ ಕೋಡ್‌ (ಸಿಪಿಸಿ) ಕಲಂ 2(2)ರಲ್ಲಿ ಡಿಕ್ರಿ ಎಂದು ವ್ಯಾಖ್ಯಾನಿಸಲು ಮೂರು ಅಗತ್ಯ ಷರತ್ತುಗಳನ್ನು ಪೂರೈಸಬೇಕಾಗುತ್ತದೆ.

lತೀರ್ಪು ಮೂಲ ದಾವೆಯಿಂದ ಬಂದಿರಬೇಕು

lವ್ಯಾಜ್ಯ ದೂರಿನೊಂದಿಗೆ ಆರಂಭವಾಗಿರಬೇಕು ಮತ್ತು ಡಿಕ್ರಿಯೊಂದಿಗೆ ಕೊನೆಯಾಗಬೇಕು

lನ್ಯಾಯಾಲಯ ತೀರ್ಪನ್ನು ಅಂತಿಮಗೊಳಿಸಿರಬೇಕು 

lರೇರಾ ಮುಂದಿರುವ ಪ್ರಕ್ರಿಯೆಗಳು ದೂರುಗಳಷ್ಟೇ. ಅವು ಮೂಲ ದಾವೆಗಳಲ್ಲ. ಹಾಗಾಗಿ, ಅವುಗಳನ್ನು ದಾವೆಗಳೆಂದು ಪರಿಗಣಿಸಲಾಗದು.

  • ಎಐ ಆಧಾರಿತ ಬೆಳೆ ವಿಶ್ಲೇಷಣೆ ಮಹತ್ವದ ಪರಿಹಾರ

ಸಂದರ್ಭ: ಹವಾಮಾನ ಬದಲಾವಣೆ, ಕೀಟರೋಗಗಳ ನಿರ್ವಹಣೆ, ಜಲ ಸಂಪನ್ಮೂಲಗಳ ಕಡಿಮೆ ಲಭ್ಯತೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೆಳೆ ವಿಶ್ಲೇಷಣೆ ಮಹತ್ವದ ಪರಿಹಾರ ವಾಗಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ತಿಳಿಸಿದರು.

  • ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯ ಸೋಮವಾರ ಆಯೋಜಿಸಿದ್ದ ಕೃಷಿ ವಿಜ್ಞಾನ ಕೇಂದ್ರಗಳ (ಕೆವಿಕೆ) ಕೃಷಿ ವಿಜ್ಞಾನಿಗಳಿಗೆ ಸ್ಮಾರ್ಟ್ ಕೃಷಿಯ ಬಗ್ಗೆ ಸಲಹೆ, ಎಐ ತಂತ್ರಜ್ಞಾನ ಆಧಾರಿತ ಬೆಳೆ ವಿಶ್ಲೇಷಣೆ ನಡೆಸುವ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.
  • ‘ನಮ್ಮ ಕೆವಿಕೆ ವಿಜ್ಞಾನಿಗಳು ಗ್ರಾಮೀಣ ಭಾಗದ ರೈತರು ಹಾಗೂ ವಿಶ್ವವಿದ್ಯಾಲಯಗಳ ನಡುವೆ ಜ್ಞಾನದ ಸೇತುವೆಗಳಾಗಿ ಕಾರ್ಯನಿರ್ವಹಿಸುತ್ತಿ ದ್ದಾರೆ. ಅದರ ಜೊತೆಗೆ ರೈತರ ಹೊಲ, ಗದ್ದೆಗಳಿಗೆ ಭೇಟಿ ನೀಡಿ ವೈಜ್ಞಾನಿಕ ಸಲಹೆಗಳನ್ನು ನೀಡುತ್ತಿದ್ದಾರೆ. ಆದ್ದರಿಂದ ವಿಜ್ಞಾನಿಗಳಿಗೆ ಹೊಸ–ಹೊಸ ತಂತ್ರಜ್ಞಾನದ ತರಬೇತಿ ಗಳನ್ನು ನೀಡಲಾಗುತ್ತಿದೆ’ ಎಂದು ಹೇಳಿದರು.
  • ‘ವಿಸ್ತರಣಾ ನಿರ್ದೇಶಕ ವೈ.ಎನ್. ಶಿವಲಿಂಗಯ್ಯ ಮಾತನಾಡಿ, ‘ಹೊಸ ತಂತ್ರಜ್ಞಾನಗಳು ರೈತರ ಬದುಕಿಗೆ ಹೊಸ ಭರವಸೆ ನೀಡುತ್ತವೆ. ರೈತರಿಗೆ ತಲುಪುವ ಪ್ರತಿಯೊಂದು ಸಲಹೆಯೂ ಹೆಚ್ಚು ನಿಖರ, ವೈಜ್ಞಾನಿಕ ಮತ್ತು ಫಲಪ್ರದವಾಗಬೇಕು’ ಎಂದು ಹೇಳಿದರು.
  • ರಷ್ಯಾ ಅಧ್ಯಕ್ಷರ ಭಾರತ ಭೇಟಿ ಹಳೆಯ ಸ್ನೇಹಕ್ಕೆ ಹೊಸ ಭಾಷ್ಯ

ಸಂದರ್ಭ: ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಡುವಿನ ಮಾತುಕತೆಯ ಸಂದರ್ಭದಲ್ಲಿ ವಿಶ್ವದೆದುರು ತೋರಿಸಲಿಕ್ಕೆ ಉಭಯ ದೇಶಗಳು ನಡೆಸಿದ ಕೆಲವು ಯತ್ನಗಳು ಮಾತುಕತೆಗಳಿಗೆ ಇರುವ ಮಹತ್ವವನ್ನಾಗಲಿ, ಸಭೆಗಳ ಫಲಿತವನ್ನಾಗಲಿ ಕಡಿಮೆ ಮಾಡಲಿಲ್ಲ.

  • ಜಗತ್ತಿನ ಎದುರು ತೋರಿಸಲಿಕ್ಕಾಗಿ ನಡೆಸಿದ ಯತ್ನಗಳು ಬಹುಶಃ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಗಮನದಲ್ಲಿ ಇರಿಸಿಕೊಂಡಿದ್ದವು.
  • ತಮ್ಮ ಸ್ನೇಹಿತ ಯಾರು ಎಂಬುದನ್ನು ತೀರ್ಮಾನಿಸುವ ವಿಚಾರದಲ್ಲಿ ಸ್ವತಂತ್ರವಾಗಿಯೇ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂಬ ಸಂದೇಶವನ್ನು ಟ್ರಂಪ್ ಅವರಿಗೆ ರವಾನಿಸಲು ಭಾರತ ಮತ್ತು ರಷ್ಯಾ ಹೀಗೆ ಮಾಡಿರಬಹುದು. ಉಕ್ರೇನ್‌ ಜೊತೆಗಿನ ಯುದ್ಧ ಆರಂಭವಾದ ನಂತರದಲ್ಲಿ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡಿರುವುದು ಇದೇ ಮೊದಲು.
  • ತಮ್ಮನ್ನು ಏಕಾಂಗಿಯಾಗಿಸುವಲ್ಲಿ ಅಮೆರಿಕ ಯಶಸ್ಸು ಕಂಡಿಲ್ಲ ಎಂದು ಪುಟಿನ್ ಹೇಳಿದ್ದಾರೆ. 23ನೇ ಭಾರತ–ರಷ್ಯಾ ವಾರ್ಷಿಕ ಶೃಂಗಸಭೆಯ ವೇದಿಕೆಯನ್ನು ಬಳಸಿಕೊಂಡ ಮೋದಿ ಅವರು, ಟ್ರಂಪ್‌ ಅವರ ನಿರ್ಬಂಧಗಳು ಭಾರತ ಮತ್ತು ರಷ್ಯಾ ನಡುವಿನ ದಶಕಗಳಷ್ಟು ಹಳೆಯದಾದ ಸ್ನೇಹಕ್ಕೆ ಧಕ್ಕೆ ಉಂಟುಮಾಡಿಲ್ಲ ಎಂಬ ಸಂದೇಶ ರವಾನಿಸಿದರು.
  • ಎರಡು ದೇಶಗಳ ನಡುವಿನ ವಿಶೇಷವಾದ ಪಾಲುದಾರಿಕೆಯಿಂದ ಸಿಗುವ ಅನುಕೂಲಗಳು ಜಾಗತಿಕ ಮಟ್ಟದಲ್ಲಿ ಸೃಷ್ಟಿಯಾಗುತ್ತಿರುವ ಹೊಸ ಸವಾಲುಗಳನ್ನು ಎದುರಿಸಲು ಇಬ್ಬರಿಗೂ ನೆರವಾಗಬಹುದು ಎಂಬುದನ್ನು ಈ ಶೃಂಗಸಭೆಯು ತೋರಿಸಿದೆ.
  • ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ತಗ್ಗಿಸಬೇಕು ಎಂದು ಭಾರತದ ಮೇಲೆ ಪಾಶ್ಚಾತ್ಯ ಜಗತ್ತು ಒತ್ತಡ ಹೇರುತ್ತಿದೆ. ಅದರಲ್ಲೂ ಮುಖ್ಯವಾಗಿ ಅಮೆರಿಕವು ತೀವ್ರ ಪ್ರಮಾಣದಲ್ಲಿ ಒತ್ತಡ ತರುತ್ತಿದೆ. ಆದರೆ, ಈ ಒತ್ತಡಗಳ ನಡುವೆಯೂ ಭಾರತಕ್ಕೆ ‘ಇಂಧನ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುತ್ತದೆ’ ಎಂಬ ಭರವಸೆಯನ್ನು ರಷ್ಯಾ ನೀಡಿರುವುದು ಗಮನಾರ್ಹ. ಸ್ವಾಯತ್ತೆಯ ವಿಚಾರದಲ್ಲಿ ನುಡಿದಂತೆ ನಡೆಯುವ ಶಕ್ತಿ ತನಗೆ ಇದೆ ಎಂಬುದನ್ನು ಈ ಮೂಲಕ ಭಾರತ ಕೂಡ ತೋರಿಸಿದೆ. ಕಾಜನ್‌ನಲ್ಲಿ 2024ರ ಅಕ್ಟೋಬರ್‌ನಲ್ಲಿ ನಡೆದ ಬ್ರಿಕ್ಸ್‌ ಶೃಂಗದಲ್ಲಿ ಮಾಡಿಕೊಂಡ ಒಪ್ಪಂದದ ಆಧಾರದಲ್ಲಿ, ಎರಡೂ ದೇಶಗಳ ನಡುವಿನ ವ್ಯಾಪಾರ ವಹಿವಾಟುಗಳಲ್ಲಿ ಸ್ಥಳೀಯ ಕರೆನ್ಸಿಗಳನ್ನು ಬಳಕೆ ಮಾಡಲು ಒಟ್ಟಾಗಿ ಮುಂದಡಿ ಇರಿಸುವುದಕ್ಕೆ ಆದ್ಯತೆ ನೀಡಲಾಗುತ್ತದೆ ಎನ್ನುವುದು ಕೂಡ ವ್ಯಾಪಾರ ಸಂಬಂಧವನ್ನು ಸುಧಾರಿಸಿಕೊಳ್ಳುವ ಬದ್ಧತೆ ಎರಡೂ ದೇಶಗಳಿಗೆ ಇದೆ ಎಂಬುದನ್ನು ತೋರಿಸುತ್ತದೆ.
  • ರಕ್ಷಣಾ ವಹಿವಾಟುಗಳು ಮಾತ್ರವಲ್ಲದೆ, ಔಷಧ ಮತ್ತು ರಸಗೊಬ್ಬರ ದಂತಹ ವಲಯಗಳಿಗೆ ಆದ್ಯತೆ ನೀಡಿರುವುದು ವ್ಯಾಪಾರ ವಹಿವಾಟಿನ ಮೊತ್ತವನ್ನು ಹೆಚ್ಚಿಸುವ ಬದ್ಧತೆಯನ್ನು ತೋರಿಸುತ್ತಿದೆ. ರಫ್ತು ಪ್ರಮಾಣವನ್ನು ಹೆಚ್ಚು ಮಾಡಿ ರಷ್ಯಾ ಜೊತೆಗಿನ ವ್ಯಾಪಾರ ಕೊರತೆ ಅಂತರವನ್ನು ತಗ್ಗಿಸುವ ಬಯಕೆಯನ್ನು ಭಾರತ ಹೊಂದಿದೆ.
  • ರಷ್ಯಾದ ಜೊತೆ ಭಾರತ ಹೊಂದಿರುವ ಸ್ನೇಹ ಇಂದು–ನಿನ್ನೆಯದಲ್ಲ. ದಶಕಗಳ ಹಿಂದಿನ ಈ ನಂಟು ‘ಎಸ್‌–400’ನಂತಹ ಅತ್ಯಂತ ಮಹತ್ವದ ರಕ್ಷಣಾ ಉಪಕರಣದ ಖರೀದಿಯ ಮೂಲಕ ಇನ್ನಷ್ಟು ಗಾಢವಾಗಿದೆ. ಆದರೆ, ಭಾರತವು ರಷ್ಯಾ ಜೊತೆಗಿನ ಐತಿಹಾಸಿಕ ಸಂಬಂಧವನ್ನು ಬಲಪಡಿಸುತ್ತ, ಅಮೆರಿಕ ಹಾಗೂ ಐರೋಪ್ಯ ಒಕ್ಕೂಟದ ಜೊತೆಗಿನ ಸಂಬಂಧವನ್ನೂ ತೂಗಿಸಿಕೊಂಡು ಮುನ್ನಡೆಯಬೇಕಿದೆ.
  • ರಷ್ಯಾ–ಉಕ್ರೇನ್ ಯುದ್ಧದ ವಿಚಾರದಲ್ಲಿ ತಾನು ಶಾಂತಿಯ ಪರವಾಗಿ ಇದ್ದೇನೆ ಎಂಬುದನ್ನು ಸ್ಪಷ್ಟಪಡಿಸುವ ಮೂಲಕ ಭಾರತವು ಪಾಶ್ಚಿಮಾತ್ಯ ದೇಶಗಳ ಕಳವಳಗಳಿಗೆ ಸ್ಪಂದಿಸುವ ಕೆಲಸ ಮಾಡಿದೆ.
  • ಭಾರತವು ಈಗ ರಷ್ಯಾ–ಚೀನಾ ಸಂಬಂಧದಲ್ಲಿನ ಆತ್ಮೀಯತೆಯನ್ನು ಸೂಕ್ಷ್ಮವಾಗಿ ಅವಲೋಕಿಸಬೇಕಿದೆ. ಹಾಗೆಯೇ, ಚೀನಾ ಜೊತೆಗಿನ ಸಂಬಂಧದಲ್ಲಿ ಈಚೆಗೆ ಆಗಿರುವ ಸುಧಾರಣೆಗಳನ್ನು ಉಳಿಸಿಕೊಳ್ಳಬೇಕಿದೆ.
  • ಐದು ವರ್ಷಗಳಿಗೂ ಹೆಚ್ಚಿನ ಅವಧಿಯ ನಂತರ ಭಾರತ ಮತ್ತು ಚೀನಾ, ಉನ್ನತ ಮಟ್ಟದ ಅಧಿಕಾರಿಗಳ ನಡುವಿನ ಮಾತುಕತೆಗಳನ್ನು ಈಚೆಗೆ ಪುನರಾರಂಭಿಸಿವೆ. ಎರಡೂ ದೇಶಗಳು, ಪರಸ್ಪರರಿಗೆ ಇರುವ ಪ್ರಯೋಜನವನ್ನು ಅರಿತು ಸಂಬಂಧ ಸುಧಾರಣೆಗೆ ಮುಂದಾಗಿವೆ.
  • ಚೀನಾ ಜೊತೆಗಿನ ಸಂಬಂಧದ ವಿಚಾರವಾಗಿ ಎಚ್ಚರಿಕೆಯೊಂದಿಗೆ ಹೆಜ್ಜೆ ಹಾಕುತ್ತ, ಚೀನಾ–ರಷ್ಯಾ ಸಂಬಂಧವನ್ನು ಎಚ್ಚರಿಕೆಯಿಂದ ಗಮನಿಸುತ್ತ ಭಾರತವು– ಚೀನಾ, ಅಮೆರಿಕ ಮತ್ತು ರಷ್ಯಾ ಜೊತೆಗಿನ ತನ್ನ ಸಂಬಂಧವನ್ನು ಸರಿದೂಗಿಸಿಕೊಂಡು ಮುನ್ನಡೆಯಬೇಕಿದೆ.
  • ಪುಟಿನ್ ಅವರಿಗೆ ರತ್ನಗಂಬಳಿ ಹಾಸಿ ಸ್ವಾಗತ ಕೋರುವ ಮೂಲಕ ಭಾರತವು ತನ್ನ ಹಿತಾಸಕ್ತಿಗಳ ರಕ್ಷಣೆಗಾಗಿ, ಅದರಲ್ಲೂ ಮುಖ್ಯವಾಗಿ ಇಂಧನಕ್ಕೆ ಸಂಬಂಧಿಸಿದ ಹಿತಾಸಕ್ತಿಗಳನ್ನು ಕಾಯ್ದುಕೊಳ್ಳಲು ರಷ್ಯಾ ಜೊತೆ ಬಲವಾದ ಸಂಬಂಧವನ್ನು ಉಳಿಸಿಕೊಳ್ಳುವ ಬದ್ಧತೆಯನ್ನು ತೋರಿಸಿದೆ.
  • ಪೋಷಕರ ಆಯ್ಕೆ ಈಗಲೂ ಸರ್ಕಾರಿ ಶಾಲೆ, ಆದರೆ..
  • 2027–28ಕ್ಕೆ ಮೊದಲು ಹೊಸ ನಮೂನೆ: ಲೋಕಸಭೆಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಾಹಿತಿ

ಸಂದರ್ಭ: ಆದಾಯ ತೆರಿಗೆ ಕಾಯ್ದೆ – 2025ಕ್ಕೆ ಅನುಗುಣವಾಗಿರುವ ಹೊಸ ಆದಾಯ ತೆರಿಗೆ ವಿವರ (ಐಟಿಆರ್‌) ನಮೂನೆಗಳನ್ನು 2027–28ನೇ ಹಣಕಾಸು ವರ್ಷಕ್ಕೆ ಮೊದಲೇ ಪ್ರಕಟಿಸಲಾಗುತ್ತದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಹೇಳಿದ್ದಾರೆ.

  • ಐಟಿಆರ್‌ ನಮೂನೆಗಳ ಸರಳೀಕರಣ ಕ್ಕೆ ಸಂಬಂಧಿಸಿದ ಸಿಬಿಡಿಟಿ ಸಮಿತಿಯು ತೆರಿಗೆ ತಜ್ಞರ ಜೊತೆ, ಸಂಸ್ಥೆಗಳ ಜೊತೆ ಹಾಗೂ ಆದಾಯ ತೆರಿಗೆ ಇಲಾಖೆಯ ಕೆಲವು ಅಧಿಕಾರಿಗಳ ಜೊತೆ ವ್ಯಾಪಕ ಸಮಾಲೋಚನೆ ನಡೆಸುತ್ತಿದೆ ಎಂದು ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
  • ಆಗಸ್ಟ್‌ 21ರಂದು ರಾಷ್ಟ್ರಪತಿ ಯವರ ಅಂಕಿತ ಪಡೆದಿರುವ ಆದಾಯ ತೆರಿಗೆ ಕಾಯ್ದೆ – 2025 ಮುಂದಿನ ಹಣಕಾಸು ವರ್ಷದ ಮೊದಲ ದಿನದಿಂದ (2026ರ ಏಪ್ರಿಲ್‌ 1) ಜಾರಿಗೆ ಬರಲಿದೆ. ಇದು ಈಗ ಚಾಲ್ತಿಯಲ್ಲಿ ಇರುವ ಆದಾಯ ತೆರಿಗೆ ಕಾಯ್ದೆ – 1961ರ ಬದಲಿಗೆ ಜಾರಿಗೊಳ್ಳುತ್ತದೆ.
  • ತ್ರೈಮಾಸಿಕ ಟಿಡಿಎಸ್‌ ನಮೂನೆ, ಐಟಿಆರ್‌ ನಮೂನೆ ಸೇರಿದಂತೆ ಹೊಸ ಕಾಯ್ದೆಯ ಅಡಿಯಲ್ಲಿ ಅಗತ್ಯವಿರುವ ಎಲ್ಲ ನಮೂನೆಗಳನ್ನು ಸಿದ್ಧಪಡಿಸಲಾ ಗುತ್ತಿದೆ. ಹೊಸ ಕಾಯ್ದೆ ಜಾರಿಗೆ ಬಂದ ನಂತರದ ಮೊದಲ ತೆರಿಗೆ ವರ್ಷವಾದ 2026–27ಕ್ಕೆ ಸಂಬಂಧಿಸಿದ ಐಟಿಆರ್ ನಮೂನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಅವುಗಳನ್ನು 2027–28ಕ್ಕೆ ಮೊದಲು ಅಧಿಸೂಚನೆಯಲ್ಲಿ ಪ್ರಕಟಿಸ ಲಾಗುತ್ತದೆ ಎಂದು ಚೌಧರಿ ಹೇಳಿದ್ದಾರೆ.
  • ಪ್ರಸಕ್ತ ಹಣಕಾಸು ವರ್ಷದ ಆದಾಯಕ್ಕೆ ಸಂಬಂಧಿಸಿದ ಐಟಿಆರ್‌ ನಮೂನೆಗಳನ್ನು ಸರಳೀಕರಿಸುವ ಕೆಲಸ ನಡೆಯುತ್ತಿದೆ, ಅವುಗಳನ್ನು 1961ರ ಕಾಯ್ದೆಗೆ ಅನುಗುಣವಾಗಿ ಅಧಿಸೂಚನೆ ಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
  • ಶೇ 30 ಸ್ಥಾನ ಮಹಿಳೆಯರಿಗೆ ನಿಗದಿ: ರಾಜ್ಯ ವಕೀಲರ ಪರಿಷತ್ತು ಚುನಾವಣೆ: ಸುಪ್ರೀಂ ಕೋರ್ಟ್ನಿರ್ದೇಶನ

ಸಂದರ್ಭ: ಚುನಾವಣಾ ಪ್ರಕ್ರಿಯೆಗೆ ಇನ್ನೂ ಚಾಲನೆ ಸಿಗದ ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಶೇ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ನಿಗದಿಪಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

  • ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರ ಪೀಠವು, ‘ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಶೇ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರು ಪ್ರತಿನಿಧಿಸಬೇಕು. ಅದರಲ್ಲಿ ಶೇ 20ರಷ್ಟು ಸ್ಥಾನಗಳನ್ನು ಚುನಾವಣೆ ಮೂಲಕ ಮತ್ತು ಶೇ 10ರಷ್ಟು ಸ್ಥಾನಗಳನ್ನು ನಾಮ ನಿರ್ದೇಶನದ ಮೂಲಕ ಭರ್ತಿ ಮಾಡಬೇಕು’ ಎಂದು ಹೇಳಿತು.
  • ಚುನಾವಣೆಯಲ್ಲಿ ಸ್ಪರ್ಧಿಸುವ ಮಹಿಳಾ ವಕೀಲರ ಸಂಖ್ಯೆ ಕಡಿಮೆ ಯಿದ್ದರೆ, ಅಂತರ ರಾಜ್ಯಗಳ ವಕೀಲರ ಪರಿಷತ್ತುಗಳಲ್ಲಿ ನಾಮ ನಿರ್ದೇಶನಕ್ಕೆ ಸಂಬಂಧಿಸಿದ ಪ್ರಸ್ತಾಪವನ್ನು ನ್ಯಾಯಾಲಯದ ಮುಂದೆ ಇಡಬೇಕು ಎಂದೂ ನಿರ್ದೇಶಿಸಿದೆ.
  • ಸುಪ್ರೀಂ ಕೋರ್ಟ್‌ ಈ ಹಿಂದೆ ನೀಡಿರುವ ನಿರ್ದೇಶನದಂತೆ ಆರು ರಾಜ್ಯಗಳ ವಕೀಲರ ಪರಿಷತ್ತುಗಳ ಚುನಾವಣೆಗೆ ಅಧಿಸೂಚನೆ ಹೊರಡಿಸ ಲಾಗಿದೆ ಎಂದು ಭಾರತೀಯ ವಕೀಲರ ಪರಿಷತ್ತಿನ (ಬಿಸಿಐ) ಅಧ್ಯಕ್ಷರೂ ಆಗಿರುವ ಹಿರಿಯ ವಕೀಲ ಮನನ್ ಕುಮಾರ್ ಮಿಶ್ರಾ ಅವರು ಪೀಠಕ್ಕೆ ತಿಳಿಸಿದರು.
  • ‘ಶೇ 15ರಷ್ಟು ಸ್ಥಾನಗಳನ್ನು ಮಹಿಳಾ ಸದಸ್ಯರ ನಾಮ ನಿರ್ದೇಶನದ ಮೂಲಕ ಭರ್ತಿ ಮಾಡಿಕೊಳ್ಳಲು ಅವಕಾಶ ನೀಡಬೇಕು’ ಎಂದು ಅವರು ಪೀಠಕ್ಕೆ ಮನವಿ ಮಾಡಿದರು. ಆದರೆ, ‘ನಾಮ ನಿರ್ದೇಶನವನ್ನು ಶೇ 10ರಷ್ಟು ಸೀಟುಗಳಿಗೆ ಸೀಮಿತಗೊಳಿಸಿದರೆ ಸೂಕ್ತ’ ಎಂದು ಪೀಠ ತಿಳಿಸಿತು.
  • ಈಗಾಗಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಿರುವ ಪರಿಷತ್ತುಗಳಲ್ಲಿ ಮಹಿಳೆಯರಿಗೆ ಸ್ಥಾನಗಳನ್ನು ಮೀಸಲಿಡುವುದು ವಿವೇಕಯುತ ನಿರ್ಧಾರವಲ್ಲ ಎಂದೂ ಪೀಠ ಹೇಳಿತು.
  • ಆಂಧ್ರ ಪ್ರದೇಶ, ಪಂಜಾಬ್‌ ಮತ್ತು ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ಬಿಹಾರ ಹಾಗೂ ಛತ್ತೀಸಗಢ ರಾಜ್ಯಗಳ ವಕೀಲರ ಪರಿಷತ್ತುಗಳ ಚುನಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದಿತು.
  • ‘ಮಹಿಳೆಯರು ಸ್ಪರ್ಧಿಸಲು ಹಿಂಜರಿಯುವಂತಹ ಪರಿಷತ್ತುಗಳಲ್ಲಿ ನಾಮ ನಿರ್ದೇಶನ ಪ್ರಕ್ರಿಯೆ ಕೈಗೊಳ್ಳಲಾಗುವುದು. ಅಂತಿಮವಾಗಿ ಕಾರ್ಯಕಾರಿ ಮಂಡಳಿಯಲ್ಲಿ ಮಹಿಳೆಯರಿಗೆ ಶೇ 30ರಷ್ಟು ಪ್ರಾತಿನಿಧ್ಯ ಸಿಗುವುದನ್ನು ಖಾತರಿಪಡಿಸಬೇಕು’ ಎಂದು ಹೇಳಿತು.
  • ಎಲ್ಲಾ ರಾಜ್ಯಗಳ ವಕೀಲರ ಪರಿಷತ್ತುಗಳಲ್ಲಿ ಮೂರನೇ ಒಂದರಷ್ಟು ಸ್ಥಾನಗಳನ್ನು ಹಿಳೆಯರಿಗೆ ಮೀಸಲಿಡಬೇಕೆಂದು ಕೋರಿ ವಕೀಲರಾದ ಯೋಗಮಾಯಾ ಎಂ.ಜಿ ಮತ್ತು ಶೆಹ್ಲಾ ಚೌಧರಿ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.
  • ಶೂಟಿಂಗ್‌: 6 ಪದಕಗಳೊಂದಿಗೆ ಭಾರತದ ಅಭಿಯಾನಕ್ಕೆ ತೆರೆ

ಸಂದರ್ಭ: ಭಾರತದ ಶೂಟರ್ಗಳು ಇಲ್ಲಿ ನಡೆದ ಐಎಸ್ಎಸ್ಎಫ್ ವಿಶ್ವಕಪ್ ಫೈನಲ್ನಲ್ಲಿ ಎರಡು ಚಿನ್ನ ಸೇರಿ 6 ಪದಕಗಳೊಂದಿಗೆ ಅಭಿಯಾನವನ್ನು ಅತ್ಯುತ್ತಮ ರೀತಿಯಲ್ಲಿ ಮುಗಿಸಿದರು.

  • ಪುರುಷರ ಟ್ರ್ಯಾಪ್ ಫೈನಲ್‌ನಲ್ಲಿ ವಿಶ್ವ ಚಾಂಪಿಯನ್‌ಷಿಪ್‌ ಕಂಚು ವಿಜೇತ ಝೋರಾವರ್ ಸಿಂಗ್ ಸಂಧು ಏಳನೇ ಸ್ಥಾನ ಪಡೆದರು. ಅಂತಿಮ ದಿನದ ಶಾಟ್‌ಗನ್‌ ಸ್ಪರ್ಧೆಯಲ್ಲಿದ್ದ ಭಾರತದ ಏಕೈಕ ಶೂಟರ್‌ ಅವರಾಗಿದ್ದರು.
  • ಅರ್ಹತಾ ಸುತ್ತಿನಲ್ಲಿ 125ರಲ್ಲಿ 119 ಅಂಕ ಪಡೆದಿದ್ದ ಝೋರಾವರ್ ಅವರು ಆರನೇ ಸ್ಥಾನದೊಂದಿಗೆ ಫೈನಲ್‌ ಪ್ರವೇಶಿಸಿದ್ದರು. ಐಎಸ್‌ಎಸ್‌ಎಫ್‌ ಹೊಸ ನಿಯಮಗಳ ಪ್ರಕಾರ ಆರು ಶೂಟರ್‌ಗಳ ಬದಲಿಗೆ ಈ ಬಾರಿ ಎಂಟು ಮಂದಿ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆದಿದ್ದರು.
  • 30 ಶಾಟ್‌ಗಳ ಫೈನಲ್‌ನಲ್ಲಿ ಲಯ ತಪ್ಪಿದ ಝೋರಾವರ್ 7 ಅಂಕ ಸಂಪಾದಿಸಲಷ್ಟೇ ಶಕ್ತವಾದರು. ಅಮೆರಿಕದ ಹಿಂಟನ್ ವಿಲಿಯಂ (29) ಚಿನ್ನ ಗೆದ್ದರೆ, ಗ್ವಾಟೆಮಾಲಾದ ಬ್ರೋಲ್ ಕಾರ್ಡೆನಾಸ್ ಜೀನ್ ಪಿಯರ್‌ (28) ಬೆಳ್ಳಿ ಜಯಿಸಿದರು. ಅಮೆರಿಕದ ಮತ್ತೊಬ್ಬ ಶೂಟರ್‌ ಎಲರ್ ವಾಲ್ಟನ್ (23) ಕಂಚು ತಮ್ಮದಾಗಿಸಿಕೊಂಡರು.
  • 4 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ ಗೆದ್ದ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಿತು. 2 ಚಿನ್ನ, 3 ಬೆಳ್ಳಿ, ಒಂದು ಕಂಚಿನ ಪದಕಗಳೊಂದಿಗೆ ಭಾರತ ಎರಡನೇ ಸ್ಥಾನ ಗಳಿಸಿತು. ಅಮೆರಿಕ (6 ಪದಕ) ಮೂರನೇ ಸ್ಥಾನ ಪಡೆಯಿತು.
  • ಮುಟ್ಟಿನ ರಜೆ ನಿರಾಕರಿಸಿದರೆ ದಂಡ: ಮಸೂದೆ ಸಿದ್ಧ l ಮೇ 28ಕ್ಕೆಮುಟ್ಟಿನ ನೈರ್ಮಲ್ಯ ದಿನಆಚರಣೆಗೆ ನಿರ್ಧಾರ

ಸಂದರ್ಭ: ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವ, ಮುಟ್ಟು ಆದವರನ್ನು ಕೆಟ್ಟದಾಗಿ ನಡೆಸಿಕೊಳ್ಳುವ, ತಾರತಮ್ಯ ಮಾಡುವ ಅಥವಾ ಅಸ್ಪೃಶ್ಯ ಎಂದು ಪರಿಗಣಿಸುವವರಿಗೆ ₹5 ಸಾವಿರದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

  • ಈ ಉದ್ದೇಶದಿಂದ ‘ಕರ್ನಾಟಕ ಮಹಿಳಾ ಯೋಗಕ್ಷೇಮ ರಜೆ ಕಾಯ್ದೆ– 2025’ರ ಕರಡು ಮಸೂದೆಯನ್ನು ಸರ್ಕಾರ ಸಿದ್ಧಪಡಿಸಿದೆ. ಇಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ.
  • ‘ರಾಜ್ಯ ಸರ್ಕಾರದ ಅಧೀನದ ಶಿಕ್ಷಣ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸೇವೆಗಳಲ್ಲಿ ತೊಡಗಿರುವ ಮಹಿಳೆಯರು ಮುಟ್ಟಾದರೆ, ಆ ಅವಧಿಯಲ್ಲಿ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಈ ಮಸೂದೆಯನ್ನು ರೂಪಿಸಲಾಗಿದೆ. ಮಸೂದೆಯ ಅನ್ವಯ ಹುಡುಗಿಯರು, ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಮುಟ್ಟಿನ ರಜೆ ಪಡೆಯಲು ಅರ್ಹರು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ.
  • ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಮುಟ್ಟಿನ ರಜೆಯನ್ನು ಮಂಜೂರು ಮಾಡಿ ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ.
  • ಎರಡನೇ ದೊಡ್ಡ ಧ್ವಜ ಅನಾವರಣ

ಸಂದರ್ಭ: ‘ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ. ಅದು ಸ್ವಾತಂತ್ರ್ಯ ಹೋರಾಟದ ಪ್ರತೀಕ, ಭಾರತದ ಹೆಮ್ಮೆ, ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

  • ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿ ಇರುವ ಮೆಟ್ಟಿಲುಗಳ ಮೇಲೆ ಜಗತ್ತಿನಲ್ಲಿಯೇ ಎರಡನೇ ಅತಿ ದೊಡ್ಡದಾದ ತ್ರಿವರ್ಣ ಧ್ವಜವನ್ನು ಮಂಗಳವಾರ ಅನಾವರಣ ಮಾಡಿ ಅವರು ಮಾತನಾಡಿದರು. ‘ನಮ್ಮ ತ್ರಿವರ್ಣ ಧ್ವಜದಲ್ಲಿರುವ ಕೇಸರಿ, ಬಿಳಿ, ಹಸಿರು ಬಣ್ಣಗಳು ಶೌರ್ಯ, ಸ್ವಾಭಿಮಾನ, ಶಾಂತಿ, ಸಮೃದ್ಧಿಯನ್ನು ಪ್ರತಿಬಿಂಬಿಸುತ್ತವೆ. ರಾಷ್ಟ್ರ ಧ್ವಜವನ್ನು ಪ್ರತಿಯೊಬ್ಬರೂ ಗೌರವಿಸಬೇಕು’ ಎಂದು ಹೇಳಿದರು.
  • ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ‘ಸುವರ್ಣ ವಿಧಾನಸೌಧದ ಮಟ್ಟಿಲುಗಳ ಮೇಲೆ ಬೃಹತ್ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿರುವುದು, ದೇಶ ಪ್ರೇಮವನ್ನು ಮುಂದಿನ ಪೀಳಿಗೆಗೆ ದಾಟಿಸುವ ಕ್ರಮವಾಗಿದೆ’ ಎಂದರು.
  • ಭದ್ರಾ ಮೇಲ್ದಂಡೆ: ವೆಚ್ಚ ₹24 ಸಾವಿರ ಕೋಟಿಗೆ

ಸಂದರ್ಭ: ಭದ್ರಾ ಮೇಲ್ದಂಡೆ ಯೋಜನೆಯ ವೆಚ್ಚ ₹24 ಸಾವಿರ ಕೋಟಿಗೆ ತಲುಪಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ₹5,400 ಕೋಟಿ ಯನ್ನು ನೀಡಿಲ್ಲ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

  • ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ‘ಚಿತ್ರದುರ್ಗ ನಾಲೆಗೆ ನೀರು ಹರಿಸುವ ವಿಚಾರಕ್ಕೆ ಸರ್ಕಾರ ಬದ್ಧವಿದೆ. ಕೇಂದ್ರ ಸರ್ಕಾರ ಈ ಯೋಜನೆಗೆ ನೀಡುವುದಾಗಿ ಘೋಷಣೆ ಮಾಡಿದ ಹಣವನ್ನು ಪಡೆಯಲು ಸರ್ವ ಪಕ್ಷಗಳ ನಿಯೋಗವೊಂದನ್ನು ಆದಷ್ಟು ಬೇಗನೆ ಕರೆದೊಯ್ಯುತ್ತೇವೆ’ ಎಂದು ಭರವಸೆ ನೀಡಿದರು.
  • ಜಪಾನ್ಪ್ರಶಸ್ತಿಗೆ ಶ್ರೀಹರಿ ಆಯ್ಕೆ

ಸಂದರ್ಭ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ವಿಜ್ಞಾನಿ ಮತ್ತು ಉದ್ಯಮಿ ಶ್ರೀಹರಿ ಚಂದ್ರಘಾಟಗಿ ಅವರು ಜಪಾನ್‌ನ ಉದ್ಯಮ ತಂತ್ರಜ್ಞಾನದ ‘ಸೂಪರ್ ಮ್ಯಾನುಫ್ಯಾಕ್ಚರ್ಸ್ (ಚೋ ಮೊನೊಡುಜುಕುರಿ)’ ಅತ್ಯುನ್ನತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

  • ಪರಿಸರ ಸಂರಕ್ಷಣೆ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಶ್ರೀಹರಿ ಅವರು ಮಾಡಿದ ಉನ್ನತ ಸಾಧನೆಯನ್ನು ಪರಿಗಣಿಸಲಾಗಿದೆ. ಎರಡೂವರೆ ದಶಕಗಳಿಂದ ಟೋಕಿಯೋದಲ್ಲಿ ನೆಲೆಸಿರುವ ಅವರು, ‘ಎಕೋಸೈಕಲ್ ಕಾರ್ಪೊರೇಷನ್’ ಎಂಬ ಸಂಸ್ಥೆ ಸ್ಥಾಪಿಸಿ ಮುನ್ನಡೆಸುತ್ತಿದ್ದಾರೆ.
  • ಜಪಾನ್ ಸರ್ಕಾರದ ಆರ್ಥಿಕ, ವ್ಯಾಪಾರ, ಕೈಗಾರಿಕಾ ಸಚಿವಾಲಯ ಸೇರಿ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.
  • ಅನಂತ್ಅಂಬಾನಿಗೆ ಗ್ಲೋಬಲ್ ಹ್ಯೂಮನ್ ಸೊಸೈಟಿ ಪ್ರಶಸ್ತಿ

ಸಂದರ್ಭ: ರಿಲಯನ್ಸ್‌ ಫೌಂಡೇಷನ್‌ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ  ವಂತಾರದ ಸ್ಥಾಪಕ ಅನಂತ್‌ ಅಂಬಾನಿ ಅವರಿಗೆ ಅಮೆರಿಕದ  ಗ್ಲೋಬಲ್ ಹ್ಯೂಮನ್ ಸೊಸೈಟಿಯು ವಿಶ್ವ ಮಾನವೀಯ ಪ್ರಶಸ್ತಿ ಪ್ರದಾನ ಮಾಡಿದೆ.

  • ವನ್ಯಜೀವಿ ಸಂರಕ್ಷಣೆಯಲ್ಲಿ ಅನಂತ್‌ ಅಂಬಾನಿ ಅವರ ದೂರದೃಷ್ಟಿಯ ನಾಯಕತ್ವ, ವೈಜ್ಞಾನಿಕ ಕ್ರಮಗಳನ್ನು ಸಂಸ್ಥೆಯು ಶ್ಲಾಘಿಸಿದೆ. ಅಂತರ ರಾಷ್ಟ್ರೀಯ ಮಟ್ಟದ ಈ ಪುರಸ್ಕಾರ ಪಡೆದ ಏಷ್ಯಾದ ಮೊದಲಿಗ ಹಾಗೂ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅನಂತ್‌ ಪಾತ್ರರಾಗಿದ್ದಾರೆ.
  • ಅಳಿವಿನಂಚಿನಲ್ಲಿರುವ ವನ್ಯಜೀವಿ ತಳಿಗಳನ್ನು ಸಂರಕ್ಷಿಸುವಲ್ಲಿ ಅಂಬಾನಿ ಅವರ ಸುಸ್ಥಿರ ಕ್ರಮಗಳು ನೆರವಾಗಿವೆ. ವನ್ಯಜೀವಿಗಳು ಮತ್ತು ಮನುಷ್ಯರ ಬದುಕಿನಲ್ಲಿ ಗಮನಾರ್ಹ ಬದಲಾವಣೆ ತರಲು ಅಜೀವ ಬದ್ಧತೆ ಪ್ರದರ್ಶಿಸುವ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ಮೀಸಲಿಡ ಲಾಗಿದೆ’ ಎಂದು ಗ್ಲೋಬಲ್ ಹ್ಯೂಮನ್ ಸೊಸೈಟಿಯ ಪ್ರಕಟಣೆ ತಿಳಿಸಿದೆ.
  • ‘ಅತ್ಯುತ್ಕೃಷ್ಟ ಕಾಳಜಿ ಮೂಲಕ ಪ್ರತಿಯೊಂದು ಪ್ರಾಣಿಯ ಘನತೆಯನ್ನು ವಂತಾರ ಎತ್ತಿ ಹಿಡಿದಿದೆ’ ಎಂದು ಗ್ಲೋಬಲ್ ಹ್ಯೂಮನ್ ಸೊಸೈಟಿಯ ಅಧ್ಯಕ್ಷೆ ಮತ್ತು ಸಿಇಒ ಡಾ. ರಾಬಿನ್‌ ಗ್ಯಾನ್ಜೆರ್ಟ್‌ ಹೇಳಿದ್ದಾರೆ.
  • ’ಪ್ರಾಣಿಗಳು ನಮಗೆ ಮಾನವೀಯತೆ, ವಿಶ್ವಾಸ ಮತ್ತು ಬದುಕಿನ ಸಮತೋಲನವನ್ನು ಕಲಿಸುತ್ತವೆ. ಸೇವೆಯ ಮೂಲಕ ಪ್ರತಿಯೊಂದು ಪ್ರಾಣಿಯ ಘನತೆಯನ್ನು ಎತ್ತಿ ಹಿಡಿಯುವ ಕೆಲಸವನ್ನು ವಂತಾರ ಮಾಡುತ್ತಿದೆ’ ಎಂದು ಅನಂತ್‌ ಅಂಬಾನಿ ಹೇಳಿದ್ದಾರೆ.
  • ವಂದೇ ಮಾತರಂ ಸ್ಫೂರ್ತಿಗೀತೆಯ ಸುತ್ತ ವಿವಾದದ ಜ್ವಾಲೆ

ಖ್ಯಾತ ಬಂಗಾಳಿ ಲೇಖಕರಾಗಿದ್ದ ಬಂಕಿಮಚಂದ್ರ ಚಟರ್ಜಿ ಅವರು 1874ರಲ್ಲಿ ‘ಬಂಗದರ್ಶನ್’ ಎನ್ನುವ ಸಾಹಿತ್ಯ ಪತ್ರಿಕೆಯಲ್ಲಿ ವಿಗ್ರಹಾರಾಧನೆಯ ಬಗ್ಗೆ ಲೇಖನವೊಂದನ್ನು ಬರೆದಿದ್ದರು. ವಿಗ್ರಹಾರಾಧನೆಯು ಜ್ಞಾನ–ವಿಜ್ಞಾನದ ವಿರೋಧಿ ಎಂದು ಪ್ರತಿಪಾದಿಸಿದ್ದ ಅವರು, ಜ್ಞಾನದ ಬೆಳವಣಿಗೆಯನ್ನು ಉತ್ತೇಜಿಸಿದ ಗ್ರೀಕ್ ತತ್ವಜ್ಞಾನಿಗಳಾಗಲಿ, ವಿಜ್ಞಾನಿಗಳಾಗಲಿ, ಆರ್ಯನ್ ಸಾಧುಗಳಾಗಲಿ ವಿಗ್ರಹಾರಾಧನೆಯ ಪರವಾಗಿರಲಿಲ್ಲ ಎಂದು ಲೇಖನದಲ್ಲಿ ಉಲ್ಲೇಖಿಸಿದ್ದರು. ಸುಮಾರು ಅದೇ ಅವಧಿಯಲ್ಲಿಯೇ (1875) ಅವರು  ‘ವಂದೇ ಮಾತರಂ’ (ನಮಿಸುವೆ ಮಾತೆಗೆ) ಗೀತೆಯ ಮೊದಲ ಎರಡು ಪ್ಯಾರಾಗಳನ್ನು ಬರೆದರು. ಅವುಗಳಲ್ಲಿ ಮೂರ್ತಿಪೂಜೆಯ ಉಲ್ಲೇಖ ಇರಲಿಲ್ಲ. ಅದನ್ನು ಅವರು ಎಲ್ಲಿಯೂ ಪ್ರಕಟಿಸಲಿಲ್ಲ.           

ಬಂಕಿಮಚಂದ್ರರ ‘ಅನಂದಮಠ’ ಕಾದಂಬರಿಯು 1881ರಲ್ಲಿ ‘ಬಂಗದರ್ಶನ್’ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿ, ಅಪಾರ ಜನಪ್ರಿಯತೆ ಪಡೆಯಿತು. ಬಂಗಾಳದಲ್ಲಿ ತೀವ್ರ ಬರಗಾಲ, ರೈತರ ಸಂಕಷ್ಟ ಇದ್ದ ಕಾಲದ (1770) ಕಥಾವಸ್ತುವನ್ನು ಹೊಂದಿದ್ದ ಕಾದಂಬರಿಯು, ಫಕೀರರು–ಸನ್ಯಾಸಿಗಳು ಈಸ್ಟ್ ಇಂಡಿಯಾ ಕಂಪನಿಯ ಗುಲಾಮನಂತಿದ್ದ ನವಾಬನ ವಿರುದ್ಧ ಹೋರಾಡುವುದರ ಕಥನವಾಗಿತ್ತು. ವಿಶೇಷ ಏನೆಂದರೆ, ಅವರು ಈ ಹಿಂದೆ ಬರೆದಿದ್ದ ‘ವಂದೇ ಮಾತರಂ’ ಹಾಡು ಕಾದಂಬರಿಯಲ್ಲಿ ಸ್ಥಾನ ಪಡೆದಿತ್ತು. ಅವರ ಗೀತೆಯಲ್ಲಿ ಮೂಲದ ಎರಡು ಪ್ಯಾರಾಗಳ ಜತೆಗೆ ಹೊಸದಾಗಿ ಎರಡು ಪ್ಯಾರಾ ಸೇರಿದ್ದವು ಮತ್ತು ಮುಖ್ಯವಾಗಿ, ವಿಗ್ರಹಾರಾಧನೆಯ ಉಲ್ಲೇಖವಿತ್ತು. ಕಾದಂಬರಿಯ ಕೊನೆಯಲ್ಲಿ ಸನ್ಯಾಸಿಗಳು ಗೀತೆಯನ್ನು ಹಾಡುತ್ತಾರೆ. ಗದ್ಯ–ಪದ್ಯ ಮಿಶ್ರಿತ ಶೈಲಿಯಲ್ಲಿ, ದೇವಿ ದುರ್ಗೆಯನ್ನು ತಾಯಿಯೊಂದಿಗೆ (ದೇಶ) ಸಮೀಕರಿಸಿ, ಆ ತಾಯಿಯ ಪ್ರಾಕೃತಿಕ ವೈಭವ ಮತ್ತು ಶಕ್ತಿ ಸಾಮರ್ಥ್ಯಗಳನ್ನು ಅವರು ಚಿತ್ರಿಸಿದ್ದರು. ತಾಯಿಯ ಉಗ್ರರೂಪವನ್ನೂ ಗೀತೆಯಲ್ಲಿ ವರ್ಣಿಸಿದ್ದರು. ಬಂಕಿಮಚಂದ್ರರು ತಮ್ಮ ಸ್ವಾತಂತ್ರ್ಯ ಹೋರಾಟದ ಕಥಾವಸ್ತುವಿನ ಕೃತಿಯಲ್ಲಿ ಹಿಂದೂ ಧಾರ್ಮಿಕ ಪ್ರತಿಮೆಗಳಿರುವ ಗೀತೆಯನ್ನು ಬಳಸಿದ್ದರು.          

ಬ್ರಿಟಿಷರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳುತ್ತಿದ್ದ, ಸ್ವಾತಂತ್ರ್ಯ ಹೋರಾಟವು ಹಬ್ಬುತ್ತಿದ್ದ ಕಾಲ ಅದು. ಈ ಚಾರಿತ್ರಿಕ ಸಂದರ್ಭದಲ್ಲಿ ಸಹಜವಾಗಿಯೇ ‘ವಂದೇ ಮಾತರಂ’ ಗೀತೆಯೂ ನಿಧಾನಕ್ಕೆ ಜನಪ್ರಿಯವಾಗತೊಡಗಿತ್ತು. 1896ರ ಕಾಂಗ್ರೆಸ್ ಸಮಾವೇಶದಲ್ಲಿ ಗೀತೆಯನ್ನು ಮೊದಲ ಬಾರಿಗೆ ಹಾಡಲಾಯಿತು. ಬ್ರಿಟಿಷರು 1905ರಲ್ಲಿ ಹಿಂದೂ–ಮುಸ್ಲಿಂ ಜನಸಂಖ್ಯಾ ಬಾಹುಳ್ಯದ ಆಧಾರದಲ್ಲಿ ಬಂಗಾಳವನ್ನು ವಿಭಜಿಸಲು ಮುಂದಾದರು. ಈ ಸಂದರ್ಭದಲ್ಲಿ ‘ವಂದೇ ಮಾತರಂ’ ಮತ್ತಷ್ಟು ಜನಪ್ರಿಯತೆ ಪಡೆಯಿತು. ಜನ ಅದನ್ನು ವ್ಯಾಪಕವಾಗಿ ಹಾಡತೊಡಗಿದರು. 1920ರ ಹೊತ್ತಿಗೆ ಬಹುತೇಕ ಭಾಷೆಗಳಿಗೆ ಅನುವಾದಗೊಂಡಿದ್ದ ಅದು, ರಾಷ್ಟ್ರೀಯವಾದಿಗಳ ನೆಚ್ಚಿನ ಹಾಡಾಗಿ ಬದಲಾಗಿತ್ತು.  

ಮುಸ್ಲಿಂ ವಿರೋಧ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ‘ವಂದೇ ಮಾತರಂ’ ಅನ್ನು ಸ್ವಾತಂತ್ರ್ಯ ಹೋರಾಟದ ಸ್ಫೂರ್ತಿಗೀತೆಯಾಗಿ ಬಳಸುತ್ತಿತ್ತು. ಹಿಂದೂಗಳು ಕೋಮು ಹಿಂಸಾಚಾರದ ಸಂದರ್ಭದಲ್ಲಿ ಈ ಹಾಡನ್ನು ಬಳಸುತ್ತಿದ್ದರು. ಈ ದಿಸೆಯಲ್ಲಿ ಬಂಕಿಮಚಂದ್ರರ ಜೀವಿತಾವಧಿಯಲ್ಲಿಯೇ ಗೀತೆಗೆ ಮುಸ್ಲಿಂ ಸಮುದಾಯದ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಮುಸ್ಲಿಂ ಅರಸರ ವಿರುದ್ಧ ಹಿಂದೂಗಳ ಹೋರಾಟವನ್ನು ‘ಆನಂದಮಠ’ ಕಾದಂಬರಿಯಲ್ಲಿ ವೈಭವೀಕರಿಸಲಾಗಿದೆ ಎನ್ನುವ ವಿಶ್ಲೇಷಣೆಯೂ ಕೇಳಿಬಂದಿತ್ತು. ಜತೆಗೆ, ಹಿಂದೂ ದೇವತೆಯ ಪ್ರಸ್ತಾಪ, ವರ್ಣನೆ ಇರುವ ಗೀತೆಯಲ್ಲಿ ತಾಯ್ನಾಡನ್ನು ದೈವೀಕರಿಸಿರುವುದರ ಬಗ್ಗೆ ಮುಸ್ಲಿಮರಿಂದ ವಿರೋಧದ ಧ್ವನಿಗಳು ಕೇಳಿಬಂದವು. ಸ್ವಾತಂತ್ರ್ಯ ಹೋರಾಟವು ಎಲ್ಲ ಸಮುದಾಯಗಳ ಹೋರಾಟವಾಗಿದ್ದು, ಅಂಥ ಹೋರಾಟದಲ್ಲಿ ಈ ಗೀತೆ ಹಾಡುವುದು ಮುಸ್ಲಿಮರಿಗೆ ಇರಿಸುಮುರುಸು ಉಂಟುಮಾಡುತ್ತದೆ, ಅವರನ್ನು ಹೋರಾಟದಿಂದ ಹೊರಗಿಡುತ್ತದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾದವು. ಆದರೆ, ಶಾಲೆಗಳಲ್ಲಿ ಎಲ್ಲ ಧರ್ಮದ ಮಕ್ಕಳೂ ‘ವಂದೇ ಮಾತರಂ’ ಹಾಡುವುದನ್ನು ಕಾಂಗ್ರೆಸ್ ಕಡ್ಡಾಯ ಮಾಡಿತು. ಇದರಿಂದ ಮುಸ್ಲಿಮರ ಅಸಮಾಧಾನ ಹೆಚ್ಚಾಗುತ್ತಾ ಸಾಗಿ, ಮುಸ್ಲಿಂ ಲೀಗ್ ಪ್ರವೇಶದೊಂದಿಗೆ ಅದು ಮತ್ತಷ್ಟು ಸಂಕೀರ್ಣ ಸ್ವರೂಪ ಪಡೆಯಿತು.    

ರಾಜಕೀಯ ಲೇಪ: ‘ವಂದೇ ಮಾತರಂ’ ಗೀತೆಯು ‘ಆನಂದಮಠ’ ಕಾದಂಬರಿಯಲ್ಲಿ ಸ್ಥಾನ ಪಡೆದ ದಿನದಿಂದಲೂ ಆಯಾ ಕಾಲಮಾನದ ರಾಜಕೀಯ, ಆಡಳಿತ ವ್ಯವಸ್ಥೆಗೆ ತಕ್ಕಂತೆ ಹಲವು ಸ್ವರೂಪಗಳನ್ನು ಪಡೆಯುತ್ತಲೇ ಬಂದಿದೆ. ಬಂಕಿಮಚಂದ್ರರು ತಮ್ಮ ಹಿಂದೂ ಧಾರ್ಮಿಕ ಹಿನ್ನೆಲೆಗನುಗುಣವಾಗಿ ಬರೆದ ಸ್ತುತಿಗೀತೆಯು ತನ್ನ ಗೇಯಗುಣ, ಭಾವತೀವ್ರತೆ, ಆಕರ್ಷಕ ಶೈಲಿಯಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಜನರನ್ನು ಸೆಳೆಯಲು ಬಳಕೆಯಾಯಿತು. ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್ ಹುಟ್ಟು ಪಡೆದ ನಂತರ ಅದರ ಕೋಮು ಆಯಾಮಕ್ಕೆ ಹೆಚ್ಚು ಒತ್ತು ಸಿಕ್ಕಿತು.

ಸ್ವಾತಂತ್ರ್ಯಪೂರ್ವದಲ್ಲಿ ಅದನ್ನು ರಾಷ್ಟ್ರಗೀತೆಯನ್ನಾಗಿ ಮಾಡುವ ಚಿಂತನೆ ಕೆಲವರಲ್ಲಿತ್ತು. ಐದು ಪ್ಯಾರಾಗಳ ಹಾಡನ್ನು ಎರಡು ಪ್ಯಾರಾಗಳಿಗೆ ಇಳಿಸುವ ನಿರ್ಧಾರವನ್ನು ನೆಹರೂ ಅವರನ್ನೊಳಗೊಂಡತೆ ಅಂದಿನ ನಾಯಕರು ಕೈಗೊಂಡಿದ್ದರು. ಅದರ ಜನಪ್ರಿಯತೆ, ಸ್ಫೂರ್ತಿಗುಣವನ್ನು ಅರಿತಿದ್ದ ನೆಹರೂ ಅವರು, ಸ್ವಾತಂತ್ರ್ಯಾ ನಂತರ ಅದನ್ನು ರಾಷ್ಟ್ರೀಯ ಹಾಡನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಮುಂದೆ, ಹಾಡಿನ ಸುತ್ತ ಚರ್ಚೆಗಳು ಚಾಲ್ತಿಯಲ್ಲಿದ್ದರೂ, ಅದು ತೀವ್ರಗೊಂಡದ್ದು ರಾಷ್ಟ್ರೀಯವಾದಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ. 2026ರ ಮಾರ್ಚ್–ಏಪ್ರಿಲ್‌ನಲ್ಲಿ ಪಶ್ಚಿಮ ಬಂಗಾಳದ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಈಗಿನಿಂದಲೇ ನೆಲ ಹದಗೊಳಿಸುವ ಪ್ರಯತ್ನವಾಗಿ ಬಂಕಿಮಚಂದ್ರ ಮತ್ತು ‘ವಂದೇ ಮಾತರಂ’ ಮೂಲಕ ಹಿಂದೂ ಕಾರ್ಯಸೂಚಿಯನ್ನು ಮುನ್ನೆಲೆಗೆ ತರುತ್ತಿದೆ ಎನ್ನುವ ವಿಶ್ಲೇಷಣೆಗಳಿವೆ.

ಮುಸ್ಲಿಂ ಲೀಗ್‌ ತೀವ್ರ ವಿರೋಧ

ಕಲ್ಕತ್ತದಲ್ಲಿ 1896ರಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 12ನೇ ಸಮಾವೇಶದಲ್ಲಿ ರವೀಂದ್ರ ನಾಥ ಟ್ಯಾಗೋರ್‌ ಅವರು ಮೊದಲ ಬಾರಿಗೆ ಈ ಗೀತೆಯನ್ನು ಹಾಡಿದಾಗ, ರಹೀಮುತುಲ್ಲಾ ಸಯಾನಿ ಅವರು ಆ ಸಮಾವೇಶದ ಅಧ್ಯಕ್ಷರಾಗಿದ್ದರು. 1905ರ ನಂತರ ‘ವಂದೇ ಮಾತರಂ’ ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಬದಲಾಯಿತು. ಆದರೆ, ಹಾಡಿನಲ್ಲಿರುವ ದೇವತೆಗಳ ಪ್ರಸ್ತಾಪ ಮತ್ತು ಹಿಂದೂ ಪರವಾದ ಧ್ವನಿ ಮುಸ್ಲಿಮರ ಆಕ್ಷೇಪಕ್ಕೆ ಕಾರಣವಾಯಿತು.  

ಬಂಗಾಳ ವಿಭಜನೆಯ ನಂತರ ಜಮಲ್‌ಪುರ (1907) ಸೇರಿದಂತೆ ಬಂಗಾಳದ ಹಲವು ಕಡೆಗಳಲ್ಲಿ ಕೋಮು ಘರ್ಷಣೆಗಳು ನಡೆದವು. 

1908ರ ಡಿ.30ರಂದು ಅಮೃತಸರದಲ್ಲಿ ನಡೆದಿದ್ದ ಅಖಿಲ ಭಾರತ ಮುಸ್ಲಿಂ ಲೀಗ್‌ನ ಎರಡನೇ ಸಮಾವೇಶದಲ್ಲಿ ಅಧ್ಯಕ್ಷರಾಗಿದ್ದ ಸೈಯದ್‌ ಅಲಿ ಇಮಾಮ್‌ ಅವರು ‘ವಂದೇ ಮಾತರಂ’ ಹಿಂದೂ ರಾಷ್ಟ್ರೀಯವಾದದ ಭಾಗವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು. ನೈಜ ಭಾರತೀಯ ರಾಷ್ಟ್ರೀಯವಾದದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು. ಈ ಗೀತೆ ಮುಸ್ಲಿಮರ ಸಂಪ್ರದಾಯಕ್ಕೆ ವಿರೋಧವಾದುದು ಎಂದೂ ಹೇಳಿದ್ದರು. 

1937ರ ಅಕ್ಟೋಬರ್‌ನಲ್ಲಿ ಮಹಮ್ಮದ್‌ ಅಲಿ ಜಿನ್ನಾ ಅವರ ನೇತೃತ್ವದಲ್ಲಿ ನಡೆದಿದ್ದ ಮುಸ್ಲಿಂ ಲೀಗ್‌ನ 25ನೇ ವಾರ್ಷಿಕ ಸಮಾವೇಶವು ‘ವಂದೇ ಮಾತರಂ’ ವಿರುದ್ಧವಾಗಿ ನಿರ್ಣಯ ಕೈಗೊಂಡಿತ್ತು. ಇದನ್ನು ರಾಷ್ಟ್ರಗೀತೆ ಎಂದು ಘೋಷಿಸುವ ಭಾರತೀಯ ಕಾಂಗ್ರೆಸ್‌ನ ನಿರ್ಧಾರವನ್ನು ಖಂಡಿಸಿತ್ತು. ಅಲ್ಲದೇ, ‘ಇದು ಸಂವೇದನಾರಹಿತ, ಮುಸ್ಲಿಂ ವಿರೋಧಿ. ಕಾಂಗ್ರೆಸ್‌ನ ನಿಲುವು, ಯೋಚನೆಗಳು ವಿಗ್ರಹಾರಾಧನೆಯ ಪರವಾಗಿವೆ. ಇದು ಭಾರತದಲ್ಲಿ ನೈಜ ರಾಷ್ಟ್ರೀಯವಾದದ ಬೆಳವಣಿಗೆಯನ್ನು ಬುಡಮೇಲು ಮಾಡಲಿದೆ’ ಎಂದು ನಿರ್ಣಯದಲ್ಲಿ ಹೇಳಲಾಗಿತ್ತು.  

ಎರಡು ಪ್ಯಾರಾ ಬಳಸುವ ನಿರ್ಧಾರ‌

ಮುಸ್ಲಿಂ ಸಮುದಾಯದಿಂದ ತೀವ್ರ ವಿರೋಧ ಬಂದ ನಂತರ ಕಲ್ಕತ್ತದಲ್ಲಿ ಜವಾಹರಲಾಲ್‌ ನೆಹರೂ ಅವರ ಅಧ್ಯಕ್ಷತೆಯಲ್ಲಿ 1937ರ ಅ.26ರಂದು ಸಭೆ ಸೇರಿದ್ದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯು ಐದು ಪ್ಯಾರಾಗಳನ್ನು ಹೊಂದಿದ್ದ ‘ವಂದೇ ಮಾತರಂ’ ಗೀತೆಯಲ್ಲಿ ಮೊದಲ ಎರಡು ಪ್ಯಾರಾಗಳನ್ನು ಮಾತ್ರ ಬಳಸುವ ಬಗ್ಗೆ ಚರ್ಚೆ ನಡೆಸಿತ್ತಲ್ಲದೇ, ಈ ಬಗ್ಗೆ ಸುದೀರ್ಘ ಹೇಳಿಕೆಯನ್ನೂ ಬಿಡುಗಡೆ ಮಾಡಿತ್ತು. 

‘ಕಳೆದ 30 ವರ್ಷಗಳಲ್ಲಿ ದೇಶದಾದ್ಯಂತ ಕಂಡುಬಂದಿರುವ ಜನರ ತ್ಯಾಗ ಮತ್ತು ನರಳಾಟದೊಂದಿಗೆ ‘ವಂದೇ ಮಾತರಂ’ ಬೆಸೆದುಕೊಂಡಿದೆ. ಈ ಗೀತೆ ಮತ್ತು ಅದರಲ್ಲಿನ ಪದಗಳು ಬಂಗಾಳ ಮತ್ತು ದೇಶದ ಇತರ ಕಡೆಗಳಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ವಿರುದ್ಧದ ರಾಷ್ಟ್ರೀಯ ಸಂಕೇತವಾಗಿ ರೂಪುಗೊಂಡಿವೆ. ಕ್ರಮೇಣ ಹಾಡಿನ ಮೊದಲೆರಡು ಪ್ಯಾರಾಗಳ ಬಳಕೆಯು ದೇಶದ ಇತರ ಪ್ರಾಂತ್ಯಗಳಿಗೆ ಹರಡಿದೆ ಮತ್ತು ಅವುಗಳಿಗೆ ರಾಷ್ಟ್ರೀಯ ಪ್ರಾಮುಖ್ಯವೂ ಸಿಕ್ಕಿದೆ. ಹಾಡಿನ ಉಳಿದ ಸಾಲುಗಳ ಬಳಕೆ ಅಪರೂಪವಾಗಿದೆ. ಮೊದಲ ಎರಡು ಪ್ಯಾರಾಗಳು ನಮ್ಮ ತಾಯಿನೆಲದ ಸೌಂದರ್ಯ ಮತ್ತು ಆಕೆಯ ಕೊಡುಗೆಗಳನ್ನು ಕೋಮಲವಾದ ಭಾಷೆಯಲ್ಲಿ ಕಟ್ಟಿಕೊಟ್ಟಿದೆ. ಧಾರ್ಮಿಕವಾಗಿ ಅಥವಾ ಬೇರೆ ಯಾವುದೇ ದೃಷ್ಟಿಕೋನದಿಂದ ಆಕ್ಷೇಪಿಸಬಹುದಾದ ಯಾವ ಸಂಗತಿಗಳು ಇವುಗಳಲ್ಲಿ ಇಲ್ಲ’ ಎಂದು ಹೇಳಿಕೆಯಲ್ಲಿ ವಿವರಿಸಲಾಗಿತ್ತು. 

ಮುಸ್ಲಿಮರು ವ್ಯಕ್ತಪಡಿಸಿದ್ದ ಆಕ್ಷೇಪವನ್ನು ಅದರಲ್ಲಿ ಪ್ರಸ್ತಾಪಿಸಲಾಗಿತ್ತು.

ಈ ಹೇಳಿಕೆಯನ್ನು ಸಿದ್ಧಪಡಿಸುವಲ್ಲಿ ನೆಹರೂ ಅವರ ಪಾತ್ರವಿತ್ತು. ರವೀಂದ್ರನಾಥ ಟ್ಯಾಗೋರ್‌ ಅವರು ಇದಕ್ಕೆ ಸಮ್ಮತಿಸಿದ್ದರು. ಕಾಂಗ್ರೆಸ್‌ ಸಮಿತಿಯು ಮೊದಲೆರಡು ಪ್ಯಾರಾಗಳನ್ನು ಹೊಂದಿದ ‘ವಂದೇ ಮಾತರಂ’ ಅನ್ನು ರಾಷ್ಟ್ರೀಯ ಗೀತೆಯನ್ನಾಗಿ ಘೋಷಿಸಲು ಸಮ್ಮತಿಸಿತ್ತು.

ದೇಶದ ಸ್ವಾತಂತ್ರ್ಯ ಸಂಗ್ರಾಮದ ಭಾಗವಾಗಿದ್ದ ಈ ಗೀತೆಯನ್ನು ಎಲ್ಲರೂ ಒಪ್ಪಬೇಕು ಎಂದು ಮಹಾತ್ಮ ಗಾಂಧೀಜಿ ಅವರು ಬಯಸಿದ್ದರು. ಆದರೆ, ಅದರ ಹೇರಿಕೆಯನ್ನು ವಿರೋಧಿಸಿದ್ದರು. 

ರಾಷ್ಟ್ರಗೀತೆಗೆ ಸಮನಾದ ಸ್ಥಾನಮಾನ

ಸ್ವಾತಂತ್ರ್ಯಾನಂತರ ರಾಷ್ಟ್ರಗೀತೆಯನ್ನಾಗಿ ಯಾವ ಹಾಡನ್ನು ಆಯ್ಕೆ ಮಾಡಬೇಕು ಎಂಬ ಚರ್ಚೆ ಸಂವಿಧಾನ ರಚನಾ ಸಭೆಯಲ್ಲಿ ನಡೆದಿತ್ತು.

1948ರ ಆಗಸ್ಟ್‌ 25ರಂದು ನಡೆದಿದ್ದ ಸಂವಿಧಾನ ರಚನಾ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನೆಹರೂ ಅವರು ರವೀಂದ್ರನಾಥ್‌ ಟ್ಯಾಗೋರ್‌ ವಿರಚಿತ ‘ಜನ ಗಣ ಮನ’ದ ಪರವಾಗಿ ಮಾತನಾಡಿದ್ದರು. ‘ನೈರುತ್ಯ ಏಷ್ಯಾದಲ್ಲಿ ಭಾರತೀಯ ರಾಷ್ಟ್ರೀಯ ಸೇನೆಯು ಈ ಹಾಡನ್ನು ರಾಷ್ಟ್ರಗೀತೆಯನ್ನಾಗಿ ಅಳವಡಿಸಿಕೊಂಡಿತ್ತು. ಭಾರತದಲ್ಲೂ ಇದು ಜನಪ್ರಿಯವಾಗಿದೆ. ಜನ ಗಣ ಮನವನ್ನು ಅಥವಾ ಬೇರೆ ಹಾಡನ್ನು ರಾಷ್ಟ್ರಗೀತೆಯನ್ನಾಗಿ ಆಯ್ಕೆ ಮಾಡುವ ಬಗ್ಗೆ ಎಲ್ಲ ಪ್ರಾಂತ್ಯಗಳ ರಾಜ್ಯಪಾಲರ ಅಭಿಪ್ರಾಯವನ್ನು ಕೇಳಿದ್ದೆ. ಒಬ್ಬರನ್ನು ಬಿಟ್ಟು ಉಳಿದೆಲ್ಲರೂ ‘ಜನ ಗಣ ಮನ’ಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಅಭಿಪ್ರಾಯವನ್ನು ಸಂಪುಟ ಪರಿಗಣಿಸಿದ್ದು, ಸಂವಿಧಾನ ರಚನಾ ಸಭೆಯು ಅಂತಿಮ ನಿರ್ಧಾರ ಕೈಗೊಳ್ಳುವವರೆಗೂ ಜನ ಗಣ ಮನವನ್ನು ತಾತ್ಕಾಲಿಕವಾಗಿ ರಾಷ್ಟ್ರಗೀತೆಯನ್ನಾಗಿ ಬಳಸಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದರು.

ತಮ್ಮ ಭಾಷಣದಲ್ಲಿ ‘ವಂದೇ ಮಾತರಂ’ನ ಬಗ್ಗೆಯೂ ಪ್ರಸ್ತಾಪಿಸಿದ್ದ ಅವರು, ‘ನಿಜಕ್ಕೂ ಅದು ಪ್ರಮುಖವಾದ ರಾಷ್ಟ್ರೀಯ ಹಾಡು. ನಮ್ಮ ದೇಶ ಮತ್ತು ಸ್ವಾತಂತ್ರ್ಯ ಹೋರಾಟದೊಂದಿಗೆ ಗುರುತಿಸಿಕೊಂಡಿದೆ. ಅದರ ಸ್ಥಾನವನ್ನು ಬೇರೆ ಯಾವ ಹಾಡು ಕೂಡ ತುಂಬಲು ಸಾಧ್ಯವಿಲ್ಲ. ರಾಷ್ಟ್ರಗೀತೆಯ ವಿಚಾರಕ್ಕೆ ಬಂದಾಗ ಪದಗಳಿಗಿಂತಲೂ ರಾಗ/ಧಾಟಿ (ಟ್ಯೂನ್‌) ಮುಖ್ಯ’ ಎಂದು ಪ್ರತಿಪಾದಿಸಿದ್ದರು. 

1950ರ ಜನವರಿ 24ರಂದು ಸಂವಿಧಾನ ರಚನಾ ಸಭೆಯಲ್ಲಿ ಮಾತನಾಡಿದ್ದ ಅಧ್ಯಕ್ಷ ಡಾ.ರಾಜೇಂದ್ರ ಪ್ರಸಾದ್‌ ಅವರು, ‘ಪದಗಳು ಮತ್ತು ಸಂಗೀತವನ್ನೊಳಗೊಂಡ ಜನ ಗಣ ಮನವು ದೇಶದ ರಾಷ್ಟ್ರಗೀತೆಯಾಗಿದ್ದು, ಸಂದರ್ಭ ಬಂದಾಗ ಸರ್ಕಾರ ಅನುಮತಿಸಿದರೆ ಗೀತೆಯಲ್ಲಿನ ಪದಗಳನ್ನು ಬದಲಾಯಿಸುವುದಕ್ಕೆ ಅವಕಾಶ ಇರುತ್ತದೆ. ಭಾರತದ ಸ್ವಾತಂತ್ರ್ಯದಲ್ಲಿ ಪ್ರಮುಖ ಪಾತ್ರವಹಿಸಿದ ‘ವಂದೇ ಮಾತರಂ’ಗೆ ಕೂಡ ‘ಜನ ಗಣ ಮನ’ಕ್ಕೆ ಸಮನಾದ ಗೌರವ, ಅದಕ್ಕೆ ಸರಿಸಮಾನದ ಸ್ಥಾನಮಾನವನ್ನೇ ನೀಡಬೇಕು’ ಎಂದು ಹೇಳಿದ್ದರು. 

ಇಡೀ ಸಭೆಯು ಕರತಾಡನದ ಮೂಲಕ ಈ ಹೇಳಿಕೆಯನ್ನು ಅನುಮೋದಿಸಿತ್ತು. ಆಧಾರ: ಜ್ಯೂಲಿಯಸ್‌ ಜೆ.ಲೈಪ್ನರ್‌ ಭಾಷಾಂತರಿಸಿದ ‘ಆನಂದಮಠ, ಆರ್‌ ದಿ ಸೇಕ್ರೆಡ್‌ ಬ್ರದರ್‌ಹುಡ್‌’ ಕೃತಿ, ಅಮರೇಂದ್ರ ಲಕ್ಷ್ಮಣ್‌ ಗಾಡ್ಗೀಳ್‌ ಅವರ ‘ವಂದೇ ಮಾತರಂ’ ಕೃತಿ, ಪಿಐಬಿ, ತಜ್ಞರ ಲೇಖನಗಳು

‘ವಂದೇ ಮಾತರಂ’ ಗೀತೆ 19ನೇ ಶತಮಾನದ ಕೊನೆ– 20ನೇ ಶತಮಾನದ ಆರಂಭದಲ್ಲಿ ದೇಶದಾದ್ಯಂತ ಪಸರಿಸಿತು. ಅದೆಷ್ಟು ಖ್ಯಾತಿ ಗಳಿಸಿತು ಎಂದರೆ, 1906 ಆಗಸ್ಟ್‌ 6ರಂದು ಕಲ್ಕತ್ತದಲ್ಲಿ ‘ವಂದೇ ಮಾತರಂ’ ಹೆಸರಿನಲ್ಲಿ ಇಂಗ್ಲಿಷ್‌ ಪತ್ರಿಕೆ ಆರಂಭಗೊಂಡಿತು. ವಿಪಿನ್‌ ಚಂದ್ರಪಾಲ್‌ (ಲಾಲ್‌–ಬಾಲ್‌–ಪಾಲ್‌ ಎಂದು ಖ್ಯಾತಿ ಗಳಿಸಿದ ಮೂವರಲ್ಲಿ ಒಬ್ಬರು) ಇದರ ಸಂಸ್ಥಾಪಕರು. ಈ ಪತ್ರಿಕೆಯ ವಿರುದ್ಧ ಬ್ರಿಟಿಷ್‌ ಆಡಳಿತ ದೇಶದ್ರೋಹ ಪ್ರಕರಣವನ್ನೂ ದಾಖಲಿಸಿತ್ತು

  • ಭಾರತದ ಅಕ್ಕಿಗೆ ಹೆಚ್ಚಿನ ತೆರಿಗೆ: ಟ್ರಂಪ್

ಸಂದರ್ಭ: ಆಮದು ನಿಯಂತ್ರಣಕ್ಕೆ ಕ್ರಮ: ಅಮೆರಿಕದ ಕೃಷಿಕರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ತೆರಿಗೆ ಹೇರಿಕೆಯು ಭಾರತದ ಅಕ್ಕಿ ರಫ್ತಿನ ಮೇಲೆ ತಾತ್ಕಾಲಿಕ ಪರಿಣಾಮ ಬೀರಬಹುದಷ್ಟೇ. ಹೊಸ ಕಾರ್ಯತಂತ್ರ ಅಳವಡಿಸಿಕೊಂಡರೆ ಅಮೆರಿಕದಲ್ಲಿ ಅಕ್ಕಿ ಮಾರುಕಟ್ಟೆ ವಿಸ್ತರಿಸಿಕೊಳ್ಳಲು ನಮಗೆ ಇನ್ನೂ ಹೆಚ್ಚಿನ ಅವಕಾಶಗಳಿವೆ  ಪ್ರೇಮ್ಗಾರ್ಗ್ಭಾರತೀಯ ಅಕ್ಕಿ ರಫ್ತುದಾರರ ಒಕ್ಕೂಟದ ಅಧ್ಯಕ್ಷ.  

  • ಭಾರತವು, ಬಾಸ್ಮತಿ, ಸೋನಾ ಮಸೂರಿ ಸೇರಿದಂತೆ ವಿವಿಧ ತಳಿಗಳ ಅಕ್ಕಿಯನ್ನು ತಂದು ಅಮೆರಿಕದ ಮಾರುಕಟ್ಟೆಗೆ ಸುರಿಯುತ್ತಿದ್ದು, ಆಮದು ನಿಯಂತ್ರಿಸಲು ಅಕ್ಕಿ ಮೇಲೆ ಹೆಚ್ಚಿನ ತೆರಿಗೆ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.
  • ವೈಟ್‌ಹೌಸ್‌ನಲ್ಲಿ ಕೃಷಿ ವಲಯದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ, ಲೂಸಿಯಾನದ ಕೆನಡಿ ಅಕ್ಕಿ ಗಿರಣಿಯ ಮೆರಿಲ್‌ ಕೆನಡಿ ಅವರು, ‘ಭಾರತ, ಥಾಯ್ಲೆಂಡ್‌ ಮತ್ತು ಚೀನಾ ಅಮೆರಿಕದ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ಅಕ್ಕಿಯನ್ನು ತಂದು ಸುರಿಯುತ್ತಿವೆ. ಇದರಿಂದ ಅಮೆರಿಕದ ಅಕ್ಕಿ ಉತ್ಪಾದಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಲ್ಲಿ ಭಾರತದ ಪಾಲು ಗರಿಷ್ಠ ಮಟ್ಟದಲ್ಲಿದೆ’ ಎಂದು ದೂರಿದರು.
  • ‘ಯಾಕೆ, ಭಾರತ ಅಮೆರಿಕದ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ಅಕ್ಕಿ ತಂದು ಸುರಿಯುತ್ತಿದೆ. ಭಾರತದ ಅಕ್ಕಿಗೆ ತೆರಿಗೆಯಿಂದ ವಿನಾಯ್ತಿ ನೀಡಲಾಗಿದೆಯೇ’ ಎಂದು ಟ್ರಂಪ್‌, ಸಭೆಯಲ್ಲಿ ಹಾಜರಿದ್ದ ಖಜಾನೆ ಕಾರ್ಯದರ್ಶಿ ಸ್ಕಾಟ್‌ ಬೆಸೆಂಟ್‌ ಅವರನ್ನು ಪ್ರಶ್ನಿಸಿದರು. ‘ಇಲ್ಲ, ನಾವು ಈ ಬಗ್ಗೆ ಶೀಘ್ರದಲ್ಲೇ ಹೊಸ ಒ ಪ್ಪಂದ ಮಾಡಿ ಕೊಳ್ಳುತ್ತೇವೆ’ ಎಂದು ಬೆಸೆಂಟ್ ಹೇಳಿದರು.
  • ‘ಅಮೆರಿಕನ್ನರಿಗೆ ಬೇಕಾಗುವಷ್ಟು ಭತ್ತವನ್ನು ಅಮೆರಿಕದ ರೈತರೇ ಬೆಳೆಯುತ್ತಾರೆ. ನಮಗೆ ಬೇರೆ ದೇಶಗಳೊಂದಿಗೆ ನ್ಯಾಯಯುತ ವ್ಯಾಪಾರ ಬೇಕೇ ಹೊರತು, ಉಚಿತ ವ್ಯಾಪಾರವಲ್ಲ. ಅಕ್ಕಿ ಆಮದಿನ ಮೇಲೆ ನಿಯಂತ್ರಣ ಹೇರಬೇಕು‘ ಎಂದು ಕೆನಡಿ, ಟ್ರಂಪ್‌ ಅವರನ್ನು ಒತ್ತಾಯಿಸಿದರು.  
  • ‘ಭಾರತವು ಅಮೆರಿಕದ ಮಾರುಕಟ್ಟೆಗೆ ಅಕ್ಕಿಯನ್ನು ತಂದು ಸುರಿಯಬಾರದು. ‘ತೆರಿಗೆ’ ವಿಧಿಸುವ ಮೂಲಕ ಈ ಸಮಸ್ಯೆಯನ್ನು ನಾವು ಸರಳವಾಗಿ ಬಗೆಹರಿಸಿಕೊಳ್ಳಬಹುದು’ ಎಂದು ಟ್ರಂಪ್‌ ಹೇಳಿದರು.
  • ಭಾರತದಿಂದ ಆಮದು ಮಾಡಿಕೊಳ್ಳುವ ಅಕ್ಕಿಯ ಮೇಲೆ ಅಮೆರಿಕವು ಮೊದಲು ಶೇ 10ರಷ್ಟು ತೆರಿಗೆ ವಿಧಿಸಿತ್ತು. ಟ್ರಂಪ್‌ ಆಡಳಿತವು ಇತ್ತೀಚೆಗೆ ತೆರಿಗೆ ಪರಿಷ್ಕರಣೆ ಮಾಡಿದ ಬಳಿಕ ಇದು ಶೇ 40ಕ್ಕೆ ಏರಿಕೆಯಾಗಿದೆ.
  • ಸಭೆ ಮುಗಿದ ಬಳಿಕ ಟ್ರಂಪ್‌, ಅಮೆರಿಕದ ಕೃಷಿಕರಿಗಾಗಿ ನಾಲ್ಕು ವರ್ಷಗಳ ಅವಧಿಗೆ 12 ಶತಕೋಟಿ ಡಾಲರ್‌ (₹1.07 ಲಕ್ಷ ಕೋಟಿ) ಕೃಷಿ ಪರಿಹಾರ ಪ್ಯಾಕೇಜ್‌ ಪ್ರಕಟಿಸಿದರು. ಕೃಷಿ ಕಾರ್ಯದರ್ಶಿ ಬ್ರೂಕ್‌ ರೋಲಿನ್ಸ್‌, ಕೃಷಿ ವಲಯದ ಪ್ರತಿನಿಧಿಗಳು, ಟ್ರಂಪ್‌ ಸಂಪುಟದ ಸದಸ್ಯರು ಭಾಗವಹಿಸಿದ್ದರು.

ಅಮೆರಿಕಕ್ಕೆ 2.74 ಲಕ್ಷ ಟನ್ಬಾಸ್ಮತಿ ಅಕ್ಕಿ

  • ಬಾಸ್ಮತಿ ಅಕ್ಕಿ ರಫ್ತಿನಲ್ಲಿ ಅಮೆರಿಕವು ಭಾರತಕ್ಕೆ ವಿಶ್ವದಲ್ಲೇ ನಾಲ್ಕನೆಯ ಅತಿ ದೊಡ್ಡ ಮಾರುಕಟ್ಟೆ. 2024–25ನೇ ಸಾಲಿನ ಹಣಕಾಸು ವರ್ಷದಲ್ಲಿ ಭಾರತವು ಅಮೆರಿಕಕ್ಕೆ 337 ದಶಲಕ್ಷ ಡಾಲರ್‌ (₹3,028 ಕೋಟಿ)  ಮೌಲ್ಯದ   2.74 ಲಕ್ಷ ಟನ್‌ನಷ್ಟು ಅಕ್ಕಿಯನ್ನು ರಫ್ತು ಮಾಡಿದೆ. ಇದೇ ಅವಧಿಯಲ್ಲಿ 61 ಸಾವಿರ ಟನ್‌ನಷ್ಟು ಬಾಸ್ಮತಿಯೇತರ ಅಕ್ಕಿಯನ್ನೂ ಅಮೆರಿಕಕ್ಕೆ ರಫ್ತು ಮಾಡಲಾಗಿದೆ.
  • ರಸಗೊಬ್ಬರ ಆಮದು ಹೆಚ್ಚಳ ನಿರೀಕ್ಷೆ: 2.23 ಕೋಟಿ ಟನ್ನಷ್ಟು ಆಮದು: ಎಫ್ಎಐ ಅಂದಾಜು

ಸಂದರ್ಭ:ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ರಸಗೊಬ್ಬರ ಆಮದು 2.23 ಕೋಟಿ ಟನ್ಗೆ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಭಾರತೀಯ ರಸಗೊಬ್ಬರ ಸಂಘ (ಎಫ್ಎಐ) ತಿಳಿಸಿದೆ.

  • ಇದು ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 41ರಷ್ಟು ಹೆಚ್ಚು ಎಂದು ತಿಳಿಸಿದೆ. ದೇಶದಲ್ಲಿ ಸುರಿದ ಉತ್ತಮ ಮುಂಗಾರು, ಬೇಡಿಕೆ ಹೆಚ್ಚಳಕ್ಕೆ ಕಾರಣ ಎಂದು ತಿಳಿಸಿದೆ.
  • ಭಾರತವು ಜಗತ್ತಿನಲ್ಲಿ ಅತಿಹೆಚ್ಚು ರಸಗೊಬ್ಬರ ಬಳಸುವ ದೇಶಗಳ ಪೈಕಿ 2ನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದೆ. ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ ದೇಶದಲ್ಲಿ 1.44 ಕೋಟಿ ಟನ್‌ನಷ್ಟು ರಸಗೊಬ್ಬರ ಆಮದಾಗಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ 85.6 ಲಕ್ಷ ಟನ್ ಆಮದಾಗಿತ್ತು. ಇದಕ್ಕೆ ಹೋಲಿಸಿದರೆ ಆಮದು ಪ್ರಮಾಣ ಈ ಅವಧಿಯಲ್ಲಿ ಶೇ 69ರಷ್ಟು ಹೆಚ್ಚಳವಾಗಿದೆ.
  • ‘ದೇಶದಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ರಸಗೊಬ್ಬರದ ಆಮದು ಪ್ರಮಾಣ ಹೆಚ್ಚಳವಾಗಿದೆ’ ಎಂದು ಎಫ್‌ಎಐ ಅಧ್ಯಕ್ಷ ಎಸ್. ಶಂಕರ್‌ಸುಬ್ರಮಣಿಯನ್‌ ಹೇಳಿದ್ದಾರೆ.
  • ನವೆಂಬರ್‌ ಅಂತ್ಯದ ವೇಳೆಗೆ ರಸಗೊಬ್ಬರ ದಾಸ್ತಾನು 1.02 ಕೋಟಿ ಟನ್‌ನಷ್ಟಿದೆ. ಈ ದಾಸ್ತಾನಿನಲ್ಲಿ 50 ಲಕ್ಷ ಟನ್‌ ಯೂರಿಯಾ, 17 ಲಕ್ಷ ಟನ್ ಡಿಎಪಿ ಮತ್ತು 35 ಲಕ್ಷ ಟನ್‌ ಎನ್‌ಪಿಕೆ ರಸಗೊಬ್ಬರ ಸೇರಿದೆ ಎಂದು ಹೇಳಿದ್ದಾರೆ.
  • ಕೋರಮಂಡಲ್‌ ಇಂಟರ್‌ನ್ಯಾಷನಲ್‌ನ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಶಂಕರ್‌ಸುಬ್ರಮಣಿಯನ್ ಅವರು, ಕಳೆದ ಎರಡು ತಿಂಗಳಿನಲ್ಲಿ ಭಾರತವು ದೊಡ್ಡ ಪ್ರಮಾಣದಲ್ಲಿ ಒಪ್ಪಂದ ಮಾಡಿಕೊಂಡಿದ್ದು, ಯಾವುದೇ ಪೂರೈಕೆ ನಿರ್ಬಂಧಗಳಿಲ್ಲ ಎಂದು ಹೇಳಿದ್ದಾರೆ.
  • ದೇಶದಲ್ಲಿ ರಸಗೊಬ್ಬರ ಉತ್ಪಾದನೆ ಕಳೆದ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ 2.97 ಕೋಟಿ ಟನ್‌ನಷ್ಟಿತ್ತು. ಅದು ಈ ಬಾರಿ 2.99 ಕೋಟಿ ಟನ್‌ಗೆ ಹೆಚ್ಚಳವಾಗಿದೆ.
  • ಈ ಪೈಕಿ 1.71 ಕೋಟಿ ಟನ್‌ ಯೂರಿಯಾ, 23.2 ಲಕ್ಷ ಟನ್‌ ಡಿಎಪಿ, 70.4 ಲಕ್ಷ ಟನ್‌ ಎನ್‌ಪಿಕೆ ರಸಗೊಬ್ಬರ ಮತ್ತು 34.8 ಲಕ್ಷ ಟನ್‌ ಎಸ್‌ಎಸ್‌ಪಿ ಇದೆ. ವಾರ್ಷಿಕವಾಗಿ ದೇಶದಲ್ಲಿ 7 ಕೋಟಿ ಟನ್‌ನಷ್ಟು ರಸಗೊಬ್ಬರ ಬಳಕೆ ಆಗುತ್ತದೆ.
  • ಉಡಾನ್‌ 10 ವರ್ಷಕ್ಕೆ ವಿಸ್ತರಣೆ: ಕೇಂದ್ರಕ್ಕೆ ಪ್ರಸ್ತಾವ

ಸಂದರ್ಭ: ಪ್ರಾದೇಶಿಕ ವಿಮಾನಯಾನ ಸೇವೆಗೆ ಉಡಾನ್ಯೋಜನೆ ಮೂಲಕ ನೀಡುತ್ತಿರುವ ಆರ್ಥಿಕ ನೆರವನ್ನು 10 ವರ್ಷಗಳವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

  • ಕಲಬುರಗಿಯಲ್ಲಿ ವಿಮಾನ ಹಾರಾಟ ಸ್ಥಗಿತ ಕುರಿತಂತೆ ಬಿಜೆಪಿಯ ಶಶೀಲ್‌ ನಮೋಶಿ ಶೂನ್ಯವೇಳೆಯಲ್ಲಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ‘ದೇಶದ ವಿಮಾನಯಾನ ಕ್ಷೇತ್ರದಲ್ಲಿ ಸುಧಾರಣೆ ತರಲು ಕೇಂದ್ರ ಸರ್ಕಾರ ಉಡಾನ್‌ ಯೋಜನೆ ಜಾರಿಗೆ ತಂದಿದೆ.
  • ಈ ಯೊಜನೆಯಡಿ ಮೂರು ವರ್ಷ ಮಾತ್ರ ಪ್ರಾದೇಶಿಕ ವಿಮಾನಯಾನದ ಅಭಿವೃದ್ಧಿ, ಪುನಶ್ಚೇತನಕ್ಕೆ ಆರ್ಥಿಕ ನೆರವನ್ನು ನೀಡುತ್ತಿದೆ. ಇದನ್ನು 10 ವರ್ಷಕ್ಕೆ ವಿಸ್ತರಿಸಿ, ಐದು ವರ್ಷ ಪೂರ್ತಿ ನಿಲ್ದಾಣಗಳ ಅಭಿವೃದ್ಧಿಗೆ ನೆರವು ಒದಗಿಸಬೇಕು. ಉಳಿದ ಐದು ವರ್ಷದ ಅವಧಿಗೆ ರಾಜ್ಯ ಸರ್ಕಾರ ಶೇ 50ರ ಅನುಪಾತದಲ್ಲಿ ಅನುದಾನ ಒದಗಿಸಲು ಸಿದ್ಧವಿದೆ’ ಎಂದು ಹೇಳಿದರು.
  • ಕೇಂದ್ರ ಸರ್ಕಾರದ ಪ್ರಾದೇಶಿಕ ಸಂಪರ್ಕ ಯೋಜನೆಯಡಿ ಕಲಬುರಗಿ ವಿಮಾನ ನಿಲ್ದಾಣ 2022ರಿಂದ ಕಾರ್ಯಾಚರಣೆ ಆರಂಭಗೊಂಡಿತ್ತು. ವಿಮಾನಯಾನ ಸಂಸ್ಥೆಗಳು ಕೇಂದ್ರದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಜೊತೆ ಉಡಾನ್‌ ಯೋಜನೆಯಡಿ ಒಪ್ಪಂದ ಮಾಡಿಕೊಂಡಿವೆ. ಅದರಂತೆ ಮೂರು ವರ್ಷ ಸೇವೆ ಒದಗಿಸಿವೆ. ಅವಧಿ ಪೂರ್ಣಗೊಂಡ ಕಾರಣ ಸೇವೆ ಸ್ಥಗಿತಗೊಳಿಸಿವೆ. ಅವಧಿ ವಿಸ್ತರಿಸದಿದ್ದರೆ  ಉಡಾನ್ ಯೋಜನೆಯಡಿ ವಿಮಾನಯಾನ ಸೌಲಭ್ಯ ಪಡೆದ ನಿಲ್ದಾಣಗಳು ಬಂದ್‌ ಆಗಲಿವೆ ಎಂದು ಹೇಳಿದರು.
  • ಆಸ್ಟ್ರೇಲಿಯಾ: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

ಸಂದರ್ಭ: ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದನ್ನು ನಿಷೇಧಿಸುವ ಕಾನೂನು ಬುಧವಾರದಿಂದ ಜಾರಿಗೆ ಬರಲಿದೆ.

  • ಮಕ್ಕಳ ಸಾಮಾಜಿಕ ಜಾಲತಾಣಗಳ ಬಳಕೆಗೆ ಸಂಬಂಧಿಸಿದಂತೆ ಸಮಗ್ರವಾದ ಕಾನೂನು ರೂಪಿಸಿರುವ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನಿನ ಮೂಲಕ ಸಾಮಾಜಿಕ ಜಾಲತಾಣ ವೇದಿಕೆಗಳು ಬಳಕೆದಾರರ ವಯಸ್ಸನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ.
  • ‘ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸಲು ಸಾಮಾಜಿಕ ಹೊಣೆಗಾರಿಕೆಯನ್ನು ನಿಗದಿಪಡಿಸುವ ಉದ್ದೇಶ ಈ ಕಾನೂನಿಗೆ ಇದೆ’ ಎಂದು ಅಲ್ಲಿನ ಸರ್ಕಾರ ಹೇಳಿದೆ.
  • ಆದರೆ, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಕಿಕ್‌, ಸ್ನಾಪ್‌ಚಾಟ್‌, ಟಿಕ್‌ಟಾಕ್‌, ಯೂಟ್ಯೂಬ್‌, ಥ್ರೆಡ್ಸ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಬಳಸದೆ ತಮ್ಮ ಸ್ನೇಹಿತರ ಜತೆಗೆ ಸಂಪರ್ಕ ದಲ್ಲಿರುವುದು ಹೇಗೆ ಎಂಬ ಚಿಂತೆ ಮಕ್ಕಳನ್ನು ಕಾಡುತ್ತಿದೆ.
  • ‘ಈ ನಿಷೇಧವು ನಮ್ಮ ಮೇಲೆ ಸಕಾರಾತ್ಮಕ ಪರಿಣಾಮ ಬೀರುವುದಿಲ್ಲ. ನಾವು ಸ್ನೇಹಿತರು ಪರಸ್ಪರ ಸಂಪರ್ಕದಲ್ಲಿರಲು ಪರ್ಯಾಯ ಆಯ್ಕೆಗಳು ಸಾಕಷ್ಟಿಲ್ಲ’ ಎಂದು ಮೆಲ್ಬರ್ನ್‌ನ  15 ವರ್ಷದ ಬಾಲಕ ರಿಲೆ ಅಲೆನ್‌ ಹೇಳಿದ್ದಾರೆ.

ಪ್ರಚಲಿತ ವಿದ್ಯಮಾನಗಳು: 8ನೇ ಡಿಸೆಂಬರ್ 2025

  • ಉತ್ತರಕ್ಕೆ ವೆಚ್ಚ ₹31,198 ಕೋಟಿ: ಎಸ್ಡಿಪಿಯಿಂದ ₹17,710 ಕೋಟಿ, ಕೆಕೆಆರ್ಡಿಬಿ: ₹13,488 ಕೋಟಿ ವೆಚ್ಚ

‌ಸಂದರ್ಭ: ಪ್ರಾದೇಶಿಕ ಅಸಮತೋಲನಕ್ಕೆ ಸಂಬಂಧಿಸಿದಂತೆ ಎಲ್ಲ ವಿಭಾಗ, ಜಿಲ್ಲೆಗಳಲ್ಲಿ ಸಭೆ ನಡೆಸಿದ್ದು, ಈ ತಿಂಗಳಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಪ್ರೊ. ಎಂ. ಗೋವಿಂದ ರಾವ್, ಅಧ್ಯಕ್ಷರು, ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ.

  • ಉತ್ತರ ಕರ್ನಾಟಕ ಭಾಗದಲ್ಲಿ ಅಸಮತೋಲನ ನಿವಾರಣೆ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ಮೂಲಸೌಕರ್ಯ ಸೇರಿದಂತೆ ವಿವಿಧ ವಲಯಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ‘ವಿಶೇಷ ಅಭಿವೃದ್ಧಿ ಯೋಜನೆ’ (ಎಸ್‌ಡಿಪಿ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ರಾಜ್ಯ ಸರ್ಕಾರ ₹31,198 ಕೋಟಿ ಸುರಿದಿದೆ.
  • ಇಷ್ಟು ಹಣ ಸುರಿದರೂ ಈ ಭಾಗದಲ್ಲಿನ ಜ್ವಲಂತ ಸಮಸ್ಯೆಗಳಿಗೆ ನಿರೀಕ್ಷಿತ ಪರಿಹಾರ ಸಿಕ್ಕಿಲ್ಲ ಎನ್ನುವುದು ಈ ಭಾಗದ ಜನಪ್ರತಿನಿಧಿಗಳ ಒಕ್ಕೊರಲ ಕೊರಗು. ಪ್ರತಿ ಬಾರಿಯಂತೆ ಈ ಬಾರಿಯೂ ಬೆಳಗಾವಿ ಅಧಿವೇಶನ ದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ, ಬೇಡಿಕೆಗಳ ಪಟ್ಟಿ ಮುಂದಿಡಲು ನಿರ್ಧರಿಸಿದ್ದಾರೆ.
  • ನೀರಾವರಿ ಯೋಜನೆಗಳು, ಕೈಗಾರಿಕೆಗಳ ಸ್ಥಾಪನೆ, ಉದ್ಯೋಗ ಸೃಷ್ಟಿ, ಕನ್ನಡ ಶಾಲೆಗಳ ಶಿಥಿಲಾವಸ್ಥೆ, ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳು, ಮೂಲಸೌಕರ್ಯ, ಪ್ರವಾಸೋದ್ಯಮ ಹೀಗೆ ವಿವಿಧ ವಿಚಾರಗಳಲ್ಲಿ ಈ ಭಾಗ ಹಿಂದುಳಿದಿ ರುವುದನ್ನು ಪ್ರಸ್ತಾಪಿಸಿ, ಅನುದಾನ– ಅಭಿವೃದ್ಧಿಗೆ ಒತ್ತು ನೀಡುವಂತೆ ಪಕ್ಷಾತೀತವಾಗಿ ಪಟ್ಟು ಹಿಡಿಯಲು ಮುಂದಾಗಿದ್ದಾರೆ.
  • ‘ಉತ್ತರ ಕರ್ನಾಟಕ ಭಾಗಕ್ಕೆ ಡಿ.ಎಂ. ನಂಜುಂಡಪ್ಪ ವರದಿಯ ಅನ್ವಯ 2008–09ರಿಂದ 2024–25ರ ಅವಧಿಯಲ್ಲಿ ‘ವಿಶೇಷ ಅಭಿವೃದ್ಧಿ ಯೋಜನೆ’ಯಡಿ (ಎಸ್‌ಡಿಪಿ)‌ ₹17,710.28 ಕೋಟಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ 2013–14ರಿಂದ ಈವರೆಗೆ ₹13,488.45 ಕೋಟಿ ಸೇರಿ ಒಟ್ಟು ₹31,198 ಕೋಟಿ ವೆಚ್ಚ ಮಾಡಲಾಗಿದೆ’ ಎಂದು ಆರ್ಥಿಕ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.
  • ಉತ್ತರ ಮತ್ತು ದಕ್ಷಿಣ ಕರ್ನಾಟಕ ನಡುವಿನ ಅಸಮಾನತೆ ಯನ್ನು ಅಧ್ಯಯನ ಮಾಡಿ, ಆ ಅಸಮಾನತೆ ಯನ್ನು ತಗ್ಗಿಸಲು ಸೂಕ್ತ ಅಭಿವೃದ್ಧಿ ವಿಧಾನಗಳನ್ನು ಶಿಫಾರಸು ಮಾಡಲು 2000ದ ಅಕ್ಟೋಬರ್‌ ನಲ್ಲಿ ಡಿ.ಎಂ. ನಂಜುಂಡಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿಯನ್ನು ಅಂದಿನ ಸರ್ಕಾರ ರಚಿಸಿತ್ತು.

ಕೆಕೆಆರ್ಡಿಬಿ: ವೆಚ್ಚದಲ್ಲಿ ಹಿಂದೆ

  • ಕಲ್ಯಾಣ ಕರ್ನಾಟಕ ಪ್ರದೇಶಾ ಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ಪ್ರತಿ ವರ್ಷ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದ್ದರೂ, ಕಾಮಗಾರಿಗಳ ಕ್ರಿಯಾ ಯೋಜನೆ ಅನುಮೋದನೆ, ಅಂದಾಜು ಪಟ್ಟಿ ತಯಾರಿ ಮತ್ತು ಟೆಂಡರ್‌ ಪ್ರಕ್ರಿಯೆ ವಿಳಂಬವೂ ಸೇರಿದಂತೆ ನಾನಾ ಕಾರಣಗಳಿಂದ ನಿರೀಕ್ಷೆಯಂತೆ ವೆಚ್ಚ ಆಗಿಲ್ಲ.
  • ರಾಜ್ಯ ಸರ್ಕಾರ 2013–14ನೇ ಸಾಲಿನಿಂದ ಈವರೆಗೆ ಕೆಕೆಆರ್‌ಡಿಬಿಗೆ ₹26 ಸಾವಿರ ಕೋಟಿ ಅನುದಾನ ನಿಗದಿಪಡಿಸಿದೆ. 2024–25 ಮತ್ತು 2025–26ನೇ ಸಾಲಿನಲ್ಲಿ ಮಂಡಳಿಗೆ ತಲಾ ₹5 ಸಾವಿರ ಕೋಟಿ ನಿಗದಿಪಡಿಸಿದ್ದು, ಆ ಮೊತ್ತಕ್ಕೆ ಕ್ರಿಯಾಯೋಜನೆ ರೂಪಿಸಿ, ₹3 ಸಾವಿರ ಕೋಟಿಗೆ ಸೀಮಿತಗೊಳಿಸಿ ವೆಚ್ಚ ಭರಿಸಲು ಮತ್ತು ಉಳಿದ ಕಾಮಗಾರಿ ಗಳನ್ನು ಮುಂದುವರಿದ ಕಾಮಗಾರಿಯಾಗಿ ಮುಂದಿನ ವರ್ಷದಲ್ಲಿ ಅನುಷ್ಠಾನಗೊಳಿಸಲು ಆರ್ಥಿಕ ಇಲಾಖೆ ಸೂಚಿಸಿದೆ. ಈ ಮಧ್ಯೆ, ಕೆಕೆಆರ್‌ಡಿಬಿ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳು ತೀರಾ ಕಳಪೆಯಾಗಿದ್ದು, ಸರ್ಕಾರದ ಹಣ ಲೂಟಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇತ್ತೀಚೆಗೆ ವಿವಿಧ ಸಂಘಟನೆಗಳು ಕಲಬುರಗಿಯಲ್ಲಿರುವ ಕೆಕೆಆರ್‌ಡಿಬಿ ಕಚೇರಿ ಎದುರು ಧರಣಿಯನ್ನೂ ನಡೆಸಿವೆ.
  • ಈ ಸಮಿತಿಯು ಆಗ ಇದ್ದ 176 ತಾಲ್ಲೂಕುಗಳಲ್ಲಿನ ಕೃಷಿ, ಉದ್ದಿಮೆ, ಆರ್ಥಿಕ, ಸಾಮಾಜಿಕ, ಜನಸಂಖ್ಯೆ ಹೀಗೆ ಐದು ವಲಯಗಳಲ್ಲಿ 35 ಸೂಚಕಗಳನ್ನು ಬಳಸಿ ಅಧ್ಯಯನ ನಡೆಸಿ 2002ರ ಜೂನ್‌ನಲ್ಲಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ಸಮಿತಿಯು 176 ತಾಲ್ಲೂಕುಗಳ ಪೈಕಿ 114 ತಾಲ್ಲೂಕುಗಳು ಅಭಿವೃದ್ಧಿಯಲ್ಲಿ ಹಿಂದುಳಿದಿರುವುದನ್ನು ಗುರುತಿಸಿತ್ತು. ಅವುಗಳಲ್ಲಿ ಅತ್ಯಂತ ಹಿಂದುಳಿದ 39, ಅತೀ ಹಿಂದುಳಿದ 40, ಹಿಂದುಳಿದ 35 ತಾಲ್ಲೂಕುಗಳಾಗಿದ್ದವು. ಈಗ ತಾಲ್ಲೂಕುಗಳ ಒಟ್ಟು ಸಂಖ್ಯೆ 240 ಆಗಿದೆ. ಈ ಪೈಕಿ, ನಾಲ್ಕು ತಾಲ್ಲೂಕುಗಳು ಇನ್ನೂ ರಚನೆ ಆಗಿಲ್ಲ.
  • ನಂಜುಂಡಪ್ಪ ವರದಿಯ ಶಿಫಾರಸಿನ ಅನ್ವಯ ರಾಜ್ಯದಲ್ಲಿರುವ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ 2007–08ರಿಂದ 2024–25ನೇ ಸಾಲಿನವರೆಗೆ 18 ವರ್ಷಗಳಲ್ಲಿ ಒಟ್ಟಾರೆ 48,866.49 ಕೋಟಿ ನಿಗದಿಪಡಿಸಿ, ₹40,159.42 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಅದರಲ್ಲಿ ₹36,866.56 ಕೋಟಿ ವೆಚ್ಚ ಮಾಡಲಾಗಿದೆ. ಈ ಮೊತ್ತದಲ್ಲಿ ಶೇ 60ರಷ್ಟು ಅನುದಾನವನ್ನು ಉತ್ತರ ಕರ್ನಾಟಕ ಭಾಗದ ತಾಲ್ಲೂಕುಗಳಲ್ಲಿ ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಲಾಗಿದೆ.
  • ದೊಡ್ಡ ಮೊತ್ತದ ಅನುದಾನ ವೆಚ್ಚ ಮಾಡಿದರೂ ರಾಜ್ಯದಲ್ಲಿ ಉತ್ತರ– ದಕ್ಷಿಣ ಭಾಗದಲ್ಲಿನ ಪ್ರಾದೇಶಿಕ ಅಸಮತೋಲನ ನಿವಾರಿಸಲು ಸಾಧ್ಯವಾಗಿಲ್ಲ. ಅಲ್ಲದೆ, ನಂಜುಂಡಪ್ಪ ವರದಿ 25 ವರ್ಷಗಳಷ್ಟು ಹಳೆಯದಾಗಿದೆ. ಇದನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ರ ಡಿ. 15ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದಲ್ಲಿ, ಆಗ ಇದ್ದ 240 ತಾಲ್ಲೂಕುಗಳ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಲು ಉನ್ನತಮಟ್ಟ ಸಮಿತಿ ರಚಿಸಲಾಗುವುದು ಎಂದು ಘೋಷಿಸಿದ್ದರು.
  • ‘ಕಳೆದ 24 ವರ್ಷಗಳಲ್ಲಿ ನಂಜುಂಡಪ್ಪ ವರದಿ ಆಧರಿಸಿ ಹಿಂದುಳಿದ ಪ್ರದೇಶಗಳಲ್ಲಿನ ಅಸಮತೋಲನ ನಿವಾರಿಸಲು ಬಹಳಷ್ಟು ಯೋಜನೆಗಳನ್ನು ರೂಪಿಸಿ ಬಂಡವಾಳ ಹೂಡಿಕೆ ಮಾಡಲಾಗಿದೆ. ಇದರಿಂದ ಆಗಿರುವ ಬದಲಾವಣೆ ಮತ್ತು ಪರಿಣಾಮ ಗಳನ್ನು ಅಧ್ಯಯನ ಮಾಡಲು ಪ್ರಸಕ್ತ ಸಾಲಿನಲ್ಲಿ ಉನ್ನತಾಧಿಕಾರ ಸಮಿತಿ ರಚಿಸಲಾಗುವುದು’ ಎಂದು 2024–25ನೇ ಸಾಲಿನ ಬಜೆಟ್‌ ಭಾಷಣದಲ್ಲಿ ಮುಖ್ಯಮಂತ್ರಿ ಘೋಷಿಸಿದ್ದರು. ಅದರಂತೆ 2024ರ ಮಾರ್ಚ್‌ 16ರಂದು ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದ ರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ಸಂಬಂಧಿಸಿದಂತೆ ಈಗಾಗಲೇ ಸಚಿವರು, ಶಾಸಕರು, ಕೆಕೆಆರ್‌ಡಿಬಿ ಅಧ್ಯಕ್ಷರು, ಸಂಘ–ಸಂಸ್ಥೆಗಳು, ಕೈಗಾರಿಕೋದ್ಯಮಿ ಗಳೊಂದಿಗೆ ಚರ್ಚಿಸಿ ಸಂವಾದ ನಡೆಸಿ, ಮಾಹಿತಿಗಳನ್ನು, ಅಭಿಪ್ರಾಯಗಳನ್ನು ಕ್ರೋಡೀಕರಿಸಿದೆ. ಸಮಿತಿಯು ವರದಿಯ ಕರಡು ಸಿದ್ಧಪಡಿಸಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗೆ ಸಲ್ಲಿಸಲು ತಯಾರಿ ನಡೆಸಿದೆ.
  • ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್

ಸಂದರ್ಭ: ಪ್ರತಿ ರೈತರಿಂದ ಮೆಕ್ಕೆಜೋಳ ಖರೀದಿಸಲು ವಿಧಿಸಿದ್ದ ಗರಿಷ್ಠ 20 ಕ್ವಿಂಟಲ್ಮಿತಿಯನ್ನು ರಾಜ್ಯ ಸರ್ಕಾರವು 50 ಕ್ವಿಂಟಲ್ಗೆ ಹೆಚ್ಚಿಸಿದೆ.

  • ಪ್ರತಿ ಕ್ವಿಂಟಲ್‌ಗೆ ₹2,400 ಬೆಂಬಲ ಬೆಲೆಯಲ್ಲಿ, ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರುವ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಮೆಕ್ಕೆಜೋಳ ಖರೀದಿಸಿ ಎಂದು ಸಹಕಾರ ಇಲಾಖೆಯು ಇದೇ 2ರಂದು ಆದೇಶ ಹೊರಡಿಸಿತ್ತು.
  • ಇಲಾಖೆಯು ಹೇರಿದ್ದ ಈ ಮಿತಿಗೆ ರೈತರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇಲಾಖೆಯು ಭಾನುವಾರ ಆದೇಶ ಹೊರಡಿಸಿದ್ದು, ಮಿತಿಯನ್ನು 50 ಕ್ವಿಂಟಲ್‌ಗೆ ಹೆಚ್ಚಿಸಿದೆ.
  • ಉತ್ತರ ಸಮಸ್ಯೆಗಳಿಗೆ ಕಿವಿಯಾಗುವುದೇ ಸರ್ಕಾರ?

ರಾಜ್ಯದ ದಕ್ಷಿಣದ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರದ ಹಲವು ಜಿಲ್ಲೆಗಳು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿವೆ. ಸರ್ಕಾರವು ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಿಲ್ಲ ಎನ್ನುವುದು ಈ ಜಿಲ್ಲೆಗಳ ಹೋರಾಟಗಾರರ ಆರೋಪ. ಚುನಾವಣೆಯಲ್ಲಿ ಗೆಲವು ಸಾಧಿಸಿದ ಶಾಸಕರು, ಸಂಸದರು ಕೂಡ ತಮ್ಮ ಜಿಲ್ಲೆಗಳು ಎದುರಿಸುವ ಸಮಸ್ಯೆಗಳನ್ನು ವಿಧಾನಸಭೆ, ಲೋಕಸಭೆಗಳಲ್ಲಿ ಪ್ರಸ್ತಾಪಿಸುವುದಿಲ್ಲ. ಹೀಗಾಗಿ ತಮ್ಮ ನೋವು ನೀಗುವುದೆಂದು, ಅಭಿವೃದ್ಧಿಯ ಪ್ರಶ್ನೆಗಳಿಗೆ ಉತ್ತರ ಸಿಗುವುದೆಂದು ಎಂದು ಜನ ನೋವು ತೋಡಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೇ ಆಗಾಗ ‍ಪ್ರತ್ಯೇಕ ರಾಜ್ಯದ ಕೂಗು ಏಳುತ್ತಿರುತ್ತದೆ. 

ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನ ಕಲಂ 371 (ಜೆ) ಅಡಿಯಲ್ಲಿ ವಿಶೇಷ ಸವಲತ್ತುಗಳನ್ನು ಕಲ್ಪಿಸಿದರೂ ಈ ಭಾಗದ ಜಿಲ್ಲೆಗಳು ಇನ್ನೂ ಅಭಿವೃದ್ಧಿಯತ್ತ ಹೆಜ್ಜೆ ಹಾಕಿಲ್ಲ. ಮೂಲಸೌಕರ್ಯ, ಕೈಗಾರಿಕೆ, ಶಿಕ್ಷಣ, ಕೃಷಿ, ನೀರಾವರಿ, ನಗರ ಅಭಿವೃದ್ಧಿ, ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಮಸ್ಯೆಗಳು ಹಾಗೆಯೇ ಉಳಿದುಕೊಂಡಿವೆ. 

ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧ ಸಜ್ಜುಗೊಂಡಿದೆ. ರಾಜ್ಯದ ಉತ್ತರದ ಜಿಲ್ಲೆಗಳು, ಅಲ್ಲಿನ ಜನರ ಸಂಕಷ್ಟಗಳ ಬಗ್ಗೆ ಚರ್ಚಿಸುವ ಉದ್ದೇಶದಿಂದ ಬೆಳಗಾವಿಯಲ್ಲಿ ಪ್ರತಿ ವರ್ಷ ಅಧಿವೇಶನ ನಡೆಸಲಾಗುತ್ತದೆ. ಆದರೆ, ಪ್ರತಿ ಬಾರಿಯೂ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಗ್ವಾದ, ಕಲಹಗಳಲ್ಲೇ ಅಧಿವೇಶನ ಮುಗಿದು ಹೋಗುತ್ತಿದೆ. ಈ ಬಾರಿಯಾದರೂ ಹಲವು ವರ್ಷಗಳಿಂದ ಪರಿಹಾರವಾಗದೇ ಉಳಿದಿರುವ ತಮ್ಮ ಸಮಸ್ಯೆಗಳು, ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ನಡೆಯಲಿ ಎಂಬುದು ಉತ್ತರ ಕರ್ನಾಟಕದ ಜಿಲ್ಲೆಗಳ ಜನರ ಆಶಯ.

ಈ ಭಾಗದ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಆಗಬೇಕಿರುವ ಕೆಲಸಗಳನ್ನು ಇಲ್ಲಿ ನೀಡಲಾಗಿದೆ.  

ಬೆಳಗಾವಿ

lಬೆಳಗಾವಿ ಜಿಲ್ಲೆಯನ್ನು ವಿಭಜಿಸಿ, ಗೋಕಾಕ ಹಾಗೂ ಚಿಕ್ಕೋಡಿ ಕೇಂದ್ರಗಳಾಗಿ ಇನ್ನೆರಡು ಹೊಸ ಜಿಲ್ಲೆ ರಚಿಸಬೇಕು ಎಂಬ ಬೇಡಿಕೆ ಎರಡು ದಶಕಗಳಿಂದ ಇದ್ದು, ಹೋರಾಟ ಮುಂದುವರಿದಿದೆ

lಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮಾದರಿಯಲ್ಲೇ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಮಾಡಲಾಗುವುದು ಎಂದು ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿತ್ತು. ಕಾಂಗ್ರೆಸ್‌ ಸರ್ಕಾರ ಈ ಬೇಡಿಕೆಗೆ ಸ್ಪಂದಿಸಿಲ್ಲ 

lಹಿಂದಿನ ಸರ್ಕಾರವು ಬೆಳಗಾವಿ ಜಿಲ್ಲೆಯ 14 ಏತ ನೀರಾವರಿಗಳಿಗೆ ಅನುಮೋದನೆ ನೀಡಿ, ₹5,000 ಕೋಟಿ ಅನುದಾನ ಒದಗಿಸಿತ್ತು. ಹಾಲಿ ಸರ್ಕಾರ ಬಂದ ಮೇಲೆ ಯಾವೊಂದು ಏತ ನೀರಾವರಿಗೂ ಹಣ ನೀಡಿಲ್ಲ

lಗೋಕಾಕ ಜಲಪಾತವನ್ನು ಜೋಗದ ಮಾದರಿಯಲ್ಲಿ ಅಂತರರಾಷ್ಟ್ರೀಯ ಪ್ರವಾಸಿತಾಣವಾಗಿಸಬೇಕು ಎಂಬ ಕೂಗು ಮೂರು ದಶಕಗಳಿಂದ ಇದೆ

lಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ, ಕಾಗವಾಡ ಹಾಗೂ ನೆರೆಯ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ದ್ರಾಕ್ಷಿ ಬೆಳೆಯಲಾಗುತ್ತದೆ. ಇದರಲ್ಲಿ ಶೇ 80ರಷ್ಟು ‌ದ್ರಾಕ್ಷಿಯನ್ನು ಒಣಗಿಸಿ ಮಾರಾಟ ಮಾಡಲಾಗುತ್ತದೆ. ಶೇ 20ರಷ್ಟು ಮಾತ್ರ ಸ್ಥಳೀಯ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ದ್ರಾಕ್ಷಿ ಶೀಥಲೀಕರಣ ಘಟಕ ನಿರ್ಮಾಣ ಮಾಡುವುದು ಹಾಗೂ ರಫ್ತು ಮಾಡಲು ಕಾರ್ಗೊ ವಿಮಾನ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆ ಇನ್ನೂ ಈಡೇರಿಲ್ಲ

ಧಾರವಾಡ

lಧಾರವಾಡದ ವಿದ್ಯಾಲಯಗಳಲ್ಲಿ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳನ್ನು ಮಾಡುತ್ತಿದ್ದಾರೆ. ಹಾಸ್ಟೆಲ್‌ಗಳ ಕೊರತೆಯಿಂದ ಬಹಳಷ್ಟು ವಿದ್ಯಾರ್ಥಿಗಳು ಪಿ.ಜಿ, ಬಾಡಿಗೆ ಕೊಠಡಿ ಮೊದಲಾದವನ್ನು ಅವಲಂಬಿಸಬೇಕಾದ ಸ್ಥಿತಿ ಇದೆ

lಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಘೋಷಣೆಯಾಗಿದೆ. ಆದರೆ, ಈವರೆಗೆ ಅಂತಿಮ ಅಧಿಸೂಚನೆ ಪ್ರಕಟವಾಗಿಲ್ಲ. ಧಾರವಾಡಕ್ಕೆ ವರ್ತುಲ ರಸ್ತೆ ನಿರ್ಮಾಣ ಪ್ರಸ್ತಾವ, ಮಹದಾಯಿ ಯೋಜನೆ ನನೆಗುದಿಗೆ ಬಿದ್ದಿವೆ

lಕ್ಯಾನ್ಸರ್‌ ರೋಗಿಗಳ ಚಿಕಿತ್ಸೆಗಾಗಿ ಹುಬ್ಬಳ್ಳಿಯಲ್ಲಿ ಪ್ರಾದೇಶಿಕ ಕ್ಯಾನ್ಸರ್‌ ಕೇಂದ್ರ ಸ್ಥಾಪನೆಗೆ ಇಲ್ಲಿನ ಕೆಎಂಸಿಆರ್‌ಐ ಆಸ್ಪತ್ರೆಯಿಂದ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು, ಅನುಮೋದನೆ ಸಿಕ್ಕಿಲ್ಲ

lಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಜವಳಿ ಪಾರ್ಕ್‌ ನಿರ್ಮಿಸುವುದಾಗಿ 2022ರ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈವರೆಗೂ ಅದು ಕಾರ್ಯಗತವಾಗಿಲ್ಲ

lಉತ್ತರ ಕರ್ನಾಟಕ ಭಾಗದ ಜನಪದ ಕಲೆಗಳನ್ನು ಉಳಿಸಿ, ಬೆಳೆಸಲು ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಸಮೀಪದ ಅಧ್ಯಾಪಕ ನಗರದಲ್ಲಿ ನಿರ್ಮಿಸಲಾಗುತ್ತಿರುವ ‘ಜಾನಪದ ಜಗತ್ತು’ ಕಾಮಗಾರಿ 14 ವರ್ಷಗಳಿಂದ ನನೆಗುದಿಗೆ ಬಿದ್ದಿದೆ

ಬಳ್ಳಾರಿ

lಜಿಲ್ಲೆಯಲ್ಲಿ ವ್ಯಾಪಕವಾಗಿ ಮೆಣಸಿನಕಾಯಿ ಬೆಳೆಯುತ್ತಿದ್ದರೂ ಮೆಣಸಿನಕಾಯಿ ಮಾರುಕಟ್ಟೆ ಇಲ್ಲ

lಸಂಡೂರಿನಲ್ಲಿ ಮೈನಿಂಗ್ ಕಾಲೇಜು ಆರಂಭಿಸುವುದಾಗಿ ಹೇಳಿದ್ದ ಸರ್ಕಾರ ಈವರೆಗೆ ಕ್ರಮ ಜರುಗಿಸಿಲ್ಲ 

ವಿಜಯನಗರ

lಹೊಸಪೇಟೆಯಲ್ಲಿ 250 ಹಾಸಿಗೆಗಳ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಇನ್ನೂ ಆರಂಭವಾಗದ ಕಾರಣ ಆರೋಗ್ಯ ಸೇವೆಗಳ ಸ್ಥಿತಿಯು ಚಿಂತಾಜನಕ ಸ್ಥಿತಿಯಲ್ಲಿದೆ

lರಾಜ್ಯದಲ್ಲಿಯೇ ಅತ್ಯಧಿಕ ಪ್ರಮಾಣದಲ್ಲಿ ಮಾಜಿ ದೇವದಾಸಿಯರು ಇರುವ ಜಿಲ್ಲೆ ಇದು. ಅಪೌಷ್ಟಿಕತೆ ಸಮಸ್ಯೆ ಇಲ್ಲಿನ ಮಕ್ಕಳನ್ನು ಕಾಡುತ್ತಿದ್ದು, ಸದ್ಯ ಜಿಲ್ಲೆಯಲ್ಲಿ 580 ಅಪೌಷ್ಟಿಕ ಮಕ್ಕಳಿರುವುದನ್ನು ಗುರುತಿಸಲಾಗಿದೆ. ಸುಮಾರು 100 ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಇಲ್ಲ. ಶಾಲಾ ಕಟ್ಟಡಗಳ ಸ್ಥಿತಿಯೂ ಅಷ್ಟೇ

l ಹಂಪಿ ಕನ್ನಡ ವಿಶ್ವವಿದ್ಯಾಲಯವು ಭಾಷೆಯ ಅಭಿವೃದ್ಧಿ, ಸಂಶೋಧನೆಗಾಗಿ ಸ್ಠಾಪನೆಯಾಗಿರುವ ದೇಶದ ಏಕೈಕ ವಿಶ್ವವಿದ್ಯಾಲಯ. ಇಲ್ಲಿ ಬೋಧಕರು, ಅನುದಾನದ ಕೊರತೆ ಕಾಡುತ್ತಿದೆ

ವಿಜಯಪುರ

lಜಿಲ್ಲೆಯವರೇ ಆದ ಎಂ.ಬಿ.ಪಾಟೀಲ ಅವರು ಬೃಹತ್‌ ಕೈಗಾರಿಕಾ ಸಚಿವರಾಗಿದ್ದರೂ ಇದುವರೆಗೆ ಕೈಗಾರಿಕೆಗಳು ಆರಂಭವಾಗಿಲ್ಲ. ಮೈಸೂರು ಸ್ಯಾಂಡಲ್‌ ಸೋಪ್‌ ಘಟಕ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದರೂ ಆರಂಭವಾಗಿಲ್ಲ

lವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಆರಂಭಿಸಬೇಕು, ಉದ್ದೇಶಿತ ಖಾಸಗಿ ಸಹಭಾಗಿತ್ವವನ್ನು (ಪಿಪಿಪಿ) ಕೈಬಿಡಬೇಕು ಎಂದು ಆಗ್ರಹಿಸಿ ವಿವಿಧ ವಿದ್ಯಾರ್ಥಿಪರ, ದಲಿತ ಪರ, ಮಹಿಳಾ ಪರ, ರೈತ, ಕಾರ್ಮಿಕ ಪರ, ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಒಗ್ಗೂಡಿ ಮೂರು ತಿಂಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿವೆ

l ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಕಾರ್ಯಾರಂಭಿಸಿಲ್ಲ

lವಿಜಯಪುರದ ಇಟ್ಟಂಗಿಹಾಳದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಫುಡ್‌ ಪಾರ್ಕ್‌ ಸ್ಥಾಪನೆ ಕಾರ್ಯ ಹಾಗೂ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ ಅನುಷ್ಠಾನವಾಗದೇ ನನೆಗುದಿಗೆ ಬಿದ್ದಿವೆ

ಗದಗ

lಕಪ್ಪತ್ತಗುಡ್ಡವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವಂತೆ ಜನರ ಕೂಗಿಗೆ ಇನ್ನೂ ಬಲ ಬಂದಿಲ್ಲ. ನೀಲನಕ್ಷೆ ಸಿದ್ಧವಾಗಿದ್ದರೂ ಅನುದಾನ ಬಿಡುಗಡೆ ಆಗಿಲ್ಲ

lಗದಗ ಜಿಲ್ಲೆಯಲ್ಲಿ ಪ್ರವಾಸಿ ಕೇಂದ್ರಗಳ ಸಮಗ್ರ ಅಭಿವೃದ್ಧಿಗಾಗಿ ತಜ್ಞರು ಅಧ್ಯಯನ ನಡೆಸಿ ಅಂದಾಜು ₹804 ಕೋಟಿ ಅನುದಾನ ಬೇಕು ಎಂದು ಸರ್ಕಾರಕ್ಕೆ ವರದಿ ಕೊಟ್ಟಿದ್ದಾರೆ. ಆದರೆ, ಈವರೆಗೆ ಹಣ ಬಿಡುಗಡೆಯಾಗಿಲ್ಲ

lಗದಗ -ಬೆಟಗೇರಿ ಅವಳಿ ನಗರದಲ್ಲಿ 24/7 ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆಗೊಂಡು ಹಲವು ವರ್ಷಗಳು ಕಳೆದರೂ ಪ್ರತಿದಿನವೂ ನೀರು ಸಿಗುತ್ತಿಲ್ಲ. ಕೆಲವೊಮ್ಮೆ ಮಳೆಗಾಲದಲ್ಲೂ ನೀರಿಗೆ ತತ್ವಾರ ಎದುರಾಗುತ್ತಿದೆ

ಬಾಗಲಕೋಟೆ

1964ರಲ್ಲಿ ಆರಂಭಗೊಂಡ ಕೃಷ್ಣಾ ಮೇಲ್ದಂಡೆ ಯೋಜನೆ ಆರು ದಶಕಗಳು ಕಳೆದರೂ ಪೂರ್ಣಗೊಂಡಿಲ್ಲ. ಇದು ವಿಜಯಪುರ, ಕಲಬುರ್ಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳ 12.14 ಲಕ್ಷ‌ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸುವ ಬೃಹತ್ ಯೋಜನೆಯಾಗಿದೆ. ಮೊದಲ ಹಾಗೂ ಎರಡನೇ ಹಂತದಲ್ಲಿ ಈಗಾಗಲೇ 6.12 ಲಕ್ಷ ಹೆಕ್ಟೇರ್‌ಗೆ ನೀರು ಒದಗಿಸಲಾಗಿದೆ. ಇನ್ನೂ 6 ಲಕ್ಷ‌ ಹೆಕ್ಟೇರ್‌ಗೆ ನೀರು ಒದಗಿಸುವ ಮೂರನೇ ಹಂತದ ಕಾಮಗಾರಿ ಆಗಬೇಕಿದೆ

ಹಾವೇರಿ

lಅಖಂಡ ಧಾರವಾಡ ಜಿಲ್ಲೆಯಿಂದ ವಿಭಜನೆಗೊಂಡು ಹೊಸ ಜಿಲ್ಲೆಯಾಗಿ 28 ವರ್ಷವಾದರೂ ಹಾವೇರಿ ನಗರಕ್ಕೆ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ವರದಾ, ತುಂಗಭದ್ರಾ ನದಿಗಳು ಹರಿದಿರುವ ಜಿಲ್ಲೆಯಲ್ಲಿ, ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಯೋಜನೆಗಳಿಲ್ಲ

lಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯಲ್ಲಿ ವಿಶ್ವದ ಏಕೈಕ ಜಾನಪದ ವಿಶ್ವವಿದ್ಯಾಲಯವಿದೆ. ಹಾವೇರಿಯಲ್ಲಿಯೂ ನೂತನವಾಗಿ ಹಾವೇರಿ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಎರಡು ವಿಶ್ವವಿದ್ಯಾಲಯಗಳಿಗೂ ಅನುದಾನವಿಲ್ಲ

lಹಾವೇರಿ, ರಾಣೆಬೆನ್ನೂರು, ಹಿರೇಕೆರೂರು, ಬ್ಯಾಡಗಿ, ರಟ್ಟೀಹಳ್ಳಿ, ಶಿಗ್ಗಾವಿ ಹಾಗೂ ಸವಣೂರು ತಾಲ್ಲೂಕುಗಳು ಸಾಕಷ್ಟು ಹಿಂದುಳಿದಿವೆ. ಎಲ್ಲ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳ ಅಗತ್ಯವಿರುವುದಾಗಿ ಜನರು ಒತ್ತಾಯಿಸುತ್ತಿದ್ದಾರೆ

ಕಲಬುರಗಿ

lಜಿಲ್ಲೆಯ ಬಹುತೇಕ ನೀರಾವರಿ ಯೋಜನೆಗಳು ವಿಫಲವಾಗಿದ್ದು, ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್, ಚಿಂಚೋಳಿ ತಾಲ್ಲೂಕಿನ ನಾಗರಾಳ, ಚಂದ್ರಂಪಳ್ಳಿ ಜಲಾಶಯದ ನೀರು ಹರಿಸಲು ವಿತರಣಾ ಜಾಲವನ್ನು ಬಲಪಡಿಸಲು ಅನುದಾನದ ಅಗತ್ಯವಿದೆ

lಕಲಬುರಗಿ ತಾಲ್ಲೂಕಿನ ಹೊನ್ನಕಿರಣಗಿ ಬಳಿ ಪಿಎಂ ಮಿತ್ರಾ ಯೋಜನೆಯಡಿ ಆರಂಭಿಸಲು ಉದ್ದೇಶಿಸಿರುವ ಜವಳಿ ಪಾರ್ಕ್ ಅನುಷ್ಠಾನ ಮಾಡಲು ಅನುದಾನಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಬೇಕಾಗಿದೆ

lಹೊಸದಾಗಿ ರಚನೆಯಾದ ಶಹಬಾದ್, ಕಾಳಗಿ, ಕಮಲಾಪುರ, ಯಡ್ರಾಮಿ ತಾಲ್ಲೂಕುಗಳಿಗೆ ತಾಲ್ಲೂಕು ಆಸ್ಪತ್ರೆಗಳನ್ನು ಮಂಜೂರು ಮಾಡಬೇಕು ಎಂಬುದು ಇಲ್ಲಿನ ಜನರ ಆಗ್ರಹ

ಕೊಪ್ಪಳ

lಕೊಪ್ಪಳ ಸಮೀಪದಲ್ಲಿ ಬಲ್ಡೋಟಾ, ಕಿರ್ಲೋಸ್ಕರ್‌, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸ್‌ ಇಂಡಿಯಾ ಕಾರ್ಖಾನೆಗಳು ವಿಸ್ತರಣೆಗೆ ಮುಂದಾಗಿದ್ದು, ಈ ಕಾರ್ಖಾನೆಗಳು ಆರಂಭವಾದರೆ ಜಿಲ್ಲಾ ಕೇಂದ್ರ ದೂಳುಮಯವಾಗುತ್ತದೆ. ಈಗಾಗಲೇ ಇರುವ ಕಾರ್ಖಾನೆಗಳಿಂದ ಕೊಪ್ಪಳ ತಾಲ್ಲೂಕಿನ 20 ಹಳ್ಳಿಗಳು ನಲುಗಿ ಹೋಗಿವೆ. ಅದೇ ಪರಿಸ್ಥಿತಿ ಜಿಲ್ಲಾ ಕೇಂದ್ರಕ್ಕೂ ಬರುತ್ತದೆ ಎನ್ನುವ ಆತಂಕ ಜನರಲ್ಲಿದ್ದು ಜಿಲ್ಲಾ ಬಚಾವೊ ಆಂದೋಲನ ಸಮಿತಿ ಅನಿರ್ದಿಷ್ಟ ಅವಧಿ ಧರಣಿ ನಡೆಸುತ್ತಿದೆ. ಜಿಲ್ಲೆಯ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈಗಾಗಲೇ ಭೇಟಿಯಾಗಿದ್ದಾರೆ. ಬಲ್ಡೋಟಾ ವಿಸ್ತರಣೆ ನಿಲ್ಲಿಸಬೇಕು ಎಂದು ಮೌಖಿಕವಾಗಿ ಹೇಳಿದ್ದಾರೆ. ಈ ಕುರಿತು ಸರ್ಕಾರ ಸ್ಪಷ್ಟನಿರ್ಧಾರ ಕೈಗೊಳ್ಳಬೇಕು, ಲಿಖಿತವಾಗಿ ಆದೇಶ ಹೊರಡಿಸಬೇಕು ಎಂಬುದು ಜಿಲ್ಲೆಯ ಜನರ ಆಗ್ರಹ

lತುಂಗಭದ್ರಾ ಜಲಾಶಯದಲ್ಲಿ ಅಂದಾಜು 30 ಟಿಎಂಸಿ ಅಡಿಯಷ್ಟು ಹೂಳು ತುಂಬಿಕೊಂಡಿದೆ. ಜಲಾಶಯ ತುಂಬಿದ ಬಳಿಕ ವ್ಯರ್ಥವಾಗಿ ಹರಿಯುವ ನೀರು ನದಿ ಪಾಲಾಗುವ ಬದಲು ಸಂಗ್ರಹಿಸಲು ಜಿಲ್ಲೆಯ ಕನಕಗಿರಿ ತಾಲ್ಲೂಕಿನ ನವಲಿ ಗ್ರಾಮದ ಬಳಿ ಸಮಾನಾಂತರ ಜಲಾಶಯ ನಿರ್ಮಿಸಲು ₹13,040 ಕೋಟಿ ಮೊತ್ತದ ಸಮಗ್ರ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲಾಗಿದೆ. ತುಂಗಭದ್ರಾ ಜಲಾಶಯದ ನೀರಿನಲ್ಲಿ ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳು ಪಾಲು ಹೊಂದಿದ್ದು, ಆ ರಾಜ್ಯಗಳಿಂದ ಸ್ಪಂದನೆ ಸಿಗದ ಕಾರಣ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ 

ಬೀದರ್

l1987ರಲ್ಲಿ ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡು ಸಂತ್ರಸ್ತರಾದ ರೈತರಿಗೆ ಪರಿಹಾರ ನೀಡಬೇಕೆನ್ನುವುದು ನಾಲ್ಕು ದಶಕಗಳ ಪ್ರಮುಖ ಬೇಡಿಕೆಯಾಗಿದೆ. ಹೋದ ವರ್ಷ ರೈತರು ಸುದೀರ್ಘ ಒಂದು ವರ್ಷ ಧರಣಿ ನಡೆಸಿದ್ದರು. ಸರ್ಕಾರ ವಿವಿಧ ರೀತಿಯ ನೆಪಗಳನ್ನು ಒಡ್ಡಿ ಪರಿಹಾರ ವಿಳಂಬ ಮಾಡುತ್ತಲೇ ಇದೆ

lಕಾರಂಜಾ–ಮಾಂಜ್ರಾ ನದಿ ಜಲಾನಯನ ಪ್ರದೇಶದಲ್ಲಿ ಎರಡು ಏತ ನೀರಾವರಿ ವ್ಯವಸ್ಥೆಗಳನ್ನು ನಿರ್ಮಿಸುವ ಪ್ರಸ್ತಾವ ರಾಜ್ಯ ಸರ್ಕಾರದ ಮುಂದಿದೆ. ಈ ಯೋಜನೆಗಳು ಕೃಷ್ಣಾ ನದಿ ಜಲಾನಯನ ಪ್ರದೇಶದಿಂದ 8.4 ಟಿಎಂಸಿ ಅಡಿ ನೀರನ್ನು ಮತ್ತು ಬಚಾವತ್ ನದಿ ನೀರು ಹಂಚಿಕೆ ಪ್ರಕಾರ ಗೋದಾವರಿ ಜಲಾನಯನ ಪ್ರದೇಶದಿಂದ ಬಳಕೆಯಾಗದ ನೀರನ್ನು ಬಳಸಲು ಉದ್ದೇಶಿಸಲಾಗಿದೆ. ಆದರೆ, ಇದಕ್ಕೆ ಅನುದಾನ ನೀಡಿಲ್ಲ.

lಕಲ್ಯಾಣ ಕರ್ನಾಟಕಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ಸೌಲಭ್ಯ ಕಲ್ಪಿಸುವ 371 (ಜೆ) ಸಮರ್ಪಕ ಅನುಷ್ಠಾನಗೊಳಿಸಬೇಕು. ಬ್ಯಾಕ್‌ಲಾಗ್‌ ಸೇರಿದಂತೆ ಎಲ್ಲಾ ರೀತಿಯ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಬೇಕು ಎನ್ನುವ ಆಗ್ರಹವೂ ಇದೆ

ಯಾದಗಿರಿ

lಯಾದಗಿರಿ ಜಿಲ್ಲೆಯಾಗಿ 15 ವರ್ಷಗಳು ಕಳೆದರೂ ಜಿಲ್ಲಾ ಕೇಂದ್ರದಲ್ಲಿ ಒಳಚರಂಡಿ ವ್ಯವಸ್ಥೆಯೇ ಇಲ್ಲ. ಕೊಳಚೆ ನೀರನ್ನು ಸಂಸ್ಕರಣೆ ಮಾಡದೆ ಭೀಮಾ ನದಿಗೆ ಬಿಡಲಾಗುತ್ತಿದೆ. ಇದರ ಜೊತೆಗೆ ಯಾದಗಿರಿ ನಗರಕ್ಕೆ ರಿಂಗ್ ರಸ್ತೆಯೂ ಇಲ್ಲ

lಯಾದಗಿರಿ ತಾಲ್ಲೂಕಿನ ಕಡೇಚೂರು–ಬಾಡಿಯಾಳ ಸೀಮೆಯಲ್ಲಿ ಕೈಗಾರಿಕಾ ವಲಯ ಸ್ಥಾಪನೆಗೆ 3,300 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿದೆ. ಆದರೆ, ಸೂಕ್ತ ಕೈಗಾರಿಕೆಗಳು ಬರದೆ ಇದು ಈಗ ರಾಸಾಯನಿಕ ಔಷಧಿ ಕಂಪನಿಗಳಿಗೆ ಜಾಗ ಮಾಡಿಕೊಟ್ಟಂತೆ ಆಗಿದೆ. ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರವೂ ಬಂದಿಲ್ಲ

lಜಿಲ್ಲೆಯು ಭತ್ತದ ಕಣಜ‌ ಎಂದು ಕರೆಸಿಕೊಳ್ಳುತ್ತಿದ್ದರೂ ಅಕ್ಕಿ ಗಿರಣಿಗಳು ಸ್ಥಾಪನೆಯಾಗಿಲ್ಲ. ರೈತರು ಹೆಚ್ಚಾಗಿ ಹತ್ತಿ ಮತ್ತು ಬ್ಯಾಡಗಿ ಮೆಣಸಿನಕಾಯಿ ಬೆಳೆ ಬೆಳೆಯುತ್ತಾರೆ. ಆದರೆ ಸೂಕ್ತ ಮಾರುಕಟ್ಟೆ ಇಲ್ಲವಾಗಿದೆ. ಹತ್ತಿ ಸಂಶೋಧನಾ ಕೇಂದ್ರ ಸ್ಥಾಪಿಸುವ ಬೇಡಿಕೆಗೆ ಮನ್ನಣೆ ಸಿಗುತ್ತಿಲ್ಲ

ರಾಯಚೂರು

lಜಿಲ್ಲೆಯ ನದಿ ತೀರದ ಗ್ರಾಮಗಳ ರೈತರ ಹೊಲಗಳಿಗೆ ಪ್ರಸ್ತುತ ಮಾರ್ಚ್‌ 30ರ ವರೆಗೆ ಮಾತ್ರ ನೀರು ಪೂರೈಕೆಯಾಗುತ್ತಿದೆ. ಆಲಮಟ್ಟಿ ಡ್ಯಾಂ ಎತ್ತರಿಸಿದರೆ ಏಪ್ರಿಲ್ 15ರ ವರೆಗೂ ನೀರು ಲಭಿಸಲಿದೆ. ಇದರಿಂದ ಬೇಸಿಗೆಯಲ್ಲಿ ನೀರಿನ ಕೊರತೆ ನೀಗಲಿದೆ. ಜಿಲ್ಲೆಯಲ್ಲಿ ಮುಖ್ಯ ಕಾಲುವೆಗಳು ನಿರ್ಮಾಣವಾಗಿವೆ. ಇದರ ಜತೆಗೆ ಹೊಲಗಾಲುವೆಗಳೂ ನಿರ್ಮಾಣವಾಗಬೇಕು ಎಂಬುದು ರೈತರ ಒತ್ತಾಯ

lಜಿಲ್ಲೆಯಲ್ಲಿ ಕೃಷ್ಣ ಭಾಗ್ಯ ಜಲ ನಿಗಮದ ‘ಬಿ’ ಸ್ಕೀಮ್ (ಅಣೆಕಟ್ಟು ಎತ್ತರ ಕಾಮಗಾರಿ ನಡೆದಾಗ ನೀರು ಹರಿಸುವುದು) ಯೋಜನೆಯಡಿ ನಾರಾಯಣಪುರ ಬಲದಂಡೆ 9 (ಎ) ವಿತರಣಾ ಕಾಲುವೆ ಕಾಮಗಾರಿ 13 ವರ್ಷಗಳಿಂದ ನನೆಗುದಿಗೆ ಬಿದ್ದಿದೆ

l ಯುಕೆಪಿ–3ರಲ್ಲಿ ನಾರಾಯಣಪುರ ಬಲದಂಡೆ ಕಾಲುವೆ 150 ಕಿಮೀ ವರೆಗೆ ವಿಸ್ತರಣೆ ಹಾಗೂ ರಾಂಪುರ ಏತ ನೀರಾವರಿ ಯೋಜನೆ 20ರಿಂದ 27 ಕಿ.ಮೀ ವರೆಗೆ ವಿಸ್ತರಣೆ ಕಾಮಗಾರಿ ಮುಗಿದಿದೆ. ಲಿಂಗಸುಗೂರು ತಾಲ್ಲೂಕಿನ ಹೊನ್ನಹಳ್ಳಿ, ಯರಡೋಣಾ, ಗುಡದನಾಳ ಸೇರಿದಂತೆ ಇತರೆ ಗ್ರಾಮಗಳಲ್ಲಿನ ರೈತರ ಜಮೀನು ದಾಖಲೆಯಲ್ಲಿ ಕೆಲ ದೋಷಗಳು ಇರುವುದರಿಂದ ಭೂ ಪರಿಹಾರ ಬಂದಿಲ್ಲ

l ಜಿಲ್ಲೆಯಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿರುವ ಕಾರಣ ಸಾರಿಗೆ ಸಂಪರ್ಕ ಹಾಗೂ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿದೆ. ರಸ್ತೆಗಳು ಸರಿಯಾಗಿ ಇಲ್ಲದ ಕಾರಣ ರೈತರರು ಕೃಷಿ ಉತ್ಪನ್ನಗಳನ್ನು ಎಪಿಎಂಸಿಗೆ ಸಾಗಿಸಲು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ

lಜಿಲ್ಲೆಯಲ್ಲಿ 110 ಜಿನ್ನಿಂಗ್‌ ಫ್ಯಾಕ್ಟರಿಗಳಿದ್ದರೂ ಜವಳಿ ಪಾರ್ಕ್‌ ನಿರ್ಮಿಸಲು ಉದ್ಯಮಿಗಳು ಮುಂದೆ ಬರುತ್ತಿಲ್ಲ. ಸಾರಿಗೆ ಸಮಸ್ಯೆಯೇ ಅಭಿವೃದ್ಧಿಗೆ ತೊಡಕಾಗಿದೆ

ಆಧಾರ್: ಗುರುತು ತಾಳೆಗೆ ಹೊಸ ನಿಯಮ

ಸಂದರ್ಭ: ಹೋಟೆಲ್ಗಳು, ಕಾರ್ಯಕ್ರಮ ಸಂಘಟಕರು ತಮ್ಮ ಗ್ರಾಹಕರಿಂದ ಆಧಾರ್ಕಾರ್ಡ್ ನೆರಳಚ್ಚು ಪ್ರತಿ ಪಡೆದು, ಅವುಗಳನ್ನು ತಮ್ಮಲ್ಲಿ ಇರಿಸಿಕೊಳ್ಳುವುದನ್ನು ಕಡಿಮೆ ಮಾಡಲು ಹೊಸ ನಿಯಮಗಳನ್ನು ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗೆ ಆಧಾರ್ ಕಾರ್ಡ್‌ ಪ್ರತಿ ಪಡೆದುಕೊಳ್ಳುವುದು ಆಧಾರ್ ಕಾಯ್ದೆಗೆ ವಿರುದ್ಧ.

  • ಹೋಟೆಲ್‌ ಪ್ರತಿನಿಧಿಗಳು, ಕಾರ್ಯಕ್ರಮ ಸಂಘಟಕರು ಮುಂತಾದವರು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ವ್ಯಕ್ತಿಯ ಗುರುತನ್ನು ತಾಳೆ ಮಾಡುವ ತಂತ್ರಜ್ಞಾನವನ್ನು ಪಡೆಯಬೇಕು ಎಂದಾದರೆ ತಮ್ಮ ಸಂಸ್ಥೆಯನ್ನು ನೋಂದಣಿ ಮಾಡಿಸುವುದು ಕಡ್ಡಾಯ ಎನ್ನುವ ನಿಯಮಕ್ಕೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು (ಯುಐಡಿಎಐ) ಒಪ್ಪಿಗೆ ನೀಡಿದೆ ಎಂದು ಅದರ ಸಿಇಒ ಭುವನೇಶ್ ಕುಮಾರ್ ಹೇಳಿದ್ದಾರೆ.
  • ‘ಹೊಸ ನಿಯಮವನ್ನು ಶೀಘ್ರದಲ್ಲಿಯೇ ಅಧಿಸೂಚನೆಯಲ್ಲಿ ಪ್ರಕಟಿಸಲಾಗುತ್ತದೆ. ಆಧಾರ್‌ ಸಂಖ್ಯೆಯನ್ನು ಆಧರಿಸಿ ವ್ಯಕ್ತಿಯ ಗುರುತು ತಾಳೆ ಮಾಡುವ ಸಂಸ್ಥೆಗಳು ತಮ್ಮ ಹೆಸರನ್ನು ನೋಂದಣಿ ಮಾಡುವುದನ್ನು ಈ ನಿಯಮವು ಕಡ್ಡಾಯಗೊಳಿಸುತ್ತದೆ’ ಎಂದು ಕುಮಾರ್ ತಿಳಿಸಿದ್ದಾರೆ.
  • ಆಧಾರ್‌ನ ಕೇಂದ್ರ ದತ್ತಾಂಶ ಕೋಶದ ಜೊತೆ ಸಂಪರ್ಕ ಹೊಂದದೆಯೂ ವ್ಯಕ್ತಿಯ ಗುರುತು ತಾಳೆ ನೋಡುವ ಹೊಸ ಆ್ಯಪ್‌ ಒಂದನ್ನು ಯುಐಡಿಎಐ ಪರೀಕ್ಷಿಸುತ್ತಿದೆ. ಈ ಹೊಸ ಆ್ಯಪ್‌ಅನ್ನು ವಿಮಾನ ನಿಲ್ದಾಣಗಳಲ್ಲಿ, ಗ್ರಾಹಕರ ವಯಸ್ಸಿನ ಆಧಾರದಲ್ಲಿ ಉತ್ಪನ್ನ ಗಳನ್ನು ಮಾರಾಟ ಮಾಡಬೇಕಿರುವ ಅಂಗಡಿಗಳಲ್ಲಿ ಬಳಕೆ ಮಾಡಬಹುದು.
  • ಸೌರ ಕೃಷಿ ಪಂಪ್ಸೆಟ್ : ಮಹಾರಾಷ್ಟ್ರಕ್ಕೆ ಅಗ್ರ ಸ್ಥಾನ: ಮೂವತ್ತು ದಿನಗಳಲ್ಲಿ 45 ಸಾವಿರಕ್ಕೂ ಹೆಚ್ಚು ಕೃಷಿ ಪಂಪ್ಅಳವಡಿಕೆ

ಸಂದರ್ಭ: ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ನಿಯಮಿತವು (ಎಂಎಸ್ಇಡಿಸಿಎಲ್‌) ‘ಪಿಎಂಕುಸುಮ್ಬಿ ಯೋಜನೆಯಡಿ ಕೇವಲ 30 ದಿನಗಳಲ್ಲಿ ರಾಜ್ಯದಾದ್ಯಂತ 45,911 ಸೌರ ಕೃಷಿ ಪಂಪ್ಸೆಟ್ಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಸಾಧನೆಯ ಮೈಲಿಗಲ್ಲು ಗಿನ್ನೆಸ್ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.

  • ಈ ಸಾಧನೆಯ ಮೂಲಕ ಭಾರತದಲ್ಲಿ ವೇಗವಾಗಿ ಸೌರಶಕ್ತಿ ಆಧಾರಿತ ಚಟುವಟಿಕೆಗಳನ್ನು ಅಳವಡಿಸುತ್ತಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರವು ಅಗ್ರಸ್ಥಾನ ದಲ್ಲಿದೆ. ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಸರ್ಕಾರವೊಂದು ವೇಗವಾಗಿ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಸೌರ ಕೃಷಿ ಪಂಪ್‌ಗಳನ್ನು ಅಳವಡಿಸುತ್ತಿರುವುದರಲ್ಲಿ ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದೆ.
  • ‌ಈ ಸಾಧನೆಯು, ಕೇಂದ್ರ ಸರ್ಕಾರದ ಪಿಎಂ–ಕುಸಮ್‌ ಬಿ ಮತ್ತು ಮಗೇಲ್‌ ತ್ಯಾಲಾ ಸೌರ್ ಕೃಷಿ ಪಂಪ್‌ ಯೋಜನೆಗಳ (ಎಂಟಿಎಸ್‌ಕೆಪಿವೈ) ಪರಿಣಾಮಕಾರಿ ಅನುಷ್ಠಾನದ ಮೂಲಕ ಭಾರತದಲ್ಲಿ ಶುದ್ಧ ಇಂಧನದ ಪರಿವರ್ತನೆ, ರೈತರ ಜೀವನೋಪಾಯ ಸುಧಾರಣೆ ಮತ್ತು ಸುಸ್ಥಿರ ನೀರಾವರಿಯನ್ನು ಪ್ರೋತ್ಸಾಹಿಸುವ ರಾಜ್ಯ ಸರ್ಕಾರದ ಬದ್ಧತೆಯ ಪ್ರತಿಬಿಂಬವಾಗಿದೆ.
  • ‘ರಾಜ್ಯದಾದ್ಯಂತ ಒಂದು ತಿಂಗಳಲ್ಲಿ 45,911ಕ್ಕೂ ಹೆಚ್ಚು ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಗಳನ್ನು ಅನುಷ್ಠಾನಗೊಳಿ ಸಲಾಗಿದೆ. ಈ ಮೂಲಕ ಸೌರ ಕೃಷಿ ಚಟುವಟಿಕೆಗಳ ಅನುಷ್ಠಾನದಲ್ಲಿ ಮಹಾರಾಷ್ಟ್ರವನ್ನು, ದೇಶದ ಪ್ರಥಮ ರಾಜ್ಯವನ್ನಾಗಿ ಮಾಡಿದ್ದೇವೆ. ಈ ಸಾಧನೆಯು ಸುಸ್ಥಿರ ನೀರಾವರಿಯನ್ನು ಖಚಿತಪಡಿಸುತ್ತ್ತದೆ. ಅಷ್ಟೇ ಅಲ್ಲದೇ, ಕೃಷಿಯಲ್ಲಿ ಉತ್ಪಾದಕತೆ ಮತ್ತು ರೈತರ ಆದಾಯವನ್ನು ಸುಧಾರಿಸುತ್ತದೆ, ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ’ ಎಂದು ಮಹಾರಾಷ್ಟ್ರ ಸರ್ಕಾರದ ಇಂಧನ ಸಚಿವರೂ ಆಗಿರುವ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ತಿಳಿಸಿದ್ದಾರೆ.
  • ಎಂಎಸ್‌ಇಡಿಸಿಎಲ್‌, ರಾಜ್ಯ ದಾದ್ಯಂತ ಈವರೆಗೆ 7.47 ಲಕ್ಷಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಗಳನ್ನು ಸ್ಥಾಪಿಸಲಾಗಿದೆ. 10.45 ಲಕ್ಷ ಕೃಷಿ ಪಂಪ್‌ಗಳ ಸ್ಥಾಪನೆಯ ಗುರಿ ಹೊಂದಿದೆ. ಇದು ರಾಜ್ಯ, ದೇಶ ವಲ್ಲದೇ, ಅಂತರರಾಷ್ಟ್ರೀಯ ಮಟ್ಟದಲ್ಲಿ ಅನುಷ್ಠಾನಗೊಳಿಸಬಹುದಾದ ಮಾದರಿಯನ್ನು ಸೃಷ್ಟಿಸಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸುತ್ತಾರೆ.
  • ಹೈದರಾಬಾದ್‌: ರಸ್ತೆಗೆ ಟ್ರಂಪ್ಹೆಸರು

ಸಂದರ್ಭ: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ರಾವಿರ್ಯಾಲ್ದಲ್ಲಿರುವ ನೆಹರೂ ಹೊರವರ್ತುಲ ರಸ್ತೆಗೆ ಸಂಪರ್ಕ ಕಲ್ಪಿಸುವ  ಪ್ರಸ್ತಾವಿತ ರೇಡಿಯಲ್ಹೊರವರ್ತುಲ ರಸ್ತೆ (ಆರ್ಆರ್ಆರ್‌)ಗೆ  ಪದ್ಮಭೂಷಣ ರತನ್ಟಾಟಾ ಹೆಸರಿಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆರಾವಿರ್ಯಾಲ್ದಲ್ಲಿರುವ ಇಂಟರ್ಚೇಂಜ್ಗೆಟಾಟಾ ಇಂಟರ್ಚೇಂಜ್ ಎಂದು ಈಗಾಗಲೇ ನಾಮಕರಣ ಮಾಡಲಾಗಿದೆ.

  • ಹೈದರಾಬಾದ್‌ನ (ಫೈನಾನ್ಸಿಯಲ್‌ ಡಿಸ್ಟ್ರಿಕ್ಟ್‌) ನಾನಕ್‌ರಾಮಗೂಡದಲ್ಲಿರುವ ಅಮೆರಿಕ ಕಾನ್ಸುಲೆಟ್‌ ಜನರಲ್‌ ಕಟ್ಟಡವಿರುವ ರಸ್ತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೆಸರಿಡಲು ಪ್ರಸ್ತಾಪ ಸಿದ್ಧಪಡಿಸಿದೆ. ಈ ಸಂಬಂಧ ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಅಮೆರಿಕ ರಾಯಭಾರ ಕಚೇರಿಗೆ ತೆಲಂಗಾಣ ಸರ್ಕಾರ ಪತ್ರ ಬರೆದಿದೆ.
  • ನವದೆಹಲಿಯಲ್ಲಿ ಭಾರತ–ಅಮೆರಿಕ ಕಾರ್ಯತಂತ್ರದ ಪಾಲುದಾರಿಗೆ ವಾರ್ಷಿಕ ಸಭೆ ಉದ್ದೇಶಿಸಿ ಮಾತನಾಡಿದ್ದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ, ಹೈದರಾಬಾದ್‌ ನಗರದ ಪ್ರಮುಖ ರಸ್ತೆಗಳಿಗೆ ಗಣ್ಯವಕ್ತಿ, ಪ್ರಮುಖ ಕಂಪನಿಗಳ ಹೆಸರಿಡುವ ಪ್ರಸ್ತಾಪವಿದೆ ಎಂದು ತಿಳಿಸಿದ್ದರು.
  • ಸಿಮ್ರನ್ಪ್ರೀತ್ಕೌರ್ಗೆ ಪಿಸ್ತೂಲ್ಚಿನ್ನ
  • ವಿಶ್ವಕಪ್‌ ಶೂಟಿಂಗ್‌ 50 ಮೀ. ರೈಫಲ್ ತ್ರೀ ಪೊಸಿಷನ್‌: ಐಶ್ವರಿ ಪ್ರಸಾದ್‌ಗೆ ಬೆಳ್ಳಿ
  • ಯುವ ಪ್ರತಿಭೆ ಸಿಮ್ರನ್‌ಪ್ರೀತ್ ಕೌರ್‌ ಬ್ರಾರ್‌ ಅವರು ಐಎಸ್‌ಎಸ್‌ಎಫ್‌ ವಿಶ್ವಕಪ್‌ ಟೂರ್ನಿಯ ಮಹಿಳೆಯರ 25 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ಭಾನುವಾರ ಪ್ರಬಲ ಕಣದ ಸವಾಲನ್ನು ಎದುರಿಸಿ ಚಿನ್ನದ ಪದಕ ಗೆದ್ದುಕೊಂಡರು. ಪುರುಷರ 50 ಮೀ. ರೈಫಲ್ ತ್ರೀ ಪೊಸಿಷನ್ಸ್ ಸ್ಪರ್ಧೆಯಲ್ಲಿ ಐಶ್ವರಿ ಪ್ರಸಾದ್ ಸಿಂಗ್‌ ತೋಮಾರ್ ಅವರು ಪದಾರ್ಪಣೆಯಲ್ಲೇ ಬೆಳ್ಳಿ ಪದಕ ಕೊರಳಿಗೇರಿಸಿಕೊಂಡರು.
  • 21 ವರ್ಷ ವಯಸ್ಸಿನ ಸಿಮ್ರನ್‌ಪ್ರೀತ್‌ ಅವರು ಫೈನಲ್‌ನಲ್ಲಿ ಅಮೋಘ 41 ಸ್ಕೋರ್ ಶೂಟ್‌ ಮಾಡಿ ತಮ್ಮ ವೃತ್ತಿ ಬದುಕಿನ ಅತಿ ದೊಡ್ಡ ಸಾಧನೆ ದಾಖಲಿಸಿದರು. ಆ ಹಾದಿಯಲ್ಲಿ, ಒಲಿಂಪಿಕ್ ಚಾಂಪಿಯನ್, ಕೊರಿಯಾದ ಯಾಂಗ್ ಜಿ ಇನ್ ಹೆಸರಿನಲ್ಲಿದ್ದ ವಿಶ್ವ ಜೂನಿಯರ್ ದಾಖಲೆ ಸರಿಗಟ್ಟಿ ಪೋಷಕರಿಗೆ ಹೆಮ್ಮೆ ಮೂಡಿಸಿದರು. ಸಿಮ್ರನ್ ಅವರಿಗೆ ಬೆಂಬಲ ನೀಡಲು ತಂದೆ ಸರ್ಕಾರಿ ನೌಕರಿಯನ್ನು ತ್ಯಜಿಸಿದ್ದರು.
  • ಚೀನಾದ ಯಾವೊ ಕ್ಸಿಯಾನ್‌ಕ್ಸುನ್ (36 ಸ್ಕೋರ್) ಬೆಳ್ಳಿ ಮತ್ತು ಜರ್ಮನಿಯ ದೊರೀನ್ ವೆನ್ನೆಕಾಂಪ್ (30) ಅವರು ಕಂಚಿನ ಪದಕ ಪಡೆದರು. ಅನುಭವಿ ಯಾವೊ ಅವರು 10 ಮೀ. ಏರ್‌ ಪಿಸ್ತೂಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಆಗಿದ್ದಾರೆ.
  • ಫೈನಲ್‌ಗೆ ಅರ್ಹತೆ ಪಡೆದ ಭಾರತದ ಮತ್ತೋರ್ವ ಶೂಟರ್ ಇಶಾ ಸಿಂಗ್ ಅವರು ಏಳನೇ ಸ್ಥಾನ ಪಡೆದರು. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅವಳಿ ಪದಕ ಪಡೆದಿದ್ದ ಮನು ಭಾಕರ್ (581 ಪಾಯಿಂಟ್‌) ಅವರು ಅರ್ಹತಾ ಸುತ್ತಿನಲ್ಲಿ ಒಂಬತ್ತನೇ ಸ್ಥಾನ ಗಳಿಸಿದ್ದರು.
  • ಈ ವರ್ಷದ ಏಪ್ರಿಲ್‌ನಲ್ಲಿ ಲಿಮಾದಲ್ಲಿ (ಪೆರು) ನಡೆದಿದ್ದ ವಿಶ್ವಕಪ್‌ನಲ್ಲಿ ಬೆಳ್ಳಿ ಗೆದ್ದಿದ್ದ ಸಿಮ್ರನ್‌ಪ್ರೀತ್ ಭಾನುವಾರ ಕ್ವಾಲಿಫಿಕೇಷನ್‌ನಲ್ಲಿ 584 ಪಾಯಿಂಟ್ಸ್ ಸ್ಕೋರ್ ಮಾಡಿ ಐದನೇ ಹಾಗೂ ಇಶಾ 585 ಸ್ಕೋರ್‌ನೊಡನೆ ನಾಲ್ಕನೇ ಸ್ಥಾನ ಗಳಿಸಿ ಫೈನಲ್‌ಗೇರಿದ್ದರು.
  • ಐಶ್ವರಿಗೆ ಬೆಳ್ಳಿ: ಇದಕ್ಕೆ ಮೊದಲು, ಪುರು ಷರ ರೈಫಲ್ ತ್ರೀ ಪೊಸಿಷನ್ ಸ್ಪರ್ಧೆಯ ಫೈನಲ್‌ನಲ್ಲಿ ಝೆಕ್‌ ಗಣರಾಜ್ಯದ ಜಿರಿ ಪ್ರಿವ್ರಾಟ್‌ಸ್ಕಿ 414.2 ಪಾಯಿಂಟ್ಸ್‌ ಸ್ಕೋರ್ ಮಾಡಿ ಚಿನ್ನ ಗೆದ್ದುಕೊಂಡಿದ್ದರು. ಐಶ್ವರಿ ಅವರಿಗಿಂತ ಕೇವಲ 09.9 ಪಾಯಿಂಟ್‌ ಅಂತರದಿಂದ ಹಿಂದೆಬಿದ್ದು ಎರಡನೇ ಸ್ಥಾನಕ್ಕೆ ಸರಿದರು. ಒಲಿಂಪಿಕ್ ಚಾಂಪಿಯನ್, ಚೀನಾದ ಲಿಯು ಯುಕುನ್ ಕಂಚಿನ ಪದಕ ಗಳಿಸಿದರು.
  • ಆ ಮೂಲಕ ಐಶ್ವರಿ ವಿಶ್ವ ಮತ್ತು ಏಷ್ಯಾ ಮಟ್ಟದ ಎಲ್ಲಾ ಸ್ಪರ್ಧೆಗಳಲ್ಲಿ ಐಶ್ವರಿ ಪ್ರಸಾದ್ ಪದಕ ಗೆದ್ದಂತಾಯಿತು. ಎರಡು ಬಾರಿಯ ಒಲಿಂಪಿಯನ್ ಆಗಿರುವ ಐಶ್ವರಿ ಮಾಜಿ ವಿಶ್ವ ಜೂನಿಯರ್ ಚಾಂಪಿಯನ್ ಆಗಿದ್ದಾರೆ. ಹಾಲಿ ಏಷ್ಯನ್ ಚಾಂಪಿಯನ್ ಆಗಿರುವ ಅವರು ಅಕ್ಟೋಬರ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದರು.
  • ಅರ್ಹತಾ ಸುತ್ತಿನಲ್ಲಿ ಅವರು 595 ಪಾಯಿಂಟ್‌ ಸ್ಕೋರ್ ಮಾಡಿ ಎರಡನೇ ಸ್ಥಾನ ಗಳಿಸಿದ್ದರು. ಈ ಸುತ್ತಿನಲ್ಲಿ ಅಮೋಘ ಪ್ರದರ್ಶನ ನೀಡಿದ ಚೀನಾದ ಟಿಯಾನ್ ಜಿಯಾಮಿಂಗ್ ಅವರು ವಿಶ್ವದಾಖಲೆಯ 598 ಸ್ಕೋರ್‌ನೊಡನೆ ಅಗ್ರಸ್ಥಾನ ಪಡೆದಿದ್ದರು. ಅಂತಿಮ ಎಂಟರಲ್ಲಿ ಚೀನಾದ ಮೂವರ ಜೊತೆ, ವರ್ಷದ ಅಥ್ಲೀಟ್‌ ಜಾನ್–ಹೆರ್ಮನ್ ಹೆಗ್‌ (ನಾರ್ವೆ) ಮತ್ತು ಇಸ್ತವಾನ್ ಪೆನಿ (ಹಂಗೆರಿ) ಅವರೂ ಸ್ಥಾನ ಪಡೆದಿದ್ದರು.
  • ಮಂಡಿಯೂರಿ ಶೂಟ್‌ ಮಾಡುವ ಸ್ಪರ್ಧೆಯ 10 ಶಾಟ್‌ಗಳ ನಂತರ ಐಶ್ವರಿ 102.8 ಸ್ಕೋರ್‌ನೊಡನೆ ನಾಲ್ಕನೇ ಸ್ಥಾನ ದಲ್ಲಿದ್ದರು. ಪ್ರೋನ್‌ (ಅಂಗಾತ ಸ್ಥಿತಿಯಲ್ಲಿ ಶೂಟ್‌ ಮಾಡುವ) ಪೊಸಿಷನ್‌ ನಂತರ ಅವರು ಎರಡನೇ ಸ್ಥಾನಕ್ಕೇರಿದರು. ಜಿರಿ ಪ್ರಿವ್ರಾಟ್‌ಸ್ಕಿ ಆಗ ಐಶ್ವರಿ ಅವರಿಗಿಂತ 3.3 ಪಾಯಿಂಟ್‌ ಮುಂದಿದ್ದರು. ಲಿಯು ಮೂರನೇ ಸ್ಥಾನದಲ್ಲಿದ್ದರು.
  • ಮಹಿಳೆಯರ ರೈಫಲ್ ತ್ರೀ ಪೊಸಿಷನ್‌ ನಲ್ಲಿ ಸಿಫ್ತ್‌ ಕೌರ್ ಸಮ್ರಾ, ಮಹಿಳೆಯರ 25 ಮೀ.ಪಿಸ್ತೂಲ್ ಫೈನಲ್‌ನಲ್ಲಿ ಮನು ಭಾಕರ್ ಅವರು ಅವರು ಅರ್ಹತಾ ಸುತ್ತಿಗಿಂತ ಮೇಲೇರಲು ವಿಫಲರಾದರು.
  • ಅರ್ಹತಾ ಸುತ್ತಿನಲ್ಲಿ ಸಿಫ್ತ್‌ 584 ಸ್ಕೋರ್‌ನೊಡನೆ ಹತ್ತನೇ ಸ್ಥಾನ ಪಡೆದರೆ, ಮನು 581 ಸ್ಕೋರ್‌ನೊಡನೆ 9ನೇ ಸ್ಥಾನ ಪಡೆದರು.

ಪ್ರಚಲಿತ ವಿದ್ಯಮಾನಗಳು: 7ನೇ ಡಿಸೆಂಬರ್ 2025

ಭಾರತಕ್ಕೆ ಮುಂದಿನ ವರ್ಷದಿಂದ ಎಲ್‌ಎಂಜಿ ಪೂರೈಕೆ ಶುರು

ಜನವರಿಯಿಂದ ಭಾರತಕ್ಕೆ ಎಲ್‌ಎಂಜಿ (ಲೈಟ್‌ ಮಶಿನ್ ಗನ್‌) ಪೂರೈಕೆ ಆರಂಭಿಸಲಾಗುವುದು ಎಂದು ಇಸ್ರೇಲ್‌ನ ಪ್ರಮುಖ ರಕ್ಷಣಾ ಸಾಮಗ್ರಿ ತಯಾರಕ ಸಂಸ್ಥೆಯೊಂದು ಹೇಳಿದೆ.

1.70 ಲಕ್ಷ ಹೊಸ ತಲೆಮಾರಿನ ರೈಫಲ್‌ಗಳ (ಎಲ್‌ಎಂಜಿ) ಪೂರೈಕೆಗೆ ಸಂಬಂಧಿಸಿದ ಒಪ್ಪಂದವು ಅಂತಿಮ ಹಂತದಲ್ಲಿದೆ. ಇದು, ಪೂರ್ಣಗೊಂಡ ಬಳಿಕ ಮೊದಲ ಹಂತದಲ್ಲಿ 40 ಸಾವಿರ ಎಲ್‌ಎಂಜಿ ಪೂರೈಕೆ ಮಾಡಲಾಗುವುದು ಎಂದು ಇಸ್ರೇಲ್‌ ವೆಪನ್ಸ್‌ ಇಂಡಸ್ಟ್ರೀಜ್‌ (ಐಡಬ್ಲುಐ) ಸಿಇಒ ಶುಕಿ ಸ್ವಾರ್ಟ್ಸ್ ಹೇಳಿದ್ದಾರೆ.

‘ಮುಂದಿನ ವರ್ಷದಿಂದ ಆರಂಭವಾಗಿ ಮುಂದಿನ ಐದು ವರ್ಷಗಳ ವರೆಗೆ ಈ ರೈಫಲ್‌ಗಳ ಪೂರೈಕೆ ಪ್ರಕ್ರಿಯೆ ನಡೆಯುವುದು. ವರ್ಷಾರಂಭಕ್ಕೆ ಮೊದಲ ಹಂತದ ಪೂರೈಕೆಗೆ ಚಾಲನೆ ನೀಡಲಾಗುವುದು’ ಎಂದು ಹೇಳಿದ್ದಾರೆ.

‘ಭಾರತಕ್ಕೆ ರಕ್ಷಣಾ ಸಾಮಗ್ರಿಗಳ ಪೂರೈಕೆಗೆ ಸಂಬಂಧಿಸಿ ಎಲ್‌ಎಂಜಿ ಪೂರೈಕೆ ಸೇರಿ ಮೂರು ಮಹತ್ವದ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತಿದೆ.‌ ಸಿಕ್ಯೂಬಿ(ಕ್ಲೋಸ್‌ ಕ್ವಾರ್ಟರ್ಸ್ ಬ್ಯಾಟಲ್) ರೈಫಲ್‌ ಹಾಗೂ ಅಬೆಲ್‌ ತಂತ್ರಜ್ಞಾನ ಆಧಾರಿತ ಶಸ್ತ್ರಾಸ್ತ್ರ ಪೂರೈಕೆ ಇತರ ಒಪ್ಪಂದಗಳಾಗಿದ್ದು, ಇವುಗಳ ಕುರಿತು ಇನ್ನೂ ಮಾತುಕತೆ ನಡೆಯುತ್ತಿದೆ’ ಎಂದು ಹೇಳಿದ್ದಾರೆ.

‘ಎಲ್‌ಎಂಜಿಗಳ ಪರೀಕ್ಷಾರ್ಥ ಪ್ರಯೋಗಗಳು ಪೂರ್ಣಗೊಂಡಿದ್ದು, ಸರ್ಕಾರದಿಂದಲೂ ಪರಿಶೀಲನೆಯಾಗಿದೆ. ಇವುಗಳ ತಯಾರಿಕೆಗೆ ಪರವಾನಗಿ ಲಭಿಸಿದೆ. ಸ್ಥಳೀಯವಾಗಿ ಉತ್ಪಾದನೆ ಆರಂಭಿಸುವ ಮೂಲಕ ಮೇಕ್‌ ಇನ್‌ ಇಂಡಿಯಾ ಕಾರ್ಯಕ್ರಮಕ್ಕೆ ಬೆಂಬಲಿಸಿದ ಮೊದಲ ಕಂಪನಿ ನಮ್ಮದು’ ಎಂದೂ ಅವರು ಹೇಳಿದ್ದಾರೆ.

ರಷ್ಯಾ: ಬಿಡಿಭಾಗ ಉತ್ಪಾದನೆಗೆ ಅಸ್ತು‘ಭಾರತದಲ್ಲೇ ತಯಾರಿಸಿ’ ಅಭಿಯಾನದ ಭಾಗವಾಗಿ ತಂತ್ರಜ್ಞಾನ ಹಸ್ತಾಂತರ

ತನ್ನ ದೇಶದ ಶಸ್ತ್ರಾಸ್ತ್ರ ಹಾಗೂ ರಕ್ಷಣಾ ಉಪಕರಣಗಳ ನಿರ್ವಹಣೆಗಾಗಿ ಭಾರತದಲ್ಲಿಯೇ ಹಾರ್ಡ್‌ವೇರ್‌ ಹಾಗೂ ಬಿಡಿಭಾಗಗಳನ್ನು ತಯಾರಿಸಲು ರಷ್ಯಾ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಮಧ್ಯೆ ನಡೆದ ಮಾತುಕತೆಯಲ್ಲಿ ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ರಷ್ಯಾದಿಂದ ನಿರ್ಣಾಯಕ ಬಿಡಿಭಾಗಗಳು ಹಾಗೂ ಸಲಕರಣೆ ಪೂರೈಕೆಗೆ ದೀರ್ಘ ಅವಧಿ ಬೇಕಾಗುತ್ತಿದ್ದು, ಇದರಿಂದ ಆ ದೇಶದಿಂದ ಖರೀದಿಸುತ್ತಿದ್ದ ಸೇನಾ ಉಪಕರಣಗಳ ನಿರ್ವಹಣೆಯ ಮೇಲೂ ತೀವ್ರ ಪರಿಣಾಮ ಉಂಟಾಗುತ್ತಿದೆ ಎಂದು ಸೇನೆಯು ಬಹಳ ವರ್ಷಗಳಿಂದ ದೂರುತ್ತಿತ್ತು.

‘ಮೇಕ್‌ ಇನ್‌ ಇಂಡಿಯಾ ಯೋಜನೆ ಅಡಿಯಲ್ಲಿ ತಂತ್ರಜ್ಞಾನ ಹಸ್ತಾಂತರ ಮಾಡಿಕೊಂಡು, ರಷ್ಯಾ ಮೂಲದ ಶಸ್ತ್ರಾಸ್ತ್ರಗಳು ಹಾಗೂ ಸೇನಾ ಉಪಕರಣಗಳ ಬಿಡಿಭಾಗಗಳ ತಯಾರಿಕಾ ಘಟಕಗಳನ್ನು ಜಂಟಿಯಾಗಿ ಸ್ಥಾಪಿಸಲು ಎರಡೂ ರಾಷ್ಟ್ರಗಳು ಒಪ್ಪಿಕೊಂಡಿವೆ’ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತೀಯ ಸೇನೆಗೆ ಅಗತ್ಯವಾದ ಉತ್ಪನ್ನಗಳನ್ನು ಪೂರೈಸಿ, ಸಮಾನ ಸ್ನೇಹಿಯಾದ ಮೂರನೇ ದೇಶಗಳಿಗೂ ರಫ್ತು ಮಾಡಲು ಜಂಟಿ ಸಹಭಾಗಿತ್ವದಲ್ಲಿ ಘಟಕ ಸ್ಥಾಪಿಸಲು ಸಭೆಯಲ್ಲಿ ಸಮ್ಮತಿಸಿವೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ರಷ್ಯಾ ರಕ್ಷಣಾ ಸಚಿವ ಆಂಡ್ರೆ ಬೆಲೊಸೊ ನಡುವೆ ಗುರುವಾರ ನಡೆದ ಸಭೆಯಲ್ಲೂ ದ್ವಿಪಕ್ಷೀಯ ರಕ್ಷಣಾ ಸಹಕಾರ ವೃದ್ಧಿಗೆ ಒಪ್ಪಿಗೆ ನೀಡಲಾಗಿತ್ತು.

ಭಾರತ–ರಷ್ಯಾ ಸಂಬಂಧ ವಿಶ್ವದಲ್ಲೇ ಸದೃಢ: ಸಚಿವ ಎಸ್‌. ಜೈಶಂಕರ್‌

ನವದೆಹಲಿ (ಪಿಟಿಐ): ಕಳೆದ 70–80 ವರ್ಷಗಳಿಂದಲೂ ಭಾರತ ಮತ್ತು ರಷ್ಯಾ ನಡುವಿನ ಪಾಲುದಾರಿಕೆಯು ಜಗತ್ತಿನ ‘ಅತ್ಯಂತ ಸದೃಢವಾದ ಸಂಬಂಧ’ಗಳಲ್ಲಿ ಒಂದಾಗಿದೆ. ಅಧ್ಯಕ್ಷ ವ್ಲಾದಿಮಿರ್‌ ಪುಟಿನ್ ಅವರ ಭಾರತ ಭೇಟಿಯು ‘ಆರ್ಥಿಕ ಒಪ್ಪಂದಗಳಿಗೆ ಮರುಜೀವ ನೀಡುವ ಉದ್ದೇಶ ಹೊಂದಿತ್ತು’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರು ಶನಿವಾರ ಹೇಳಿದ್ದಾರೆ.

ಸಂವಾದವೊಂದರಲ್ಲಿ ಮಾತನಾಡಿದ ಸಚಿವರು, ಪುಟಿನ್‌ ಅವರ ಭಾರತ ಭೇಟಿಯು ಅಮೆರಿಕ–ಭಾರತದ ನಡುವೆ ನಡೆಯುತ್ತಿರುವ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮಾತುಕತೆಯನ್ನು ಜಟಿಲಗೊಳಿಸುತ್ತದೆ ಎಂಬ ವಾದಗಳನ್ನು ಅಲ್ಲಗಳೆದರು.

‘ವಿಶ್ವದ ಎಲ್ಲ ಬೃಹತ್‌ ರಾಷ್ಟ್ರಗಳೊಂದಿಗೂ ಭಾರತ ಸಂಬಂಧ ಹೊಂದಿದೆ ಎಂಬುದು ಎಲ್ಲರಿಗೂ ಗೊತ್ತು. ಇತರೆ ದೇಶಗಳೊಂದಿಗೆ ನಮ್ಮ ಸಂಬಂಧವನ್ನು ಹೀಗೆಯೇ ಇರಬೇಕು ಎಂದು ಬಯಸುವ ‘ವಿಶೇಷ ಅಧಿಕಾರ’ ಮತ್ತೊಂದು ದೇಶಕ್ಕೆ ಇರಬೇಕು ಎನ್ನುವುದು ಒಪ್ಪುವಂಥ ಸಂಗತಿಯಲ್ಲ’ ಎಂದು ಅವರು ‌‌‘ಹಿಂದೂಸ್ತಾನ್ ಟೈಮ್ಸ್‌ ನಾಯಕತ್ವ ಶೃಂಗ’ದಲ್ಲಿ ಹೇಳಿದರು.

ರಷ್ಯಾ ಮಾರುಕಟ್ಟೆಗೆ ‘ಪತಂಜಲಿ’

ಯೋಗ ಗುರು ಬಾಬಾ ರಾಮದೇವ ನೇತೃತ್ವದ ಪತಂಜಲಿ ಸಮೂಹವು ರಷ್ಯಾ ಸರ್ಕಾರದ ಜೊತೆ ಶನಿವಾರ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಇದರ ಪರಿಣಾಮವಾಗಿ ಸಮೂಹಕ್ಕೆ ರಷ್ಯಾದ ಮಾರುಕಟ್ಟೆ ಪ್ರವೇಶಿಸಲು ಸಾಧ್ಯವಾಗಲಿದೆ.ಒಪ್ಪಂದವು ಆರೋಗ್ಯ ಮತ್ತು ಆರೈಕೆ, ಆರೋಗ್ಯ ಪ್ರವಾಸೋದ್ಯಮ, ಕುಶಲ ಮಾನವ ಸಂಪನ್ಮೂಲದ ವಿನಿಮಯ, ಸಂಶೋಧನೆಗೆ ಸಂಬಂಧಿಸಿದ ಉಪಕ್ರಮಗಳಿಗೆ ಅನುವು ಮಾಡಿಕೊಡಲಿದೆ ಎಂದು ಪ್ರಕಟಣೆಯೊಂದು ತಿಳಿಸಿದೆ.ಪತಂಜಲಿ ಸಮೂಹದ ಪರವಾಗಿ ರಾಮದೇವ ಅವರು ರಷ್ಯಾದ ವಾಣಿಜ್ಯ ಸಚಿವ ಹಾಗೂ ಇಂಡೊ–ರಷ್ಯಾ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸರ್ಗೈ ಚೆರೆಮಿನ್ ಅವರು ಒಪ್ಪಂದದ ದಾಖಲೆಗಳಿಗೆ ಸಹಿ ಮಾಡಿದರು.ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ಆರಂಭಿಸಿದ ಪತಂಜಲಿ ಸಮೂಹವು ಆಯುರ್ವೇದ ಉತ್ಪನ್ನಗಳು ಹಾಗೂ ಎಫ್‌ಎಂಸಿಜಿ ಉತ್ಪನ್ನಗಳಿಂದಾಗಿ ಹೆಸರುವಾಸಿ ಆಗಿದೆ. ಪತಂಜಲಿ ಆಯುರ್ವೇದ್ ಮತ್ತು ಪತಂಜಲಿ ಫುಡ್ಸ್‌ ಈ ಸಮೂಹದ ಅಂಗಸಂಸ್ಥೆಗಳಾಗಿವೆ.ರಷ್ಯಾದ ಜನ ಆಯುರ್ವೇದವನ್ನು ಬಹಳ ಮೆಚ್ಚಿಕೊಂಡಿದ್ದಾರೆ, ಅವರು ಯೋಗ, ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆಯನ್ನು ಅಳವಡಿಸಿಕೊಂಡಿದ್ದಾರೆ ಎಂದು ರಾಮದೇವ ಅವರು ಹೇಳಿದ್ದಾರೆ.‘ಋಷಿಗಳು ರೂಪಿಸಿದ ಈ ಆರೋಗ್ಯ ವಿಜ್ಞಾನವನ್ನು ಜಗತ್ತಿನ ಸರಿಸುಮಾರು 200 ದೇಶಗಳಿಗೆ ಕೊಂಡೊಯ್ಯುವುದು ನಮ್ಮ ಮುಖ್ಯ ಗುರಿ. ಇದಕ್ಕೆ ರಷ್ಯಾ ಹೆಬ್ಬಾಗಿಲಾಗಿ ಇರಲಿದೆ’ ಎಂದು ರಾಮದೇವ ವಿವರಿಸಿದ್ದಾರೆ.‘ಪತಂಜಲಿ ಕಂಪನಿಯ ಆರೈಕೆ ಸೇವೆಗಳನ್ನು ರಷ್ಯಾಕ್ಕೆ ವಿಸ್ತರಿಸುವುದು ಒಪ್ಪಂದದ ಮುಖ್ಯ ಗುರಿ. ಭಾರತದ ಅಧ್ಯಾತ್ಮಿಕ ಜ್ಞಾನವನ್ನು, ಸಂಸ್ಕೃತಿಯನ್ನು, ಯೋಗವನ್ನು, ಆಯುರ್ವೇದವನ್ನು ಮತ್ತು ಅಮೂಲ್ಯವಾದ ಪರಂಪರೆಯನ್ನು ರಷ್ಯಾದ ಜೊತೆ ಹಂಚಿಕೊಳ್ಳುವುದು ಎರಡನೆಯ ಗುರಿ’ ಎಂದು ಅವರು ತಿಳಿಸಿದ್ದಾರೆ.ಈ ಒಪ್ಪಂದದ ಭಾಗವಾಗಿ ಭಾರತದ ಪ್ರಮುಖ ಜನಪ್ರಿಯ ಬ್ರ್ಯಾಂಡ್‌ಗಳನ್ನು ರಷ್ಯಾದಲ್ಲಿ, ರಷ್ಯಾದ ಪ್ರಮುಖ ಬ್ರ್ಯಾಂಡ್‌ಗಳನ್ನು ಭಾರತದಲ್ಲಿ ಜನಪ್ರಿಯಗೊಳಿಸಲಾಗುತ್ತದೆ.ಪತಂಜಲಿ ಕಂಪನಿಯ ಯೋಗ, ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆ ಪದ್ಧತಿ ಗಳನ್ನು ಅಳವಡಿಸಿಕೊಳ್ಳುವ ಮೂಲಕ ರಷ್ಯಾದ ಜನರ ಜೀವನಶೈಲಿ ಯನ್ನು ಬದಲಾಯಿಸುವ, ಅವರನ್ನು ರೋಗಮುಕ್ತವಾಗಿಸುವ ಉದ್ದೇಶ ಇದೆ ಎಂದು ಸರ್ಗೈ ಚೆರೆಮಿನ್ ಹೇಳಿದ್ದಾರೆ.

‘ಸೀಮಾ ಸುಂಕದಲ್ಲಿ ಸುಧಾರಣೆ’

ಸೀಮಾ ಸುಂಕವನ್ನು ಸರಳವಾಗಿಸುವುದು ಕೇಂದ್ರ ಸರ್ಕಾರದ ಮುಂದಿನ ಹಂತದ ಸುಧಾರಣಾ ಪ್ರಕ್ರಿಯೆಯ ಭಾಗ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸರ್ಕಾರವು ಜಿಎಸ್‌ಟಿ ದರ ಪರಿಷ್ಕರಣೆ, ಆದಾಯ ತೆರಿಗೆ ಮಿತಿ ಏರಿಕೆಯಂತಹ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ.‘ನಾವು ಸೀಮಾ ಸುಂಕ ವ್ಯವಸ್ಥೆಯಲ್ಲಿ ಆಮೂಲಾಗ್ರವಾದ ಬದಲಾವಣೆಯನ್ನು ತರಬೇಕಿದೆ… ಸೀಮಾ ಸುಂಕ ವ್ಯವಸ್ಥೆಯು ಸಂಕೀರ್ಣವಾದುದಲ್ಲ ಎಂದು ಜನರಿಗೆ ಅನ್ನಿಸಬೇಕಾದರೆ ಅದನ್ನು ಸರಳಗೊಳಿಸಬೇಕು. ಅದನ್ನು ಇನ್ನಷ್ಟು ಹೆಚ್ಚು ಪಾರದರ್ಶಕ ಆಗಿಸಬೇಕು’ ಎಂದು ಸೀತಾರಾಮನ್ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.ಆದಾಯ ತೆರಿಗೆ ವ್ಯವಸ್ಥೆಯಲ್ಲಿನ ಪಾರದರ್ಶಕ ಅಂಶಗಳನ್ನು ಸೀಮಾಸುಂಕ ವ್ಯವಸ್ಥೆಗೆ ತರಬೇಕಿದೆ. ಸೀಮಾಸುಂಕ ವ್ಯವಸ್ಥೆಯಲ್ಲಿ ತರಲು ಉದ್ದೇಶಿಸಿರುವ ಸುಧಾರಣೆಗಳು ಸಮಗ್ರವಾಗಿರುತ್ತವೆ, ಸುಂಕದ ಪ್ರಮಾಣ ಪರಿಷ್ಕರಿಸುವುದನ್ನು ಒಳಗೊಂಡಿರುತ್ತವೆ ಎಂದು ನಿರ್ಮಲಾ ಅವರು ಹೇಳಿದ್ದಾರೆ.ಇದಕ್ಕೆ ಸಂಬಂಧಿಸಿದ ಘೋಷಣೆಯು ಫೆಬ್ರುವರಿ 1ರಂದು ಮಂಡನೆಯಾಗುವ ಕೇಂದ್ರ ಬಜೆಟ್‌ನಲ್ಲಿ ಇರುವ ಸಾಧ್ಯತೆ ಇದೆ.‘ಕಳೆದ ಎರಡು ವರ್ಷಗಳಲ್ಲಿ ನಾವು ಸೀಮಾಸುಂಕದ ಪ್ರಮಾಣವನ್ನು ಇಳಿಕೆ ಮಾಡಿದ್ದೇವೆ. ಆದರೆ ಕೆಲವು ಉತ್ಪನ್ನಗಳ ಮೇಲಿನ ಸೀಮಾಸುಂಕವು ಸರಿಯಾದ ಮಟ್ಟದಲ್ಲಿ ಇಲ್ಲ ಎಂದು ಭಾವಿಸಲಾಗಿದೆ, ಅವುಗಳ ಮೇಲಿನ ಸೀಮಾಸುಂಕವನ್ನು ಕೂಡ ಕಡಿಮೆ ಮಾಡಬೇಕಿದೆ. ಸೀಮಾಸುಂಕ ವಿಭಾಗವನ್ನು ಸ್ವಚ್ಛಗೊಳಿಸುವುದು ನನ್ನ ಮುಂದಿರುವ ದೊಡ್ಡ ಕೆಲಸ’ ಎಂದು ನಿರ್ಮಲಾ ಸೀತಾರಾಮನ್‌ ಅವರು ತಿಳಿಸಿದ್ದಾರೆ.ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದರ ಕುರಿತು ಪ್ರತಿಕ್ರಿಯೆ ನೀಡಿದ ಸಚಿವೆ, ರೂಪಾಯಿ ತನ್ನ ಸಹಜ ಮೌಲ್ಯವನ್ನು ತಾನಾಗಿಯೇ ಕಂಡುಕೊಳ್ಳಲಿದೆ ಎಂದಿದ್ದಾರೆ.

31.25 ಗಿಗಾವಾಟ್‌ ಹಸಿರು ಇಂಧನ ಉತ್ಪಾದನೆ

ಪ್ರಸಕ್ತ ಹಣಕಾಸು ವರ್ಷದಲ್ಲಿ 31.25 ಗಿಗಾವಾಟ್‌ ಹಸಿರು ಇಂಧನವನ್ನು ದೇಶದಲ್ಲಿ ಉತ್ಪಾದಿಸಲಾಗಿದ್ದು, ಇದರಲ್ಲಿ ಸೋಲಾರ್‌ ವಿದ್ಯುತ್‌ನ ಪಾಲು 24.28 ಗಿಗಾವಾಟ್‌ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ‍್ರಲ್ಹಾದ ಜೋಶಿ ಶನಿವಾರ ತಿಳಿಸಿದರು.ಒಡಿಶಾದಲ್ಲಿ 1.5 ಲಕ್ಷ ಚಾವಣಿ ಸೋಲಾರ್‌ ಯುಎಲ್‌ಎ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ‘ಜಾಗತಿಕ ಇಂಧನ ನಾಯಕರ ಶೃಂಗಸಭೆ–2025’ರಲ್ಲಿ ಘೋಷಿಸಿದ ಸಚಿವರು, ಇದರಿಂದ ರಾಜ್ಯದ 7ಲಕ್ಷದಿಂದ 8 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಒಂದು ಟೆರಾವಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಸುಮಾರು 70 ವರ್ಷಗಳನ್ನು ತೆಗೆದುಕೊಂಡರೆ (2022), ನಂತರದ ಎರಡು ವರ್ಷಗಳಲ್ಲಿ (2024) ಎರಡು ಟೆರಾವಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯವನ್ನು ಜಗತ್ತು ಗಳಿಸಿದೆ ಎಂದರು.ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಹೆಚ್ಚಳಕ್ಕೆ ಭಾರತವೇ ಪ್ರಮುಖ ಚಾಲಕ ಶಕ್ತಿಯಾಗಿದೆ. ಕಳೆದ 11 ವರ್ಷದ ಅವಧಿಯಲ್ಲಿ ದೇಶದ ಸೌರ ವಿದ್ಯುತ್‌ನ ಸಾಮರ್ಥ್ಯ 2.8 ಗಿಗಾವಾಟ್‌ನಿಂದ 130 ಗಿಗಾವಾಟ್‌ಗೆ ಹೆಚ್ಚಿದ್ದು, ಇದು ಶೇ 4,500 ಪಟ್ಟು ಏರಿಕೆಯಾಗಿದೆ. 2022ರಿಂದ 2024ರ ನಡುವೆ ಈ ಬೆಳವಣಿಗೆಯಾಗಿದೆ. ಜಾಗತಿಕ ಸೌರ ವಿದ್ಯುತ್‌ ವಲಯಕ್ಕೆ ದೇಶವು 46 ಗಿಗಾವಾಟ್‌ ಕೊಡುಗೆ ನೀಡಿದ್ದು, ಮೂರನೇ ಬೃಹತ್ ಕೊಡುಗೆಯಾಗಿದೆ ಎಂದು ಹೇಳಿದರು.ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್‌ ಮಾಝಿ ಶೃಂಗಸಭೆಯನ್ನು ಉದ್ಘಾಟಿಸಿದರು. ವಿವಿಧ ರಾಜ್ಯಗಳ ಇಂಧನ ಸಚಿವರು ಭಾಗವಹಿಸಿದ್ದರು.

ಡೀಪ್‌ಫೇಕ್ ನಿಯಂತ್ರಣ ಮಸೂದೆ ಮಂಡನೆ

ಡೀಪ್‌ಫೇಕ್‌ ನಿಯಂತ್ರಣಕ್ಕೆ ಸೂಕ್ತ ಕಾನೂನು ರೂಪಿಸುವಂತೆ ಸಂಸದರೊಬ್ಬರು ಕೋರಿರುವ ಮಸೂದೆಯೊಂದು ಲೋಕಸಭೆಯಲ್ಲಿ ಮಂಡನೆಯಾಗಿದೆ.ಡೀಪ್‌ಫೇಕ್ ಮೊರೆಹೋಗುವವರಿಗೆ ಪೂರ್ವಾನುಮತಿ ಕಡ್ಡಾಯಗೊಳಿಸುವ ಮೂಲಕ ನಾಗರಿಕರ ಸುರಕ್ಷತೆ ಯನ್ನು ಖಚಿತಪಡಿಸುವ ಡೀಪ್‌ಫೇಕ್ ನಿಯಂತ್ರಣ ಮಸೂದೆಯನ್ನು ಶಿವಸೇನಾ ಸಂಸದ ಶ್ರೀಕಾಂತ್ ಶಿಂದೆ ಅವರು ಶುಕ್ರವಾರ ಮಂಡಿಸಿದರು. ‘ದೌರ್ಜನ್ಯ, ವಂಚನೆ ಮತ್ತು ಸುಳ್ಳುಸುದ್ದಿಗಳನ್ನು ಹರಡಲು ಡೀಪ್‌ಫೇಕ್‌ ದುರ್ಬಳಕೆ ಹೆಚ್ಚುತ್ತಿದೆ. ಅದನ್ನು ತಡೆಯಲು ಸೂಕ್ತ ಕಾನೂನು ರೂಪಿಸುವ ಅಗತ್ಯ ಇದೆ’ ಎಂದು ಹೇಳಿದರು.

ಪೀಠಿಕೆ: ‘ಜಾತ್ಯತೀತ’, ‘ಸಮಾಜವಾದ’ ತೆಗೆದುಹಾಕಿ

 ‘ದೇಶದ ಸಂವಿಧಾನದ ಪೀಠಿಕೆಯಲ್ಲಿ ‘ಜಾತ್ಯತೀತ’, ‘ಸಮಾಜವಾದ’ ಪದಗಳ ಅಗತ್ಯವಿಲ್ಲ. ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವ ವಿರೋಧಿ ನೀತಿ ವಿಧಾನದ ಅಡಿಯಲ್ಲಿ ಅವುಗಳನ್ನು ಸೇರಿಸಿದ್ದು, ಅವುಗಳನ್ನು ತೆಗೆದು ಹಾಕಬೇಕು’ ಎಂದು ಬಿಜೆಪಿಯ ರಾಜ್ಯಸಭಾ ಸಂಸದ ಭೀಮ್‌ ಸಿಂಗ್‌ ಅವರು ಖಾಸಗಿ ಮಸೂದೆ ಮಂಡಿಸಿದ್ದಾರೆ.

ಸಿಂಗ್‌ ಅವರು ‘ಸಂವಿಧಾನ (ತಿದ್ದುಪಡಿ) ಕಾಯ್ದೆ 2025’ ಅನ್ನು ರಾಜ್ಯಸಭೆಯಲ್ಲಿ ಶುಕ್ರವಾರ ಮಂಡಿಸಿದ್ದು, ಮೂಲ ಸಂವಿಧಾನದಲ್ಲಿ ಈ ಪದಗಳು ಇರಲಿಲ್ಲ. ಇದರಿಂದ ಗೊಂದಲ ಸೃಷ್ಟಿಯಾಗುತ್ತಿದೆ ಎಂದು ತಿಳಿಸಿದ್ದಾರೆ.

‘ಸಂವಿಧಾನದ ಪೀಠಿಕೆಯಿಂದ ಸಮಾಜವಾದ, ಜಾತ್ಯತೀತ ಪದಗಳನ್ನು ತೆಗೆದುಹಾಕಬೇಕು ಎಂದು ಖಾಸಗಿ ಮಸೂದೆಯನ್ನು ಮಂಡಿಸಿದ್ದೇನೆ. ಮೂಲ ಸಂವಿಧಾನ 1950ರಲ್ಲಿ ಜಾರಿಗೆ ಬಂದಿತ್ತು. ತುರ್ತು ‍ಪರಿಸ್ಥಿತಿಯ ವೇಳೆ ಸಂವಿಧಾನಕ್ಕೆ 42ನೇ ತಿದ್ದುಪಡಿ ತಂದು ಇಂದಿರಾ ಗಾಂಧಿ ಈ ಪದಗಳನ್ನು ಸೇರಿಸಿದರು. ಆ ವೇಳೆ ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯೇ ನಡೆದಿರಲಿಲ್ಲ’ ಎಂದಿದ್ದಾರೆ.

ಪ್ರಚಲಿತ ವಿದ್ಯಮಾನಗಳು: 4ನೇ ಡಿಸೆಂಬರ್ 2025

  • ಖಾತಾದಲ್ಲಿ ಯುಪಿಒಆರ್ಮಾಹಿತಿ: ಇಂಟಿಗ್ರೇಟೆಡ್ ವ್ಯವಸ್ಥೆ: ಮುನೀಶ್ಮೌದ್ಗಿಲ್

ಸಂದರ್ಭ: ಜಿಬಿಎ ವ್ಯಾಪ್ತಿಯಲ್ಲಿನ ಆಸ್ತಿಗಳ ಖಾತಾದಲ್ಲಿ ನಗರ ಆಸ್ತಿ ಮಾಲೀಕತ್ವದ ದಾಖಲೆಗಳನ್ನು (ಯುಪಿ ಒಆರ್‌) ಅಳವಡಿಸುವಇಂಟಿಗ್ರೇಟೆಡ್ ಖಾತಾ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ.

  • ನಗರ ಸಮೀಕ್ಷೆಯಲ್ಲಿ ಯುಪಿಒಆರ್‌ ನಲ್ಲಿ ಆಸ್ತಿ ನಕ್ಷೆಗಳು, ಡ್ರೋನ್ ಮೂಲಕ ಪಡೆದುಕೊಂಡ ಓವರ್-ವ್ಯೂ ಚಿತ್ರಗಳನ್ನು ಜಿಬಿಎ ನೀಡುತ್ತಿರುವ ಇ-ಖಾತಾ ವ್ಯವಸ್ಥೆ ಯೊಂದಿಗೆ ಸಂಯೋಜಿಸಲಾಗಿದೆ.
  • ನಗರದಲ್ಲಿ ಸುಮಾರು ಎರಡು ವರ್ಷ ಗಳಿಂದ ಯುಪಿಒಆರ್‌ ಯೋಜನೆಯಡಿ ನಿರ್ವಹಿಸಲಾಗಿರುವ ಕಾರ್ಯವನ್ನು ಇ-ಖಾತಾ ವ್ಯವಸ್ಥೆಗೆ ಸಂಯೋಜಿಸಲು ಕಂದಾಯ ಇಲಾಖೆ ಅಧಿಕಾರಿಗಳು ಮಾಡಿರುವ ಕಾರ್ಯ ಶ್ಲಾಘನೀಯ.
  • ಇ-ಖಾತಾದಲ್ಲಿರುವ ನಿಖರ ಜಿಪಿಎಸ್‌ ಮಾಹಿತಿ, ಯುಪಿಒಆರ್ ನಕ್ಷೆ ಮತ್ತು ಚಿತ್ರಗಳನ್ನು ಜೋಡಿಸುವುದು ಅತ್ಯಂತ ಪ್ರಮುಖವಾಗಿದೆ. ಈಗಾಗಲೇ ಸುಮಾರು ಒಂದು ಲಕ್ಷ ಸಂಯೋಜಿತ ಇ-ಖಾತಾಗಳನ್ನು ನೀಡಲಾಗಿದ್ದು, ಪ್ರತಿದಿನವೂ ಈ ಸಂಖ್ಯೆ ಮತ್ತಷ್ಟು ಹೆಚ್ಚಿಸಲು ಕ್ರಮವಹಿಸಲಾಗುವುದು.
  • ಜಿಬಿಎ ವ್ಯಾಪ್ತಿಯಲ್ಲಿ ಸುಮಾರು 9 ಲಕ್ಷ ಅಂತಿಮ ಇ-ಖಾತಾ ನೀಡಲಾಗಿದ್ದು, ಪ್ರತಿದಿನ ಸರಾಸರಿ 2,500 ಇ-ಖಾತಾಗಳನ್ನು ನೀಡಲಾಗುತ್ತಿದೆ. ಕಾಯುವ ಅವಧಿ ಸರಾಸರಿ ಎರಡು ದಿನ.

ಲಭ್ಯವಿರುವ ಮಾಹಿತಿ

l ಮಾಲೀಕರ ವಿವರ l ಆಸ್ತಿಯ ಎಲ್ಲ ವಿವರ

l ಆಸ್ತಿಯ ಚಿತ್ರ l ಮಾಲೀಕರ ಚಿತ್ರ

l ಆಸ್ತಿಯ ಜಿಪಿಎಸ್‌ ಅಂಕಿಗಳು l ಆಸ್ತಿಯ ಡಿಜಿಟಲ್ ಮ್ಯಾಪ್, ಸ್ಥಳದ ಚಿತ್ರ

l ಆಸ್ತಿಯ ತೆರಿಗೆ, ಬಳಕೆ ವಿವರ l ಬೆಸ್ಕಾಂ ಮೀಟರ್ ಸಂಖ್ಯೆ

l ಆಸ್ತಿ ಮಾಲೀಕತ್ವ ಪಡೆದಿರುವ ದಾಖಲೆ ಸಂಖ್ಯೆ

  • ವನ್ಯಜೀವಿ ಮಾನವ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್ ಆರಂಭ

ಸಂದರ್ಭ: ಸಿಬ್ಬಂದಿ ಕಾಡಿನಲ್ಲಿ ಎಷ್ಟು ಹೊತ್ತು ಗಸ್ತು ತಿರುಗುತ್ತಾರೆ ಎಂದು ಗಮನಿಸಲು ಗಸ್ತು ತಂತ್ರಾಂಶ ರೂಪಿಸಿದ್ದು, ಎಂ.ಸ್ಟ್ರೈಪ್ ಜೊತೆಗೆ ಜಾರಿಗೆ ಸೂಚಿಸಲಾಗಿದೆ.

  • ‘ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಯಲು ನಾಗರಹೊಳೆ, ಮಲೆಮಹದೇಶ್ವರ ಬೆಟ್ಟ, ಕಾಳಿ, ಮಡಿಕೇರಿ ವನ್ಯಧಾಮಗಳಲ್ಲಿ ಕಮಾಂಡ್ ಕೇಂದ್ರ ತೆರೆಯಲಾಗಿದೆ’.‘ಅರಣ್ಯದೊಳಗೆ ಗಸ್ತು ಹೆಚ್ಚಿಸಲು ಇದು ಸಹಕಾರಿ.
  • ಚಿಕ್ಕಮಗಳೂರು, ಬನ್ನೇರು ಘಟ್ಟ ರಾಷ್ಟ್ರೀಯ ಉದ್ಯಾನ, ಮೈಸೂರು ವಿಭಾಗ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ, ಹಾಸನ ವಲಯದಲ್ಲೂ ಸೆಂಟರ್ ತೆರೆಯಲಾಗುವುದು.
  • ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಕೇಂದ್ರವನ್ನು ಅಧಿವೇಶನದ ನಂತರ ಉದ್ಘಾಟಿಸಲಾಗುವುದು.
  • ‘ಈ ಕೇಂದ್ರದಲ್ಲಿ ಕೃತಕ ಬುದ್ಧಿಮತ್ತೆ ಕ್ಯಾಮೆರಾ, ಥರ್ಮಲ್ ಡ್ರೋನ್ ಕ್ಯಾಮೆರಾ, ಆಧುನಿಕ ತಂತ್ರಜ್ಞಾನ ಆಧಾರಿತ ಪರಿಕರಗಳು ಇರಲಿದ್ದು, ವನ್ಯಜೀವಿಗಳ ಚಲನವಲನದ ಬಗ್ಗೆ ನಿಗಾ ಇರಿಸಲಾಗುವುದು.
  • ಯಾವ ಗ್ರಾಮಗಳ ವನ್ಯಜೀವಿ ಬಳಿ ಬಂದಿವೆ ಎಂಬ ಅರಿತು ಕ್ರಮ ವಹಿಸಿ ಜೀವಹಾನಿ ತಡೆಯಬಹುದು.
  • ರಾಜ ಭವನಅಲ್ಲಲೋಕ ಭವನ

ಸಂದರ್ಭ: ಕೇಂದ್ರ ಗೃಹ ಸಚಿವಾಲಯದ ತೀರ್ಮಾನದಂತೆ ದೇಶದಾದ್ಯಂತ ಇರುವರಾಜ ಭವನಗಳ ಹೆಸರನ್ನುಲೋಕ ಭವನಎಂದು ಮರುನಾಮಕರಣ ಮಾಡಲಾಗಿದ್ದು, ‘ರಾಜ ಭವನ, ಕರ್ನಾಟಕಎನ್ನುವುದನ್ನುಲೋಕ ಭವನ, ಕರ್ನಾಟಕಎಂದು ಹೆಸರಿಸಲಾಗಿದೆ.

  • ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದಿರುವ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ‘ಹೆಸರು ಬದಲಾವಣೆಗೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಅನುಮೋದನೆ ನೀಡಿದ್ದಾರೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರಲಿದೆ.
  • ‘ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲ ಇಲಾಖೆಗಳು, ಸರ್ಕಾರಿ ಆದೇಶಗಳು, ಅಧಿಕೃತ ಪತ್ರ ವ್ಯವಹಾರಗಳು, ವೆಬ್‌ಸೈಟ್‌ ಹಾಗೂ ಫಲಕಗಳಲ್ಲಿ ‘ರಾಜ ಭವನ ಕರ್ನಾಟಕ’ ಬದಲು ‘ಲೋಕ ಭವನ ಕರ್ನಾಟಕ’ ಎಂದು ಬಳಸಬೇಕು.

ಬಡತನದ ಸುಳಿಯಲ್ಲಿ ಭಾರತದ ಮಕ್ಕಳು

  • ಕರ್ನಾಟಕದ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ

ಸಂದರ್ಭ: ಕರ್ನಾಟಕದಲ್ಲಿನ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ರಾಜ್ಯಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

  • ನವೆಂಬರ್‌ 25ರವರೆಗೆ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮವು (ಎನ್‌ಸಿಡಿಸಿ) ದೇಶದಲ್ಲಿನ ಸಹಕಾರ ಸಂಸ್ಥೆಗಳ ಅಭಿವೃದ್ಧಿಗೆ ₹4.67 ಲಕ್ಷ ಕೋಟಿ ಮಂಜೂರು ಮಾಡಿದೆ. ಈ ಪೈಕಿ ಕರ್ನಾಟಕದಲ್ಲಿನ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ ನೀಡಲಾಗಿದೆ ಎಂದು ಬುಧವಾರ ತಿಳಿಸಿದ್ದಾರೆ.
  • ರಾಷ್ಟ್ರೀಯ ಸಹಕಾರ ದತ್ತಾಂಶದ ಪ್ರಕಾರ, ಕರ್ನಾಟಕದಲ್ಲಿ 46,798 ಸಹಕಾರ ಸಂಘಗಳು ಇದ್ದು, ಅವು ಒಟ್ಟು 2.38 ಕೋಟಿ ಸದಸ್ಯರನ್ನು ಹೊಂದಿವೆ.
  • 2021ರಲ್ಲಿ ಕೇಂದ್ರ ಸಹಕಾರ ಸಚಿವಾಲಯ ಆರಂಭವಾಯಿತು. ಅಂದಿನಿಂದ ‘ಸಹಕಾರದಿಂದ ಸಮೃದ್ಧಿ’ ಗುರಿ ಸಾಧಿಸಲು ಮತ್ತು ಕರ್ನಾಟಕ ಸೇರಿದಂತೆ ದೇಶದ ಎಲ್ಲೆಡೆ ಹೈನುಗಾರಿಕೆ, ಸಕ್ಕರೆ ಮತ್ತು ಕೃಷಿ ಸಹಕಾರ ಸಂಘಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
  • ಪಾನ್ ಮಸಾಲಾ ಮೇಲೆ ಬೆಲೆ ನಮೂದು ಕಡ್ಡಾಯ

ಸಂದರ್ಭ: ಪಾನ್ಮಸಾಲಾ ಪೊಟ್ಟಣಗಳ ಮೇಲೆ ಚಿಲ್ಲರೆ ಮಾರಾಟ ದರವನ್ನು (ಆರ್ಎಸ್ಪಿ) ನಮೂದು ಮಾಡುವುದು ಕಡ್ಡಾಯ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯವು ಹೇಳಿದೆ.

  • ಪೊಟ್ಟಣಗಳ ಗಾತ್ರ ಯಾವುದೇ ಇರಲಿ, ಅದರಲ್ಲಿ ಇರುವ ಉತ್ಪನ್ನದ ತೂಕ ಎಷ್ಟೇ ಇರಲಿ, ಆರ್‌ಎಸ್‌ಪಿ ಹಾಗೂ ‘ಕಾನೂನು ಮಾಪನಶಾಸ್ತ್ರ (ಪೊಟ್ಟಣದಲ್ಲಿನ ಸರಕುಗಳು) ನಿಯಮ–2011’ರ ಅಡಿಯಲ್ಲಿ ಹೇಳಿರುವ ಸಂಗತಿಗಳನ್ನು ನಮೂದು ಮಾಡುವುದು ಕಡ್ಡಾಯ ಎಂದು ಇಲಾಖೆಯು ಸ್ಪಷ್ಟಪಡಿಸಿದೆ.
  • ಈ ಆದೇಶ ಫೆಬ್ರುವರಿ 1ರಿಂದ ಅನ್ವಯ ವಾಗಲಿದೆ. 10 ಗ್ರಾಂ ಹಾಗೂ ಅದ ಕ್ಕಿಂತ ಕಡಿಮೆ ತೂಕದ ಪೊಟ್ಟಣ ಗಳಲ್ಲಿ ಕೆಲವು ವಿವರಗಳನ್ನು ನೀಡುವ ಅಗತ್ಯ ಇಲ್ಲ ಎಂದು ಈ ಹಿಂದೆ ವಿನಾಯಿತಿ ನೀಡಲಾಗಿತ್ತು. ಆದರೆ ಈಗಿನ ಆದೇ ಶವು ವಿನಾಯಿತಿಗಳನ್ನು ಇಲ್ಲವಾಗಿಸಲಿದೆ.
  • ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕ ಮಸೂದೆಗೆ ಅನುಮೋದನೆ

ಸಂದರ್ಭ: ತಂಬಾಕು ಮತ್ತು ಅದಕ್ಕೆ ಸಂಬಂಧಿಸಿದ ಉತ್ಪನ್ನಗಳ ಮೇಲೆ ಹೆಚ್ಚಿನ ಅಬಕಾರಿ ಸುಂಕ ವಿಧಿಸುವ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ.

  • ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ– 2025 ಅನ್ನು ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
  • ಪ್ರಸ್ತುತ ಜಾರಿಯಲ್ಲಿರುವ ತೆರಿಗೆ ಪರಿಹಾರದ ಸ್ವರೂಪವು 2026ರ ಮಾರ್ಚ್‌ ವೇಳೆಗೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಈ ಮಸೂದೆ ಜಾರಿಗೆ ಬಂದ ನಂತರ ಸಿಗರೇಟ್‌, ಜಗಿಯುವ ತಂಬಾಕು, ಸಿಗಾರ್‌, ಹುಕ್ಕಾ, ಜರ್ದಾ ಮತ್ತು ಪರಿಮಳಯುಕ್ತ ತಂಬಾಕಿನಂತಹ ಎಲ್ಲ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಗರಿಷ್ಠ ಮಟ್ಟದಲ್ಲೇ ಮುಂದುವರಿಸಲು ಅವಕಾಶ ಸಿಗುತ್ತದೆ.
  • ಪ್ರಸ್ತುತ, ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲೆ ಶೇ 28ರಷ್ಟು ಜಿಎಸ್‌ಟಿ ಜೊತೆಗೆ ವಿವಿಧ ತೆರಿಗೆ ವಿಧಿಸಲಾಗುತ್ತಿದೆ.
  • ಈ ಮಸೂದೆಯು, ತಯಾರಿಸದ ತಂಬಾಕಿನ ಮೇಲೆ ಶೇ 60–70ರಷ್ಟು ಅಬಕಾರಿ ಸುಂಕ ವಿಧಿಸಲು ಪ್ರಸ್ತಾಪಿಸುತ್ತದೆ. ಸಿಗಾರ್‌ ಮತ್ತು ಚುಟ್ಟ ಮೇಲಿನ ಅಬಕಾರಿ ಸುಂಕವು ಶೇ 25ರಷ್ಟು ಅಥವಾ ಒಂದು ಸಾವಿರ ಸಿಗಾರ್‌ ಮೇಲೆ ₹5 ಸಾವಿರ ಯಾವುದು ಹೆಚ್ಚೋ ಅದನ್ನು ಪ್ರಸ್ತಾಪಿಸಲಾಗಿದೆ.
  • ಉದ್ದವಿರುವ ಹಾಗೂ ಫಿಲ್ಟರ್‌ ಆಧರಿಸಿ ಒಂದು ಸಾವಿರ ಸಿಗರೇಟ್‌ ಮೇಲೆ ₹2,700ರಿಂದ ₹11 ಸಾವಿರವರೆಗೆ ತೆರಿಗೆ ವಿಧಿಸಲು ಪ್ರಸ್ತಾಪಿಸಲಾಗಿದೆ. ಆದರೆ, ಜಗಿಯುವ ತಂಬಾಕಿಗೆ ಪ್ರತಿ ಕೆ.ಜಿಗೆ ₹100ವರೆಗೆ ತೆರಿಗೆ ವಿಧಿಸಲಾಗುತ್ತದೆ.

ಪ್ರಚಲಿತ ವಿದ್ಯಮಾನಗಳು: 3ನೇ ಡಿಸೆಂಬರ್ 2025

  • ಋತುಚಕ್ರ ರಜೆ: ಹೊರಬಿದ್ದ ಆದೇಶ

ಸಂದರ್ಭ: ರಾಜ್ಯ ಸರ್ಕಾರದ ಮಹಿಳಾ ನೌಕರರಿಗೆ ತಕ್ಷಣದಿಂದಲೇ ಜಾರಿಯಾಗುವಂತೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

  • ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ.
  • ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಋತುಚಕ್ರ ರಜೆ ಪಡೆಯಬಹುದು.
  • ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಸಕ್ಷಮಪ್ರಾಧಿಕಾರವೇ ಈ ರಜೆಯನ್ನೂ ಮಂಜೂರು ಮಾಡಬಹುದಾಗಿದೆ.
  • ಈ ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ನೀಡಬೇಕಿಲ್ಲ.
  • ಜತೆಗೆ ಈ ರಜೆಯನ್ನು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸಬೇಕು.
  • ರಾಜ್ಯದಲ್ಲಿ ನಾನಾ ಕಾರ್ಮಿಕ ಕಾಯಿದೆಯಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು, ಸಂಸ್ಥೆಗಳಲ್ಲಿಕಾರ್ಯ ನಿರ್ವಹಿಸುತ್ತಿರುವ 18ರಿಂದ 52 ವರ್ಷ ವಯೋಮಿತಿಯ ಎಲ್ಲ ಕಾಯಂ, ಗುತ್ತಿಗೆ, ಹೊರ ಗುತ್ತಿಗೆ ಮಹಿಳಾ ನೌಕರರಿಗೆ ಋುತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದರಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆ ಸೌಲಭ್ಯ .
  • ಸರ್ಕಾರಿ ಕಾಯಂ, ಗುತ್ತಿಗೆ, ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಮತ್ತು ಸಂಸ್ಥೆಗಳಲ್ಲಿ ದುಡಿಯುವ ಮಹಿಳಾ ನೌಕರರು, ಹೊರಗುತ್ತಿಗೆ ವಲಯಗಳಲ್ಲಿ ದುಡಿಯುವ ಮಹಿಳಾ ಉದ್ಯೋಗಿಗಳಿಗೂ ಈ ರಜೆ ಸೌಲಭ್ಯ ಅನ್ವಯವಾಗಲಿದೆ.
  • ರಫ್ತು ಕೇಂದ್ರವಾಗಿ ದಕ್ಷಿಣ ಕನ್ನಡ
  • ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವಾಗಿ ಘೋಷಿಸಲಾಗಿದೆ.
  • ಸಮುದ್ರ ಆಹಾರಗಳು, ಗೋಡಂಬಿಯನ್ನು ಸಂಭಾವ್ಯ ರಫ್ತು ಉತ್ಪನ್ನಗಳಾಗಿ ಸೇರಿಸಲಾಗಿದೆ.
  • ಜಿಲ್ಲೆಗಳು ರಫ್ತು ಕೇಂದ್ರಗಳಾಗಿ (DEH) ಉಪಕ್ರಮದಡಿಯಲ್ಲಿ, ದಕ್ಷಿಣ ಕನ್ನಡವನ್ನು ಅಧಿಕೃತವಾಗಿ ರಫ್ತು ತಾಣವೆಂದು ಗುರುತಿಸಲಾಗಿದೆ. ಈ ಮಾನ್ಯತೆಯು ಸುಸ್ಥಿರ ಆರ್ಥಿಕ ಅಭಿವೃದ್ಧಿಯತ್ತ ಜಿಲ್ಲೆಯ ನಿರಂತರ ಪ್ರಯತ್ನಗಳತ್ತ ಗಮನ ಸೆಳೆದಿದೆ.

ಡಿಜಿಟಲ್‌ ಇ–ಸ್ಟ್ಯಾಂಪ್‌ ಕಾಗದರಹಿತ ನೋಂದಣಿಯತ್ತ ಹೆಜ್ಜೆ

  • ಕೇಂದ್ರದಿಂದ ಭಾರತ್ಟ್ಯಾಕ್ಸಿ ಆ್ಯಪ್

ಸಂದರ್ಭ: ಸಹಕಾರ ವ್ಯವಸ್ಥೆಯ ಅಡಿಯಲ್ಲಿ ಕೆಲಸ ನಿರ್ವಹಿ ಸುವಭಾರತ್ಟ್ಯಾಕ್ಸಿಆ್ಯಪ್ಅನ್ನು ಆರಂಭಿಸುವ ಆಲೋಚನೆಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

  • ಈ ಆ್ಯಪ್ ಕಾರ್ಯರೂಪಕ್ಕೆ ಬಂದ ನಂತರದಲ್ಲಿ ವಾಣಿಜ್ಯ ಬಳಕೆಯ ವಾಹನ ಗಳ ಚಾಲಕರು ಖಾಸಗಿ ಕಂಪನಿಗಳ ಮೇಲೆ ಅವಲಂಬಿತರಾಗುವುದು ಇನ್ನಿಲ್ಲವಾಗಲಿದೆ ಎಂಬುದು ಸರ್ಕಾರದ ಲೆಕ್ಕಾಚಾರ.
  • ‘ಭಾರತ್ ಟ್ಯಾಕ್ಸಿ’ ಆ್ಯಪ್‌ಅನ್ನು ಸಹಕಾರ ಟ್ಯಾಕ್ಸಿ ಕೋ–ಆಪರೇಟಿವ್‌ ಲಿಮಿಟೆಡ್‌ ನಿರ್ವಹಿಸಲಿದೆ. ಇದು ಬಹುರಾಜ್ಯ ಸಹಕಾರ ಸಂಸ್ಥೆಯಾಗಿದೆ.
  • ಟ್ಯಾಕ್ಸಿ ಸೇವೆಯನ್ನು ಈ ಆ್ಯಪ್‌ ಮೂಲಕ ಪಡೆದುಕೊಳ್ಳುವುದು ಗ್ರಾಹಕಸ್ನೇಹಿ ಆಗಿರಲಿದೆ. ಸೇವೆಗಳಿಗೆ ಬೆಲೆ ನಿಗದಿಯು ಪಾರದರ್ಶಕವಾಗಿ ಇರಲಿದೆ.
  • ಈ ಆ್ಯಪ್‌ನ ಬಳಕೆಗೆ ಕಮಿಷನ್ ನೀಡುವ ಪ್ರಮೇಯ ಇರುವುದಿಲ್ಲ. ಹೀಗಾಗಿ ಚಾಲಕರಿಗೆ ಪ್ರತಿ ಬಾರಿಯೂ ಪೂರ್ಣ ಮೊತ್ತ ‍ಪಾವತಿ ಆಗುತ್ತದೆ.
  • ಸಹಕಾರ ಸಂಘ ಪ‍ಡೆಯುವ ಲಾಭವನ್ನು ಚಾಲಕರಿಗೆ ನೇರವಾಗಿ ಹಂಚಿಕೆ ಮಾಡಲಾಗುತ್ತದೆ.
  • ಪಾರದರ್ಶಕ ಬೆಲೆ ನಿಗದಿ ವ್ಯವಸ್ಥೆಯು ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಲಾಭದಾಯಕ ಆಗಲಿದೆ.
  • ಭಾರತ್‌ ಟ್ಯಾಕ್ಸಿ ಆ್ಯಪ್‌ ತನ್ನ ‍ಪ್ರಾಯೋಗಿಕ ಕಾರ್ಯಾಚರಣೆಯನ್ನು ದೆಹಲಿಯಲ್ಲಿ ಆರಂಭಿಸಿದೆ.
  • ಈಗ ಈ ಆ್ಯಪ್‌ನಲ್ಲಿ 51 ಸಾವಿರಕ್ಕೂ ಹೆಚ್ಚು ಚಾಲಕರು ನೋಂದಾಯಿಸಿಕೊಂಡಿದ್ದಾರೆ.
  • ಎರಡು ಹಂತದಲ್ಲಿ ಜನಗಣತಿ– 2027’

ಸಂದರ್ಭ: 2027 ಜನಗಣತಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ ರಚಿಸಲಾಗುತ್ತಿದ್ದು, ರಿಜಿಸ್ಟ್ರಾರ್ಜನರಲ್ಹಾಗೂ ಜನಗಣತಿ ಆಯುಕ್ತರು ಪ್ರಶ್ನೆಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಯಲ್ಲಿ ತೊಡಗಿದ್ದಾರೆ. ಜನಗಣತಿ ಸಂದರ್ಭದಲ್ಲೇ ಜಾತಿಗಣತಿಯನ್ನೂ ನಡೆಸಲಾಗುತ್ತದೆ.

  • ಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ, ಮನೆಗಣತಿಯನ್ನು 2026ರ ಏಪ್ರಿಲ್‌ 1ರಿಂದ ಸೆಪ್ಟೆಂಬರ್‌ 30ರ ಅವಧಿಯಲ್ಲಿ ನಡೆಯಲಿದೆ.
  • ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನುಕೂಲವಾಗುವಂತೆ 30 ದಿನಗಳೊಳಗೆ ಈ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.
  • ಜತೆಗೆ ಎರಡನೇ ಹಂತದಲ್ಲಿ 2027ರ ಫೆಬ್ರುವರಿಯಲ್ಲಿ ಜನಗಣತಿಯನ್ನು ಆರಂಭಿಸಲಾಗುತ್ತದೆ.

ಪ್ರಚಲಿತ ವಿದ್ಯಮಾನಗಳು: 2ನೇ ಡಿಸೆಂಬರ್ 2025

  • ಮೊಬೈಲ್ನಲ್ಲಿಸಂಚಾರ ಸಾಥಿಆ್ಯಪ್ಅಳವಡಿಕೆ ಕಡ್ಡಾಯ

ಸಂದರ್ಭ: ಅನ್ಯರ ಆಧಾರ್ಕಾರ್ಡ್ ಬಳಸಿ ಅಕ್ರಮವಾಗಿ ಸಿಮ್ಖರೀದಿಸುವುದು, ಮೊಬೈಲ್ಕಳ್ಳತನ ಆಗುವುದು, ‍ಪ್ರತಿ ಮೊಬೈಲ್ಗೂ ನೀಡಲಾಗುವ ಅಂತರರಾಷ್ಟ್ರೀಯ ಮೊಬೈಲ್ಗುರುತಿನ ಸಂಖ್ಯೆ (ಐಎಂಇಐ) ನಕಲು ಮಾಡುವುದು ಸೇರಿದಂತೆ ಹಲವು ವಂಚನೆಗಳಿಂದ ಜನರನ್ನು ರಕ್ಷಿಸುವ ಸಲುವಾಗಿ ಎಲ್ಲ ಮೊಬೈಲ್ಗಳಲ್ಲಿಯೂಸಂಚಾರ ಸಾಥಿಆ್ಯಪ್ಅಳವಡಿಕೆ (ಇನ್ಸ್ಟಾಲ್) ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.

ಈ ಸಂಬಂಧ ಭಾರತದ ಎಲ್ಲ ಮೊಬೈಲ್‌ ತಯಾರಕರಿಗೆ, ಮೊಬೈಲ್‌ ಸೆಟ್‌ಗಳನ್ನು ಆಮದು ಮಾಡಿಕೊಳ್ಳುವ ಕಂಪನಿಗಳಿಗೆ ದೂರಸಂಪರ್ಕ ಸಚಿವಾಲಯವು ನ.28ರಂದು ಕೆಲವು ನಿರ್ದೇಶನಗಳನ್ನು ನೀಡಿ ಆದೇಶ ಹೊರಡಿಸಿದೆ.

  • ‘ಭಾರತದಲ್ಲಿ ತಯಾರಾಗುವ ಅಥವಾ ಆಮದು ಮಾಡಿಕೊಳ್ಳಲಾಗುವ ಎಲ್ಲ ಮೊಬೈಲ್‌ ಗಳಲ್ಲಿಯೂ ‘ಸಂಚಾರ ಸಾಥಿ’ ಆ್ಯಪ್‌ ಅನ್ನು ಮೊದಲೇ ಇನ್‌ಸ್ಟಾಲ್‌ ಮಾಡಿರಬೇಕು. ಈಗಾಗಲೇ ಮಾರುಕಟ್ಟೆಯಲ್ಲಿರುವ (ಇನ್ನೂ ಖರೀದಿಯಾಗದ) ಮೊಬೈಲ್‌ಗಳಲ್ಲಿ ಮೊದಲ ಸಾಫ್ಟ್‌ವೇರ್‌ ಅಪ್‌ಡೇಟ್‌ ವೇಳೆ ಈ ಆ್ಯಪ್‌ ಅನ್ನು ಬಳಕೆದಾರರಿಗೆ ನೀಡಬೇಕು’ ಎಂದು ಸಚಿವಾಲಯ ಹೇಳಿದೆ.
  • ‘ಈ ಆ್ಯಪ್‌ ಅನ್ನು ಮೊದಲೇ ‘ಇನ್‌ಸ್ಟಾಲ್‌’ ಮಾಡಿರುವ ಹೊಸ ಮೊಬೈಲ್‌ಗಳನ್ನು ‘ಸೆಟ್ಟಿಂಗ್‌’ ಮಾಡಿಕೊಳ್ಳುವಾಗಲೇ ಬಳಕೆದಾರರಿಗೆ ಈ ಆ್ಯಪ್‌ ಇರುವುದು ಸುಲಭವಾಗಿ ಕಾಣುವಂತೆ ಮಾಡಬೇಕು. ಈ ಆ್ಯಪ್‌ನ ಕಾರ್ಯಾಚರಣೆಯನ್ನು ಡಿಸೇಬಲ್‌ ಮಾಡುವುದಾಗಲೀ ಅಥವಾ ನಿರ್ಬಂಧಿಸುವುದಾಗಲೀ ಮಾಡುವಂತಿಲ್ಲ’ ಎಂದು ಆದೇಶದಲ್ಲಿ ಹೇಳಲಾಗಿದೆ.
  • ‘ತಯಾರಿಕಾ ಕಂಪನಿಗಳು ಮತ್ತು ಮೊಬೈಲ್‌ಗಳನ್ನು ಆಮದು ಮಾಡಿಕೊಳ್ಳುವ ಕಂಪನಿಗಳು ಆದೇಶ ಪ್ರಕಟವಾದ 120 ದಿನಗಳ ಒಳಗೆ ಆ್ಯಪ್‌ ಇನ್‌ಸ್ಟಾಲ್‌ ಆದ ಕುರಿತು ವರದಿ ನೀಡಬೇಕು’ ಎಂದೂ ಹೇಳಿದೆ.
  • ಆದೇಶ ಪಾಲಿಸದಿದ್ದರೆ ಕ್ರಮ: ಈ ಆದೇಶವನ್ನು ಪಾಲಿಸದಿದ್ದರೆ ದೂರಸಂಪರ್ಕ ಕಾಯ್ದೆ –2023 ಮತ್ತು ದೂರಸಂಪರ್ಕ ಸೈಬರ್ಭದ್ರತಾ ನಿಯಮಗಳು – 2024 ಮತ್ತು ಇತರೆ ಕಾಯ್ದೆಗಳ ಅನ್ವಯ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.
  • ಇಂದಿರಾ ಕಿಟ್ಗೆ ಕ್ಯೂಆರ್ ಕೋಡ್

ಸಂದರ್ಭ: ‘ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿಯೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶ ಅಳವಡಿಸಿ, ಅದರ ಆಧಾರದಲ್ಲಿ ಪಡಿತರ ಚೀಟಿದಾರರಿಗೆಇಂದಿರಾಆಹಾರ ಕಿಟ್ ವಿತರಿಸಲು ಕ್ರಮ ತೆಗೆದುಕೊಳ್ಳಬೇಕುಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

  • ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕಿಲೋ ಅಕ್ಕಿಯ ಬದಲುಇಂದಿರಾ’ (ಐಎನ್ಡಿಐ ಆರ್ಇಂಟೆಗ್ರೇಟೆಡ್ನ್ಯೂಟ್ರಿಷಿಯನ್ಆ್ಯಂಡ್ ಡಯೆಟರಿ ಇನಿಷಿಯೇಟಿವ್ ಫಾರ್ ರಿವೈಟಲೈಷಿಂಗ್ ಅನ್ನಭಾಗ್ಯ ಬೆನಿಫಿಷರೀಸ್‌– ಅನ್ನಭಾಗ್ಯ ಫಲಾನುಭವಿ ಗಳನ್ನು ಪುನರುಜ್ಜೀವನಗೊಳಿಸುವ ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಆಹಾರ ಕಿಟ್ ಯೋಜನೆಯ ಅನುಷ್ಠಾನದ ಕುರಿತು ಮುಖ್ಯಮಂತ್ರಿ ಸಭೆ ನಡೆಸಿದರು.
  • ‘ಕಿಟ್‌ನಲ್ಲಿ ಉತ್ತಮ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಪೂರೈಸಬೇಕು. ಗುಣಮಟ್ಟದಲ್ಲಿ ರಾಜಿ ಆಗಬಾರದು. ಅಳತೆಯಲ್ಲಿ ಹೆಚ್ಚು ಕಡಿಮೆ ಆಗದಂತೆಯೂ ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದರು.
  • ಎಲ್ಕೆಜಿ ಮಕ್ಕಳಿಗೂ ಮಧ್ಯಾಹ್ನದ ಬಿಸಿಯೂಟ

ಸಂದರ್ಭ: ಸರ್ಕಾರಿ ಶಾಲೆಗಳಲ್ಲಿ ಆರಂಭವಾಗಿರುವ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ.

  • 2019–20ನೇ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ವಿಭಾಗಗಳನ್ನು ಆರಂಭಿಸಲಾಗಿತ್ತು. ಆದರೆ, ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ ಆಗಿರಲಿಲ್ಲ.
  • ಪ್ರಧಾನಮಂತ್ರಿ ಪೋಷಣ್ಶಕ್ತಿ ಅಭಿಯಾನದ ಅನುಮೋದನಾ ಮಂಡಳಿ ಸಭೆಯ ನಿರ್ಧಾರದಂತೆ ಡಿ.1ರಿಂದ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳಿಗೂ ವಿಸ್ತರಿಸಲಾಗಿದೆ.
  • ಪ್ರತಿ ಮಗುವಿಗೆ ಪ್ರತಿದಿನ ಕೇಂದ್ರ ಸರ್ಕಾರ ₹4.07, ರಾಜ್ಯ ಸರ್ಕಾರ ₹2.71 ವೆಚ್ಚ ಮಾಡಲಿವೆ. ಒಟ್ಟು ಆಹಾರ ತಯಾರಿ ವೆಚ್ಚ ₹6.78 ನಿಗದಿ ಮಾಡಲಾಗಿದೆ. ಅದಲ್ಲದೆ, ವಾರದಲ್ಲಿ ನಾಲ್ಕು ದಿನ ಮೊಟ್ಟೆ ಖರೀದಿಗೆ ಅಜೀಂ ಪ್ರೇಮ್ಜಿ ಫೌಂಡೇಶನ್ಹಣಕಾಸಿನ ಸಹಾಯ ಮಾಡಲಿದೆ. ಉಳಿದ ಎರಡು ದಿನಗಳ ವೆಚ್ಚವನ್ನು ಶಾಲಾ ಶಿಕ್ಷಣ ಇಲಾಖೆ ಭರಿಸುತ್ತದೆ.
  • ರಾಜ್ಯದಲ್ಲಿಡಿಜಿಟಲ್ಸ್ಟ್ಯಾಂಪ್‌’ಜಾರಿ: ಸ್ಟ್ಯಾಂಪ್ ವಂಚನೆ, ಭದ್ರತಾ ಲೋಪ ತಡೆಗೆ ಕಂದಾಯ ಇಲಾಖೆ ಹೊಸ ವ್ಯವಸ್ಥೆ

ಸಂದರ್ಭ: ಹೊಸ ವ್ಯವಸ್ಥೆಯಲ್ಲಿ ನಾಗರಿಕರು ಆಧಾರ್ ಆಧಾರಿತ ಸಹಿ ಅಥವಾ ಡಿಜಿಟಲ್ ಸಿಗ್ನೇಚರ್ ಸರ್ಟಿಫಿಕೇಟ್ (ಡಿಎಸ್ಸಿ) ಬಳಸಿ ದಸ್ತಾವೇಜುಗಳಿಗೆ ಡಿಜಿಟಲ್ ಸಹಿ ಮಾಡಬಹುದು, ಕಂದಾಯ ಸಚಿವ.

ನೋಂದಣಿ ಮತ್ತು ನೋಂದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಬಳಸುವ ‘ಇ– ಸ್ಟ್ಯಾಂಪ್‌’ ಬದಲಿಗೆ ‘ಡಿಜಿಟಲ್‌ ಇ– ಸ್ಟ್ಯಾಂಪ್‌’ ವ್ಯವಸ್ಥೆಯನ್ನು ಕಂದಾಯ ಇಲಾಖೆ ಜಾರಿಗೆ ತಂದಿದೆ.

  • ‘ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಲೋಪವನ್ನು ಸಂಪೂರ್ಣ ತೊಡೆದು ಹಾಕಲು ಈ ಹೊಸ ವ್ಯವಸ್ಥೆ ಪರಿಚಯಿಸಲಾಗಿದೆ. ಈ ವ್ಯವಸ್ಥೆಗೆ ಅಗತ್ಯವಾದ ನಿಯಮಗಳನ್ನು ಪ್ರಕಟಿಸಲಾಗಿದ್ದು, ಮುಂದಿನ ದಿನಗಳಲ್ಲಿ ‘ಡಿಜಿಟಲ್ ಇ-ಸ್ಟ್ಯಾಂಪ್‌’ ಕಡ್ಡಾಯಗೊಳಿಸಲಾಗುವುದು’.
  • ‘ನಾಗರಿಕರು ಮಧ್ಯವರ್ತಿಗಳ ನೆರವಿಲ್ಲದೆ, ಮನೆಯಲ್ಲಿಯೇ ಕುಳಿತು ‘ಡಿಜಿಟಲ್‌ ಇ– ಸ್ಟ್ಯಾಂಪ್‌’ ತಯಾರಿಸಿಕೊಳ್ಳಬಹುದು. ಇಂಟರ್‌ನೆಟ್‌ ಇದ್ದರೆ 24×7 ಜಗತ್ತಿನಲ್ಲಿ ಎಲ್ಲಿಯೇ ಕುಳಿತು ಈ ಸೇವೆಯನ್ನು ಪಡೆಯಬಹುದು. ಎಲ್ಲ ಸೇವೆಗಳು ಸಂಪೂರ್ಣ ಡಿಜಿಟಲ್ ಆಗಿರಲಿದೆ. ಸುರಕ್ಷಿತ ಮತ್ತು ವೇಗವಾಗಿ ಆನ್‌ಲೈನ್‌ ಪಾವತಿ ಮಾಡಲು ಕೂಡಾ ಅವಕಾಶವಿದೆ’.
  • ‘ಹಿಂದೆ ಛಾಪಾ ಕಾಗದಗಳನ್ನು ಮುದ್ರಿಸಲಾಗುತ್ತಿತ್ತು. ನಕಲಿ ಹಾಗೂ ಛಾಪಾ ಕಾಗದಗಳ ಮರುಬಳಕೆಯ ವಂಚನೆ ತೆಲಗಿ ಹಗರಣದಿಂದ ಬಹಿರಂಗವಾಗಿತ್ತು. ಅದನ್ನು ತಡೆಯಲು ಭೌತಿಕ ಸ್ಟಾಂಪ್ ಕಾಗದಗಳ ಬಳಕೆ ನಿಲ್ಲಿಸಿ, ‘ಇ-ಸ್ಟ್ಯಾಂಪ್’ ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು.
  • ‘ಸ್ಟಾಕ್‌ ಹೋಲ್ಡಿಂಗ್ ಕಾರ್ಪೊರೇಷನ್‌ ಲಿಮಿಟೆಡ್‌ (ಎಸ್‌ಎಚ್‌ಸಿಐಎಲ್‌) ಸಹಯೋಗದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಇ– ಸ್ಟ್ಯಾಂಪ್‌’ ಕಾಗದವನ್ನು ಮುದ್ರಿಸುತ್ತಿದೆ. ಆದರೆ, ಝೆರಾಕ್ಸ್‌ ಯಂತ್ರಗಳ ಮೂಲಕ ಇ-ಸ್ಟ್ಯಾಂಪ್ ಪ್ರಮಾಣಪತ್ರಗಳನ್ನು ನಕಲು ಅಥವಾ ಅವುಗಳಂತೆಯೇ ಕಾಣುವ ಪ್ರತಿಗಳನ್ನು ಸೃಷ್ಟಿಸಲು ಸಾಧ್ಯವಾಗಿತ್ತು. ಇದರಿಂದ ಮೂಲ ಹಾಗೂ ನಕಲಿ ಯಾವುದೆಂದು ಪತ್ತೆ ಮಾಡುವುದೇ ಸವಾಲಾಗಿದೆ.  ಒಂದು ಉದ್ದೇಶಕ್ಕೆ ಖರೀದಿಸಿದ ಸ್ಟ್ಯಾಂಪ್‌ ಕಾಗದವನ್ನು ಬೇರೆ ರೀತಿಯ ದಸ್ತಾವೇಜಿಗೆ ಬಳಸುವ ಪ್ರಸಂಗಗಳೂ ನಡೆದಿವೆ. ನಕಲಿ, ನಕಲು ಪ್ರತಿ ಹಾಗೂ ತಪ್ಪು ವರ್ಗೀಕರಣದಿಂದ ಸರ್ಕಾರಕ್ಕೆ ಸೇರುವ ಸ್ಟ್ಯಾಂಪ್ ಶುಲ್ಕ ತಪ್ಪಿಸಿದ ಹಲವು ಘಟನೆಗಳೂ ನಡೆದಿವೆ.
  • ‘ಡಿಜಿಟಲ್‌ ಇ– ಸ್ಟ್ಯಾಂಪ್‌ ವ್ಯವಸ್ಥೆ ಎಲ್ಲ ರೀತಿಯಲ್ಲೂ ಸುರಕ್ಷಿತವಾಗಿ ಇರಲಿದೆ. ಹೊಸ ವ್ಯವಸ್ಥೆ ಜಾರಿಯಿಂದ ಇ-ಸ್ಟ್ಯಾಂಪ್‌ ವಿತರಣೆಗಾಗಿ ಎಸ್‌ಎಚ್‌ಸಿಐಎಲ್‌ಗೆ ಸರ್ಕಾರ ನೀಡುವ ಕಮಿಷನ್‌ ಮೊತ್ತ ಉಳಿತಾಯ ಆಗಲಿದೆ’.
  • ನಾಲ್ಕು ಕಾರ್ಮಿಕ ಸಂಹಿತೆಗಳು ಹೊಸ ನಿಯಮಗಳಲ್ಲೇನಿದೆ?

ಸಂದರ್ಭ: ಕೇಂದ್ರ ಸರ್ಕಾರವು ಕಾರ್ಮಿಕ ಕಲ್ಯಾಣದ ದೃಷ್ಟಿಯಿಂದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರೂಪಿಸಿದೆ. ವೇತನ ಸಂಹಿತೆ (2019), ಕೈಗಾರಿಕಾ ಸಂಪರ್ಕ ಸಂಹಿತೆ (2020), ಸಾಮಾಜಿಕ ಭದ್ರತಾ ಸಂಹಿತೆ (2020), ಉದ್ಯೋಗ ಭದ್ರತೆ, ಆರೋಗ್ಯ ಮತ್ತು ಕೆಲಸದ ಸ್ಥಿತಿಗತಿಗಳ ಸಂಹಿತೆ (2020) ಜಾರಿಗೆ ಬಂದಿದ್ದು, ಕಾರ್ಮಿಕರ ಜೀವನ ಮಟ್ಟವನ್ನು ಸುಧಾರಿಸುವ ದಿಸೆಯಲ್ಲಿ ಇವುಗಳನ್ನು ರೂಪಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರತಿಪಾದಿಸಿದೆ.

  • ಇದುವರೆಗೂ ಅಸ್ತಿತ್ವದಲ್ಲಿದ್ದ 29 ಕಾರ್ಮಿಕ ಕಾನೂನುಗಳನ್ನು ಪರಾಮರ್ಶಿಸಿ, ನಿಯಮಾವಳಿಗಳನ್ನು ಆಧುನೀಕರಿಸಿ ಹೊಸ ಸಂಹಿತೆಗಳನ್ನು ರೂಪಿಸಲಾಗಿದೆ.
  • ಪ್ರಗತಿ ಪಥದಲ್ಲಿ ಸಾಗುತ್ತಿರುವ ದೇಶದ ಉದ್ಯಮ ರಂಗಕ್ಕೆ ತಕ್ಕಂತೆ ಕಾರ್ಮಿಕ ವ್ಯವಸ್ಥೆಯನ್ನು ಸಜ್ಜುಗೊಳಿಸುವ ಆಶಯ ಇವುಗಳ ಹಿಂದಿದೆ ಎಂದು ಕೇಂದ್ರವು ಹೇಳಿದೆ.

ಹೊಸ ಕಾರ್ಮಿಕ ಸಂಹಿತೆಗಳ ಅಗತ್ಯವೇನು?

  • ಭಾರತದಲ್ಲಿ ಅಸ್ತಿತ್ವದಲ್ಲಿದ್ದ ಬಹುತೇಕ ಕಾರ್ಮಿಕ ಕಾನೂನುಗಳು ಸ್ವಾತಂತ್ರ್ಯಪೂರ್ವದಲ್ಲಿ ಮತ್ತು ದೇಶದಲ್ಲಿ ಉದ್ಯಮಗಳು ಆರಂಭವಾಗುತ್ತಿದ್ದ ಹಂತದಲ್ಲಿ ರೂಪಿಸಿದಂಥವು.
  • ಜಗತ್ತಿನ ಮುಂದುವರಿದ ಆರ್ಥಿಕತೆಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಕಾರ್ಮಿಕ ಕಾನೂನುಗಳನ್ನು ಬದಲಾಯಿಸಿದ್ದರೂ ಭಾರತದಲ್ಲಿ ಹಳೆಯ ನಿಯಮಗಳೇ ಚಾಲ್ತಿಯಲ್ಲಿದ್ದವು.
  • ವಸಾಹತುಶಾಹಿಯ ನೆರಳಿನಿಂದ ಹೊರಬಂದು, ಉದ್ಯಮ ರಂಗದ ಅಗತ್ಯಕ್ಕೆ ತಕ್ಕಂತೆ, ಉದ್ಯಮಿ ಮತ್ತು ಕಾರ್ಮಿಕ ಇಬ್ಬರ ಹಿತವನ್ನೂ ಕಾಯುವಂತೆ ಹೊಸ ನಿಯಮಗಳನ್ನು ರೂಪಿಸುವುದು ಅಗತ್ಯವಾಗಿತ್ತು.
  • ಈ ದಿಸೆಯಲ್ಲಿ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಲಾಗಿದೆ. ಸದ್ಯದ ಮತ್ತು ಭವಿಷ್ಯದ ತಾಂತ್ರಿಕ ಹಾಗೂ ಆರ್ಥಿಕ ಬೆಳವಣಿಗೆಗಳನ್ನು ದೃಷ್ಟಿಯಲ್ಲಿರಿಸಿಕೊಂಡು, ಆತ್ಮನಿರ್ಭರ ಭಾರತಕ್ಕಾಗಿ ಕಾರ್ಮಿಕ ಪಡೆಯನ್ನು ಸಿದ್ಧಗೊಳಿಸಲು ಈ ನಾಲ್ಕು ಸಂಹಿತೆಗಳು ನೆರವಾಗಲಿವೆ ಎಂದು ಕೇಂದ್ರವು ಹೇಳಿದೆ.
  • ಎಫ್ಡಿಐ ಶೇ 18ರಷ್ಟು ಹೆಚ್ಚಳ

ಸಂದರ್ಭ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿನ ವಿದೇಶಿ ನೇರ ಹೂಡಿಕೆ (ಎಫ್ಡಿಐ) ಪ್ರಮಾಣ ಶೇ 18ರಷ್ಟು ಹೆಚ್ಚಳವಾಗಿದ್ದು, ₹3.15 ಲಕ್ಷ ಕೋಟಿಯಷ್ಟಾಗಿದೆ. ಇದೇ ಅವಧಿಯಲ್ಲಿ ಅಮೆರಿಕದಿಂದ ವಿದೇಶಿ ನೇರ ಹೂಡಿಕೆ ಪ್ರಮಾಣದಲ್ಲಿ ದುಪ್ಪಟ್ಟು ಹೆಚ್ಚಾಗಿದ್ದು, ₹59,283 ಕೋಟಿಯಷ್ಟಾಗಿದೆ.

  • ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ವಿದೇಶಿ ನೇರ ಹೂಡಿಕೆ ₹2.66 ಲಕ್ಷ ಕೋಟಿಯಷ್ಟಾಗಿತ್ತು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
  • ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹1.48 ಲಕ್ಷ ಕೋಟಿ ಒಳಹರಿವು ಆಗಿದೆ. ಕಳೆದ ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಹೋಲಿಸಿದರೆ ಇದು ಶೇ 21ರಷ್ಟು ಹೆಚ್ಚಳ ಎಂದು ಹೇಳಿದೆ.
  • ಸಂಕಷ್ಟದಲ್ಲಿದ್ದ ಭಾರತೀಯರು ಸ್ವದೇಶಕ್ಕೆ: ಶ್ರೀಲಂಕಾ: ‘ಸಾಗರಬಂಧುಕಾರ್ಯಾಚರಣೆಯಿಂದ ತಾಯ್ನಾಡಿಗೆ

ಸಂದರ್ಭ: ‘ದಿತ್ವಾಚಂಡಮಾರುತದಿಂದಾಗಿ ತತ್ತರಿಸಿರುವ ಶ್ರೀಲಂಕಾದಲ್ಲಿ ಸಿಲುಕಿದ್ದ 104 ಭಾರತೀಯರನ್ನು ಕರೆತರಲಾಗಿದೆ. ಮೂಲಕ ಅಪಾಯದಲ್ಲಿದ್ದ ಎಲ್ಲ ಭಾರತೀಯರು ಸ್ವದೇಶಕ್ಕೆ ತಲುಪಿದಂತಾಗಿದೆ.

  • ‘ಸಾಗರಬಂಧು ಹೆಸರಿನ ಕಾರ್ಯಾಚರಣೆಯಲ್ಲಿ 104 ಭಾರತೀಯರನ್ನು ವಾಯಪಡೆಯ ಯುದ್ಧವಿಮಾನದ ಮೂಲಕ ಕೊಲಂಬೊ ಬಂಡಾರನಾಯಿಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಿರುವನಂತಪುರಕ್ಕೆ ಕರೆತರಲಾಯಿತು’ ಎಂದು ಭಾರತದ ಹೈಕಮಿಷನ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.
  • ಶ್ರೀಲಂಕಾದ ರಕ್ಷಣ ಕಾರ್ಯಕ್ಕೆ ಮತ್ತಷ್ಟು ನೆರವು ನೀಡುತ್ತಿರುವ ಭಾರತ, ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಿದೆ. ಭಾರತೀಯ ವಾಯುಪಡೆಯ ಚೇತಕ್ ಯುದ್ಧವಿಮಾನವು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದೆ. ಭೂಕುಸಿತ ಮತ್ತು ಪ್ರವಾಹದಿಂದ ರಸ್ತೆ ಸಂಪರ್ಕ ಕಡಿತಗೊಂಡಿರುವ ಗುಡ್ಡಪ್ರದೇಶ ಕೊಟ್‌ಮಲೆಯಲ್ಲಿಯೂ ಕಾರ್ಯಾಚರಣೆ ನಡೆಸುತ್ತಿದೆ
  • ಎನ್‌ಡಿಆರ್‌ಎಫ್ ಕೊಲಂಬೊಕ್ಕೆ ತಲುಪಿದ್ದು, ಕೋಚಿಕಡೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ತಮಿಳುನಾಡಿನಲ್ಲಿ ಮುಂದುವರಿದ ಮಳೆ

  • ದಿತ್ವಾ ಚಂಡಮಾರುತದ ಪರಿಣಾಮವಾಗಿ ಚೆನ್ನೈ, ತಿರುವಲ್ಲೂರು, ಕಾಂಚೀಪುರಂ, ಕಡಲೂರು ಸೇರಿದಂತೆ ತಮಿಳುನಾಡಿನ ಹಲವೆಡೆ ಸಾಧಾರಣ ಮಳೆಯಾಗಿದೆ.
  • ದಿತ್ವಾ ಚಂಡಮಾರುತವು ದುರ್ಬಲಗೊಂಡಿದ್ದು, ಅದರ ಪರಿಣಾಮವಾಗಿ ವಾಯುಭಾರ ಕುಸಿತವಾಗಿದೆ. ಇದು ತಮಿಳುನಾಡು–ಪಾಂಡಿಚೇರಿ ಕರಾವಳಿಗೆ ಸಮೀಪವಾಗಿರುವುದರಿಂದ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
  • ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಕೃಷಿಭೂಮಿಗೆ ಹಾನಿಯಾಗಿದೆ.
  • ಆಯಾ ವರ್ಷವೇ ಏಕಲವ್ಯ ಪ್ರಶಸ್ತಿ ಪ್ರದಾನ

ಸಂದರ್ಭ: 2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಮತ್ತು ಕ್ರೀಡಾ ಪೋಷಕ ಪ್ರಶಸ್ತಿ.

‘ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದವರಿಗೆ ₹6 ಕೋಟಿ ನೀಡಲಾಗುವುದು. ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಸರ್ಕಾರಿ ಉದ್ಯೋಗವನ್ನೂ ನೀಡಲಾಗುವುದು, ಬೆಳ್ಳಿ ಗೆದ್ದವರಿಗೆ ₹4 ಕೋಟಿ ಮತ್ತು ಕಂಚು ಗೆದ್ದವರಿಗೆ ₹3 ಕೋಟಿ ನಗದು ಪುರಸ್ಕಾರ ನೀಡಲಾಗುವುದು’ ಎಂದು ಪುನರುಚ್ಚರಿಸಿದ ಸಿದ್ದರಾಮಯ್ಯ ಅವರು, 2028ರ ಲಾಸ್‌ ಏಂಜಲೀಸ್ ಒಲಿಂಪಿಕ್ಸ್‌ಗಾಗಿ 60 ಮಂದಿಯನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುತ್ತಿದೆ. ತರಬೇತಿಯ ವೇಳೆ ಪ್ರತಿ ವರ್ಷ ಪ್ರತಿ ಕ್ರೀಡಾಪಟುವಿಗೆ ₹10 ಲಕ್ಷ ನೀಡಲಾಗುತ್ತದೆ ಎಂದರು.

ಪ್ರಶಸ್ತಿ ಪುರಸ್ಕೃತರು

  • 2022ನೇ ಸಾಲಿನ ಏಕಲವ್ಯ ಪುರಸ್ಕೃತರು: ಪ್ರಿಯಾ ಎಚ್‌. ಮೋಹನ್ (ಅಥ್ಲೆಟಿಕ್ಸ್), ಮಿಥುನ್ ಮಂಜುನಾಥ್ (ಬ್ಯಾಡ್ಮಿಂಟನ್‌), ಪ್ರತ್ಯನುಷ್‌ ತೋಮರ್‌, ಸಂಪತ್‌ ವಿ.ಪಾಸ್ಮೆಲ್ (ಸೈಕ್ಲಿಂಗ್), ಮೊಹಮ್ಮದ್ ರಾಹಿಲ್‌ (ಹಾಕಿ/ ಪರ ತಂದೆ ನಾಸಿರುದ್ದೀನ್ ಸ್ವೀಕರಿಸಿದರು), ಧನಲಕ್ಷ್ಮಿ (ಕಯಾಕಿಂಗ್ ಮತ್ತು ಕೆನೊಯಿಂಗ್), ಅದಿತಿ ಅಶೋಕ್‌ (ಗಾಲ್ಫ್‌), ಎಸ್‌.ಡಿ.ಪ್ರಜ್ವಲ್‌ ದೇವ್ (ಟೆನಿಸ್‌), ಯುಕ್ತಿ ರಾಜೇಂದ್ರ (ಶೂಟಿಂಗ್), ರಿಧಿಮಾ ವೀರೇಂದ್ರಕುಮಾರ್ (ಈಜು), ಮಣಿಕಂದನ್ ಕೆ (ಪ್ಯಾರಾ ಕ್ಲೈಬಿಂಗ್), ಎಲ್‌.ಎಂ.ಮನೋಜ್ (ವಾಲಿಬಾಲ್‌), ಪ್ರವಲಿಕಾ ವಿ.ಕುಷ್ಟಗಿ (ಟೇಕ್ವಾಂಡೊ), ನಿಂಗಪ್ಪ ಪಿ.ಗೇಣೆನ್ನವರ (ಕುಸ್ತಿ), ರಕ್ಷಿತಾ ಆರ್‌. (ಪ್ಯಾರಾ ಅಥ್ಲೆಟಿಕ್ಸ್‌).
  • 2023: ನಿಹಾಲ್ ಜೋಯೆಲ್ (ಅಥ್ಲೆಟಿಕ್ಸ್‌), ಕೆ.ಸಾಯಿ ಪ್ರತೀಕ್‌, ಆರ್‌.ಸಂಜನಾ (ಬ್ಯಾಸ್ಕೆಟ್‌ಬಾಲ್‌), ಅನುಪಮಾ ಗುಳೇದ (ಸೈಕ್ಲಿಂಗ್), ನೈದಿಲೆ ಬಿ (ಫೆನ್ಸಿಂಗ್), ಉಜ್ವಲ್‌ ನಾಯ್ಡು (ಜಿಮ್ನಾಸ್ಟಿಕ್ಸ್), ಬಿ.ಆಭರಣ ಸುದೇವ್ (ಹಾಕಿ), ದಾದಾಪೀರ್ (ಕಯಾಕಿಂಗ್/ ಕೆನೋಯಿಂಗ್), ದಿವ್ಯಾ ಟಿ.ಎಸ್‌. (ಶೂಟಿಂಗ್‌), ಅನೀಶ್‌ ಎಸ್‌.ಗೌಡ (ಈಜು), ಪ್ರಿಯಾಂಕಾ ಎಸ್‌. (ವಾಲಿಬಾಲ್‌), ಐಶ್ವರ್ಯ ಪಿ.ಕರಿಗಾರ (ಕುಸ್ತಿ), ಉಷಾ ಬಿ.ಎನ್‌. (ವೇಟ್‌ ಲಿಫ್ಟಿಂಗ್‌), ಶ್ರೀಧರ ನಾಗಪ್ಪ ಮಾಳಗಿ (ಪ್ಯಾರಾ ಈಜು), ಅಮ್ಮು ಮೋಹನ್ (ಪ್ಯಾರಾ ಬ್ಯಾಡ್ಮಿಂಟನ್‌). (ಪ್ರಶಸ್ತಿಯು ₹4ಲಕ್ಷ ನಗದು, ಏಕಲವ್ಯ ಪ್ರತಿಮೆ, ಪ್ರಮಾಣಪತ್ರ ಒಳಗೊಂಡಿದೆ)
  • ಕರ್ನಾಟಕ ಕ್ರೀಡಾ ರತ್ನ: 2022: ದಿವ್ಯಾ ಎಂ.ಎಸ್‌. (ಬಾಲ್‌ ಬ್ಯಾಡ್ಮಿಂಟನ್‌), ಭಾಸ್ಕರ ದೇವಾಡಿಗ (ಕಂಬಳ),  ರಾಯಪ್ಪ ಧರೆಪ್ಪ ಅಬ್ಬುನವರ (ಸಂಗ್ರಾಣಿ ಕಲ್ಲು ಎತ್ತುವುದು), ಚೈತ್ರಾ ಬಿ. (ಕೊಕ್ಕೊ), ವಿಠಲ್‌ ಮೇಟಿ (ಕಬಡ್ಡಿ), ಶಂಕರಪ್ಪ ಕೆ. (ಮಲ್ಲಕಂಬ), ಗೋಪವ್ವ ಮಂಜುನಾಥ ಖೋಡ್ಕಿ (ಕುಸ್ತಿ), ಮೊಹಮ್ಮದ್ ಫಿರೋಜ್ ಶೇಖ್‌ (ಯೋಗ). 2023: ಗೌತಮ್‌ ಎಂ.ಕೆ. (ಕೊಕ್ಕೊ), ಸುನಿಲ್ ಬಿ.ಪಡತಾರೆ (ಕುಸ್ತಿ), ವಿನಾಯಕ ಎಂ.ಕೊಂಗಿ (ಯೋಗ), ಮೇಘನಾ ಎಚ್‌.ಎಂ. (ಬಾಲ್‌ಬ್ಯಾಡ್ಮಿಂಟನ್‌), ಆತ್ಮೀಯಾ ಎಂ.ಬಿ. (ಕಬಡ್ಡಿ), ಮಂಜುಳಾ ಹಣಮಂತ ಹುಲಗಣ್ಣವರ (ಮಲ್ಲಕಂಬ). (₹2 ಲಕ್ಷ ನಗದು, ಪ್ರತಿಮೆ ಮತ್ತು ಪ್ರಶಂಸಾಪತ್ರ)
  • 2023: ಕ್ರೀಡಾ ಪೋಷಕ ಪ್ರಶಸ್ತಿ: ಶೇಷಾದ್ರಿಪುರಂ ಶಿಕ್ಷಣ ದತ್ತಿ, ಬೆಂಗಳೂರು. (₹10 ಲಕ್ಷ ನಗದು, ಪ್ರಶಂಸಾಪತ್ರ).

ತರಬೇತಿಗಾಗಿ ಜೀವಮಾನ ಸಾಧನೆ

  • 2022 ಬಿ.ಎನ್‌.ಸುಧಾಕರ್ (ಬ್ಯಾಡ್ಮಿಂಟನ್‌), ಆರ್.ರಾಜನ್‌ (ಬ್ಯಾಸ್ಕೆಟ್‌ಬಾಲ್‌), ಕೃಷ್ಣ (ಫುಟ್‌ಬಾಲ್‌), ಕಬಡ್ಡಿ (ಈಶ್ವರ ಅಂಗಡಿ), ಉಮೇಶ ಕಲಘಟಗಿ (ಈಜು). 2023: ರಾಹುಲ್ ಬಿ. (ಪ್ಯಾರಾ ಅಥ್ಲೆಟಿಕ್ಸ್‌), ಎಚ್‌.ಎನ್‌.ಕೃಷ್ಣಮೂರ್ತಿ (ಕಬಡ್ಡಿ), ಕೆ.ಸತ್ಯನಾರಾಯಣ (ಬ್ಯಾಸ್ಕೆಟ್‌ಬಾಲ್‌), ಎಚ್‌.ಬಿ.ರವೀಶ್ (ಹಾಕಿ).
  • (₹3 ಲಕ್ಷ ನಗದು, ಪ್ರತಿಮೆ, ಪ್ರಶಂಸಾ ಪತ್ರ)
  • ಡುಪ್ಲಾಂಟಿಸ್‌ ‘ವರ್ಷದ ಅಥ್ಲೀಟ್‌’

ಸಂದರ್ಭ: ಸ್ವೀಡನ್ ಪೋಲ್ವಾಲ್ಟ್ತಾರೆ ಅರ್ಮಾಂಡ್ ಡುಪ್ಲಾಂಟಿಸ್ಹಾಗೂ ಅಮೆರಿಕದ ಸಿಡ್ನಿ ಮೆಕ್ಲಾಫ್ಲಿನ್ ಲೆವ್ರೊನ್ ಅವರು ವಿಶ್ವ ಅಥ್ಲೆಟಿಕ್ಸ್ಕೊಡಮಾಡುವ 2025ನೇ ಸಾಲಿನವರ್ಷದ ಅಥ್ಲೀಟ್‌’ ಗೌರವಕ್ಕೆ ಪಾತ್ರರಾಗಿದ್ದಾರೆ.

ಮೊನಾಕೊದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ‘ಸೋಲಿಲ್ಲದ ಸರದಾರ’ ಡುಪ್ಲಾಂಟಿಸ್‌ ಅವರು ಟೋಕಿಯೊದಲ್ಲಿ ಈ ವರ್ಷದ ಸೆಪ್ಟೆಂಬರ್‌ ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ ಷಿಪ್‌ನಲ್ಲಿ 6.30ಮೀ. ಜಿಗಿದು 14ನೇ ಬಾರಿಗೆ ವಿಶ್ವ ದಾಖಲೆ ಸ್ಥಾಪಿಸಿದ್ದಾರೆ.

  • 26 ವರ್ಷ ವಯಸ್ಸಿನ ಡುಪ್ಲಾಂಟಿಸ್‌ ಅವರು ಈ ವರ್ಷದಲ್ಲಿ ಪೋಲ್‌ವಾಲ್ಟ್‌ ಹೊರಾಂಗಣ ಮತ್ತು ಒಳಾಂಗಣ ಸ್ಪರ್ಧೆಗಳಲ್ಲಿ ವಿಶ್ವ ಚಾಂಪಿಯನ್ ಆಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 16 ಕೂಟಗಳಲ್ಲಿ ಚಿನ್ನ ಜಯಿಸಿದ್ದು, ಅಜೇಯರಾಗಿ ಉಳಿದಿದ್ದಾರೆ.
  • ವರ್ಷದ ಅಥ್ಲೀಟ್ ಜೊತೆಗೆ ವರ್ಷದ ‘ಶ್ರೇಷ್ಠ ಫೀಲ್ಡ್‌ ಅಥ್ಲೀಟ್‌’ ಗೌರವಕ್ಕೂ ಅವರು ಭಾಜನರಾಗಿದ್ದಾರೆ ಅವರು 2020 ಮತ್ತು 2022ರಲ್ಲಿಯೂ ವರ್ಷದ ಅಥ್ಲೀಟ್‌ ಗೌರವಕ್ಕೆ ಭಾಜನರಾಗಿದ್ದರು.
  • ಎರಡು ಬಾರಿಯ ಒಲಿಂಪಿಕ್ ಚಾಂಪಿಯನ್ ಹಾಗೂ ವಿಶ್ವದಾಖಲೆ ಹೊಂದಿರುವ ಅಮೆರಿಕದ ಓಟಗಾರ್ತಿ ಲೆವ್ರೊನ್ ಅವರು ಮಹಿಳಾ ವಿಭಾಗದಲ್ಲಿ ಈ ಗೌರವಕ್ಕೆ ಭಾಜನರಾಗಿದ್ದಾರೆ. 26 ವರ್ಷ ವಯಸ್ಸಿನ ಲೆವ್ರೊನ್ ಅವರು ವಿಶ್ವ ಚಾಂಪಿಯನ್ಷಿಪ್ 400 ಮೀ. ಓಟ ಹಾಗೂ 400 ಮೀ. ಹರ್ಡಲ್ಸ್ಸ್ಪರ್ಧೆಗಳೆರಡರಲ್ಲೂ ಚಿನ್ನ ಗೆದ್ದ ಮೊದಲ ಅಥ್ಲೀಟ್ಆಗಿದ್ದಾರೆ. ಕಳೆದೆರಡು ವರ್ಷ ಗಳಲ್ಲಿ ಸ್ಪರ್ಧಿಸಿದ ಎಲ್ಲ ಸ್ಪರ್ಧೆಗಳಲ್ಲಿಯೂ ಅವರು ಸ್ವರ್ಣ ಜಯಿಸಿದ್ದಾರೆ.

ಪ್ರಚಲಿತ ವಿದ್ಯಮಾನಗಳು: 1ನೇ ಡಿಸೆಂಬರ್ 2025

ವಿಐಎಸ್‌ಎಲ್ ಪುನಶ್ಚೇತನಕ್ಕೆ ₹4,000 ಕೋಟಿ: ಎಚ್‌ಡಿಕೆ

ಸಂದರ್ಭ:‘ಭದ್ರಾವತಿಯ ವಿಶ್ವೇಶ್ವರಾಯ ಉಕ್ಕಿನ ಕಾರ್ಖಾನೆಯ (ವಿಐಎಸ್ಎಲ್) ಪುನಶ್ಚೇತನಕ್ಕೆ  ₹4,000 ಕೋಟಿ ಮೊತ್ತದ ವಿಸ್ತೃತ ಯೋಜನಾ ವರದಿ (ಡಿಪಿಆರ್).

  • ಭಾರತೀಯ ಉಕ್ಕು ಪ್ರಾಧಿಕಾರ ಬಂಡವಾಳ ಹೂಡಲಿದೆ. ಪುನಶ್ಚೇತನದ ನಂತರ ರೈಲ್ವೆ ಹಾಗೂ ರಕ್ಷಣಾ ವಲಯದ ಬೇಡಿಕೆ ಆಧರಿಸಿ ಉತ್ಪಾದನೆ ಆರಂಭಿಸಲಾಗುವುದು.
  • ಕಾರ್ಖಾನೆಯ 50 ವರ್ಷಗಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಮಾರುಕಟ್ಟೆ ಹಾಗೂ ಹೊಸ ತಂತ್ರಜ್ಞಾನದ ಕುರಿತು ಅಧ್ಯಯನ ನಡೆಸಿ ಪ್ರತ್ಯೇಕ ಡಿಪಿಆರ್ ರೂಪಿಸಲಾಗಿದೆ.

ಕೂಸಿನ ಮನೆ ‘ಆರೈಕೆದಾರ’ರಿಗೆ ಸಂಕಷ್ಟ: ನರೇಗಾದಡಿ ಗೌರವಧನ ಪಾವತಿಗೆ ಅವಕಾಶ ಇಲ್ಲ: ಕೇಂದ್ರ l ಇವರು ನರೇಗಾ ಭಾಗ.

ಸಂದರ್ಭ: ‘ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ ಕೂಲಿಯನ್ನು ಕೇಂದ್ರದ ಅನುದಾನದಲ್ಲಿ ನೀಡಲಾಗುತ್ತದೆ; ಸಲಕರಣೆಗಳ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ.

  • ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳ ಆರೈಕೆಗಾಗಿ ರಾಜ್ಯ ಸರ್ಕಾರ ಆರಂಭಿ ಸಿದ್ದ ‘ಕೂಸಿನ ಮನೆ’ ಆರೈಕೆದಾರರಿಗೆ ನರೇಗಾದಡಿ ಗೌರವಧನ ನೀಡಲು ಅವಕಾಶ ಇಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
  • ಇದರಿಂದಾಗಿ ರಾಜ್ಯದಲ್ಲಿ ಕೂಸಿನ ಮನೆಯಲ್ಲಿ ಆರೈಕೆದಾರರಾಗಿ ನೇಮಕಗೊಂಡಿದ್ದ 7,358 ಕೂಲಿ ಕಾರ್ಮಿಕರಿಗೆ ಸಂಕಷ್ಟ ಎದುರಾಗಿದೆ.
  • ನರೇಗಾ ಯೋಜನೆಯ ಕಾರ್ಮಿಕರ ಎಳೆಯ ಮಕ್ಕಳ ಪಾಲನೆ, ಆರೈಕೆಗಾಗಿ ರಾಜ್ಯ ಸರ್ಕಾರ 2023ರಲ್ಲಿ ಕಾರ್ಯಕ್ರಮ ರೂಪಿಸಿದೆ.
  • ಒಂದು ‘ಕೂಸಿನ ಮನೆ’ಗೆ ಸಕ್ರಿಯ ಉದ್ಯೋಗ ಚೀಟಿ ಹೊಂದಿದ್ದ ಇಬ್ಬರು ಮಹಿಳೆಯರನ್ನು ಆರೈಕೆದಾರರಾಗಿ ನೇಮಿಸಲಾಗಿದೆ. ಇವರಿಗೆ ಸಾಮೂಹಿಕ ಕಾಮಗಾರಿಗಳಲ್ಲಿ ಪ್ರತ್ಯೇಕ ಎನ್‌ಎಂಆರ್‌ (ನಾಮಿನಲ್‌ ಮಾಸ್ಟರ್‌ ರೋಲ್‌) ಸೃಜಿಸಿ, ಕೆಲಸದ ಸ್ಥಳದಲ್ಲಿ ದೈನಂದಿನ ಹಾಜರಾತಿಯಿಂದ ವಿನಾಯಿತಿ ನೀಡಿದ್ದು ಗೌರವಧನವಾಗಿ ಕೂಲಿ ಪಾವತಿಸಲಾಗುತ್ತಿತ್ತು. ಕಾಮಗಾರಿ ಇಲ್ಲದಿದ್ದಾಗ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಗೌರವಧನ ಭರಿಸಲಾಗುತ್ತಿತ್ತು.
  • ನರೇಗಾದಲ್ಲಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 4,000 ಕೂಸಿನ ಮನೆಗಳನ್ನು ಸ್ಥಾಪಿಸಿತ್ತು. ಈಗಮನೆಗಳ ಸಂಖ್ಯೆ 3,679ಕ್ಕೆ ಇಳಿದಿದೆ. 46,723 ಮಕ್ಕಳ ನೋಂದಣಿ ಆಗಿದೆ.
  • ಕೆಲ ದಿನಗಳ ಹಿಂದೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ರಾಜ್ಯದ ಗ್ರಾಮೀಣಾಭಿವೃದ್ಧಿ ಆಯುಕ್ತಾ ಲಯಕ್ಕೆ ಪತ್ರ ಬರೆದಿದ್ದು, ‘ಆರೈಕೆದಾರರ ಗೌರವಧನವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಭರಿಸಲು ನರೇಗಾ ಕಾಯ್ದೆಯ ಶೆಡ್ಯೂಲ್–2ರಲ್ಲಿ ಅವಕಾಶ ಇಲ್ಲ’ ಎಂದು ತಿಳಿಸಿದೆ.
  • ಆದ್ದರಿಂದ ಆರೈಕೆದಾರರಿಗೆ ತಕ್ಷಣದಿಂದ ವಿನಾಯಿತಿ ರದ್ದು ಪಡಿಸುವಂತೆ ಇಲಾಖೆ ಸುತ್ತೋಲೆ ಹೊರಡಿಸಿದೆ.
  • ‘ಮಹಿಳಾ ಕಾರ್ಮಿಕರು ಮಕ್ಕಳನ್ನು ‘ಕೂಸಿನ ಮನೆ’ಗಳಲ್ಲಿ ಬಿಟ್ಟು ನಿಶ್ಚಿಂತೆಯಿಂದ ನರೇಗಾದಲ್ಲಿ ದುಡಿದು ಕೂಲಿ ಪಡೆಯುತ್ತಿದ್ದಾರೆ. ಕೂಸಿನ ಮನೆಯ ಆರೈಕೆದಾರರೂ ನರೇಗಾ ಭಾಗವೇ ಆಗಿದ್ದಾರೆ. ಆದ್ದರಿಂದ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗುತ್ತಿತ್ತು.

2080ಕ್ಕೆ ದೇಶದ ಜನಸಂಖ್ಯೆಯಲ್ಲಿ ಸ್ಥಿರತೆ

ಸಂದರ್ಭ: ಫಲವಂತಿಕೆ ದರ (ಫರ್ಟಿಲಿಟಿ ರೇಟ್) ಕುಸಿತದಿಂದಾಗಿ ದೇಶದ ಜನಸಂಖ್ಯೆಯು 2080 ವೇಳೆಗೆ ಸ್ಥಿರಗೊಳ್ಳುವ ನಿರೀಕ್ಷೆಯಿದೆ ಎಂದು ಇಂಡಿಯನ್ ಅಸೋಸಿಯೇಷನ್ ಫಾರ್ ದಿ ಸ್ಟಡಿ ಆಫ್ಪಾಪುಲೇಷನ್‌ (ಐಐಎಸ್ಪಿ) ಹೇಳಿದೆ.

  • ಪ್ರಸ್ತುತ ಫಲವಂತಿಕೆಯ ದರ 1.9ರಷ್ಟಿದ್ದು, ಕಳೆದ ಎರಡು ದಶಕಗಳಲ್ಲಿ ಜನನ ಪ್ರಮಾಣವು ತೀವ್ರವಾಗಿ ಕುಸಿಯುತ್ತಿದೆ.
  • ‘ನಮ್ಮ ದೇಶದ ಫಲವಂತಿಕೆಯ ಒಟ್ಟು ದರ 2000ನೇ ಇಸ್ವಿಯಲ್ಲಿ ಶೇಕಡ 3.5ರಷ್ಟಿತ್ತು. ಇದೀಗ ಶೇ 1.9ಕ್ಕೆ ನಿಂತಿದ್ದು, ತೀವ್ರವಾಗಿ ಕುಸಿತಗೊಂಡಿದೆ.
  • ‘ದೇಶದ ಜನಸಂಖ್ಯೆಯು 2080ರ ವೇಳೆಗೆ 180 ಕೋಟಿ ಅಥವಾ 190 ಕೋಟಿಗೆ ಏರಿಕೆಯಾಗುವ ನಿರೀಕ್ಷೆಯಿದೆ. ಬೆಳವಣಿಗೆ ದರವೂ ಸ್ಥಿರಗೊಳ್ಳುವ ನಿರೀಕ್ಷೆಯಿದೆ.
  • ಈಗಿನ ಎಲ್ಲ ಅಂದಾಜುಗಳು, ಭಾರತದ ಗರಿಷ್ಠ ಜನಸಂಖ್ಯೆಯು 200 ಕೋಟಿಗಿಂತ ಕಡಿಮೆಯಿರುತ್ತದೆ ಎಂಬುದನ್ನು ತೋರಿಸುತ್ತಿವೆ.

ಕಾಮನ್‌ವೆಲ್ತ್: ₹ 3000–5000 ಕೋಟಿ ನಿರ್ವಹಣಾ ವೆಚ್ಚ

ಸಂದರ್ಭ: ಅಹಮದಾಬಾದಿ ನಲ್ಲಿ 2030ರಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟಕ್ಕಾಗಿ ಸಂಘಟನಾ ಸಮಿತಿಯೊಂದನ್ನು ರಚಿಸಲಾಗುವುದು. ಕೂಟದ ಕಾರ್ಯ ನಿರ್ವಹಣಾ ವೆಚ್ಚವು ಅಂದಾಜು ₹ 3000 ರಿಂದ ₹ 5000 ಕೋಟಿ ಆಗುವ ಸಾಧ್ಯತೆ ಇದೆ.

  • ಕೂಟದ ಯೋಜನೆಯಲ್ಲಿ ಭಾಗಿಯಾಗಿರುವ ಮೂಲಗಳ ಪ್ರಕಾರ, ಕ್ರೀಡೆ ಮತ್ತು ಸಾರ್ವಜನಿಕ ಬಳಕೆಗಾಗಿ ಇರುವ ಮೂಲಸೌಲಭ್ಯಗಳನ್ನು ಉನ್ನತ ದರ್ಜೆಗೆ ಏರಿಸುವುದು, ಹೊಸ ಸೌಲಭ್ಯ ಗಳನ್ನು ನಿರ್ಮಿಸುವುದು ಸೇರಿದಂತೆ  ಇರುವ ಕಾರ್ಯ ಯೋಜನೆಗಳಿಗೆ ಒಟ್ಟಾರೆ ವೆಚ್ಚವನ್ನು ಅಂದಾಜು ಮಾಡಲಾಗುತ್ತಿದೆ.

ವಿಶ್ವ ಯುವ ಟಿಟಿ: ದಿವ್ಯಾಂಶಿಗೆ ಕಂಚು

ಸಂದರ್ಭ: ಭಾರತದ ಉದಯೋನ್ಮುಖ ಆಟಗಾರ್ತಿ ದಿವ್ಯಾಂಶಿ ಭೌಮಿಕ್ ಅವರು ಐಟಿಟಿಎಫ್ವಿಶ್ವ ಯುವ ಟೇಬಲ್ಟೆನಿಸ್ಚಾಂಪಿಯನ್ಷಿಪ್ನಲ್ಲಿ 15 ವರ್ಷದೊಳಗಿನವರ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡರು.

  • ಭಾರತ ತಂಡ ವಿಭಾಗದಲ್ಲಿ ಎರಡು ಪದಕಗಳನ್ನು ಗೆದ್ದುಕೊಂಡಿತು. 15 ವರ್ಷದೊಳಗಿನ ಬಾಲಕಿಯರ ತಂಡ (ದಿವ್ಯಾಂಶಿ, ಅನನ್ಯಾ ಮುರಳೀಧರನ್, ಅಂಕೊಲಿಕಾ ಚಕ್ರವರ್ತಿ ಮತ್ತು ನೈಶಾ ರೆವಾಸ್ಕರ್‌) ಕಂಚಿನ ಪದಕ ಗೆದ್ದಿತ್ತು.
  • 19 ವರ್ಷದೊಳಗಿನವರ ಬಾಲಕರ ವಿಭಾಗದಲ್ಲಿ ಭಾರತ ತಂಡ ಬೆಳ್ಳಿ ಪದಕ ಗೆದ್ದಿತು. ಅಂಕುರ್ ಭಟ್ಟಾಚಾರ್ಜಿ, ಅಭಿನಂದ್‌ ಪ್ರದಿವಾಧಿ, ಪುನಿತ್ ಬಿಸ್ವಾಸ್‌ ಮತ್ತು ಪ್ರಿಯಾನುಜ್ ಭಟ್ಟಾಚಾರ್ಯ ಅವರನ್ನು ತಂಡ ಒಳಗೊಂಡಿತ್ತು.